Headlines

ನೀವು ಪದೇ ಪದೇ ಎಸಿ ಆನ್, ಆಫ್ ಮಾಡುತ್ತಿದ್ದರೆ ಏನಾಗುತ್ತದೆ?

ನವದೆಹಲಿ, ಮೇ 27: ಈ ಬಾರಿಯ ಬೇಸಿಗೆ ಜೋರಾಗಿದೆ. ಹಲವೆಡೆ ಉಷ್ಣಅಲೆ (Heat Wave)  ಉಂಟಾಗಿದೆ. ಬಿಸಿಲಿನಿಂದಾಗಿ ಜನರು ಪರದಾಡುತ್ತಿದ್ದಾರೆ. ಸೆಖೆಯನ್ನು ಸಹಿಸಲಾಗದೆ ಫ್ಯಾನ್‌ಗಳು, ಕೂಲರ್‌ಗಳು ಮತ್ತು ಎಸಿಗಳನ್ನು (AC) ಬಳಸುತ್ತಿದ್ದಾರೆ. ಫ್ಯಾನ್​ನಲ್ಲೂ ಸೆಖೆ ನೀಗದೆ ಎಸಿ ಬಳಸುತ್ತಿದ್ದಾರೆ. ಆದರೆ, ಕೆಲವರಿಗೆ ರೂಂ ತಂಪಾದಾಗ ಎಸಿ ಆಫ್ ಮಾಡಿ, ಮತ್ತೆ ಸೆಖೆ ಅನಿಸಿದಾಗ ಅದನ್ನು ಆನ್ ಮಾಡುವ ಅಭ್ಯಾಸವಿದೆ. ನಿಮಗೂ ಆ ಅಭ್ಯಾಸವಿದೆಯೇ? ಈ ರೀತಿ ಪದೇ ಪದೇ ಎಸಿ ಆನ್ ಮತ್ತು ಆಫ್ ಮಾಡುವುದರಿಂದ ಗಂಭೀರ…

Read More

SRH vs RR: ಅತಿ ಹೆಚ್ಚು ಸಿಕ್ಸರ್; ಕ್ರಿಸ್ ಗೇಲ್ ದಾಖಲೆ ಮುರಿದ ವೈಭವ್ ಸೂರ್ಯವಂಶಿ

ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸಿಕ್ಸರ್ ಮತ್ತು ಬೌಂಡರಿಗಳ ಮಳೆ ಸುರಿಸಿ ಕೇವಲ 29 ಎಸೆತಗಳಲ್ಲಿ 97 ರನ್ ಬಾರಿಸಿದರು. ಕೂದಲೆಳೆ ಅಂತರದಲ್ಲಿ ಶತಕ ವಂಚಿತರಾದ ವೈಭವ್ ಕೇವಲ 3 ರನ್‌ಗಳಿಂದ ಐಪಿಎಲ್ ಇತಿಹಾಸದಲ್ಲಿ ಅತಿ ವೇಗದ ಶತಕವನ್ನು ತಪ್ಪಿಸಿಕೊಂಡರು. ವೈಭವ್ ಈ ಶತಕವನ್ನು ಪೂರೈಸಿದ್ದರೆ, ಅದು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕವಾಗುತ್ತಿತ್ತು. ಈ ಮೂಲಕ ವೈಭವ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಮುರಿಯುತ್ತಿದ್ದರು. 2013 ರ ಐಪಿಎಲ್‌ನಲ್ಲಿ ಕ್ರಿಸ್ ಗೇಲ್…

Read More

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಜೂನ್ 1-4ಕ್ಕೆ ಭಾರತದಲ್ಲಿರಲಿದ್ದಾರೆ ಟ್ರಂಪ್ ಆಪ್ತ ಸಲಹೆಗಾರರು

ನವದೆಹಲಿ, ಮೇ 27: ಭಾರತ ಮತ್ತು ಅಮೆರಿಕ ನಡುವಿನ ಮುಕ್ತ ವ್ಯಾಪಾರ ಒಪ್ಪಂದವನ್ನು (India US free trade agreement) ಅಂತಿಮಗೊಳಿಸುವ ನಿಟ್ಟಿನಲ್ಲಿ ಗಮನಾರ್ಹ ಬೆಳವಣಿಗೆಯೊಂದು ನಡೆಯಲಿದ್ದು, ಟ್ರಂಪ್ ಸರ್ಕಾರದ ಉನ್ನತ ಮಟ್ಟದ ಅಧಕಾರಿಗಳ ತಂಡವೊಂದು ಭಾರತಕ್ಕೆ ಭೇಟಿ ನೀಡಲಿದೆ. ಟ್ರಂಪ್ ಅವರಿಗೆ ಆಪ್ತರಾಗಿರುವ ಅಮೆರಿಕದ ಉನ್ನತ ಮಟ್ಟದ ಅಧಿಕಾರಿಗಳು ಮತ್ತು ಸಲಹೆಗಾರರ ತಂಡವು ಭಾರತ-ಅಮೆರಿಕ ದ್ವಿಪಕ್ಷೀಯ ಮುಕ್ತ ವ್ಯಾಪಾರ ಒಪ್ಪಂದದ (Bilateral Trade Agreement) ಕುರಿತು ನಿರ್ಣಾಯಕ ಮಾತುಕತೆ ನಡೆಸಲು ಬರುವ ಸೋಮವಾರ ನವದೆಹಲಿಗೆ ಭೇಟಿ…

Read More

ಯುವ ಲೇಖಕಿಯ “ದಿ ಮಿಸ್ಟಿಕಲ್ ವೇವ್ಸ್” ಕೃತಿ ಬಿಡುಗಡೆ ಮಾಡಿದ ಸಿ.ಎನ್.ಆರ್.ರಾವ್

ಬೆಂಗಳೂರು, (ಮೇ 27): ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ಪುರಸ್ಕೃತ, ಖ್ಯಾತ ವಿಜ್ಞಾನಿ ಪ್ರೊಫೆಸರ್ ಸಿ.ಎನ್.ಆರ್. ರಾವ್ (CNR Rao) ಅವರು “ದಿ ಮಿಸ್ಟಿಕಲ್ ವೇವ್ಸ್” ಪುಸ್ತಕವನ್ನು ಬಿಡುಗಡೆ ಮಾಡಿದ್ದಾರೆ. ವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನ ಗೌರವಾಧ್ಯಕ್ಷರು ಹಾಗೂ ಲೈನಸ್ ಪಾಲಿಂಗ್ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕರು ಹಾಗೂ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಲ್ಲಿ ಗೌರವ ಪ್ರಾಧ್ಯಾಪಕರಾಗಿರುವ ಸಿ.ಎನ್.ಆರ್. ರಾವ್, ಕಿರಿಯ ಲೇಖಕಿ ಅಮನ ಜೆ. ಕುಮಾರ್ ಅವರ…

Read More

ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್​​ಗೆ ಒತ್ತಾಯ

ಹಿಂದೂ ಸಂಘಟನೆಗಳಿಂದ ಪ್ರತಿಭಟನೆImage Credit source: tv9 kannada ಬಾಗಲಕೋಟೆ, ಮೇ 27: ನಾಳೆ (ಮೇ 28) ನಾಡಿನಾದ್ಯಂತ ಬಕ್ರೀದ್ (Bakrid) ಹಬ್ಬದ ಸಂಭ್ರಮ. ಮುಸ್ಲಿಂ ಸಮಾಜದ ಬಾಂಧವರು ಸಂಭ್ರಮದಿಂದ ಬಕ್ರೀದ್ ಆಚರಣೆಗೆ ಸಿದ್ದರಾಗಿದ್ದಾರೆ. ಆದರೆ ಈ ವೇಳೆ ಯಾವುದೇ ಕಾರಣಕ್ಕೂ ಗೋತ್ಯೆಗೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಪ್ರತಿಭಟನೆ ಮೂಲಕ ಪೊಲೀಸ್ ಮೇಲಾಧಿಕಾರಿಗಳಿಗೆ ಮನವಿ ನೀಡಿದ್ದು, ಆ ಮೂಲಕ ಗೋಹತ್ಯೆ ತಡೆಗೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಕಸಾಯಿಖಾನೆಗಳ ಪಟ್ಟಿ ಮಾಡಿ ಬಂದ್​​ಗೆ ಒತ್ತಾಯಿಸಿದ್ದಾರೆ….

Read More

‘ನನಗೆ ಹಲವು ಸಂಗಾತಿಗಳಿದ್ದಾರೆ’: ಮುಚ್ಚುಮರೆ ಇಲ್ಲದೇ ಎಲ್ಲವನ್ನೂ ಹೇಳಿದ ನಟಿ ಶಹನಾ ಗೋಸ್ವಾಮಿ

‘ರಾಕ್ ಆನ್’, ‘ಹೀರೋಯಿನ್’ ಮುಂತಾದ ಸಿನಿಮಾಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ ಬಾಲಿವುಡ್ (Bollywood) ನಟಿ ಶಹನಾ ಗೋಸ್ವಾಮಿ (Shahana Goswami) ಪ್ರೀತಿ ಮತ್ತು ಸಂಬಂಧಗಳ ಕುರಿತಾದ ತಮ್ಮ ವಿಭಿನ್ನ ದೃಷ್ಟಿಕೋನದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಖ್ಯಾತ ನಿರೂಪಕ ಸಿದ್ಧಾರ್ಥ್ ಕಣ್ಣನ್ ಅವರ ಪಾಡ್‌ಕಾಸ್ಟ್‌ನಲ್ಲಿ ಭಾಗವಹಿಸಿದ್ದ ಅವರು, ತಾವು ಈಗ ಓಪನ್ ರಿಲೇಶನ್‌ಶಿಪ್​ನಲ್ಲಿ (Open Relationship) ಇರುವುದಾಗಿ ಒಪ್ಪಿಕೊಂಡಿದ್ದಾರೆ. ತಮ್ಮ ಜೀವನದಲ್ಲಿ ಹಲವು ಸಂಗಾತಿಗಳು ಇದ್ದಾರೆ ಎಂಬುದನ್ನು ಅವರು ಬಹಿರಂಗಪಡಿಸಿದ್ದಾರೆ. ಸಾಂಪ್ರದಾಯಿಕ ಸಂಬಂಧಗಳು ತಮಗೆ ಎಂದಿಗೂ ಸರಿಹೊಂದುವುದಿಲ್ಲ ಎಂದು…

Read More

SRH vs RR: ಶಹಬ್ಬಾಸ್ ಸೂರ್ಯವಂಶಿ; ಶತಕ ವಂಚಿತರಾದ್ರೂ ವಿಶ್ವ ಕ್ರಿಕೆಟ್​ನ ಹೃದಯ ಗೆದ್ದ ವೈಭವ್

ವೈಭವ್ ಸೂರ್ಯವಂಶಿ (Vaibhav Sooryavanshi).. ತಾನು ಕ್ರೀಸ್​ನಲ್ಲಿ ಇರುವವರೆಗೂ ಎದುರಾಳಿಗಳ ಗುಂಡಿಗೆಯ ಬಡಿತ ಹೆಚ್ಚಿಸುವ ಹದಿನೈದೇ ವರ್ಷದ ಹಾಲ್ಗೆನ್ನೆಯ ಯುವಕ. ಬರೀ ಹೊಡಿಬಡಿ ಆಟವನ್ನೇ ಕೇಳುವ ಟಿ20 ಕ್ರಿಕೆಟ್​ಗೆ ಹೇಳಿ ಮಾಡಿಸಿದ ಆಟಗಾರನೆನಿಸಿಕೊಂಡಿರುವ ವೈಭವ್, ಐಪಿಎಲ್ 2026 (IPL 2026) ರ ಎಲಿಮಿನೇಟರ್ ಪಂದ್ಯದಲ್ಲೂ ಅದೇ ಆಟವನ್ನು ಪ್ರದರ್ಶಿಸಿದರು. ಈ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಸನ್‌ರೈಸರ್ಸ್, ಪಂದ್ಯ ಆರಂಭಕ್ಕೂ ಮುನ್ನವೇ ವೈಭವ್ ಸೂರ್ಯವಂಶಿಯನ್ನು ಕಟ್ಟಿಹಾಕಲು ನಾನಾ ರಣತಂತ್ರವನ್ನು ಹೆಣೆದುಕೊಂಡು ಮೈದಾನಕ್ಕಿಳಿದಿತ್ತು….

Read More

ಆನ್​ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್; ಶೇ 28 ಜಿಎಸ್​ಟಿ ಪೂರ್ವಾನ್ವಯ ತೆರಿಗೆ ಸಿಂಧು ಎಂದು ಕೋರ್ಟ್ ತೀರ್ಪು

ನವದೆಹಲಿ, ಮೇ 27: ಭಾರತದ ಆನ್‌ಲೈನ್ ಗೇಮಿಂಗ್ (Online Gaming) ಕಂಪನಿಗಳಿಗೆ ಸುಪ್ರೀಂ ಕೋರ್ಟ್ ಬುಧವಾರದಂದು (ಮೇ 27, 2026) ಬಿಗ್ ಶಾಕ್ ನೀಡಿದೆ. ಆನ್‌ಲೈನ್ ಗೇಮಿಂಗ್ ಮೇಲಿನ ಶೇ. 28 ರಷ್ಟು ಜಿಎಸ್‌ಟಿ (GST) ವಿಧಿಸುವ ಸರ್ಕಾರದ ತೀರ್ಮಾನದ ಸಾಂವಿಧಾನಿಕ ಸಿಂಧುತ್ವವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಒಂದೂವರೆ ಲಕ್ಷ ಕೋಟಿ ರೂ ಮೊತ್ತವಾಗುವ ಪೂರ್ವಾನ್ವಯ ತೆರಿಗೆ (Retrospective Tax) ಪಾವತಿಸುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಗೇಮಿಂಗ್ ಕಂಪನಿಗಳ ತೀವ್ರ…

Read More

ಗುಜರಾತ್‌ನಲ್ಲಿ ಎಬೋಲಾ ಭೀತಿ; ಕಾಂಗೋದಿಂದ ಬಂದ ವ್ಯಕ್ತಿ ಅಹಮದಾಬಾದ್‌ನಲ್ಲಿ ಕ್ವಾರಂಟೈನ್

ಅಹಮದಾಬಾದ್, ಮೇ 27: ಇಡೀ ಜಗತ್ತನ್ನು ಆತಂಕಕ್ಕೆ ದೂಡಿರುವ ಎಬೋಲಾ (Ebola)  ವೈರಸ್ ಭಾರತಕ್ಕೂ ಎಂಟ್ರಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಆಫ್ರಿಕಾದ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಿಂದ ಗುಜರಾತ್‌ಗೆ ಮರಳಿದ್ದ 37 ವರ್ಷದ ಬ್ಯಾಂಕರ್ ಒಬ್ಬರಲ್ಲಿ ಎಬೋಲಾ ರೋಗದ ಲಕ್ಷಣಗಳು ಕಂಡುಬಂದಿವೆ. ಇದು ಗುಜರಾತ್ ರಾಜ್ಯದಲ್ಲೇ ವರದಿಯಾಗಿರುವ ಮೊದಲ ಶಂಕಿತ ಪ್ರಕರಣವಾಗಿದೆ. ಈ ವ್ಯಕ್ತಿ ಕಾಂಗೋದಿಂದ ಮುಂಬೈ ಮಾರ್ಗವಾಗಿ ವಡೋದರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ವಡೋದರಾದಲ್ಲಿದ್ದಾಗ ಅವರಿಗೆ ತೀವ್ರ ಜ್ವರ ಸೇರಿದಂತೆ ಎಬೋಲಾ ಮಾದರಿಯ ಲಕ್ಷಣಗಳು ಕಾಣಿಸಿಕೊಂಡಿವೆ. ತಕ್ಷಣವೇ…

Read More

ಎಚ್​ಡಿಎಫ್​ಸಿಯಿಂದ 45 ಕೋಟಿ ರೂ ಅಕ್ರಮ ಬಡ್ಡಿ ಪಾವತಿ ವಿವಾದ; ಆರೋಪ ನಿರಾಕರಿಸಿದ ಬ್ಯಾಂಕ್

ಎಚ್‌ಡಿಎಫ್‌ಸಿ ಬ್ಯಾಂಕ್Image Credit source: Getty Images ಮುಂಬೈ, ಮೇ 27: ಮಹಾರಾಷ್ಟ್ರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮಕ್ಕೆ (MSRDC) ಸಂಬಂಧಿಸಿದ 45 ಕೋಟಿ ರೂ ಬಡ್ಡಿ ಪಾವತಿಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂಬ ವರದಿಗಳು ಹರಿದಾಡಿದ ಬೆನ್ನಲ್ಲೇ, ಭಾರತದ ಅತಿ ದೊಡ್ಡ ಖಾಸಗಿ ವಲಯದ ಬ್ಯಾಂಕ್ ಆದ ಎಚ್‌ಡಿಎಫ್‌ಸಿ ಬ್ಯಾಂಕ್ (HDFC Bank) ಇಂದು ಷೇರು ಬಜಾರಿನಲ್ಲಿ ಶೇ. 2.54ರಷ್ಟು (19 ರೂ) ಹಿನ್ನಡೆ ಅನುಭವಿಸಿದೆ. ತನ್ನ ಮೇಲಿನ ಎಲ್ಲಾ ಆರೋಪಗಳನ್ನು ಬ್ಯಾಂಕು ತಳ್ಳಿಹಾಕಿದರೂ, ಷೇರು ಕುಸಿತ…

Read More