ಬೆಂಗಳೂರಲ್ಲೂ ರಸ್ತೆಗಿಳಿದ ಡಬಲ್ ಡೆಕ್ಕರ್ ಬಸ್ಗಳು: ಟಿಕೆಟ್ ದರ, ಬುಕ್ಕಿಂಗ್ ಕುರಿತ ಮಾಹಿತಿ ಇಲ್ಲಿದೆ – Kannada News | KSTDC Launches Double Decker Bus Tours in Bengaluru, Booking and Price Details
ಡಬಲ್ ಡೆಕ್ಕರ್ ಬಸ್ ಸಂಚಾರಕ್ಕೆ ಚಾಲನೆ ಬೆಂಗಳೂರು, ಜನವರಿ 22: ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಬಳಿಕ ಬೆಂಗಳೂರಲ್ಲೂ ಪ್ರವಾಸಿಗರಿಗೆ ಲಂಡನ್ ಮಾದರಿಯ ಬಸ್ ಸೇವೆ ನೀಡಲು ಕೆಎಸ್‌ಟಿಡಿಸಿ ಮುಂದಾಗಿದೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ನಗರದ ಪ್ರಮುಖ ಸ್ಥಳಗಳನ್ನು ವೀಕ್ಷಿಸಲು 3 ಬಸ್‌ಗಳನ್ನು ಪರಿಚಯಿಸಿದ್ದು, ಅದಾಗಲೇ ಅವುಗಳಿಗೆ ಚಾಲನೆಯೂ ಸಿಕ್ಕಿದೆ. ಬೆಂಗಳೂರಿನ ಪ್ರವಾಸೋದ್ಯಮವನ್ನು ಹೆಚ್ಚಿಸುವ ಉದ್ದೇಶದಿಂದ ಈ ಬಸ್ಗಳ ಓಡಾಟ ಆರಂಭಿಸಲಾಗಿದ್ದು, ಐಷಾರಾಮಿ ಬಸ್ನಲ್ಲಿ ಕೂತು ನಗರದ ಅಂದ ಆಸ್ವಾಧಿಸುವ ಅವಕಾಶವನ್ನು ಪ್ರಯಾಣಿಕರಿಗೆ ಒದಗಿಸಲಾಗಿದೆ. ಬಸ್ನ ವಿಶೇಷತೆ ಏನು?…