Category Archives: Blog

Your blog category

ಬೆಂಗಳೂರಿನಲ್ಲಿ ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು – Kannada News | Bengaluru Traffic Police found 26 Drunk School Bus Drivers while special operation

ಬೆಂಗಳೂರು, ಜನವರಿ 23: ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆ ಮಾಡಿದ್ದು, ಒಟ್ಟು 5110 ಶಾಲಾ ಬಸ್​ ಚಾಲಕರ ತಪಾಸಣೆ ಮಾಡಿದ್ದಾರೆ. ಈ ವೇಳೆ 26 ಶಾಲಾ ಬಸ್​ ಚಾಲಕರು ಮದ್ಯಸೇವಿಸಿರೋದು ಪತ್ತೆ ಆಗಿದೆ. ಮದ್ಯಸೇವಿಸಿ ವಾಹನ ಚಲಾಯಿಸುತ್ತಿದ್ದ 26 ಚಾಲಕರ ಡಿಎಲ್​​ ರದ್ದುಗೊಳಿಸಲು ಆರ್​ಟಿಒಗೆ ಪೊಲೀಸರು ವರದಿ ಸಲ್ಲಿಸಿದ್ದಾರೆ. ಭಾರತೀಯ ಮೋಟಾರ್ ವಾಹನ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ: ಸುರೇಶ್ ಕುಮಾರ್ ಮಾತಿಗೆ ಕಲಾಪದಲ್ಲಿ ಭಾರೀ ಗದ್ದಲ

ಬೆಂಗಳೂರು, ಜ.23: ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ(Karnataka Assembly) ನಡೆದ ಘಟನೆಯೊಂದು ಸದನದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಏಳು ತಿಂಗಳಿಗೆ ಹುಟ್ಟಿದವರಂತೆ ಆಡಬೇಡಿ ಎಂಬ ಹೇಳಿಕೆಯು ಸದನದಲ್ಲಿ ಗದ್ದಲಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಸಚಿವ ಭೈರತಿ ಸುರೇಶ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುರೇಶ್ ಕುಮಾರ್ ಮಾತನಾಡುತ್ತಿದ್ದಾಗ ಭೈರತಿ ಸುರೇಶ್ ಮಧ್ಯಪ್ರವೇಶಿಸಿದ್ದರೆ ಈ ವೇಳೆ ಸುರೇಶ್ ಕುಮಾರ್ “ಒಂಭತ್ತು ತಿಂಗಳಿಗೆ ಹುಟ್ಟಿದ್ರೆ ಸರಿಯಾಗುತ್ತಿತ್ತು, ಏಳು ತಿಂಗಳಿಗೆ ಹುಟ್ಟಿದ್ದೀರಾ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಸುರೇಶ್ ಕುಮಾರ್ ಅವರ ಈ ಮಾತು ಸದನದಲ್ಲಿ ಆಕ್ರೋಶದ ಅಲೆಯ್ನುಎಬ್ಬಿಸಿದೆ. ಹಲವಾರು ಸದಸ್ಯರು, ಅದರಲ್ಲಿಯೂ ಪ್ರಿಯಾಂಕಾ ಮತ್ತು ಭೈರತಿ ಸುರೇಶ್ ಅವರು ತೀವ್ರವಾಗಿ ವಿರೋಧಿಸಿ, ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಕೂಡಲೇ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. ಈ ಹೇಳಿಕೆ ಅನ್ ಪಾರ್ಲಿಮೆಂಟರಿ (ಅಸಂಸದೀಯ) ಎಂದು ಹಲವರು ವಾದಿಸಿದರು. “ನೀವು ಹೆಲ್ತ್ ಮಿನಿಸ್ಟರ್ ಆಗಿದ್ದೀರಾ. ಏಳು ತಿಂಗಳಲ್ಲಿ ಯಾರೂ ಹುಟ್ಟೋದೇ ಇಲ್ವಾ? ಪ್ರೀ ಮೆಚ್ಯೂರ್ ಬೇಬಿ ಹುಟ್ಟಲ್ವಾ? ಏಳು ತಿಂಗಳಲ್ಲಿ ಹುಟ್ಟೋರಿಗೆ ಮಾನ ಮರ್ಯಾದೆ ಇಲ್ವಾ?” ಸದನದಲ್ಲಿ ಶಾಸಕರೊಬ್ಬರು ಹೇಳಿದ್ದಾರೆ. ಈ ಮಾತಿನಿಂದ ಏಳು ತಿಂಗಳಲ್ಲಿ ಜನಿಸಿದವರ ಕುರಿತು ಅಪಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ವಾಗ್ವಾದ ತಾರಕಕ್ಕೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ, ಸುರೇಶ್ ಕುಮಾರ್ ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಅವರು ಹೇಳಿದ ಮಾತನ್ನು ಕಡತದಿಂದ ತೆಗೆದುಹಾಕಿ ಎಂದು ಸ್ಪೀಕರ್​​​ಗೆ ಹೇಳಿದ್ರು, ತಕ್ಷಣ ಎದ್ದು ನಿಂತು ಸುರೇಶ್ ಕುಮಾರ್ ಅವರು ತಾವು ಏಳು ತಿಂಗಳು, ಒಂಬತ್ತು ತಿಂಗಳು ಎಂದು ಹೇಳಿದ ಮಾತನ್ನು ವಾಪಸ್ ತೆಗೆದುಕೊಳ್ಳುವುದಾಗಿ ಹೇಳಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗುಜರಾತ್​ನಲ್ಲಿ ಗೆಲುವು ಹೀಗೆಯೇ ಆರಂಭವಾಗಿತ್ತು, ಮುಂದೆ ಕೇರಳದಲ್ಲೂ ಗೆಲ್ತೀವಿ: ಪ್ರಧಾನಿ ಮೋದಿ – Kannada News | Kerala Is Next: Modi Invokes Gujarat Parallel in BJP Growth Pitch

ತಿರುವನಂತಪುರಂ, ಜನವರಿ 23: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳವು ಕೆಲವು ಬದಲಾವಣೆಗಳಿಗೆ ಸಾಕ್ಷಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಅದು ಕೇವಲ ತಿಂಗಳುಗಳ ದೂರದಲ್ಲಿದೆ. ಸ್ಥಳೀಯ ಸಂಸ್ಥೆಯಲ್ಲಿ ನಾಲ್ಕು ದಶಕಗಳ ಎಡ ಆಡಳಿತವನ್ನು ಕೊನೆಗೊಳಿಸಿದ ತಿರುವನಂತಪುರಂ ನಗರಸಭೆಯಲ್ಲಿ ಬಿಜೆಪಿ ಜಯಗಳಿಸಿದ ಕೇವಲ ಒಂದು ತಿಂಗಳ ನಂತರ ಪ್ರಧಾನಿಯವರ ರಾಜ್ಯ ರಾಜಧಾನಿಗೆ ಭೇಟಿ ನೀಡಿದ್ದಾರೆ. ವಿವಿಧ ಅಭಿವೃದ್ಧಿಗಳಿಗೆ ಚಾಲನೆ ನೀಡಿದ್ದಾರೆ.

ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದದ್ದು ಸುಮಾರು ನಾಲ್ಕು ದಶಕಗಳ ಹಿಂದೆ ಒಂದೇ ನಗರವನ್ನು ಗೆಲ್ಲುವುದರೊಂದಿಗೆ ಎಂದು ನೆನಪಿಸಿಕೊಂಡರು ಮತ್ತು ಕೇರಳದಲ್ಲೂ ಅದೇ ಆಗುತ್ತದೆ ಎಂದು ಹೇಳಿದರು. 1987 ರ ಮೊದಲು, ಗುಜರಾತ್‌ನಲ್ಲಿ ಬಿಜೆಪಿ ಒಂದು ಸಣ್ಣ ಪಕ್ಷವಾಗಿತ್ತು. 1987 ರಲ್ಲಿ, ಮೊದಲ ಬಾರಿಗೆ, ಬಿಜೆಪಿ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಹಿಡಿತ ಸಾಧಿಸಿತು, ಇತ್ತೀಚೆಗೆ ತಿರುವನಂತಪುರದಲ್ಲಿ ಪಕ್ಷದ ಗೆಲುವಿನಂತೆಯೇ.

ಅಂದಿನಿಂದ, ಗುಜರಾತ್‌ನ ಜನರು ನಮಗೆ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿದ್ದಾರೆ ಮತ್ತು ನಾವು ದಶಕಗಳಿಂದ ಅದನ್ನು ಮುಂದುವರೆಸಿದ್ದೇವೆ. ನಮ್ಮ ಪ್ರಯಾಣ ಗುಜರಾತ್‌ನ ಒಂದು ನಗರದಲ್ಲಿ ಪ್ರಾರಂಭವಾಯಿತು, ಮತ್ತು ಅದೇ ರೀತಿ, ಕೇರಳದಲ್ಲಿ, ನಮ್ಮ ಆರಂಭವು ಒಂದೇ ನಗರದಿಂದ ಪ್ರಾರಂಭವಾಗಿದೆ. ತಿರುವನಂತಪುರಂ ನಗರಸಭೆಯಲ್ಲಿ ತಮ್ಮ ಪಕ್ಷದ ಗೆಲುವು ಕೇರಳವನ್ನು ಎಲ್‌ಡಿಎಫ್ ಮತ್ತು ಯುಡಿಎಫ್‌ನ ಭ್ರಷ್ಟ ಆಡಳಿತದಿಂದ ಮುಕ್ತಗೊಳಿಸುವ ದೃಢ ಸಂಕಲ್ಪದ ವಿಜಯವಾಗಿದೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ತಮಿಳುನಾಡು ಚುನಾವಣೆ, ಜನವರಿ 23ರಂದು ಎನ್​ಡಿಎ ಪರ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

ದಶಕಗಳಿಂದ ಎಲ್‌ಡಿಎಫ್ ಮತ್ತು ಯುಡಿಎಫ್ ಎರಡೂ ಪಕ್ಷಗಳು ತಿರುವನಂತಪುರವನ್ನು ನಿರ್ಲಕ್ಷಿಸಿವೆ, ರಾಜಧಾನಿ ನಗರವನ್ನು ಮೂಲಭೂತ ಸೌಲಭ್ಯಗಳು ಮತ್ತು ಮೂಲಸೌಕರ್ಯಗಳಿಂದ ವಂಚಿತಗೊಳಿಸಿವೆ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ಮೋದಿ ವಿಡಿಯೋ

ನಮ್ಮ ಬಿಜೆಪಿ ತಂಡವು ಈಗಾಗಲೇ ಅಭಿವೃದ್ಧಿ ಹೊಂದಿದ ತಿರುವನಂತಪುರಂ ಕಡೆಗೆ ಕೆಲಸ ಮಾಡಲು ಪ್ರಾರಂಭಿಸಿದೆ. ನಗರದ ಜನರಿಗೆ,  ನಮ್ಮ ಮೇಲೆ ನಂಬಿಕೆ ಇರಿಸಿ, ಬಹಳ ದಿನಗಳಿಂದ ಕಾಯುತ್ತಿದ್ದ ಬದಲಾವಣೆಯು ಅಂತಿಮವಾಗಿ ಹಾದಿಯಲ್ಲಿದೆ. ತಿರುವನಂತಪುರಂ, ಇಡೀ ದೇಶಕ್ಕೆ ಮಾದರಿ ನಗರವಾಗಲಿದೆ. ತಿರುವನಂತಪುರಂ ಅನ್ನು ಭಾರತದ ಅತ್ಯುತ್ತಮ ನಗರಗಳಲ್ಲಿ ಒಂದನ್ನಾಗಿ ಮಾಡಲು ನಾನು ನನ್ನ ಸಂಪೂರ್ಣ ಬೆಂಬಲವನ್ನು ನೀಡುತ್ತೇನೆ ಎಂದರು. ಚುನಾವಣೆ ನಡೆಯಲಿರುವ ಕೇರಳದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಮತ್ತು ಹೊಸ ರೈಲು ಸೇವೆಗಳಿಗೆ ಚಾಲನೆ ನೀಡಲು ಮೋದಿ ಕೇರಳಕ್ಕೆ ಆಗಮಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಗಿಲ್ಲಿಗೆ ಉಘೇ ಎಂದ ರಾಜಕೀಯ ನಾಯಕರು; ಒಬ್ಬರಾದ ಬಳಿಕ ಒಬ್ಬರ ಭೇಟಿ – Kannada News | Gilli’s Political Backing: Karnataka Leaders Congratulate TV Artist for Reality Show Success

ಸಿನಿಮಾ ರಂಗಕ್ಕೂ ರಾಜಕೀಯ ನಾಯಕರಿಗೂ ಒಂದು ನಂಟು ಇರುತ್ತದೆ. ಚುನಾವಣೆ ವೇಳೆ ಸಿನಿಮಾ ಸೆಲೆಬ್ರಿಟಿಗಳನ್ನು ಕರೆಸಿ ಪ್ರಚಾರ ಮಾಡಲಾಗುತ್ತದೆ. ಈ ಕಾರಣದಿಂದಲೇ ರಾಜಕೀಯ ನಾಯಕರು ಕಲಾವಿದರ ಜೊತೆ ಒಳ್ಳೆಯ ಬಾಂಧವ್ಯ ಹೊಂದಿರುತ್ತಾರೆ. ಆದರೆ, ಕಿರುತೆರೆ ಕಲಾವಿದರು ಹಾಗೂ ರಿಯಾಲಿಟಿ ಶೋ ಸ್ಪರ್ಧಿಗಳಿಗೆ ರಾಜಕೀಯ ನಾಯಕರ ಬೆಂಬಲ ಸಿಗೋದು ಕಡಿಮೆ. ಆದರೆ, ಗಿಲ್ಲಿ ನಟ (Gilli Nata) ಈ ವಿಷಯದಲ್ಲಿ ಭಿನ್ನ. ಅವರನ್ನು ವಿವಿಧ ಪಕ್ಷದ ನಾಯಕರು ಭೇಟಿ ಮಾಡಿದ್ದಾರೆ, ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ.

ಗಿಲ್ಲಿ ನಟ ಅವರು ಗೆಲ್ಲಬೇಕು ಎಂದು ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಆಶಿಸಿದ್ದರು. ಗಿಲ್ಲಿಗೆ ಮತ ಹಾಕುವಂತೆ ಕೋರಿದ್ದರು. ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಗಿಲ್ಲಿಗೆ ಅವರು ಕರೆ ಮಾಡಿ ಶುಭ ಕೋರಿದ್ದಾರೆ. ಇದು ಗಿಲ್ಲಿ ಖುಷಿಗೆ ಕಾರಣ ಆಗಿದೆ. ರಾಜಕೀಯ ನಾಯಕರು ಚುನಾವಣೆ ಬಂದಾಗ ಮತ ಹಾಕುವ ಬೇಡಿಕೆ ಇಡೋದು ಸಾಮಾನ್ಯ. ಆದರೆ, ಬಿಗ್ ಬಾಸ್​ ಸ್ಪರ್ಧೆಗೆ ಅವರು ಮತ ಹಾಕುವಂತೆ ಕೇಳಿದ್ದು ವಿಶೇಷ.

ಸಿಎಂ ಸಿದ್ದರಾಮಯ್ಯ ಅವರನ್ನು ಗಿಲ್ಲಿ ಭೇಟಿ ಮಾಡಿದ್ದಾರೆ. ಈ ವೇಳೆ ಗಿಲ್ಲಿ ಆಟವನ್ನು ಅವರು ಹೊಗಳಿದ್ದಾರೆ. ಸಿದ್ದರಾಮಯ್ಯ ಕುಟುಂಬದವರಿಗೆ ಗಿಲ್ಲಿ ಫೇವರಿಟ್ ಅಂತೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಗಿಲ್ಲಿಗೆ ವಿಶ್ ಮಾಡಿದ್ದಾರೆ. ‘ಚೆನ್ನಾಗಿ ಆಡಿದ್ದೀಯಾ,ಒಳ್ಳೆಯದಾಗಲಿ’ ಎಂದು ಕರೆ ಮಾಡಿ ಹಾರೈಸಿದರಂತೆ.

ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ಗಿಲ್ಲಿಗೆ ಕರೆ ಮಾಡಿದ್ದಾರೆ. ‘ಹಳ್ಳಿ ಸೊಗಡಿನ ಹುಡುಗರು ಬೆಳೆಯುತ್ತಿರೋದು ಖುಷಿ ತಂದಿದೆ’ ಎಂದಿದ್ದಾರೆ. ಗಿಲ್ಲಿ ಗೆದ್ದಾಗ ಅವರು ಟ್ವೀಟ್ ಕೂಡ ಮಾಡಿದ್ದರು. ಸಿಪಿ ಯೋಗೇಶ್ವರ್, ರೇಣುಕಾಚಾರ್ಯ ಕೂಡ ಗಿಲ್ಲಿಗೆ ವಿಶ್ ಮಾಡಿದ್ದಾರೆ.

ಇದನ್ನೂ ಓದಿ: ಮೊದಲೇ ಗೆಲುವಿನ ಸೂಚನೆ ಕೊಟ್ಟಿದ್ದ ಸುದೀಪ್; ಗಿಲ್ಲಿ ಹೇಳಿದ್ದಿಷ್ಟು

ಈಗ ರಾಜ್ಯ ಗೃಹ ಸಚಿವ ಪರಮೇಶ್ವರ್ ಅವರನ್ನು ಗಿಲ್ಲಿ ಭೇಟಿ ಮಾಡಿದ್ದಾರೆ. ಅವರು ಕೂಡ ಗಿಲ್ಲಿ ಗೆಲುವಿಗೆ ಶುಭ ಹಾರೈಸಿದ್ದಾರೆ. ಈ ಎಲ್ಲಾ ಕಾರಣಕ್ಕೆ ಗಿಲ್ಲಿಯ ಗೆಲುವಿನ ಖುಷಿ ದುಪ್ಪಟ್ಟಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಮಂಗಳೂರಿಗೆ ಮತ್ತೊಂದು ಗುಡ್​​​ ನ್ಯೂಸ್​​ ನೀಡಿದ ಕೇಂದ್ರ: ಬರಲಿದೆ ಹೊಸ ಎಕ್ಸ್‌ಪ್ರೆಸ್ ರೈಲು, ಸಮಯ, ನಿಲ್ದಾಣಗಳ ಪಟ್ಟಿ ಇಲ್ಲಿದೆ – Kannada News | Amrit Bharat Express: Mangaluru to Nagercoil Weekly Train Service Details

ಮಂಗಳೂರು, ಜ.23: ಮಂಗಳೂರಿನ ಜನರಿಗೆ ಮತ್ತೊಂದು ಸಿಹಿಸುದ್ದಿ ನೀಡಿದೆ ಕೇಂದ್ರ ಸರ್ಕಾರ, ನಾಗರಕೋಯಿಲ್ ಮತ್ತು ಮಂಗಳೂರು ನಡುವಿನ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು (Amrit Bharat Express) ಶೀಘ್ರದಲ್ಲೇ ಆರಂಭವಾಗಲಿದೆ. ಈ ಹೊಸ ರೈಲು ತಮಿಳುನಾಡಿನಿಂದ ಕೇರಳದ ಮೂಲಕ ಕರಾವಳಿ ಕರ್ನಾಟಕಕ್ಕೆ ಸಂಪರ್ಕಿಸಲಿದೆ. ಇದು ಪಶ್ಚಿಮ ಕರಾವಳಿ ರೈಲು ಸಂಪರ್ಕವನ್ನು ಬಲಪಡಿಸುತ್ತದೆ. ನಾಗರಕೋಯಿಲ್-ಮಂಗಳೂರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಕೈಗೆಟುಕುವ ದರದಲ್ಲಿ ದೂರು ಊರುಗಳನ್ನು ಪ್ರಯಾಣಿಸುವ ಅವಕಾಶವನ್ನು ನೀಡಲಿದೆ. ಇದು ಪ್ರವಾಸೋದ್ಯಮ, ಮೀನುಗಾರಿಕೆ, ಸಣ್ಣ ವ್ಯಾಪಾರ ಮತ್ತು ಅಂತರ-ರಾಜ್ಯ ಆರ್ಥಿಕ ಏಕೀಕರಣವನ್ನು ಉತ್ತೇಜಿಸುತ್ತದೆ.16329/16330 ಸಂಖ್ಯೆಯ ನಾಗರಕೋಯಿಲ್-ಮಂಗಳೂರು-ನಾಗರ್ಕೋಯಿಲ್ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲು ಈ ಮಾರ್ಗಗಗಳಲ್ಲಿ ಪ್ರಯಾಣಿಸಲಿದೆ. ತಿರುವನಂತಪುರಂ ಸೆಂಟ್ರಲ್, ಕೊಲ್ಲಂ, ಚೆಂಗನ್ನೂರ್, ಕೊಟ್ಟಾಯಂ ಮುಂತಾದ ಪ್ರಮುಖ ರೈಲು ಮಾರ್ಗಗಗಳಲ್ಲಿ ಓಡಲಿದೆ.

ನಾಗರಕೋಯಿಲ್ ಮತ್ತು ಮಂಗಳೂರು ನಡುವಿನ ಪ್ರಯಾಣದ ಸಮಯದಲ್ಲಿ, ರೈಲು 20 ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿದೆ. ಕಾಸರಗೋಡು, ಕಣ್ಣೂರು, ತಲಶ್ಶೇರಿ, ಕೋಝಿಕ್ಕೋಡ್, ತಿರೂರ್, ಶೋರನೂರು, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಾಶ್ಶೇರಿ, ತಿರುವಲ್ಲಾ, ಚೆಂಗನ್ನೂರ್, ಮಾವೇಲಿಕರ, ಕಾಯಂಕುಲಂ, ಕರುನಾಗಪ್ಪಲ್ಲಿ, ಕೊಲ್ಲಂ, ಶಿವಗಿರಿ, ವರ್ಕಳ, ತಿರುವನಂತಪುರಂ ಸೆಂಟ್ರಲ್. ನಾಗರಕೋಯಿಲ್-ಮಂಗಳೂರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ವಾರಕ್ಕೊಮ್ಮೆ ಸಂಚರಿಸಲಿದೆ. ಈ ರೈಲು ಪ್ರತಿ ಮಂಗಳವಾರ ನಾಗರಕೋಯಿಲ್‌ನಿಂದ ಮತ್ತು ಪ್ರತಿ ಬುಧವಾರ ಮಂಗಳೂರಿನಿಂದ ಹೊರಡಲಿದೆ.

ಇದನ್ನೂ ಓದಿ: ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೋಗುವವರಿಗೆ ಗುಡ್​​​ ನ್ಯೂಸ್​​ ನೀಡಿದ ಕೇಂದ್ರ, ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಕ್ಕೆ ಸಿದ್ಧ

ರೈಲು ಸಂಖ್ಯೆ 16329 ನಾಗರಕೋಯಿಲ್-ಮಂಗಳೂರು-ನಾಗರಕೋಯಿಲ್ ಅಮೃತ್ ಭಾರತ್ ಎಕ್ಸ್‌ಪ್ರೆಸ್, ಮಂಗಳವಾರ ಬೆಳಿಗ್ಗೆ 11:40 ಕ್ಕೆ ನಾಗರಕೋಯಿಲ್‌ನಿಂದ ಹೊರಟು ಮರುದಿನ ಬೆಳಿಗ್ಗೆ 05:00 ಕ್ಕೆ ಮಂಗಳೂರಿಗೆ ಆಗಮಿಸಲಿದೆ. ಮತ್ತೆ ರೈಲು ಸಂಖ್ಯೆ 16330 ಮಂಗಳೂರು-ನಾಗರಕೋಯಿಲ್ ಅಮೃತ್ ಭಾರತ್ ಎಕ್ಸ್‌ಪ್ರೆಸ್ ಬುಧವಾರ ಬೆಳಿಗ್ಗೆ 08:00 ಕ್ಕೆ ಮಂಗಳೂರನ್ನು ಬಿಟ್ಟು ಅದೇ ದಿನ ರಾತ್ರಿ 22:05 ಕ್ಕೆ ನಾಗರಕೋಯಿಲ್ ತಲುಪಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ಪುಟಾಣಿ ಆಟಿಕೆ ಗನ್‌ನಿಂದ ಶೂಟ್ ಮಾಡುತ್ತಿದ್ದಂತೆ ಕುಸಿದು ಬಿದ್ದಂತೆ ನಟಿಸಿದ ಮರಿಯಾನೆ – Kannada News | Baby elephant adorable reaction as a toddler holds a toy gun and shoots it

ಪುಟಾಣಿ ಮರಿಯಾನೆಗಳ (baby elephant) ಮುದ್ದು ಮುದ್ದಾದ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಮರಿಯಾನೆಗಳು ತನ್ನ ಸಂಗಡಿಗರು, ಮಾಲೀಕರು ಹಾಗೂ ಮಕ್ಕಳ ಜತೆಯಲ್ಲಿ ಪ್ರೀತಿ ಸಲುಗೆಯಿಂದ ವರ್ತಿಸುತ್ತವೆ. ಇದಕ್ಕೆ ಸಾಕ್ಷಿಯಾಗಿದೆ ಈ ವಿಡಿಯೋ. ಪುಟ್ಟ ಬಾಲಕನೊಂದಿಗೆ (little boy) ಮರಿಯಾನೆ ಆಟ ಆಡುತ್ತಿದ್ದು, ಈ ವೇಳೆ ಮರಿಯಾನೆಯೂ ತನ್ನ ಮುದ್ದಾದ ನಟನೆಯಿಂದ ಗಮನ ಸೆಳೆದಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಇದು ನಿಜವೇ ಎಂದು ಕೇಳಿದ್ದಾರೆ.

@Hinduism_sci ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋಗೆ, ‘ಇಂದಿನ ಇಂಟರ್ನೆಟ್‌ನಲ್ಲಿ ಅತ್ಯಂತ ಸುಂದರವಾದ ವೀಡಿಯೊ’ ಎಂದು ಶೀರ್ಷಿಕೆ ನೀಡಲಾಗಿದೆ. ಈ ವಿಡಿಯೋ ಪುಟಾಣಿಯೊಂದು ಮರಿಯಾನೆಯೊಂದಿಗೆ ಆಟ ಆಡುತ್ತಿರುವುದನ್ನು ಕಾಣಬಹುದು. ಮಗು ಕೈಯಲ್ಲಿ ಆಟಿಕೆ ಗನ್ ಹಿಡಿದಿದೆ. ತಮಾಷೆಯಾಗಿ, ಮಗು ಮರಿಯಾನೆಯ ಕಡೆಗೆ ಗನ್ ಗುರಿಯಿಡುತ್ತದೆ. ಈ ಗನ್‌ನಿಂದ ನೀರನ್ನು ಹಾರಿಸುತ್ತಿದ್ದಂತೆ, ಮರಿಯಾನೆಯು ನೆಲಕ್ಕೆ ಬಿದ್ದಂತೆ ನಟಿಸುತ್ತದೆ.

ವೈರಲ್ ವಿಡಿಯೋ ಇಲ್ಲಿದೆ

ಮರಿಯಾನೆಯು ನೆಲದಿಂದ ಎದ್ದೇಳದಿದ್ದಾಗ ಪುಟ್ಟ ಬಾಲಕನು ಗಾಬರಿಗೊಳ್ಳುತ್ತದೆ. ತನ್ನ ಕೈಯಲ್ಲಿದ್ದ ನೀರಿನ ಗನ್ ಎಸೆದು, ತಕ್ಷಣ ಆನೆಯತ್ತ ಓಡಿ ಹೋಗುವುದನ್ನು ಕಾಣಬಹುದು. ನಂತರ ಪುಟಾಣಿಯೂ ಮರಿಯಾನೆಯನ್ನು ಪ್ರೀತಿಯಿಂದ ಅಪ್ಪಿಕೊಂಡು ಮುದ್ದಾಡುತ್ತದೆ. ಈ ವೇಳೆ ಮರಿಯಾನೆ ಮೆಲ್ಲನೆ ಎದ್ದು ನಿಲ್ಲುವುದನ್ನು ನೀವಿಲ್ಲಿ ನೋಡಬಹುದು.

ಇದನ್ನೂ ಓದಿ: ತನಗೆ ಬೊಗಳಿದ ಶ್ವಾನವನ್ನು ಒದ್ದು ಓಡಿಸಿದ ಗಜರಾಜ

ಈ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ತುಂಬಾ ಮುದ್ದಾಗಿದೆ ಎಂದರೆ, ಮತ್ತೊಬ್ಬ ಬಳಕೆದಾರ ಮತ್ತೆ ಮತ್ತೆ ನೋಡಬೇಕಾದ ವಿಡಿಯೋ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಮರಿಯಾನೆಯು ಆಸ್ಕರ್ ಪ್ರಶಸ್ತಿಗೆ ಅರ್ಹವಾಗಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಿವ್ಯಾಂಗ ಕೋಟಾದಡಿ ಎಂಬಿಬಿಎಸ್​ಗೆ ಪ್ರವೇಶ ಪಡೆಯಲು ಕಾಲು ಕತ್ತರಿಸಿಕೊಂಡ ವಿದ್ಯಾರ್ಥಿ – Kannada News | Uttar Pradesh: Desperation Over Dreams: Probe Finds Student Maimed Himself for Medical Seat

ಜೌನ್​ಪುರ, ಜನವರಿ 23: ವಿದ್ಯಾರ್ಥಿಯೊಬ್ಬ ದಿವ್ಯಾಂಗ ಕೋಟಾದಡಿ ಎಂಬಿಬಿಎಸ್(MBBS)​​ಗೆ ಪ್ರವೇಶ ಪಡೆಯಲು ಕಾಲು ಕತ್ತರಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಜೌನ್​ಪುರದಲ್ಲಿ ನಡೆದಿದೆ. ದಿವ್ಯಾಂಗ ಕೋಟಾದ ಮೂಲಕ ಎಂಬಿಬಿಎಸ್ ಕೋರ್ಸ್‌ನಲ್ಲಿ ಸೀಟು ಪಡೆಯಲು ವಿದ್ಯಾರ್ಥಿಯೊಬ್ಬ ತನ್ನ ಕಾಲಿನ ಒಂದು ಭಾಗವನ್ನು ಕತ್ತರಿಸಿಕೊಂಡಿದ್ದಾನೆ ಎಂದು ವರದಿಯಾಗಿದೆ.

ದೈನಿಕ್ ಭಾಸ್ಕರ್ ವರದಿಯ ಪ್ರಕಾರ, ಆರಂಭದಲ್ಲಿ ಕೆಲವು ವ್ಯಕ್ತಿಗಳಿಂದ ಹಲ್ಲೆಗೊಳಗಾದ ಕಥೆಯನ್ನು ಹೆಣೆದು, ತನ್ನ ಹೆತ್ತವರನ್ನು ಮತ್ತು ಪೊಲೀಸರನ್ನು ಸಹ ಮೋಸಗೊಳಿಸಿದ್ದಾನೆ. ಲೈನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೂರಜ್ ಭಾಸ್ಕರ್ ಎಂದು ಗುರುತಿಸಲಾದ ವ್ಯಕ್ತಿ ತನ್ನ ಎಡಗಾಲಿನ ನಾಲ್ಕು ಬೆರಳುಗಳನ್ನು ಕತ್ತರಿಸಿ, ಹೆಬ್ಬೆರಳು ಮಾತ್ರ ಹಾಗೆಯೇ ಉಳಿಸಿದ್ದಾನೆ ಎಂದು ವರದಿಯಾಗಿದೆ. ಈ ಕೃತ್ಯದ ಬಗ್ಗೆ ತನ್ನ ಗೆಳತಿಗೂ ತಿಳಿಸಿದ್ದು, ಪ್ರಸ್ತುತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸೂರಜ್ ಖಲೀಲ್‌ಪುರದ ನಿವಾಸಿಯಾಗಿದ್ದು, ತನ್ನ ತಾಯಿ, ಅಣ್ಣ ಮತ್ತು ಸಹೋದರಿಯೊಂದಿಗೆ ವಾಸಿಸುತ್ತಿದ್ದಾನೆ. ಸೂರಜ್‌ನ ಅಣ್ಣ ಉದ್ಯೋಗದಲ್ಲಿದ್ದರೆ, ಸೂರಜ್ ಡಿ-ಫಾರ್ಮಾ ಪದವಿ ಪಡೆದಿದ್ದು, ಪರೀಕ್ಷೆ ಬರೆಯಲು ಮತ್ತು ಎಂಬಿಬಿಎಸ್‌ಗೆ ಪ್ರವೇಶಿಸಲು ತಯಾರಿ ನಡೆಸುತ್ತಿದ್ದ. ಜನವರಿ 18 ರ ಸಂಜೆ ಮನೆ ನಿರ್ಮಾಣ ಹಂತದಲ್ಲಿದ್ದ ಕಾರಣ ಸೂರಜ್ ಮನೆಯಲ್ಲಿ ಒಬ್ಬಂಟಿಯಾಗಿದ್ದ. ಮರುದಿನ ಬೆಳಗ್ಗೆ, ಸೂರಜ್‌ನ ಕತ್ತರಿಸಿದ ಕಾಲು ಪತ್ತೆಯಾಗಿದ್ದು, ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಮತ್ತಷ್ಟು ಓದಿ: NEET UG Counselling 2025: MBBS ಮತ್ತು BDS ಸೀಟು ಪಡೆಯಲು ಅಗತ್ಯವಿರುವ ಕ್ರಮ, ಕಾಲೇಜು ಪ್ರವೇಶಗಳ ಮಾಹಿತಿ ಇಲ್ಲಿದೆ

ಆರಂಭದಲ್ಲಿ, ಸೂರಜ್ ಪೊಲೀಸರಿಗೆ ನೀಡಿದ ವರದಿಯ ಪ್ರಕಾರ, ಮಧ್ಯರಾತ್ರಿಯ ಸುಮಾರಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ತನ್ನ ಮೇಲೆ ಹಲ್ಲೆ ನಡೆಸಿ, ಪ್ರಜ್ಞೆ ತಪ್ಪಿಸಿ, ಕಾಲಿನ ಬೆರಳನ್ನು ಕತ್ತರಿಸಿ, ನಂತರ ಅಲ್ಲೇ ಬಿಟ್ಟು ಹೋಗಿದ್ದಾರೆ. ಅಲ್ಲದೆ, ಪಕ್ಕದ ಪ್ರದೇಶದ ಬಳಿ ದೀಪಗಳನ್ನು ಆನ್ ಮಾಡುವ ವಿವಾದದ ಕುರಿತು ತನಗೆ ಈ ಹಿಂದೆ ಬೆದರಿಕೆ ಕರೆಗಳು ಬಂದಿದ್ದವು ಎಂದು ಸೂರಜ್ ವರದಿ ಮಾಡಿದ್ದಾರೆ. ಸೂರಜ್ ವರದಿಯ ನಂತರ, ಅಧಿಕಾರಿಗಳು ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿದ್ದಾರೆ.

ಕರೆ ವಿವರ ದಾಖಲೆಗಳು ಮತ್ತು ಅಪರಾಧ ದೃಶ್ಯ ವಿಶ್ಲೇಷಣೆಯನ್ನು ಒಳಗೊಂಡ ಸರಿಯಾದ ತನಿಖೆಯಿಂದ ಇದು ಬಹಿರಂಗವಾಯಿತು. ಅಪರಾಧ ಸ್ಥಳದಲ್ಲಿ ಅವರು ಸಿರಿಂಜ್‌ಗಳು, ಅರವಳಿಕೆ ಮಾತ್ರೆಗಳು ಮತ್ತು ಕತ್ತರಿಸುವ ಯಂತ್ರವನ್ನು ಕಂಡಿದ್ದಾರೆ.

ಪೊಲೀಸರು ಸೂರಜ್‌ನಿಂದ ಡೈರಿಯನ್ನು ವಶಪಡಿಸಿಕೊಂಡಾಗ ಅಪರಾಧ ಬಯಲಾಯಿತು, ಅದರಲ್ಲಿ ಅವರು 2026 ರಲ್ಲಿ ಯಾವುದೇ ಬೆಲೆ ತೆತ್ತಾದರೂ ಎಂಬಿಬಿಎಸ್ ಕೋರ್ಸ್ ಪಡೆಯುವ ದೃಢಸಂಕಲ್ಪ ಮಾಡಿದ್ದ. ತನಿಖೆಯ ಪ್ರಕಾರ 2025 ರ ಅಕ್ಟೋಬರ್‌ನಲ್ಲಿ ಅಂಗವೈಕಲ್ಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಲು ಬಿಎಚ್‌ಯುಗೆ ಹೋಗಿದ್ದ, ಆದರೆ ಆತನ ದೇಹದ ಯಾವ ಭಾಗವೂ ಊನವಾಗಿರದ ಕಾರಣ ಕೊಟ್ಟು ಅದನ್ನು ತಿರಸ್ಕರಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕೋಲಾರ: ಮಾಸ್ತಿ ಗ್ರಾಮದಲ್ಲಿ ಏಕಾಏಕಿ ನೂರಾರು ವಲಸಿಗರು! ಬಾಂಗ್ಲಾದಿಂದ ಬಂದವರೆಂಬ ಶಂಕೆ – Kannada News | Hundreds of Illegal Bangladeshi Migrants Suspected in Kolar’s Masti Village, Locals Seek Probe

ಮಾಸ್ತಿ ಗ್ರಾಮದಲ್ಲಿ ಏಕಾಏಕಿ ನೂರಾರು ವಲಸಿಗರು!

ಕೋಲಾರ, ಜನವರಿ 23: ಕೋಲಾರ (Kolar) ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಅಕ್ರಮ ಬಾಂಗ್ಲಾ ವಲಸಿಗರು (Bangladesh Immigrants) ವಾಸಿಸುತ್ತಿರುವ ಬಗ್ಗೆ ಗಂಭೀರ ಅನುಮಾನಗಳು ವ್ಯಕ್ತವಾಗಿವೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನೂರಾರು ಅಪರಿಚಿತರು ಕಂಡುಬರುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿದೆ. ಮಾಸ್ತಿ ಗ್ರಾಮದ ವಿವಿಧ ಪ್ರದೇಶಗಳಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿರುವ ಈ ಜನರು, ತಾವು ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಬಿಹಾರ ರಾಜ್ಯಗಳಿಂದ ಬಂದಿರುವುದಾಗಿ ಹೇಳಿಕೊಳ್ಳುತ್ತಿದ್ದಾರೆ. ಆದರೆ, ಕೆಲವರು ನೇರವಾಗಿ ಬಾಂಗ್ಲಾದೇಶದಿಂದ ಬಂದಿರುವುದಾಗಿ ಹೇಳಿಕೊಂಡು ಓಡಾಡುತ್ತಿರುವುದರಿಂದ ಅನುಮಾನ ಮತ್ತಷ್ಟು ಗಟ್ಟಿಯಾಗಿದೆ.

ಈ ವ್ಯಕ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಬಂದಿರುವ ಸಾಧ್ಯತೆ ಇದೆ ಎಂಬ ಶಂಕೆಯೂ ವ್ಯಕ್ತವಾಗಿದೆ. ಕೋಳಿ ಫಾರಂಗಳು, ಇಟ್ಟಿಗೆ ಕಾರ್ಖಾನೆಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಒಂದೇ ವಾರದಲ್ಲಿ 1000ಕ್ಕೂ ಹೆಚ್ಚು ಜನ ಗ್ರಾಮಕ್ಕೆ!

ಸ್ಥಳೀಯರ ಮಾಹಿತಿಯಂತೆ, ಕಳೆದ ಹದಿನೈದು ದಿನಗಳಲ್ಲಿ ಮಾತ್ರವೇ ಸುಮಾರು 100ಕ್ಕೂ ಹೆಚ್ಚು ಜನರು ಈ ಗ್ರಾಮಕ್ಕೆ ಬಂದಿರುವ ಅನುಮಾನವಿದೆ. ಅಚ್ಚರಿಯ ರೀತಿಯಲ್ಲಿ ಜನಸಂಚಾರ ಹೆಚ್ಚುತ್ತಿರುವುದು ಹಾಗೂ ಅವರ ಹಿನ್ನೆಲೆ ಸ್ಪಷ್ಟವಾಗದಿರುವುದು ಗ್ರಾಮಸ್ಥರಲ್ಲಿ ಭಯ ಹಾಗೂ ಆತಂಕಕ್ಕೆ ಕಾರಣವಾಗಿದೆ.

ಅಕ್ರಮ ಬಾಂಗ್ಲಾ ವಲಸಿಗರಿರುವ ಶಂಕೆಯ ಹಿನ್ನೆಲೆ, ಸಂಬಂಧಪಟ್ಟ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸಂಪೂರ್ಣ ಪರಿಶೀಲನೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬರುತ್ತಿದೆ.

ಬೆಂಗಳೂರಿನಲ್ಲಿ ಪತ್ತೆಯಾಗಿದ್ದ ಬಾಂಗ್ಲಾ ಅಕ್ರಮ ವಲಸಿಗರು

2026 ರ ಮೊದಲ ವಾರದಲ್ಲಿ ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು ಸುಮಾರು 71 ಮಂದಿ ಶಂಕಿತ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆಹಚ್ಚಿದ್ದರು. ಜನವರಿ 12 ರಂದು ಜಹೀದುಲ್ ಇಸ್ಲಾಂ (35) ಮತ್ತು ಫಿರ್ದೌಸ್ (32) ಎಂಬಿಬ್ಬರನ್ನು ಬಂಧಿಸಲಾಗಿತ್ತು. ಇವರು ಕಳೆದ ಎರಡು ವರ್ಷಗಳಿಂದ ಜಿಗಣಿ ಸಮೀಪದ ಹುಲಿಮಂಗಲದಲ್ಲಿ ನಕಲಿ ದಾಖಲೆಗಳೊಂದಿಗೆ ಅಕ್ರಮವಾಗಿ ವಾಸಿಸುತ್ತಿದ್ದರು ಎಂಬುದು ಬೆಳಕಿಗೆ ಬಂದಿತ್ತು. ಇದೇ ಸಂದರ್ಭದಲ್ಲಿ ‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪದ ಮೇಲೆ ಸರ್ಬಾನು ಖಾತುನ್ ಎಂಬ ಮಹಿಳೆಯನ್ನು ಕೂಡ ಬಂಧಿಸಲಾಗಿತ್ತು.

ಇದನ್ನೂ ಓದಿ: ಜೈ ಬಾಂಗ್ಲಾ: ದೇಶ ವಿರೋಧಿ ಘೋಷಣೆ ಕೂಗಿದ ಆರೋಪ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮುಸ್ಲಿಂ ಮಹಿಳೆಯ ಬಂಧನ

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಕೋಲಾರದ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಆತಂಕದ ಸನ್ನಿವೇಶ ಸೃಷ್ಟಿಯಾಗಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ಇತ್ತ ಗಮನ ಹರಿಸಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಧಾರವಾಡ: ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು! – Kannada News | Lack of Basic Infrastructure Keeps Beneficiaries Away from Slum Board Houses in Dharwad

ಧಾರವಾಡ, ಜನವರಿ 23: ಸಿಎಂ ನೆತೃತ್ವದಲ್ಲಿ ನಾಳೆ ಹುಬ್ಬಳ್ಳಿಯಲ್ಲಿ ರಾಜ್ಯದ 42 ಸಾವಿರ ಬಡ ಜನರಿಗೆ ಮನೆ ಹಂಚಿಕೆ ಕಾರ್ಯಕ್ರಮ ನಡೆಯಲಿದೆ. ಇದರ ಬೆನ್ನಲ್ಲೇ ಧಾರವಾಡದಲ್ಲಿ ಹೊಸ ಚರ್ಚೆ ಶುರುವಾಗಿದ್ದು, ಚಂದ್ರಕಾಂತ ಬೆಲ್ಲದ್ ನಗರದಲ್ಲಿ ಕೆಲವು ವರ್ಷಗಳ ಹಿಂದೆ ನಿರ್ಮಿಸಿಕೊಡಲಾಗಿರುವ ಜಿ ಪ್ಲಸ್​​ ಮಾದರಿಯ ಸುಮಾರು 1,179 ಮನೆಗಳಿಗೆ ಸರ್ಕಾರ ಮೂಲ ಸೌಕರ್ಯ ಒದಗಿಸಿ ಕೊಡೋದು ಯಾವಾಗ ಎಂಬ ಪ್ರಶ್ನೆ ಎದ್ದಿದೆ. ಅರವಿಂದ ಬೆಲ್ಲದ್ ಕ್ಷೇತ್ರದಲ್ಲಿ ಸ್ಲಮ್ ಬೋರ್ಡ್‌ನಿಂದ ಮನೆಗಳು ನಿರ್ಮಾಣಗೊಂಡಿದ್ದರೂ ಬಡಾವಣೆಗೆ ಈ ವರೆಗೂ ಅಗತ್ಯ ಸೌಲಭ್ಯಗಳು ಸಿಕ್ಕಿಲ್ಲ. ಚರಂಡಿ ನಿರ್ಮಿಸದೇ ಹಕ್ಕುಪತ್ರ ವಿತರಣೆ ಮಾಡಲಾಗಿದ್ದು, ಕುಡಿಯೋ ನೀರಿನ ಸಮಸ್ಯೆಯೂ ಇದೆ. ಹೀಗಾಗಿ ಈ ಮನೆಗಳಿಗೆ ಬಂದು ನೆಲೆಸಲು ಫಲಾನುಭವಿಗಳು ಹಿಂದೇಟು ಹಾಕುತ್ತಿದ್ದು, ಬಹುಥೇಕ ಮನೆಗಳು ಖಾಲಿ ಬಿದ್ದಿವೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 5,400 ರೂ ಏರಿಕೆ – Kannada News | Gold Price Today on 23rd January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸಿಕ್ಕಾಪಟ್ಟೆ ಏರಿವೆ. 10 ಗ್ರಾಮ್ ಚಿನ್ನದ ಬೆಲೆ 4,950 ರೂನಿಂದ 5,400 ರೂಗಳಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ (Gold Rate) ಗ್ರಾಮ್​ಗೆ 16,000 ರೂ ಗಡಿ ಸಮೀಪ ಹೋಗಿದೆ. 18 ಕ್ಯಾರಟ್ ಚಿನ್ನದ ಬೆಲೆ 12,000 ರೂ ಸಮೀಪ ಇದೆ. ತಿಂಗಳ ಹಿಂದೆ 22 ಕ್ಯಾರಟ್ ಚಿನ್ನಕ್ಕೆ ಇದ್ದ ಬೆಲೆ ಈಗ 18 ಕ್ಯಾರಟ್ ಗೋಲ್ಡ್​ಗೆ ಬಂದಿದೆ. ಬೆಳ್ಳಿ ಬೆಲೆಯಂತೂ ಇನ್ನೂ ಭರ್ಜರಿಯಾಗಿ ಏರಿದೆ. ಒಂದು ಕಿಲೋ ಬೆಳ್ಳಿಗೆ 3,40,000 ರೂ ಬೆಲೆಯಾಗಿದೆ. ಚೆನ್ನೈನಲ್ಲಂತೂ ಇದರ ಬೆಲೆ 3.6 ಲಕ್ಷ ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 34,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,46,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 34,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 36,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 23ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,971 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,640 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,978 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 340 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,971 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,640 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 340 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,640 ರೂ
  • ಚೆನ್ನೈ: 14,650 ರೂ
  • ಮುಂಬೈ: 14,640 ರೂ
  • ದೆಹಲಿ: 14,655 ರೂ
  • ಕೋಲ್ಕತಾ: 14,640 ರೂ
  • ಕೇರಳ: 14,640 ರೂ
  • ಅಹ್ಮದಾಬಾದ್: 14,645 ರೂ
  • ಜೈಪುರ್: 14,655 ರೂ
  • ಲಕ್ನೋ: 14,655 ರೂ
  • ಭುವನೇಶ್ವರ್: 14,640 ರೂ

ಇದನ್ನೂ ಓದಿ: ಸುಕನ್ಯಾ ಸಮೃದ್ಧಿ ಯೋಜನೆಗೆ 11 ವರ್ಷ; ಈವರೆಗೆ ಶುರುವಾಗಿದ್ದು ನಾಲ್ಕೂವರೆ ಕೋಟಿ ಅಕೌಂಟ್; ಸ್ಕೀಮ್ ಲಾಭಗಳೇನು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 600 ರಿಂಗಿಟ್ (13,732 ರುಪಾಯಿ)
  • ದುಬೈ: 544.75 ಡಿರಾಮ್ (13,590 ರುಪಾಯಿ)
  • ಅಮೆರಿಕ: 151.50 ಡಾಲರ್ (13,881 ರುಪಾಯಿ)
  • ಸಿಂಗಾಪುರ: 197.20 ಸಿಂಗಾಪುರ್ ಡಾಲರ್ (14,122 ರುಪಾಯಿ)
  • ಕತಾರ್: 539 ಕತಾರಿ ರಿಯಾಲ್ (13,550 ರೂ)
  • ಸೌದಿ ಅರೇಬಿಯಾ: 551 ಸೌದಿ ರಿಯಾಲ್ (13,493 ರುಪಾಯಿ)
  • ಓಮನ್: 58.05 ಒಮಾನಿ ರಿಯಾಲ್ (13,815 ರುಪಾಯಿ)
  • ಕುವೇತ್: 44.65 ಕುವೇತಿ ದಿನಾರ್ (13,385 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 340 ರೂ
  • ಚೆನ್ನೈ: 360 ರೂ
  • ಮುಂಬೈ: 340 ರೂ
  • ದೆಹಲಿ: 340 ರೂ
  • ಕೋಲ್ಕತಾ: 340 ರೂ
  • ಕೇರಳ: 360 ರೂ
  • ಅಹ್ಮದಾಬಾದ್: 340 ರೂ
  • ಜೈಪುರ್: 340 ರೂ
  • ಲಕ್ನೋ: 340 ರೂ
  • ಭುವನೇಶ್ವರ್: 360 ರೂ
  • ಪುಣೆ: 340

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link