Category Archives: Blog

Your blog category

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನಿಮ್ಮಿಂದ ಎಷ್ಟು ದಕ್ಕಿಸಿಕೊಳ್ಳುವುದಕ್ಕೆ ಸಾಧ್ಯ ಎಂಬ ಸ್ಪಷ್ಟ ಚಿತ್ರಣವೊಂದು ಇರಿಸಿಕೊಂಡ ನಂತರವೇ ದೊಡ್ಡ ದೊಡ್ಡ ಪ್ರಾಜೆಕ್ಟ್ ಗಳಿಗೆ ಕೈ ಹಾಕುವುದು ಒಳ್ಳೆಯದು. ಏಕೆಂದರೆ ಈ ದಿನ ನಿಮಗೆ ಬರುವಂಥ ಕೆಲವು ಕೆಲಸಗಳು ಮೇಲ್ನೋಟಕ್ಕೆ ಬಹಳ ದೊಡ್ಡ ಲಾಭ ತಂದುಕೊಡುವಂತೆ ಅನಿಸಲಿದೆ. ಆದರೆ ಸರ್ಕಾರದ ಮಟ್ಟದಲ್ಲಿ ಆಗಿರುವ ಅಥವಾ ಮುಂದೆ ಆಗುವ ಬದಲಾವಣೆಗಳ ಕಾರಣಕ್ಕೆ ನೀವು ನಿರೀಕ್ಷೆ ಮಾಡಿರುವ ಮಟ್ಟಕ್ಕೆ ಲಾಭ ತಂದುಕೊಡುವುದಿಲ್ಲ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಯಾಕೆ ಅವರು ಹಾಗೆ ಮಾತನಾಡಿದರು ಎಂದು ಒಬ್ಬರೇ ವ್ಯಕ್ತಿಯು ಆಡಿದ ಮಾತು, ಬಳಸಿದ ಪದಗಳು ದಿನವಿಡೀ ನಿಮ್ಮನ್ನು ಕಾಡಲಿವೆ. ಈ ಹಿಂದೆ ಇದ್ದಂಥ ಉತ್ಸಾಹದಲ್ಲಿ ನಿಮ್ಮ ವೃತ್ತಿ- ವ್ಯಾಪಾರ- ವ್ಯವಹಾರದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸಾಧ್ಯವಾಗುವುದಿಲ್ಲ. ಎಲ್ಲರನ್ನೂ ಒಟ್ಟುಗೂಡಿಸಿಕೊಂಡು, ಮುಂದಕ್ಕೆ ಹೋಗಬೇಕಾದ ಜವಾಬ್ದಾರಿಗಳಿಂದ ಕಳಚಿಕೊಳ್ಳಬೇಕು ಎಂಬ ಭಾವ ಬಲವಾಗಿ ಆವರಿಸಿಕೊಳ್ಳುತ್ತದೆ. ನಿಮ್ಮ ಜತೆ ಈ ಹಿಂದೆ ಉದ್ಯೋಗ ಮಾಡಿದ್ದವರು ಏನಾದರೂ ವ್ಯಾಪಾರ- ವ್ಯವಹಾರದ ಆಫರ್ ತಂದಲ್ಲಿ ಗಂಭೀರವಾಗಿ ಪರಿಗಣಿಸಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಸಾವಯವ ಉತ್ಪನ್ನಗಳ ಮಾರಾಟ ಮಾಡುತ್ತಾ ಇರುವವರು ವ್ಯಾಪಾರದ ವಿಸ್ತರಣೆಗೆ ಹಲವು ರೀತಿ ಪ್ರಯತ್ನಗಳನ್ನು ಮಾಡಲಿದ್ದೀರಿ. ನಿಮ್ಮ ಉಳಿತಾಯ ಹಾಗೂ ಹೂಡಿಕೆ ಮಾಡಿದ್ದ ಹಣವನ್ನು ತೆಗೆದು, ಅದನ್ನು ಈ ಉದ್ದೇಶಕ್ಕೆ ಬಳಸುವುದಕ್ಕೆ ಮುಂದಾಗಲಿದ್ದೀರಿ. ಹೊಸ ಮಾರುಕಟ್ಟೆಯಲ್ಲಿ ಈಗಷ್ಟೇ ಕೆಲಸ ಆರಂಭಿಸಿದವರು ತಾಳ್ಮೆ- ಸಂಯಮ ವಹಿಸುವುದು ಮುಖ್ಯವಾಗುತ್ತದೆ. ಸೇಲ್ಸ್- ಮಾರ್ಕೆಟಿಂಗ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಾ ಇದ್ದೀರಿ ಅಂತಾದಲ್ಲಿ ಮೇಲಧಿಕಾರಿ ನೀಡುವ ಸಲಹೆಯನ್ನು ಗಂಭೀರವಾಗಿ ತೆಗೆದುಕೊಳ್ಳಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ಯಾವ ಕಾರ್ಯಗಳನ್ನು ಪೂರ್ಣಗೊಳ್ಳುವುದು ಬಹಳ ಕಷ್ಟ ಆಗಬಹುದು ಎಂದು ನೀವು ಅಂದುಕೊಳ್ಳುತ್ತಾ ಇರುತ್ತೀರೋ ಅಂಥವು ಬಹಳ ಆಶ್ಚರ್ಯಕರ ರೀತಿಯಲ್ಲಿ ಮಾಡಿ ಮುಗಿಸಲಿದ್ದೀರಿ. ಇಷ್ಟು ಸಮಯ ನಿಮ್ಮನ್ನು ಬೇಕಂತಲೆ ರೇಗಿಸುತ್ತಿದ್ದವರು, ತಮಾಷೆ ಮಾಡುತ್ತಿದ್ದವರು ಗಾಬರಿ ಆಗುವ ಮಟ್ಟಕ್ಕೆ ನೀವು ಈ ದಿನ ಅವರಿಗೆ ಕಾಡಲಿದ್ದೀರಿ. ತಂದೆ- ತಾಯಿಯ ಪ್ರವಾಸಕ್ಕಾಗಿ ಹಣ ಖರ್ಚು ಮಾಡಲಿದ್ದೀರಿ. ಇದರಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಪ್ರಮುಖವಾದ ಪ್ರಾಜೆಕ್ಟ್ ಒಂದನ್ನು ನಿಮಗೆ ವಹಿಸುವ ಸಾಧ್ಯತೆಯೂ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಏಕಾಂಗಿತನ ಈ ದಿನ ನಿಮ್ಮನ್ನು ಕಾಡಲಿದೆ. ಕುಟುಂಬ ಸದಸ್ಯರು, ಸ್ನೇಹಿತರು, ಕೊನೆಗೆ ಸಹೋದ್ಯೋಗಿಗಳ ಸಹ ತಂತಮ್ಮ ಕೆಲಸದಲ್ಲಿ ಮುಳುಗಿ ಹೋಗುವುದರಿಂದ ಇಂಥದ್ದೊಂದು ಭಾವನೆ ನಿಮ್ಮಲ್ಲಿ ಹುಟ್ಟಿಕೊಳ್ಳಲಿದೆ. ಉದ್ಯೋಗ, ವೃತ್ತಿ- ವ್ಯಾಪಾರ ಹೀಗೆ ಯಾವುದೇ ವಿಚಾರದಲ್ಲಿಯೇ ಆಗಿರಲಿ, ಭೇಟಿ ಆಗಬೇಕು ಎಂದು ಸಮಯ ಕೇಳಿ, ಅದರ ಅಗತ್ಯವನ್ನು ಒತ್ತಿ ಹೇಳಿದ ನಂತರವೂ ಕೊನೆ ಕ್ಷಣದಲ್ಲಿ ನಿಮ್ಮನ್ನು ಇವತ್ತು ಕಾಣಲಿಕ್ಕೆ ಆಗಲ್ಲ ಎಂದು ವ್ಯಕ್ತಿಯೊಬ್ಬರು ಹೇಳಲಿದ್ದಾರೆ. ಇದರಿಂದ ಮಾನಸಿಕವಾಗಿ ಸ್ವಲ್ಪ ಮಟ್ಟಿಗೆ ಕುಗ್ಗುವಂತೆ ಆಗಲಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಆಗಲಿ, ಮಾಡಿಕೊಡುತ್ತೇನೆ ಎಂದು ನೀವಾಗಿಯೇ ಭರವಸೆ ನೀಡಿದ್ದ ಕೆಲವು ಕಾರ್ಯಗಳನ್ನು ಅಂದುಕೊಂಡ ಸಮಯದ ಒಳಗಾಗಿ ಪೂರ್ಣ ಮಾಡುವುದು ಅಸಾಧ್ಯ ಎಂಬುದು ಖಚಿತ ಆಗಲಿದೆ. ಆದರೆ ಈ ವಿಚಾರವನ್ನು ಹೇಗೆ ಹೇಳುವುದು ಎಂಬುದು ಇಕ್ಕಟ್ಟಿಗೆ ಸಿಲುಕಿಸಲಿದೆ. ಆರ್ಥಿಕ ವಿಚಾರಗಳಿಗೆ ಅಭದ್ರತೆ ಭಾವವೊಂದು ನಿಮ್ಮನ್ನು ಮುತ್ತಿಕೊಳ್ಳಲಿದೆ. ಈಗ ನಿಮ್ಮ ಬಳಿ ಇರುವ ಎಲ್ಲ ಮೊತ್ತವನ್ನು ಒಂದೇ ಕಡೆಗೆ ಹೂಡಿಕೆ ಮಾಡುವ ಮುಂಚೆ ಒಂದಕ್ಕೆ ನಾಲ್ಕು ಬಾರಿಗೆ ಆಲೋಚನೆ ಮಾಡಿಕೊಳ್ಳುವುದು ಒಳ್ಳೆಯದು.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 23ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ನೀವು ಎಲ್ಲ ರೀತಿಯಿಂದ ಶ್ರಮ ಪಟ್ಟು, ಇನ್ನು ಆಗಲಾರದು ಎಂದುಕೊಂಡಿದ್ದ ಕೆಲವು ಸರ್ಕಾರಕ್ಕೆ ಸಂಬಂಧಿಸಿದ ಕೆಲಸ- ಕಾರ್ಯಗಳಿಗೆ ಪವಾಡದ ರೀತಿಯಲ್ಲಿ ಮುಗಿಯಲಿದೆ. ನಿಮ್ಮ ಗೆಳೆಯ- ಗೆಳತಿಯರು ನೀಡುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ. ತಾತ್ಕಾಲಿಕ ಎಂಬಂತೆ ಸ್ವಲ್ಪ ಹಣಕಾಸಿನ ಅಗತ್ಯ ಕಂಡುಬರಲಿದೆ. ಸಂಗಾತಿ ಕಡೆಯಿಂದ ಈ ವಿಚಾರದಲ್ಲಿ ಸಹಾಯ ಒದಗಿ ಬರಲಿದೆ. ಸದ್ದಿಲ್ಲದೆ ಆರಂಭ ಮಾಡಿದ್ದ ವ್ಯಾಪಾರ- ವ್ಯವಹಾರಗಳು ಕೈ ಹಿಡಿಯುತ್ತಿರುವುದಕ್ಕೆ ಸೂಚನೆ ದೊರೆಯಲಿದೆ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ಸಂತೆ ಹೊತ್ತಿಗೆ ಮೂರು ಮೊಳ ಎಂಬ ರೀತಿಯಲ್ಲಿ ಯಾವ ಕೆಲಸವನ್ನು ಸಹ ಮಾಡುವುದಕ್ಕೆ ಹೋಗಬೇಡಿ. ತುರ್ತಾಗಿ ಕೆಲಸ ಮುಗಿಸುವ ಭರದಲ್ಲಿ ಗುಣಮಟ್ಟದ ಜೊತೆ ರಾಜೀ ಮಾಡಿಕೊಂಡು, ದೀರ್ಘಾವಧಿಯಲ್ಲಿ ಅದಕ್ಕಾಗಿ ಪಶ್ಚಾತಾಪ ಪಡುವಂತೆ ಆಗುತ್ತದೆ. ಸೋದರ- ಸೋದರಿಯರ ಜತೆಗಿನ ಭಿನ್ನಾಭಿಪ್ರಾಯ ಈಗಾಗಲೇ ಇದ್ದಲ್ಲಿ ಅದು ವಿಪರೀತಕ್ಕೆ ಹೋಗುವ ಸಾಧ್ಯತೆ ಇರುತ್ತದೆ. ತಂದೆ- ತಾಯಿಗೆ ಬೇಸರ ಆಗುವಂತೆ ನಡೆದುಕೊಳ್ಳಬೇಡಿ. ಮಾಧ್ಯಮಗಳಲ್ಲಿ ಕಾರ್ಯ ನಿರ್ವಹಿಸುವವರ ಮೇಲೆ ದೂರುಗಳು ಮೇಲಧಿಕಾರಿಗೆ ಹೋಗಬಹುದು.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಒಂದು ಬಗೆಯ ತೃಪ್ತಿ- ಸಮಾಧಾನ ಮನದಲ್ಲಿ ಮೂಡಲಿದೆ. ಉದ್ಯೋಗ, ವೃತ್ತಿ- ವ್ಯವಹಾರದಲ್ಲಿ ಮುಂದೆ ಏನಾಗಿಬಿಡುತ್ತೋ ಎಂದು ಆತಂಕ ಆಗಿದ್ದಲ್ಲಿ ಅದರಿಂದ ಹೊರಬರಲಿದ್ದೀರಿ. ನೀವು ಕೆಲಸ ಮಾಡುವ ಸಂಸ್ಥೆಗೆ ದೊಡ್ಡ ಮೊತ್ತದ ಆರ್ಡರ್ ಬರಬಹುದು, ಅಥವಾ ಇನ್ನೊಂದು ದೊಡ್ಡ ಸಂಸ್ಥೆಯೊಂದಿಗೆ ಜತೆಗೂಡಿ ವ್ಯವಹಾರ ಮುಂದುವರಿಸಲು ನಿರ್ಧರಿಸಬಹುದು. ಒಟ್ಟಿನಲ್ಲಿ ಈ ಬೆಳವಣಿಗೆಯಿಂದ ನಿಮಗೆ ಅನುಕೂಲ ಆಗಲಿದೆ. ನಿಮ್ಮ ಮಾನಸಿಕ ಸ್ಥೈರ್ಯ ಕುಗ್ಗಿಸುವುದಕ್ಕೆ ಪ್ರಯತ್ನಿಸುವವರಿಗೆ ಕಠಿಣವಾದ ಮಾತುಗಳಿಂದ ಎಚ್ಚರಿಕೆ ನೀಡಲಿದ್ದೀರಿ.

ಲೇಖನ- ಸ್ವಾತಿ ಎನ್.ಕೆ.

Source link

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಕೋರರು ಹೇಗೆ ಓಡಾಡ್ತಿದ್ದಾರೆ ನೋಡಿ – Kannada News | Gang Plan to robbery On Midnight In rabakavi, 6 thieves Caught on CCTV

ಬಾಗಲಕೋಟೆ, (ಜನವರಿ 22): ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು ಹಿಡಿದು 6 ಜನ ಕಳ್ಳರ (Thieves) ಗ್ಯಾಂಗ್ ರಾಜಾರೋಷವಾಗಿ ಓಡಾಡುತ್ತಿರುವ ದೃಶ್ಯ ರಬಕವಿ ಜನರನ್ನು ಬೆಚ್ಚಿಬೀಳಿಸಿದೆ. ಜನವರಿ 19ರ ಮಧ್ಯರಾತ್ರಿ 2 ಗಂಟೆಯ ವೇಳೆಗೆ ವಿದ್ಯಾನಗರ, ಬಸವನಗರದಲ್ಲಿ ಆಕಡೆಯಿಂದ ಈಕಡೆ ಓಡಾಡುತ್ತ ಕಳ್ಳತನಕ್ಕೆ ಹೊಂಚು ಹಾಕುತ್ತಿರುವ ದೃಶ್ಯ ಸಿಟಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ಸಿಸಿಟಿವಿ ಕ್ಯಾಮೆರಾದ ದೃಶ್ಯ ನೋಡಿ ಸಾರ್ವಜನಿಕರಲ್ಲಿ ಭಯ ಆವರಿಸಿದೆ. ಕೂಡಲೇ ಪೊಲೀಸರು ಕಳ್ಳರನ್ನು ಪತ್ತೆ ಹಚ್ಚಿ ಬಂಧಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

Source link

IND vs NZ: ಭಾರತ- ನ್ಯೂಜಿಲೆಂಡ್ ನಡುವೆ ಎರಡನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs NZ 2nd T20: Preview, Key Players and Live Streaming Info

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಟಿ20 ಸರಣಿಯಲ್ಲಿ ಆತಿಥೇಯ ಟೀಂ ಇಂಡಿಯಾ ಗೆಲುವಿನ ಶುಭಾರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಭಾರತ ತಂಡ, ಶುಕ್ರವಾರ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧ ಎರಡನೇ ಟಿ20 ಪಂದ್ಯವನ್ನು ಗೆಲುವ ಮೂಲಕ ತನ್ನ ಅಜೇಯ ಓಟವನ್ನು ಮುಂದುವರೆಸುವ ಗುರಿ ಹೊಂದಿದೆ. ಆದಾಗ್ಯೂ ಮೊದಲ ಪಂದ್ಯದಲ್ಲಿ ರನ್ ಗಳಿಸುವಲ್ಲಿ ಎಡವಿದ್ದ ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ಅವರ ಪ್ರದರ್ಶನದ ಮೇಲೆ ಮೇಲೆ ಎಲ್ಲರ ಕಣ್ಣುಗಳಿರಲಿವೆ. ಇವರ ಜೊತೆಗೆ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಒಂದು ದೊಡ್ಡ ಇನ್ನಿಂಗ್ಸ್ ಆಡುವ ಒತ್ತಡದಲ್ಲಿದ್ದಾರೆ. ಉಳಿದಂತೆ ತಂಡದ ಇತರ ಆಟಗಾರರು ತಮ್ಮ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿರುವುದರಿಂದ ಟಿ20 ವಿಶ್ವಕಪ್​ಗೂ ಮೊದಲು ಆಡಳಿತ ಮಂಡಳಿಗೆ ಕೊಂಚ ಸಮಾಧಾನ ತಂದಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಶುಕ್ರವಾರ, ಜನವರಿ 23 ರಂದು ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯ ಸಂಜೆ 7:00 ಗಂಟೆಗೆ ಪ್ರಾರಂಭವಾಗುತ್ತದೆ. ಟಾಸ್ ಅದಕ್ಕೂ ಅರ್ಧ ಗಂಟೆ ಮೊದಲು, ಅಂದರೆ ಸಂಜೆ 6:30 ಕ್ಕೆ ನಡೆಯಲಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ಪ್ರಸಾರ ಮಾಡುತ್ತಿದೆ ಮತ್ತು ವೀಕ್ಷಕರು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ಪಂದ್ಯಗಳನ್ನು ವೀಕ್ಷಿಸಲು ಸಾಧ್ಯವಾಗುತ್ತದೆ. ಹೆಚ್ಚುವರಿಯಾಗಿ, ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಪಂದ್ಯಗಳನ್ನು ನೇರ ಪ್ರಸಾರ ಮಾಡಲಾಗುತ್ತದೆ.

ಭಾರತದ ಸಂಭಾವ್ಯ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ – Kannada News | Zaid Khan talks about his love story here is the video

ಸಚಿವ ಜಮೀರ್ ಅಹ್ಮದ್ (Zameer Ahmed) ಪುತ್ರ ಝೈದ್ ಖಾನ್ ನಟಿಸಿರುವ ‘ಕಲ್ಟ್’ ಸಿನಿಮಾ ನಾಳೆ (ಜನವರಿ 23) ಬಿಡುಗಡೆ ಆಗಲಿದೆ. ಅಪ್ಪಟ ಪ್ರೇಮಕತೆಯುಳ್ಳ ಸಿನಿಮಾನಲ್ಲಿ ಮಲೈಕಾ ವಸುಪಾಲ್ ಮತ್ತು ರಚಿತಾ ರಾಮ್ ನಾಯಕಿ. ಸಿನಿಮಾದ ಪ್ರಚಾರವನ್ನು ಝೈದ್ ಖಾನ್ ಅವರು ಬಲು ಅಬ್ಬರದಿಂದ ಮಾಡುತ್ತಿದ್ದಾರೆ. ಟಿವಿ9 ಜೊತೆಗೆ ತಮ್ಮ ಸಿನಿಮಾ ಬಗ್ಗೆ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿರುವ ನಟ ಝೈದ್ ಖಾನ್ ಅವರು ತಮ್ಮ ಹಳೆಯ ಲವ್ ಸ್ಟೋರಿಯನ್ನೂ ಸಹ ಹಂಚಿಕೊಂಡಿದ್ದಾರೆ. ತಮ್ಮ ಹಳೆಯ ಲವ್ ಸ್ಟೋರಿ ಹೇಳಿಕೊಂಡ ಝೈದ್ ಖಾನ್, ಒಬ್ಬ ಹುಡುಗಿಯಿಂದ ನಾನು ಖಿನ್ನತೆಗೆ ಒಳಗಾಗಿದ್ದೆ ಎಂದು ಸಹ ಹೇಳಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

‘ಕರಾವಳಿ’ ಸಿನಿಮಾನಲ್ಲಿ ಸಿದ್ ಶ್ರೀರಾಮ್ ದನಿ: ಮುದ್ದು ಗುಮ್ಮ ಹಾಡು ರಿಲೀಸ್ – Kannada News | Prajwal Devaraj starrer Karavali Kannada movie new song released

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ಸೇರಿದಂತೆ ಹಲವಾರು ಪ್ರತಿಭಾವಂತ ನಟ, ನಟಿಯರು ಒಟ್ಟಿಗೆ ನಟಿಸುತ್ತಿರುವ ‘ಕರಾವಳಿ’ ಸಿನಿಮಾ ತನ್ನ ಟೀಸರ್, ಪೋಸ್ಟರ್​​​ಗಳ ಮೂಲಕವೇ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ವರೆಗೆ ಬಿಡುಗಡೆ ಆಗಿರುವ ಸಿನಿಮಾದ ಪ್ರತಿಯೊಂದು ಪೋಸ್ಟರ್ ಸಹ ಭಿನ್ನವಾಗಿದ್ದು ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚು ಮಾಡಿವೆ. ಇದೀಗ ‘ಕರಾವಳಿ’ ಸಿನಿಮಾದ ಹಾಡೊಂದು ಬಿಡುಗಡೆ ಆಗಿದ್ದು, ಈ ಮೆಲೋಡಿ ಹಾಡು ಸಹ ಸಿನಿಮಾ ಪ್ರಿಯರ ಗಮನ ಸೆಳೆಯುವಂತಿದೆ.

‘ಮುದ್ದು ಗುಮ್ಮ’ ಎಂಬ ‘ಕರಾವಳಿ’ ಸಿನಿಮಾದ ಹಾಡ ಬಿಡುಗಡೆ ಆಗಿದ್ದು, ಹಾಡಿಗೆ ಖ್ಯಾತ ಗಾಯಕ ಸಿದ್ ಶ್ರೀರಾಮ್ ದನಿಯಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್​​ನಲ್ಲಿ ಹಾಡು ಬಿಡುಗಡೆ ಆಗಿದ್ದು, ಹಾಡಿನ ಜೊತೆಗೆ ವಿಡಿಯೋ ಸಹ ಗಮನ ಸೆಳೆದಿದೆ. ಮನಮೋಹಕ ಹಿನ್ನೆಲೆಯಲ್ಲಿ ಹಾಡಿನ ಚಿತ್ರೀಕರಣವನ್ನು ನಿರ್ದೇಶಕ ಗುರುದತ್ ಗಣಿಗ ಮಾಡಿರುವುದು ವಿಡಿಯೋ ಮೂಲಕ ತಿಳಿಯುತ್ತಿದೆ. ಈಗ ಬಿಡುಗಡೆ ಆಗಿರುವ ರೊಮ್ಯಾಂಟಿಂಕ್ ಹಾಡಿನಲ್ಲಿ ಪ್ರಜ್ವಲ್ ದೇವರಾಜ್ ಮತ್ತು ಸಂಪದಾ ನಟಿಸಿದ್ದು ಇವರ ಜೋಡಿ ಮುದ್ದಾಗಿ ಕಾಣಿಸಿಕೊಂಡಿದೆ.

ಇದನ್ನೂ ಓದಿ:ರನ್ನರ್ ಅಪ್ ಆದರೂ ಕಡಿಮೆಯಲ್ಲ ಕರಾವಳಿ ಚಿನಕುರಳಿ ರಕ್ಷಿತಾ ಸಾಧನೆ

‘ಕರಾವಳಿ’ ಸಿನಿಮಾಕ್ಕೆ ಸಚಿನ್ ಬಸ್ರೂರು ಸಂಗೀತ ನೀಡಿದ್ದು, ಈಗ ಬಿಡುಗಡೆ ಆಗಿರುವ ‘ಮುದ್ದು ಗುಮ್ಮ’ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ರಚಿಸಿದ್ದಾರೆ. ಟೀಸರ್ ಮೂಲಕ ಭಾರಿ ಕುತೂಹಲ ಮತ್ತು ನಿರೀಕ್ಷೆ ಮೂಡಿಸಿರುವ ‘ಕರಾವಳಿ’ ಈಗ ಹಾಡು ರಿಲೀಸ್ ಮಾಡಿ ನಿರೀಕ್ಷೆಯನ್ನು ಹೆಚ್ಚಿಸಿದೆ. ‘ಕರಾವಳಿ’ ಹೆಸರೆ ಹೇಳುತ್ತಿರುವಂತೆ ಕರಾವಳಿ ಭಾಗದ ಸಂಸ್ಕೃತಿ, ಸೊಗಡು, ಆಚರಣೆಗಳ ಬಗೆಗಿನ ಕತೆ ಹೊಂದಿರುವ ಸಿನಿಮಾ ಇದಾಗಿದೆ. ಪ್ರಜ್ವಲ್ ದೇವರಾಜ್ ಜೊತೆಗೆ ಚಿತ್ರದ ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಮಾವೀರ ಎನ್ನುವ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಸಿನಿಮಾನಲ್ಲಿ ಹಲವು ಪವರ್​​ಫುಲ್ ಪಾತ್ರಗಳಿದ್ದು ನಟ ಮಿತ್ರ, ರಮೇಶ್ ಇಂದಿರ, ಶ್ರೀಧರ್ ಅವರುಗಳು ನಟಿಸಿದ್ದಾರೆ. ನಾಯಕಿಯಾಗಿ ಸಂಪದಾ ಕಾಣಿಸಿಕೊಂಡಿದ್ದಾರೆ.

ಕರಾವಳಿ ಗುರುದತ್ ಗಾಣಿಗ ನಿರ್ದೇಶನದ ಜೊತೆಗೆ ವಿಕೆ ಫಿಲ್ಮಂ ಅಸೋಸಿಯೇಷನ್ ನಲ್ಲಿ ಗಾಣಿಗ ಫಿಲ್ಮ್ಸ್‌ನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಕರಾವಳಿ ಮನುಷ್ಯ ಹಾಗೂ ಪ್ರಾಣಿ ಮಧ್ಯೆ ನಡೆಯುವ ಸಂಘರ್ಷದ ಕಥೆ. ಪಕ್ಕಾ ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಸಿನಿಮಾ ಮೂಡಿ ಬರಲಿದೆ. ಅಭಿಮನ್ಯೂ ಸದಾನಂದನ್ ಕ್ಯಾಮರ ವರ್ಕ್ ಚಿತ್ರಕ್ಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಔಷಧಿಗಳ ಬಳಕೆಗೆ ಹೊಸ ರೂಲ್ಸ್‌: ನಕಲಿ​​ ಹಾವಳಿಗೆ ಬೀಳುತ್ತಾ ಬ್ರೇಕ್​​​? – Kannada News | Karnataka health department making new rules to stop Fake Medicines

ಬೆಂಗಳೂರು, ಜನವರಿ 22: ಸದ್ಯ ದಿನಮಾನಗಳಲ್ಲಿ ಯಾವುದೇ ವಸ್ತು ತೆಗೆದುಕೊಂಡರು ಅದರಲ್ಲಿ ನಕಲಿ ಎನ್ನುವುದು ಇರುತ್ತೆ. ಅದರಲ್ಲೂ ಫಾರ್ಮಸಿ ಕ್ಷೇತ್ರದಲ್ಲಂತೂ ಫೇಕ್ ಔಷಧಿಗಳ (Medicines) ಹಾವಳಿ ಹೆಚ್ಚಾಗಿದೆ‌. ಇದಕ್ಕೆ ಕಡಿವಾಣ ಯಾವಾಗ ಬೀಳುತ್ತೆ ಎನ್ನುತ್ತಿರುವ ರೋಗಿಗಳಿಗೆ ಇದೀಗ ಆರೋಗ್ಯ ಇಲಾಖೆ (health department) ಗುಡ್ ನ್ಯೂಸ್ ಕೊಟ್ಟಿದೆ. ಔಷಧಿಗಳ ಬಳಕೆಯಲ್ಲಿ ಬದಲಾವಣೆ ತರುವುದಕ್ಕೆ ಮುಂದಾಗಿದೆ.

ಔಷಧಗಳ ಬಳಕೆಯಲ್ಲಿ ಅನೇಕ ಬದಲಾವಣೆ

ಮೆಡಿಕಲ್ ಫೀಲ್ಡ್‌ನಲ್ಲಿ ಫೇಕ್ ಹಾಗೂ ಕಳಪೆ ಗುಣಮಟ್ಟದ ಔಷಧಿಗಳ ಉತ್ಪಾದನೆ ಹಾಗೂ ಮಾರಾಟದ ಪ್ರಕರಣಗಳು ಹೆಚ್ಚಾಗಿವೆ. ಈಗಾಗಲೇ ಆರೋಗ್ಯ ಇಲಾಖೆಯಿಂದ‌ ಫೇಕ್ ಹಾಗೂ ಕಳಪೆ ಗುಣಮಟ್ಟದ ಔಷಧಗಳನ್ನ ಪತ್ತೆ ಹಚ್ಚಿ ಅವುಗಳ ಬ್ಯಾಚ್ ನಂಬರ್ ಸಹಿತವಾಗಿ ಬ್ಯಾನ್ ಮಾಡಲಾಗುತ್ತಿದ್ದರೂ ಹೊಸ ಫೇಕ್ ಔಷಧಗಳು ತಲೆ ಎತ್ತುತ್ತಲಿವೆ. ಈ ಬೆನ್ನಲ್ಲೇ ಇದೀಗ ಮತ್ತಷ್ಟು ಔಷಧಗಳ ಬಳಕೆಯಲ್ಲಿ ಅನೇಕ ಬದಲಾವಣೆ ತರುವುದಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ.

ಇದನ್ನೂ ಓದಿ: ಹೃದ್ರೋಗಿಗಳಿಗೆ ಶುಭ ಸುದ್ದಿ: ಜಿಬಿಎ 5 ಕಾರ್ಪೊರೇಷನ್​ಗಳಲ್ಲಿ ಸ್ಥಾಪನೆಯಾಗಲಿದೆ ಜಯದೇವ ಆಸ್ಪತ್ರೆ ಸ್ಯಾಟಲೈಟ್ ಘಟಕ

ಫೇಕ್‌ ಔಷಧಗಳನ್ನ ಪತ್ತೆ ಹಚ್ಚಲು ಕ್ಯೂಆರ್​ ಕೋಡ್ ಮೊರೆ ಹೋಗುತ್ತಿದೆ. ಆರೋಗ್ಯ ಇಲಾಖೆ ನಕಲಿ ಔಷಧಿಗಳ ಪತ್ತೆಹಚ್ಚಲು ಹಾಗೂ ಬ್ರೇಕ್ ಹಾಕಲು ನಯಾ ಪ್ಲಾನ್ ಮಾಡಿದೆ. ಔಷಧಗಳ ಪ್ಯಾಕ್‌ ಮೇಲೆ ಬಾರ್‌ಕೋಡ್‌ ಮತ್ತು ಕ್ಯೂಆರ್ ಕೋಡ್‌ಗಳನ್ನು ಮುದ್ರಿಸಲು ಮುಂದಾಗಿದೆ. ಆ ಮೂಲಕ ಟ್ರ್ಯಾಕ್ ಮತ್ತು ಟ್ರೇಸ್ ಮಾಡಲು ಮುಂದಾಗಿದೆ. ಔಷಧಿಗಳನ್ನು ಬಾರ್ ಕೋಡ್, ಕ್ಯೂಆರ್ ಕೋಡ್ ವ್ಯಾಪ್ತಿಯಲ್ಲಿ ತಂದು ನಕಲಿ ಔಷಧಗಳಿಗೆ ಕಡಿವಾಣ ಹಾಕಲು ಮುಂದಾಗಿದೆ. ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡ್ತಿದ್ದಂತೆಯೇ ಔಷಧಿಗಳ ಬ್ಯಾಚ್, ಇದು ಯಾವಾಗ ತಯಾರಿಸಿದ್ದು, ಯಾವ ಕಂಪನಿ, ಇದರಲ್ಲಿ ಬಳಕೆ ಮಾಡಿರುವ ವಸ್ತುಗಳು ಎಷ್ಟು ಪ್ರಮಾಣದಲ್ಲಿದೆ ಹಾಗೂ ಎಕ್ಸ್ಪೆರಿ ಡೇಟ್ ಮತ್ತು ಇದರ ಬಳಕೆಯ ಉಪಯೋಗಗಳು ಹಾಗೂ ಸೈಡ್ ಎಫೆಕ್ಟ್ ಏನಿದೆ ಎಂಬುದನ್ನ ಸಂಪೂರ್ಣವಾಗಿ ಮಾಹಿತಿ ದೊರೆಯುತ್ತದೆ.

ಫಾರ್ಮಾ ಕ್ಷೇತ್ರಕ್ಕೆ ಕೋಡಿಂಗ್ ವ್ಯವಸ್ಥೆ

ಅಷ್ಟೇ ಅಲ್ಲದೆ ಪ್ರತಿ ಔಷಧಗಳಿಗೂ ಬಾರ್ ಕೋಡ್ ಹಾಕುವುದರಿಂದ ಪ್ರತಿಯೊಬ್ಬರು ಸುಲಭವಾಗಿ ಔಷಧಗಳ ಉತ್ಪಾದಕ ಕಂಪನಿಯ ಮಾಹಿತಿ ಪಡೆಯಬಹುದಾಗಿದೆ. ಪ್ರಾರಂಭ ಹಂತದಲ್ಲಿ ಔಷಧಿಗಳಿಗೆ ಕ್ಯೂಆರ್​​​​ ಕೋಡ್ ಬಳಸಿ ನಂತರ ಇಡೀ ಫಾರ್ಮಾ ಕ್ಷೇತ್ರಕ್ಕೆ ಕೋಡಿಂಗ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಎಲ್ಲಾ ರಾಜ್ಯಗಳ ಆರೋಗ್ಯ ಇಲಾಖೆಯಿಂದ ಈ ಬಗ್ಗೆ ಮಾಹಿತಿಯನ್ನ ಕೂಡ ಪಡೆಯಲು ಮುಂದಾಗಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಬಿಗ್​​ ಶಾಕ್​​​​​: ಚಳಿಗಾಲದಲ್ಲಿ ಹೊರಗೆ ಹೋಗುವ ಮುನ್ನ ಎಚ್ಚರ

ಒಟ್ಟಿನಲ್ಲಿ ನಕಲಿ ಔಷಧಿಗಳಿಗೆ ಕಡಿವಾಣ ಹಾಕುವುದಕ್ಕೆ ಇಲಾಖೆ ಹೊಸ ಮಾದರಿಯ ರೂಲ್ಸ್ ಜಾರಿಗೆ‌ ತರುತ್ತಿದ್ದು, ಇನ್ಮುಂದೆ ಔಷಧಿಗಳ ಸಂಪೂರ್ಣ ಮಾಹಿತಿಯನ್ನ ರೋಗಿಗಳೇ ಪಡೆಯಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಹೊಟ್ಟೆಪಾಡಿಗಾಗಿ ಟ್ರಾಫಿಕ್‌ ಸಿಗ್ನಲ್‌ನಲ್ಲಿ ಹೂ ಮಾರುತ್ತಿದ್ದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ – Kannada News | 11 year old girl kidnapped And physically assaulted in central Delhi, rickshaw driver Arrested

ನವದೆಹಲಿ, (ಜನವರಿ 22): ಹೊಟ್ಟೆಪಾಡಿಗಾಗಿ ಟ್ರಾಫಿಕ್ ಸಿಗ್ನಲ್‌ನಲ್ಲಿ ಹೂವು ಮಾರುತ್ತಿದ್ದ  ಪುಟ್ಟ ಬಾಲಕಿಯನ್ನು (Girl) ಕಾಮುಕನೋರ್ವ ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.  ಜನವರಿ 11ರಂದು ಕೇಂದ್ರ ದೆಹಲಿ(New Delhi) ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಗುಲಾಬಿ ಹೂ ಮಾರುತ್ತಿದ್ದ 11 ವರ್ಷದ ಬಾಲಕಿಯನ್ನು ಆಟೋ ಚಾಲಕನೋರ್ವ ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ.  ಬಳಿಕ ಬಾಲಕಿಗೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನು ಅರಣ್ಯ ಪ್ರದೇಶದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ಬಳಿಕ ಪೊಲೀಸರು 300 ಸಿಸಿಟಿವಿ ಪರಿಶೀಲಿಸಿ ಕಾಮುಕನ ಹೆಡೆಮುರಿ ಕಟ್ಟುವಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 40 ವರ್ಷದ ದುರ್ಗೇಶ್ ಬಂಧಿತ ಕಾಮುಕ.

ಹೂ ಮಾರುವ ಬಾಲಕಿ ಮೇಲೆ ಬಿದ್ದಿತ್ತು ಕಾಮುಕನ ಕಣ್ಣು

ಜನವರಿ 11 ರಂದು ದೆಹಲಿ ಪ್ರಸಾದ್ ನಗರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪುಟ್ಟ ಹುಡುಗಿ ಗುಲಾಬಿ ಹೂ ಮಾರುತ್ತಾ ಸಿಗ್ನಲ್ ಬಳಿ ನಿಂತಿರುವುದನ್ನು ಆರೋಪಿ ದುರ್ಗೇಶ್ ನೋಡಿದ್ದಾನೆ. ಬಳಿಕ ತನ್ನ ಆಟೋದಲ್ಲಿದ್ದ ಪ್ರಯಾಣಿಕರನ್ನು ಇಳಿಸಿ ಬಾಲಕಿ ಬಳಿ ಹೋಗಿದ್ದು, ಎಲ್ಲಾ ಹೂವುಗಳನ್ನು ಮಾರಲು ಸಹಾಯ ಮಾಡುವುದಾಗಿ ನಂಬಿಸಿ ಬಾಲಕಿಯನ್ನು ಆಟೋದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮುಸ್ಲಿಂ ಯುವಕನ ಪ್ರೀತಿಸಿದ್ದಕ್ಕೆ ತಂಗಿಯೆಂದೂ ನೋಡದೆ ಇಬ್ಬರನ್ನೂ ಬರ್ಬರವಾಗಿ ಹತ್ಯೆಗೈದ ಸಹೋದರರು

ವಿಚಾರಣೆ ವೇಳೆ ಆರೋಪಿ ದುರ್ಗೇಶ್ , ಈ ಹಿಂದೆ ಟ್ರಾಫಿಕ್ ಸಿಗ್ನಲ್‌ನಲ್ಲಿ ಹುಡುಗಿಯನ್ನು ಗಮನಿಸಿ ಅಪಹರಣಕ್ಕೆ ಪ್ಲ್ಯಾನ್ ರೂಪಿಸಿದ್ದಾಗಿ ಬಾಯ್ಬಿಟ್ಟಿದ್ದಾನೆ. ಕಾಮುಕ ತಪ್ಪೊಪ್ಪಿಗೆಯ ಬಳಿಕ ಪೊಲೀಸರು ರಕ್ತದ ಕಲೆಗಳಿರುವ ಬಟ್ಟೆಗಳು ಮತ್ತು ಇತರೆ ಸಾಕ್ಷಿಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯಿಂದ ಆಘಾತಕ್ಕೊಳಗಾದ ಮಗುವಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸಲಾಗುತ್ತಿದೆ.

300 ಸಿಸಿಟಿವಿ ಕ್ಯಾಮೆರಾ ಜಾಲಾಡಿದ ಖಾಕಿ

ಆರೋಪಿಯ ಪತ್ತೆಗಾಗಿ ಪೊಲೀಸರು ಸುಮಾರು 15 ಮಾರ್ಗಗಳಲ್ಲಿ ಅಳವಡಿಸಲಾದ ಸುಮಾರು 300 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದಾರೆ. ಒಂದು ದೃಶ್ಯದಲ್ಲಿ ಹುಡುಗಿ ಆಟೋ ಹತ್ತುತ್ತಿರುವುದು ಕಂಡುಬಂದಿದೆ. ನಂತರ ಆ ವಾಹನದ ನೋಂದಣಿ ಸಂಖ್ಯೆಯನ್ನು ಪತ್ತೆಹಚ್ಚಲಾಯಿತು. ಇದು ಅದೇ ದಿನ ಆರೋಪಿಯನ್ನು ಗುರುತಿಸಿ ಬಂಧಿಸಲು ಸಹಾಯವಾಗಯ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಪೊಲೀಸರು ಅಪಹರಣ ಮತ್ತು ಅತ್ಯಾಚಾರ, ಪೋಕ್ಸೊ ಕಾಯ್ದೆ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬಾಳೆಹಣ್ಣು vs ಖರ್ಜೂರ: ಆಯಾಸ ಕಡಿಮೆ ಮಾಡಿ ತ್ವರಿತ ಶಕ್ತಿ ಪಡೆಯಲು ಇವೆರಡರಲ್ಲಿ ಯಾವುದು ಒಳ್ಳೆಯದು? – Kannada News | Bananas vs. Dates: Nutritional Comparison for Energy

Bananas Vs. Dates

ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿಯೂ ಆಯಾಸ, ನಿಶಕ್ತಿ ಹೆಚ್ಚಾಗಿ ಕಂಡುಬರುತ್ತಿದೆ. ಬೆಳಿಗ್ಗೆ ಎದ್ದ ತಕ್ಷಣ ಈ ಸಮಸ್ಯೆ ಆರಂಭವಾದರೆ ಮಲಗಿ ನಿದ್ರೆ ಮಾಡುವ ವರೆಗೂ ನಮ್ಮ ಉತ್ಸಾಹವನ್ನು ಕುಂದಿಸಿಬಿಡುತ್ತದೆ. ಇದಕ್ಕೆ ಕಾರಣಗಳು ಹಲವಾರಾದರೂ ಕೂಡ ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಸುಲಭವಾದ ಮಾರ್ಗ ಕಂಡುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಈ ರೀತಿ ಕಂಡುಬರುವ ಆಯಾಸದಿಂದ ಮುಕ್ತಿ ಕಂಡುಕೊಳ್ಳಲು ಜೊತೆಗೆ ವ್ಯಾಯಾಮ ಅಥವಾ ಇನ್ನಿತರ ಕೆಲಸ ಮಾಡಲು ತ್ವರಿತ ಶಕ್ತಿ ಪಡೆಯಲು ಅನೇಕರು ಬಾಳೆಹಣ್ಣು (Bananas) ಅಥವಾ ಖರ್ಜೂರವನ್ನು ಸೇವನೆ ಮಾಡುತ್ತಾರೆ. ಆದರೆ ಇವುಗಳಲ್ಲಿ ಯಾವುದು ಉತ್ತಮ ಮತ್ತು ಯಾವ ಸಮಯಕ್ಕೆ ಯಾವುದನ್ನು ಸೇವನೆ ಮಾಡಬೇಕು ಎಂದು ತಿಳಿದಿದ್ದರೆ ಇದರಿಂದ ದ್ವಿಗುಣ ಪ್ರಯೋಜನ ಪಡೆಯಬಹುದು. ಹಾಗಾದರೆ ಈ ಎರಡು ಆಹಾರಗಳ ನಡುವೆ ಇರುವ ವ್ಯತಾಸವೇನು, ಯಾವುದು ಆರೋಗ್ಯಕ್ಕೆ ಒಳ್ಳೆಯದು ತಿಳಿದುಕೊಳ್ಳಿ.

ಒಂದು ಬಾಳೆಹಣ್ಣು ಸುಮಾರು 105 ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದರಲ್ಲಿ ಕಾರ್ಬೋಹೈಡ್ರೇಟ್‌, ಪೊಟ್ಯಾಸಿಯಮ್, ವಿಟಮಿನ್ ಬಿ6 ಮತ್ತು ವಿಟಮಿನ್ ಸಿ ಸಮೃದ್ಧವಾಗಿದೆ. ಬಾಳೆಹಣ್ಣಿಗೆ ಹೋಲಿಸಿದರೆ, ಖರ್ಜೂರವು ಹೆಚ್ಚಿನ ಕ್ಯಾಲೋರಿಗಳನ್ನು ಹೊಂದಿರುತ್ತದೆ. ಕೇವಲ ಮೂರು ಅಥವಾ ನಾಲ್ಕು ಖರ್ಜೂರ ತಿನ್ನುವುದರಿಂದ ನಿಮಗೆ 90 ರಿಂದ 120 ಕ್ಯಾಲೋರಿಗಳಷ್ಟು ಶಕ್ತಿ ಸಿಗುತ್ತದೆ. ಅಷ್ಟೇಅಲ್ಲ, ಇವು ಫೈಬರ್, ಕಬ್ಬಿಣ ಮತ್ತು ಮೆಗ್ನೀಸಿಯಮ್‌ನಿಂದಲೂ ಸಮೃದ್ಧವಾಗಿದೆ. ದೀರ್ಘಕಾಲ ವ್ಯಾಯಾಮ ಮಾಡಲು ಅಥವಾ ದಿನವಿಡೀ ಚೈತನ್ಯಶೀಲರಾಗಿ ಕೆಲಸ ಮಾಡಲು ಬಯಸುವವರಿಗೆ, ಬಾಳೆಹಣ್ಣು ಒಳ್ಳೆಯದು. ಅವುಗಳಲ್ಲಿರುವ ನಾರು ಸಕ್ಕರೆಯನ್ನು ನಿಧಾನವಾಗಿ ರಕ್ತಕ್ಕೆ ಬಿಡುಗಡೆ ಮಾಡುತ್ತದೆ, ಹಾಗಾಗಿ ದೀರ್ಘಕಾಲದವರೆಗೆ ಶಕ್ತಿ ಒದಗಿಸಲು ಸಹಾಯ ಮಾಡುತ್ತದೆ.

ತ್ವರಿತ ಶಕ್ತಿ ಪಡೆಯಯಲು ಯಾವುದು ಒಳ್ಳೆಯದು?

ವ್ಯಾಯಾಮ ಮಾಡಿ ಬಂದ ನಂತರ ನೀವು ತುಂಬಾ ದಣಿದಿದ್ದರೆ ಅಥವಾ ಆಲಸ್ಯ ಕಾಡುತ್ತಿದ್ದರೆ ಖರ್ಜೂರ ಸೇವನೆ ಮಾಡುವುದು ಒಳ್ಳೆಯದು. ಏಕೆಂದರೆ ಅವುಗಳಲ್ಲಿ ಹೆಚ್ಚಿನ ಪ್ರಮಾಣದ ನೈಸರ್ಗಿಕ ಸಕ್ಕರೆ ಅಂಶವಿದ್ದು ದೇಹಕ್ಕೆ ತಕ್ಷಣದ ಗ್ಲೂಕೋಸ್ ಅನ್ನು ಒದಗಿಸುತ್ತದೆ. ಅದಕ್ಕಾಗಿಯೇ ಉಪವಾಸ ಮಾಡುವವರು ಖರ್ಜೂರಕ್ಕೆ ಆದ್ಯತೆ ನೀಡುತ್ತಾರೆ. ಆದರೆ ಮಧುಮೇಹ ಇರುವವರು ಖರ್ಜೂರ ಸೇವನೆ ಮಾಡುವುದನ್ನು ಆದಷ್ಟು ನಿಯಂತ್ರಿಸಬೇಕು. ಸ್ನಾಯು ಸೆಳೆತದಿಂದ ಬಳುತ್ತಿರುವವರು ಕೂಡ ಖರ್ಜೂರ ಸೇವನೆ ಮಾಡಬಹುದು. ಇದು ಮೆಗ್ನೀಸಿಯಮ್ ಅಂಶದಿಂದ ಸಮೃದ್ಧವಾಗಿದ್ದು ಸ್ನಾಯುಗಳು ಬೇಗನೆ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಬಾಳೆಹಣ್ಣನ್ನು ಈ ಸಮಯದಲ್ಲಿ ತಿನ್ನುವುದರಿಂದ ಸಿಗುತ್ತೆ ಊಹಿಸಲೂ ಸಾಧ್ಯವಾಗದ ಪ್ರಯೋಜನ!

ಯಾವುದು ಉತ್ತಮ?

ಎರಡೂ ಕೂಡ ದೇಹದ ಅಗತ್ಯಗಳಿಗೆ ಅನುಗುಣವಾಗಿ ಒಳ್ಳೆಯದು. ನೀವು ದೀರ್ಘಕಾಲ ಕೆಲಸ ಮಾಡಲು ಬಯಸಿದಲ್ಲಿ ಬಾಳೆ ಹಣ್ಣುಗಳನ್ನು ಸೇವನೆ ಮಾಡಿ. ತಕ್ಷಣ ಶಕ್ತಿ ಪಡೆಯಲು ಖರ್ಜೂರ ಸೇವನೆ ಮಾಡಿ. ಆದರೆ ಎಲ್ಲವೂ ಮಿತವಾಗಿರಲಿ. ಯಾವುದೇ ಆಗಲಿ ಅತಿಯಾದರೆ ಒಳ್ಳೆಯದಲ್ಲ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link