ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಕಾಂಗ್ರೆಸ್ನ ಮುಸ್ಲಿಂ ನಾಯಕರ ಸಭೆ
ಬೆಂಗಳೂರು, ಮೇ 27: ಮುಖ್ಯಮಂತ್ರಿ ಬದಲಾವಣೆ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಮುಸ್ಲಿಂ ನಾಯಕರು ತಮ್ಮ ತಮ್ಮ ಸಮುದಾಯದ ಸ್ಥಾನಮಾನ ಮತ್ತು ಭವಿಷ್ಯದ ಬಗ್ಗೆ ಚರ್ಚಿಸಿದ್ದಾರೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆಗಳ ಬಗ್ಗೆ ವದಂತಿಗಳು ಹರಡಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ. ಸಚಿವ ಜಮೀರ್ ಅಹಮದ್ ಮತ್ತು ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಅಲ್ಪಸಂಖ್ಯಾತ ನಾಯಕರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಜಮೀರ್ ಅಹಮದ್,…