SRH vs RR: ಶಹಬ್ಬಾಸ್ ಸೂರ್ಯವಂಶಿ; ಶತಕ ವಂಚಿತರಾದ್ರೂ ವಿಶ್ವ ಕ್ರಿಕೆಟ್ನ ಹೃದಯ ಗೆದ್ದ ವೈಭವ್
ವೈಭವ್ ಸೂರ್ಯವಂಶಿ (Vaibhav Sooryavanshi).. ತಾನು ಕ್ರೀಸ್ನಲ್ಲಿ ಇರುವವರೆಗೂ ಎದುರಾಳಿಗಳ ಗುಂಡಿಗೆಯ ಬಡಿತ ಹೆಚ್ಚಿಸುವ ಹದಿನೈದೇ ವರ್ಷದ ಹಾಲ್ಗೆನ್ನೆಯ ಯುವಕ. ಬರೀ ಹೊಡಿಬಡಿ ಆಟವನ್ನೇ ಕೇಳುವ ಟಿ20 ಕ್ರಿಕೆಟ್ಗೆ ಹೇಳಿ ಮಾಡಿಸಿದ ಆಟಗಾರನೆನಿಸಿಕೊಂಡಿರುವ ವೈಭವ್, ಐಪಿಎಲ್ 2026 (IPL 2026) ರ ಎಲಿಮಿನೇಟರ್ ಪಂದ್ಯದಲ್ಲೂ ಅದೇ ಆಟವನ್ನು ಪ್ರದರ್ಶಿಸಿದರು. ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಸನ್‌ರೈಸರ್ಸ್, ಪಂದ್ಯ ಆರಂಭಕ್ಕೂ ಮುನ್ನವೇ ವೈಭವ್ ಸೂರ್ಯವಂಶಿಯನ್ನು ಕಟ್ಟಿಹಾಕಲು ನಾನಾ ರಣತಂತ್ರವನ್ನು ಹೆಣೆದುಕೊಂಡು ಮೈದಾನಕ್ಕಿಳಿದಿತ್ತು….