ಜೈಲರ್ 2: ರಜನಿಕಾಂತ್ ಸಿನಿಮಾದಲ್ಲಿ ಶಾರುಖ್ ಖಾನ್ ಬದಲು ಹೃತಿಕ್ ರೋಷನ್ ನಟನೆ?
ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ್ದ ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ಅಭಿನಯದ ‘ಜೈಲರ್’ ಚಿತ್ರದ ಸೀಕ್ವೆಲ್ ‘ಜೈಲರ್ 2’ (Jailer 2) ಸದ್ಯದಲ್ಲೇ ತೆರೆಗೆ ಬರಲು ಸಜ್ಜಾಗುತ್ತಿದೆ. ಸಿನಿಮಾ ಬಿಡುಗಡೆಯ ದಿನಗಳು ಹತ್ತಿರವಾಗುತ್ತಿದ್ದಂತೆ ಚಿತ್ರದ ಬಗ್ಗೆ ದಿನಕ್ಕೊಂದು ರೋಚಕ ಸುದ್ದಿಗಳು ಹೊರಬೀಳುತ್ತಿವೆ. ಸದ್ಯ ಕಾಲಿವುಡ್ ಅಂಗಳದಿಂದ ಕೇಳಿಬರುತ್ತಿರುವ ಬಿಸಿಬಿಸಿ ಸುದ್ದಿಯೆಂದರೆ, ಈ ಬಿಗ್ ಬಜೆಟ್ ಚಿತ್ರದ ಒಂದು ಅತಿಥಿ ಪಾತ್ರಕ್ಕಾಗಿ ಬಾಲಿವುಡ್ ಸ್ಟಾರ್ ನಟ ಹೃತಿಕ್ ರೋಷನ್ (Hrithik Roshan) ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ, ‘ಜೈಲರ್…