ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು? – Kannada News | Chikmagalur: Illegal Resort Construction in Bhadra Tiger Reserve Buffer Zone Ignites Row
ಚಿಕ್ಕಮಗಳೂರು, ಜನವರಿ 23: ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ನಡೆಯುತ್ತಿರುವ ಆರೋಪ ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನ ಪ್ರಭಾವಿ ಮುಖಂಡನೊಬ್ಬರು ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಪಶ್ಚಿಮ ಘಟ್ಟಗಳ ಸಾಲಿನ ಚಂದ್ರದ್ರೋಣ ಪರ್ವತದ ತಪ್ಪಲಿನಲ್ಲಿ ರೆಸಾರ್ಟ್ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಚಿಕ್ಕಮಗಳೂರು ತಾಲೂಕಿನ ಕೊಳಗಾವೆ ಗ್ರಾಮದ ಸರ್ವೆ ನಂಬರ್ 58ರಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ಪ್ರದೇಶವನ್ನು 2011ರಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಝೋನ್ ಎಂದು…