Viral: ಬೆಂಗ್ಳೂರಿನಲ್ಲಿ 3BHK ಅಪಾರ್ಟ್‌ಮೆಂಟ್‌ನ ತಿಂಗಳ ಬಾಡಿಗೆ 1.1 ಲಕ್ಷ ರೂ, ವೈರಲ್ ಆಯ್ತು ಪೋಸ್ಟ್
ಬೆಂಗಳೂರು, ಮೇ 27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬಾಡಿಗೆ ಮನೆಯ ದರಗಳು ಗಗನಕ್ಕೇರುತ್ತಿವೆ. ಹೀಗಾಗಿ ತಿಂಗಳ ಸಂಬಳದ ಮುಕ್ಕಾಲು ಭಾಗ ಹಣವನ್ನು ಮನೆ ಬಾಡಿಗೆಗೆ ಮೀಸಲಿಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದೀಗ ವ್ಯಕ್ತಿಯೊಬ್ಬರು ಇದೇ ಬಾಡಿಗೆ ಮನೆ ವಿಚಾರವಾಗಿ ಪೋಸ್ಟ್ ಮಾಡಿದ್ದಾರೆ. ಹೌದು, ಬೆಂಗಳೂರಿನಲ್ಲಿ 3 ಬಿಹೆಚ್ ಕೆ ಅಪಾರ್ಟ್ಮೆಂಟ್‌ನ ತಿಂಗಳ ಬಾಡಿಗೆ 1.1 ಲಕ್ಷ ರೂ ಹಾಗೂ ಡೆಪಾಸಿಟ್ 4 ಲಕ್ಷ ರೂಪಾಯಿ ಎಂದಿದ್ದಾರೆ. ಈ ಪೋಸ್ಟ್ ನಗರದ ಗಗನಕ್ಕೇರುತ್ತಿರುವ ವಸತಿ ವೆಚ್ಚಗಳ ಬಗ್ಗೆ ಆನ್‌ಲೈನ್‌ನಲ್ಲಿ…