ಅನುಮತಿ ಇಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ಎಫ್‌ಐಆರ್ ಆಗುತ್ತೆ ಹುಷಾರ್!: ಕರ್ನಾಟಕ ಪೊಲೀಸ್ ಮುಖ್ಯಸ್ಥರ ಕಡಕ್ ಆದೇಶ – Kannada News | Sharing Intimate Images Without Consent Mandates FIR: Karnataka Police Chief
ಬೆಂಗಳೂರು, ಜೂನ್ 18: ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ಅಥವಾ ಆಪ್ತ ಚಿತ್ರಗಳು ಹಾಗೂ ವೀಡಿಯೊಗಳನ್ನು ಸಾಮಾಜಿಕ ಜಾಲತಾಣ ಅಥವಾ ಇತರೆಡೆ ಹಂಚಿಕೊಂಡರೆ, ಆನ್‌ಲೈನ್ ಬ್ಲ್ಯಾಕ್‌ಮೇಲ್, ರಿವೆಂಜ್ ಪೋರ್ನೋಗ್ರಫಿ ಮತ್ತು ಸೆಕ್ಸ್ಟಾರ್ಷನ್ ಪ್ರಕರಣಗಳಲ್ಲಿ ತಕ್ಷಣವೇ ಎಫ್‌ಐಆರ್ (FIR) ದಾಖಲಿಸಬೇಕು ಎಂದು ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ (DG & IGP) ಎಂ.ಎ. ಸಲೀಮ್ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಮುಖ್ಯಾಂಶಗಳು ಅನುಮತಿಯಿಲ್ಲದೆ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ದಾಖಲಿಸುವುದು ಕಡ್ಡಾಯವಾಗಿದೆ. ಚಿತ್ರೀಕರಣದ ಒಪ್ಪಿಗೆ ಹಾಗೂ…