Category Archives: Blog

Your blog category

ಕರ್ನಾಟಕದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್​ಮೇಲ್, ಲಕ್ಷಾಂತರ ರೂ. ವಸೂಲಿ: ಚಿಕ್ಕಮಗಳೂರಿನ ಮಹಿಳೆಯ ಬಂಧನ – Kannada News | Senior Seer of Prominent Karnataka Mutt Allegedly Blackmailed, CCB Arrests Chikkamagaluru Woman for Extortion

ಒಳ ಚಿತ್ರದಲ್ಲಿ ಬಂಧಿತ ಮಹಿಳೆ ಸ್ಫೂರ್ತಿ

ಬೆಂಗಳೂರು, ಜನವರಿ 22: ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಚಿಕ್ಕಮಗಳೂರು ಮೂಲದ ಸ್ಪೂರ್ತಿ ಎಂಬ ಮಹಿಳೆಯನ್ನು ಬೆಂಗಳೂರು (Bangalore) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾಮೀಜಿಯಿಂದ ಈಗಾಗಲೇ 4.5 ಲಕ್ಷ ರೂ. ವಸೂಲಿ ಮಾಡಿಕೊಂಡಿದ್ದ ಆರೋಪಿ, ಮತ್ತೆ 1 ಕೋಟಿ ರೂ. ನೀಡುವಂತೆ ಒತ್ತಡ ಹೇರಿದ್ದಳು ಎನ್ನಲಾಗಿದೆ. ಐದು ತಿಂಗಳ ಹಿಂದೆ ಸ್ವಾಮೀಜಿಗೆ ಕರೆ ಮಾಡಿದ ಸ್ಪೂರ್ತಿ, ತಿಪಟೂರಿನಲ್ಲಿ ವ್ಯಾಸಂಗ ಮಾಡಿದ್ದೇನೆ ಎಂದು ಪರಿಚಯಿಸಿಕೊಂಡಿದ್ದಳು. ಬಳಿಕ ಹಣಕ್ಕೆ ಬೇಡಿಕೆ ಇಟ್ಟು, ಹಣ ಕೊಡದಿದ್ದರೆ ಮಾನಹಾನಿ ಮಾಡುವುದಾಗಿ ಹಾಗೂ ಜೀವ ಬೆದರಿಕೆ ಹಾಕಿದ್ದಳು.

ಸ್ವಾಮೀಜಿ ಬೆಂಗಳೂರಿಗೆ ಬಂದಿದ್ದಾಗ ಅವರಿಂದ 4.5 ಲಕ್ಷ ರೂ. ಪಡೆದುಕೊಂಡರೂ, ಮತ್ತೆ 1 ಕೋಟಿ ರೂ. ಕೊಡಬೇಕೆಂದು ತನ್ನ ಸಹಚರರ ಜೊತೆಗೂಡಿ ಬೆದರಿಕೆ ಮುಂದುವರಿಸಿದ್ದಳು.

ಕಾಟ ತಾಳಲಾರದೆ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದ ಸ್ವಾಮೀಜಿ

ಆರೋಪಿ ಮಹಿಳೆ ಮತ್ತೆ ಮತ್ತೆ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದರಿಂದ ಆತಂಕಗೊಂಡ ಸ್ವಾಮೀಜಿ ಸಿಸಿಬಿ ಪೊಲೀಸರ ಮೊರೆ ಹೋಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಸ್ಪೂರ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಎರಡು ವರ್​ಷ ಹಿಂದೆಯೂ ನಡೆದಿತ್ತು ಹನಿಟ್ರ್ಯಾಪ್ ಯತ್ನ

ಇದೇ ಸ್ವಾಮೀಜಿ ವಿರುದ್ಧ ಎರಡು ವರ್ಷಗಳ ಹಿಂದೆ ಹನಿಟ್ರ್ಯಾಪ್ ಯತ್ನ ನಡೆದಿತ್ತು. ಆ ವೇಳೆ 6 ಕೋಟಿ ರೂ. ಬೇಡಿಕೆ ಇಟ್ಟಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಬ್ಲ್ಯಾಕ್​ಮೇಲ್ ಕಾಟ ಎದುರಾಗಿದೆ.

ಇದನ್ನೂ ಓದಿ: ಡಿಜಿಪಿ ರಾಮಚಂದ್ರ ರಾವ್​​ ರಾಸಲೀಲೆ ಕೇಸ್​​​​: ಸರ್ಕಾರದ ಮುಂದಿರುವ ಸವಾಲುಗಳೇನು?

ಸದ್ಯ ಬ್ಲ್ಯಾಕ್​ಮೇಲ್ ಪ್ರಕರಣದ ಹಿನ್ನೆಲೆಯಲ್ಲಿ ಸ್ವಾಮೀಜಿ ಕೋರ್ಟ್ ಮೊರೆ ಹೋಗಿದ್ದು, ತಮಗೆ ಸಂಬಂಧಿಸಿದ ಯಾವುದೇ ಫೋಟೋಗಳು ಹಾಗೂ ವಿಡಿಯೋಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಪಡೆದಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ.

ವರದಿ: ಪ್ರದೀಪ್ ಚಿಕ್ಕಾಟಿ, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Optical Illusion: ನೀವು ಬುದ್ಧಿವಂತರೇ, ಈ ಚಿತ್ರದಲ್ಲಿರುವ ಬೆಕ್ಕನ್ನು ಹುಡುಕಿ ನೋಡೋಣ – Kannada News | Optical Illusion: If you can find the sleeping cat hidden in this picture, you are smart

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Reddit

ನಿಮ್ಮ ಮೆದುಳು ಎಷ್ಟು ಚುರುಕಾಗಿದೆ ತಿಳಿದುಕೊಳ್ಳಬೇಕೇ, ಹಾಗಾದ್ರೆ ನೀವು ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳತ್ತ ಒಮ್ಮೆ ಕಣ್ಣಾಯಿಸುವುದು ಒಳ್ಳೆಯದು. ಈ ಒಗಟಿನ ಚಿತ್ರಗಳು ನಿಮಗೆ ಟ್ರಿಕ್ಕಿ ಎಂದೆನಿಸಬಹುದು. ನೀವು ಏಕಾಗ್ರತೆಯಿಂದ ಗಮನ ಹರಿಸಿದರೆ ಈ ಒಗಟು ಬಿಡಿಸುವುದು ಕಷ್ಟವಾಗಲ್ಲ. ಸಸ್ಯಗಳ ನಡುವೆ ಅಡಗಿರುವ ಬೆಕ್ಕನ್ನು ಕಂಡುಹಿಡಿಯಬೇಕು. ಇಲ್ಲಿ ಬೆಕ್ಕು ಮಲಗಿಕೊಂಡಿದೆ, ನೀವು ಕೇವಲ ಐದು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಪ್ರಯತ್ನಿಸಿ.

@consiousovserver_22 ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಇಲ್ಯೂಷನ್ ಫೋಟೋವೊಂದನ್ನು ಹಂಚಿಕೊಳ್ಳಲಾಗಿದೆ. ನಿಮ್ಮ ಯೋಚನಾ ಸಾಮರ್ಥ್ಯಕ್ಕೆ ಸವಾಲು ನೀಡುವ ಈ ಒಗಟಿನ ಚಿತ್ರ ನೋಡಿದಾಗ ನಿಮ್ಮ ಕಣ್ಣಿಗೆ ಕಾಣಿಸುವುದೇ ಹಚ್ಚ ಹಸಿರಿನ ಸಸ್ಯಗಳಿಂದ ಆವೃತ್ತವಾಗಿರುವ ಪ್ರದೇಶ. ಆದರೆ ಈ ಸಸ್ಯಗಳ ನಡುವೆ ಬೆಕ್ಕೊಂದು ಮಲಗಿ ಕೊಂಡಿದೆ. ತೀಕ್ಷ್ಣ ದೃಷ್ಟಿ ಹೊಂದಿರುವವರು ಮಾತ್ರ ಬೆಕ್ಕನ್ನು ತಕ್ಷಣವೇ ಗುರುತಿಸಲು ಸಾಧ್ಯ. ನೀವು ಅಂತಹವರಲ್ಲಿ ಒಬ್ಬರೇ ಎಂದು ತಿಳಿಯಲು ಇದು ಸೂಕ್ತ ಸಮಯ.

ಇದನ್ನೂ ಓದಿ: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡು ಹಿಡಿಯಬಲ್ಲಿರಾ

ಮಲಗಿರುವ ಬೆಕ್ಕು ನಿಮ್ಮ ಕಣ್ಣಿಗೆ ಕಾಣಿಸಿತೇ?

ಈ ಒಗಟಿನ ಚಿತ್ರಗಳು ನಿಮ್ಮ ಕಣ್ಣನ್ನು ಮೋಸಗೊಳಿಸುವುದೇನು ಸಹಜ. ಈ ಚಿತ್ರದಲ್ಲಿರುವ ಬೆಕ್ಕನ್ನು ಹುಡುಕುವುದು ಅಷ್ಟು ಸುಲಭವಲ್ಲ. ಬೆಕ್ಕಿನ ಮೈ ಬಣ್ಣವು ಸುತ್ತಲಿನ ಪ್ರದೇಶದೊಂದಿಗೆ ಬೆರೆತು ಹೋಗಿದೆ. ಎಷ್ಟೇ ಪ್ರಯತ್ನ ಪಟ್ಟರೂ ಬೆಕ್ಕನ್ನು ಕಂಡು ಹಿಡಿಯಲು ಸಾಧ್ಯವಾಗಿಲ್ಲವೇ. ಬೆಕ್ಕು ಎಲ್ಲಿದೆ ಎಂದು ನಾವೇ ಹೇಳುತ್ತೇವೆ. ನೀವು ಬೆಕ್ಕನ್ನು ಎಡಭಾಗದಲ್ಲಿರುವ ನೆರಳಿನಲ್ಲಿ, ಎರಡು ಹೂವುಗಳ ಮೇಲೆ ನೋಡಬಹುದು. ನೀವು ಮಲಗಿರುವ ಬೆಕ್ಕನ್ನು ನೋಡಿದ್ದೀರಿ ಎಂದು ನಾವು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Video: ದೆಹಲಿಯ ಬೀದಿಯಲ್ಲಿ ವ್ಯಕ್ತಿಯನ್ನು ಬೆನ್ನಟ್ಟಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಪುರುಷರ ಗುಂಪು – Kannada News | Daylight Killing on Delhi Street, Man Chased and Fatally Stabbed on Camera

ನವದೆಹಲಿ, ಜನವರಿ 22: ದೆಹಲಿಯ ಮಂಗೋಲ್​ಪುರಿಯಲ್ಲಿ ವ್ಯಕ್ತಿಯೊಬ್ಬನನ್ನು ಪುರುಷರ ಗುಂಪೊಂದು ಬೆನ್ನಟ್ಟಿ ರಸ್ತೆಯಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ನಾಲ್ಕೈದು ಜನರ ಗುಂಪೊಂದು 25 ವರ್ಷದ ಯುವಕನನ್ನು ಇರಿದು ಕೊಂದಿದ್ದಾರೆ. ಆತ ಓಡಿ ಹೋಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಆದರೆ ಅವರು ಆತನನ್ನು ಹಿಂಬಾಲಿಸಿ ಬಂದು ಕೊಲೆ ಮಾಡಿದ್ದಾರೆ. ಪಕ್ಕದಲ್ಲಿದ್ದ ಜನರು ಹಲ್ಲೆ ನಡೆಯುತ್ತಿರುವುದನ್ನು ನೋಡುತ್ತಿದ್ದಾರೆಯೇ ವಿನಃ ಯಾರೂ ಕೂಡ ಅವರನ್ನು ಬದುಕಿಸುವ ಪ್ರಯತ್ನ ಮಾಡಲಿಲ್ಲ. ಮೃತರನ್ನು ಆಕಾಶ್ ಎಂದು ಗುರುತಿಸಲಾಗಿದೆ.ದೆಹಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link

Hindu Tradition: ಅಂತ್ಯಸಂಸ್ಕಾರದ ವೇಳೆ ಜನರು ಬಿಳಿ ಬಣ್ಣದ ವಸ್ತ್ರವನ್ನು ಧರಿಸುವುದು ಏಕೆ ಗೊತ್ತಾ? – Kannada News | The Significance of White Attire at Funerals in Hindu Tradition

ಸಾವಿನ ಮನೆಯಲ್ಲಿ ಬಿಳಿ ಬಣ್ಣದ ವಸ್ತ್ರವನ್ನು ಧರಿಸುವುದರ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಬಿಳಿಯ ಬಣ್ಣವು ಏಳು ಬಣ್ಣಗಳಲ್ಲಿ ವಿಶೇಷವಾಗಿದ್ದು, ಇದನ್ನು ಶಾಂತಿಯ ಸಂಕೇತ, ಶುದ್ಧತೆಯ ಸಂಕೇತ, ಮೌನದ ಸಂಕೇತ ಮತ್ತು ಸಮೃದ್ಧಿಯ ಸಂಕೇತವಾಗಿ ಉಪಯೋಗಿಸಲಾಗುತ್ತದೆ. “ಜಾತಸ್ಯ ಮರಣಂ ಧ್ರುವಂ” ಎಂಬಂತೆ, ಜನಿಸಿದ ಪ್ರತಿಯೊಬ್ಬರೂ ಒಂದು ದಿನ ಮರಣವನ್ನಪ್ಪುವುದು ನಿಶ್ಚಿತ. ಭಗವದ್ಗೀತೆಯಲ್ಲಿ ಸಹ ಜನನ ಮತ್ತು ಮರಣಗಳು ಜೀವನದ ಅವಿಭಾಜ್ಯ ಅಂಗಗಳೆಂದು ಹೇಳಲಾಗಿದೆ. ಹೀಗಾಗಿ ಮರಣವೆಂಬುದು ಪ್ರಕೃತಿಯ ಸಹಜ ಪ್ರಕ್ರಿಯೆ. ಅಂತಹ ಮರಣಕಾಲದಲ್ಲಿ, ಆ ದುಃಖದ ಸಂದರ್ಭದಲ್ಲಿ ನಾವು ಆ ಕಾರ್ಯದಲ್ಲಿ ಭಾಗವಹಿಸಿದಾಗ, ಬಿಳಿಯ ವಸ್ತ್ರಗಳನ್ನು ಧರಿಸುವುದು ಹೆಚ್ಚು ಸೂಕ್ತ.

ಒಡವೆಗಳನ್ನು ಹಾಕಿಕೊಂಡು, ವಿಚಿತ್ರವಾದ ಅಥವಾ ಆಡಂಬರದ ಬಟ್ಟೆಗಳನ್ನು ಧರಿಸಿಕೊಂಡು ಹೋಗುವುದಕ್ಕಿಂತ ಬಿಳಿಯ ವಸ್ತ್ರವನ್ನು ಧರಿಸಿ ಸ್ವಲ್ಪ ಹೊತ್ತು ಮೌನವನ್ನು ಪಾಲಿಸಿದಾಗ ಮೃತರ ಆತ್ಮಕ್ಕೆ ಶಾಂತಿ ಸಿಗುತ್ತದೆ. ಇದು ಮೃತರ ಆತ್ಮಕ್ಕೆ ಮೋಕ್ಷವನ್ನು ಕರುಣಿಸಲು ಸಹಾಯಕವಾಗುತ್ತದೆ ಎಂದು ನಂಬಲಾಗಿದೆ. ಅಷ್ಟೇ ಅಲ್ಲದೆ, ಇದು ಕುಟುಂಬದಲ್ಲಿ ಶಾಂತಿಯನ್ನು ನೆಲೆಸಲು ಸಹಕಾರಿಯಾಗುತ್ತದೆ. ಹಿಂದೂ ಸಮಾಜದಲ್ಲಿ ಮತ್ತು ಹಿಂದೂ ಧರ್ಮದಲ್ಲಿ ಜ್ಞಾನ ಮತ್ತು ಸದ್ಭಾವನೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಬಿಳಿ ಬಣ್ಣವು ಇದೇ ಜ್ಞಾನ ಮತ್ತು ಸದ್ಭಾವನೆಗೆ ಪ್ರತೀಕವಾಗಿದೆ.

ಇದನ್ನೂ ಓದಿ: ಹವಳವನ್ನು ಯಾರು ಧರಿಸಬಹುದು? ಇದರ ಪ್ರಯೋಜನ ಮತ್ತು ಧರಿಸುವ ವಿಧಾನ ತಿಳಿಯಿರಿ

ಸಾವಿನ ಸಮಯದಲ್ಲಿ ಮೃತರ ಆತ್ಮಕ್ಕೆ ಮೋಕ್ಷವನ್ನು ಕೊಡಿಸಲು, ಸಾಮಾನ್ಯವಾಗಿ ಬಿಳಿಯ ವಸ್ತ್ರವನ್ನು ಪ್ರತಿಯೊಬ್ಬರೂ ಧರಿಸಲು ಪ್ರಯತ್ನಿಸಬೇಕು. ಒಂದು ವೇಳೆ ಸಂಪೂರ್ಣ ಬಿಳಿಯ ವಸ್ತ್ರ ಧರಿಸಲು ಸಾಧ್ಯವಾಗದಿದ್ದರೂ, ಕನಿಷ್ಠ ಒಂದು ಬಿಳಿಯ ಟವಲ್ ಅಥವಾ ಬಿಳಿಯ ಶಾಲು ಧರಿಸಿಕೊಂಡು ಹೋಗುವುದು ಉತ್ತಮ. ಇದರಿಂದ ಮೃತರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲದೆ, ಬಿಳಿ ವಸ್ತ್ರದಿಂದಾಗಿ ಆ ಸ್ಥಳದ ವಾತಾವರಣವೂ ಶುದ್ಧವಾಗಿ ಭಾವಿಸಲಾಗುತ್ತದೆ ಮತ್ತು ಅಲ್ಲಿಗೆ ಹೋದವರಿಗೂ ಕೂಡ ತುಂಬಾ ಒಳ್ಳೆಯದಾಗುತ್ತದೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸಬೇಡಿ ಎಂದ ಕಾಂಗ್ರೆಸ್​​ನ ಮಾಜಿ ಸಚಿವ – Kannada News | Ex Minister Ramanath Rai on Saffron Flags in Temples: Udupi DC Incident and D.K. Backlash

ಮಂಗಳೂರು, ಜ.22: ಮಂಗಳೂರು ಜಿಲ್ಲೆಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಸಚಿವ ರಮಾನಾಥ ರೈ (Ramanath Rai) ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಅವರು ನೀಡಿರುವ ಹೇಳಿಕೆಯಿಂದ ದಕ್ಷಿಣ ಕನ್ನಡದಲ್ಲಿ ಹಿಂದೂ ನಾಯಕರನ್ನು ಕೇರಳಿಸಿದೆ. ದೇವಸ್ಥಾನದಲ್ಲಿ ಕೇಸರಿ ಬಾವುಟ ಸೇರಿ ಯಾವುದೇ ಧ್ವಜ ಹಾರಿಸಬೇಡಿ ಎಂದು ಹೇಳಿ, ಇದೀಗ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದೆ. ನೀವು ಒಂದು ದೈವದ ಗುತ್ತು ಮನೆಯವರಾಗಿ (ದೈವದ ಮನೆಯವರು) ಹೀಗೆ ಮಾತನಾಡುವುದು ಸರಿಯಲ್ಲ ಎಂದು ನೆಟ್ಟಿಗರು ಹೇಳಿದ್ದಾರೆ. ಉಡುಪಿ ಮಠ ಪರ್ಯಾಯ ಮಹೋತ್ಸವದಲ್ಲಿ ಉಡುಪಿ ಜಿಲ್ಲಾಧಿಕಾರಿ ಟಿಕೆ ಸ್ವರೂಪಾ ಕೇಸರಿ ಧ್ವಜ ಹಾರಿಸಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಮಾಜಿ ಸಚಿವ ರಮಾನಾಥ ರೈ ಇದನ್ನು ಖಂಡಿಸುವ ಭರದಲ್ಲಿ ದೇವಾಲಯದಲ್ಲಿ ಕೇಸರಿ ಬಾವುಟ ಹಾಕಬೇಡಿ ಎಂದು ಹೇಳಿದ್ದಾರೆ.

ಉಡುಪಿ ಡಿಸಿ ಭಗವಾಧ್ವಜ ಹಾರಿಸಿದ್ದ ತಪ್ಪು, ಇದನ್ನು ಒಪ್ಪಲು ಸಾಧ್ಯವಿಲ್ಲ. ಅವರ ಮೇಲೆ ಸರಿಯಾದ ಕ್ರಮ ಆಗಬೇಕು. ದೇವಾಲಯದ ಕಾರ್ಯಕ್ರಮದಲ್ಲಿ ರಾಜಕೀಯ ಪ್ರೇರಿತ ಪತಾಕೆ ಧಿಕ್ಕರಿಸಬೇಕು. ದೇಗುಲದಲ್ಲಿ ಕಾಂಗ್ರೆಸ್, ಕೇಸರಿ, ಹಸಿರು ಯಾವುದೇ ಬಾವುಟ ಹಾಕಬೇಡಿ ಎಂದು ಹೇಳಿದ್ದಾರೆ. ದೇವಸ್ಥಾನದಲ್ಲಿ ನಡೆಯುವುದು ಕಾರ್ಯಕ್ರಮವೂ ಎಲ್ಲರಿಗೂ ಸಂಬಂಧಿಸಿದೆ. ಈ ಕಾರಣಕ್ಕೆ ದೇಗುಲದಲ್ಲಿ ಕೇಸರಿ ಧ್ವಜ ಹಾರಿಸಬಾರದು. ದೇಗುಲದ ಉತ್ಸವಗಳಲ್ಲಿ ಭಗವಾಧ್ವಜ ಹಾರಿಸುವುದನ್ನು ವಿರೋಧಿಸಬೇಕು ಎಂದು ಅವರು ಮಂಗಳೂರಿನ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ವೇಳೆ ಹೇಳಿದ್ದಾರೆ.

ಸೋಶಿಯಲ್​​ ಮೀಡಿಯಾದಲ್ಲಿ ರಮಾನಾಥ ರೈ ಹೇಳಿಕೆಗೆ ಆಕ್ರೋಶ:

ಮಾಜಿ ಸಚಿವ ರಮಾನಾಥ ರೈ ನೀಡಿದ ಹೇಳಿಕೆಗೆ ಹಿಂದೂ ಪರ ಸಂಘಟನೆಗಳು ಹಾಗೂ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ಕೂಡ ನಡೆದಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಹೇಳಿದ್ದಾರೆ. ನೀವು ದೈವರಾಧಕರು ಅಲ್ಲವೇ, ಒಂದು ಗುತ್ತಿನ ಮನೆಯವರಾಗಿ ಹೀಗೆ ಅವಮಾನ ಮಾಡುವುದು ಸರಿಯೇ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಹಿಂದೂ ದೇವಾಲಯದಲ್ಲಿ ಕೇಸರಿ ಧ್ವಜ ಹಾರಿಸದೇ ಬೇರೆ ಯಾವ ಧ್ವಜ ಹಾರಿಸಬೇಕು ಎಂದು ಪ್ರಶ್ನೆ ಮಾಡಿದ್ದಾರೆ. ದೇವಾಲಯದ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಕೆಲವೊಂದು ನೆಟ್ಟಿಗರು ಹೇಳಿದ್ದಾರೆ.

ಇದನ್ನೂ ಓದಿ: ಅಹಿಂದ ಸಮಾವೇಶಕ್ಕೆ ವಾಹನ ನೀಡದಂತೆ ಹೇಳಿದ್ದಾರೆ: ಡಿಕೆಶಿ ವಿರುದ್ಧ ಗಂಭೀರ ಆರೋಪ

ಕೃಷ್ಣಮಠದ ಪರ್ಯಾಯದಲ್ಲಿ ಕೇಸರಿ ಧ್ವಜ ಹಾರಿಸಿದ ಡಿಸಿ:

ಜನವರಿ 18 ರಂದು ಉಡುಪಿಯ ಜಿಲ್ಲಾಧಿಕಾರಿ ಟಿಕೆ ಸ್ವರೂಪಾ ಅವರು ಪರ್ಯಾಯ ಮೆರವಣಿಗೆಗೆ ಚಾಲನೆ ನೀಡುವಾಗ ಕೇಸರಿ ಧ್ವಜ ಹಾರಿದ್ದಾರೆ, ಇದೀಗ ಈ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು, ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಟೀಕೆಗಳು ಬಂತು. ಒಬ್ಬ ಸರ್ಕಾರಿ ಅಧಿಕಾರಿ ಒಂದು ಧರ್ಮದ ಧ್ವಜವನ್ನು ಹಾರಿಸಿರುವುದು ತಪ್ಪು ಎಂದು ಕಾಂಗ್ರೆಸ್​​​ ನಾಯಕರು ಹೇಳಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದಾರೆ. ಆದರೆ ಇದಕ್ಕೆ ಬಿಜೆಪಿ ಕಿಡಿಕಾರಿದ. ಇದು ಕಾಂಗ್ರೆಸ್ಸಿನ ಹಿಂದೂ ವಿರೋಧಿ ಸಿದ್ಧಾಂತವನ್ನು ತೋರಿಸುತ್ತದೆ. ಭಗವಾ ಧ್ವಜದ ಮೇಲೆ ನಿಷೇಧವಿದೆಯೇ ಅಥವಾ ಅದು ಪಾಕಿಸ್ತಾನದ ಧ್ವಜವೇ? ಇದು ಕೋಟ್ಯಂತರ ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದು ಸಿಟಿ ರವಿ ಹೇಳಿದ್ದಾರೆ. ಈ ವಿವಾದಕ್ಕೆ ಜಿಲ್ಲಾಧಿಕಾರಿ ಸ್ಪಷ್ಟನೆ ಕೂಡ ನೀಡಿದ್ದಾರೆ. ತಮ್ಮ ಅಧಿಕೃತ ಕರ್ತವ್ಯದ ಭಾಗವಾಗಿ ಈ ಕಾರ್ಯಕ್ರಮಕ್ಕೆ ಹಾಜರಾಗಿದ್ದೆ ಮತ್ತು ಇದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಗೆದ್ದರೂ ಟೀಮ್ ಇಂಡಿಯಾದ ಚಿಂತೆ ಹೆಚ್ಚಿಸಿದ ಕಳಪೆಯಾಟ..! – Kannada News | What happened to India’s fielding? in IND vs NZ 1st T20

ಜನವರಿ 21, 2026 ರಂದು ನಡೆದ ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 48 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ. ಅದುವೇ ಕಳಪೆ ಫೀಲ್ಡಿಂಗ್. ಏಕೆಂದರೆ ಈ ಪಂದ್ಯದಲ್ಲಿ ಭಾರತೀಯ ಫೀಲ್ಡರ್​ಗಳು ಹಲವು ಅವಕಾಶಗಳನ್ನು ಕೈಚೆಲ್ಲಿದ್ದಾರೆ.

ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಫೀಲ್ಡರ್​ಗಳು ಮಾಡಿದ ತಪ್ಪುಗಳಾವುವು ಎಂದು ನೋಡುವುದಾದರೆ,…

  • ಭಾರತೀಯ ಫೀಲ್ಡರ್‌ಗಳು ನ್ಯೂಝಿಲೆಂಡ್ ಇನ್ನಿಂಗ್ಸ್‌ನಲ್ಲಿ ಕನಿಷ್ಠ ಮೂರು ಪ್ರಮುಖ ಕ್ಯಾಚ್‌ಗಳನ್ನು ಕೈಬಿಟ್ಟರು.
  • ಅರ್ಷದೀಪ್ ಸಿಂಗ್ ಅವರ ಬೌಲಿಂಗ್‌ನಲ್ಲಿ ಇಶಾನ್ ಕಿಶನ್ ಸುಲಭ ಕ್ಯಾಚ್ ಕೈಚೆಲ್ಲಿದ್ದರು.
  •  ಮಾರ್ಕ್ ಚಾಪ್ಮನ್ ನೀಡಿದ ಸುಲಭ ಕ್ಯಾಚ್ ಹಿಡಿಯುವಲ್ಲಿ ರಿಂಕು ಸಿಂಗ್ ವಿಫಲರಾಗಿದ್ದರು.
  • ಅಕ್ಷರ್ ಪಟೇಲ್ ಕೂಡ ಗ್ಲೆನ್ ಫಿಲಿಪ್ಸ್ ನೀಡಿದ ಕ್ಯಾಚ್ ಕೈಚೆಲ್ಲಿದ್ದರು.

ಇದರ ಜೊತೆಗೆ ಸಂಜು ಸ್ಯಾಮ್ಸನ್ ಕಳಪೆ ವಿಕೆಟ್ ಕೀಪಿಂಗ್​ ಪ್ರದರ್ಶಿಸಿದ್ದಾರೆ. ಅದರಲ್ಲೂ ಅತ್ಯಂತ ಸುಲಭವಾಗಿ ಮಾಡಬಹುದಾಗಿದ್ದ ರನೌಟ್ ತಪ್ಪಿಸಿಕೊಂಡಿದ್ದು ಅಚ್ಚರಿಗೆ ಕಾರಣವಾಗಿತ್ತು.

  • ನ್ಯೂಝಿಲೆಂಡ್ ಇನಿಂಗ್ಸ್​ನ 10ನೇ ಓವರ್​ನಲ್ಲಿ ಗ್ಲೆನ್ ಫಿಲಿಪ್ಸ್ ಭರ್ಜರಿ ಹೊಡೆತ ಬಾರಿಸಿದ್ದರು. ಅತ್ತ ಬೌಂಡರಿಯಿಂದ ರಿಂಕು ಸಿಂಗ್ ವೇಗವಾಗಿ ಚೆಂಡನ್ನು ವಿಕೆಟ್ ಕೀಪರ್​ನತ್ತ ಎಸೆದಿದ್ದರು. ಈ ವೇಳೆ ಎರಡನೇ ರನ್​ಗಾಗಿ ಓಡುತ್ತಿದ್ದ ಗ್ಲೆನ್ ಫಿಲಿಪ್ಸ್ ಅವರನ್ನು ರನೌಟ್ ಮಾಡುವ ಅವಕಾಶ ಸಂಜು ಸ್ಯಾಮ್ಸನ್​ಗಿತ್ತು. ಆದರೆ ಚೆಂಡು ಹಿಡಿಯಲು ತಡಕಾಡುವ ಮೂಲಕ ಸ್ಯಾಮ್ಸನ್ ಸುಲಭವಾಗಿ ರನೌಟ್ ಮಾಡುವ ಅವಕಾಶವನ್ನು ಕೈಚೆಲ್ಲಿಕೊಂಡರು.

ಹೀಗೆ ನಾಲ್ಕು ಅವಕಾಶಗಳನ್ನು ಕೈಚೆಲ್ಲಿದರ ಪರಿಣಾಯ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 190 ರನ್​ ಗಳಿಸಿತು. ಮುಂಬರುವ ಟಿ20 ವಿಶ್ವಕಪ್ ಹಿನ್ನಲೆಯಲ್ಲಿ ಟೀಮ್ ಇಂಡಿಯಾದ ಈ ಕಳಪೆ ಪ್ರದರ್ಶನವು ಚಿಂತೆಗೆ ಕಾರಣವಾಗಿದೆ.

ಏಕೆಂದರೆ ಈ ಸರಣಿಯ ಬಳಿಕ ಭಾರತ ತಂಡವು ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ. ಅದಕ್ಕೂ ಮುನ್ನ ಒಂದೇ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರರು 4 ಅವಕಾಶಗಳನ್ನು ಕೈಚೆಲ್ಲಿರುವುದು ಹೊಸ ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಅಭಿಷೇಕ್ ಶರ್ಮಾ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

ಒಟ್ಟಾರೆಯಾಗಿ, ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರೂ, ಫೀಲ್ಡಿಂಗ್‌ನಲ್ಲಿ ಮಾಡಿದ ತಪ್ಪುಗಳು ಭಾರತೀಯ ತಂಡಕ್ಕೆ ಮುಂದಿನ ಪಂದ್ಯಗಳಿಗೆ ಎಚ್ಚರಿಕೆಯ ಗಂಟೆಯಾಗಿವೆ.

Source link

Video: ಊಟ, ನಿದ್ರೆ ಬಿಟ್ಟು ಮಾಲೀಕರ ಶವದ ಬಳಿ ಕುಳಿತ ಶ್ವಾನ, ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ – Kannada News | Till the Final Goodbye, Shivpuri Dog Walks 4 Km Behind Owner’s Last Journey

ಶಿವಪುರಿ, ಜನವರಿ 22: ನಿಯತ್ತು ಅಂದ್ರೆ ಇದು, ಮೂರು ಹೊತ್ತು ಊಟ ಹಾಕಿರುವ ಋಣ, ಮಾಲೀಕ ಸತ್ತರೂ ಒಂದಿಂಚೂ ಕದಲದೆ ನಾಯಿ ಕುಳಿತಲ್ಲೇ ಕುಳಿತು ಮೌನವಾಗಿ ರೋದಿಸುತ್ತಿದ್ದ ಘಟನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ. ಸಾಕು ನಾಯಿಯೊಂದು ರಾತ್ರಿಯಿಡೀ ತನ್ನ ಮಾಲೀಕರ ದೇಹದ ಪಕ್ಕದಲ್ಲಿ ಕುಳಿತುಕೊಂಡಿತ್ತು ಅಲ್ಲಿಂದ ಹೋಗಲು ನಿರಾಕರಿಸಿತ್ತು.

ನಂತರ ಬೆಳಗ್ಗೆ, ಟ್ರ್ಯಾಕ್ಟರ್ ಟ್ರಾಲಿಯಲ್ಲಿ ಶವವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ಕೂಡ ನಾಯಿ ಶವದ ಪಕ್ಕದಲ್ಲೇ ಇತ್ತು. ನಾಯಿ ವಾಹನವನ್ನು ನೇರವಾಗಿ 4 ಕಿಲೋಮೀಟರ್ ಬೆನ್ನಟ್ಟಿತ್ತು. ಮರಣೋತ್ತರ ಪರೀಕ್ಷೆ ವೇಳೆಯೂ ಕೂಡ ನಾಯಿ ಅಲ್ಲಿಯೇ ಇತ್ತು. ಏನೂ ತಿನ್ನಲಿಲ್ಲ, ಏನೂ ಕುಡಿಯಲೂ ಇಲ್ಲ. ನಿಸ್ವಾರ್ಥ ಪ್ರೀತಿಗೆ ಇದೇ ಸಾಕ್ಷಿ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್ – Kannada News | Mujeeb Ur Rahman’s Hat Trick Seals Series Win For Afghanistan vs West Indies

ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಅಫ್ಘಾನಿಸ್ತಾನ್ ತಂಡ ಜಯ ಸಾಧಿಸಿದೆ. ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 189 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ವೆಸ್ಟ್ ಇಂಡೀಸ್ ತಂಡವು ಮುಜೀಬ್ ಉರ್ ರೆಹಮಾನ್ ಸ್ಪಿನ್ ದಾಳಿಗೆ ತತ್ತರಿಸಿತು. ಅದು ಕೂಡ ಹ್ಯಾಟ್ರಿಕ್ ವಿಕೆಟ್​ನೊಂದಿಗೆ ಎಂಬುದು ವಿಶೇಷ.

ವೆಸ್ಟ್ ಇಂಡೀಸ್ ಇನ್ನಿಂಗ್ಸ್‌ನ 8ನೇ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಎರಡು ವಿಕೆಟ್‌ಗಳನ್ನು ಪಡೆದ ಮುಜೀಬ್, ಆ ಬಳಿಕ ಮರಳಿದ್ದು 16ನೇ ಓವರ್​ನಲ್ಲಿ. ಆದರೆ ಹದಿನಾರನೇ ಓವರ್​ನ ಮೊದಲ ಎಸೆತದಲ್ಲೇ ಕ್ವಿಂಟಿನ್ ಸ್ಯಾಪ್ಸನ್ ವಿಕೆಟ್ ಕಬಳಿಸಿದರು. ಈ ಮೂಲಕ ಎರಡು ಓವರ್​ಗಳ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದರು.

ಅಷ್ಟೇ ಅಲ್ಲದೆ ಈ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದ ಮುಜೀಬ್ ಉರ್ ರೆಹಮಾನ್ ಕೇವಲ 21 ರನ್ ನೀಡಿ 4 ವಿಕೆಟ್ ಕಬಳಿಸಿದರು. ಪರಿಣಾಮ ವೆಸ್ಟ್ ಇಂಡೀಸ್ ತಂಡವು 18.5 ಓವರ್​ಗಳಲ್ಲಿ 150 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ 39 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಅಫ್ಘಾನ್ ಪಡೆ ಮೂರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.

Source link

Video: ಆಂಧ್ರಪ್ರದೇಶದಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಬಸ್, ಕೂಡಲೇ ಹೊತ್ತಿಕೊಂಡ ಬೆಂಕಿ, ಮೂವರು ಸಜೀವ ದಹನ – Kannada News | Crash Turns Deadly as Bus Truck Collision Erupts into Fire in Andhra Pradesh, Three Dead

ನಂದ್ಯಾಲ್, ಜನವರಿ 22: ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಖಾಸಗಿ ಬಸ್ಸೊಂದು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ಈ ಅಪಘಾತ ಸುಮಾರು ಬೆಳಗಿನ ಜಾವ 1.30 ರ ಸುಮಾರಿಗೆ ಸಂಭವಿಸಿದೆ. ಆಂಧ್ರಪ್ರದೇಶದ ನೆಲ್ಲೂರಿನಿಂದ ತೆಲಂಗಾಣದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಬಸ್‌ನ ಬಲಭಾಗದ ಟೈರ್ ಸ್ಫೋಟಗೊಂಡಿತ್ತು.

ಹಠಾತ್ ಸ್ಫೋಟದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ, ವಾಹನವು ರಸ್ತೆ ವಿಭಜಕವನ್ನು ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಬೈಕ್​ಗಳನ್ನು ಸಾಗಿಸುತ್ತಿತ್ತು. ಪರಿಣಾಮ ಬಸ್ ಮತ್ತು ಟ್ರಕ್ ಎರಡೂ ಬೆಂಕಿಗೆ ಆಹುತಿಯಾದವು. ಪ್ರದೇಶದ ನಿವಾಸಿಗಳು, ಬಸ್ ಕ್ಲೀನರ್ ಮತ್ತು ಬಸ್ ಕಂಡಕ್ಟರ್ ಕಿಟಕಿಗಳನ್ನು ಒಡೆದು ಒಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಲು ಸಹಾಯ ಮಾಡಿದರು. ಬಸ್ ಚಾಲಕ, ಟ್ರಕ್ ಚಾಲಕ ಮತ್ತು ಕ್ಲೀನರ್​ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ.

ನಂತರ ಅವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಎಲ್ಲಾ ಪ್ರಯಾಣಿಕರು ಬದುಕುಳಿದಿದ್ದಾರೆ. 36 ಪ್ರಯಾಣಿಕರಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Video: ಓಲಾ ಸ್ಕೂಟರ್​ನಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಸ್ವಲ್ಪದರಲ್ಲೇ ಪಾರಾದ ತಂದೆ-ಮಗ

ಸೋಲಾಪುರ, ಜನವರಿ 22: ಓಲಾ ಎಲೆಕ್ಟ್ರಿಕ್ ಸ್ಕೂಟರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಸೋಲಾಪುರದಲ್ಲಿ ನಡೆದಿದೆ. ತಂದೆ ಮಗನನ್ನು ಶಾಲೆಗೆ ಬಿಡಲು ಬೈಕ್ ಮೇಲೆ ಕುಳಿತು ಕಾಯುತ್ತಿರುತ್ತಾರೆ. ಮಗ ಬಂದು ಕುಳಿತ ತಕ್ಷಣ, ಅಲ್ಲೇ ಹೋಗುತ್ತಿದ್ದ ಮಹಿಳೆಯೊಬ್ಬರು ಬೈಕ್​ನಲ್ಲಿ ಹೊಗೆ ಬರುತ್ತಿರುವುದನ್ನು ನೋಡಿ ಎಚ್ಚರಿಕೆ ಕೊಡುತ್ತಾರೆ, ಆಗ ಇಬ್ಬರೂ ಬೈಕ್​ನಿಂದ ಇಳಿದು ದೂರ ಓಡುತ್ತಾರೆ. ಬೈಕ್​ನಿಂದ ಬರುತ್ತಿದ್ದ ಹೊಗೆ ಮತ್ತಷ್ಟು ಹೆಚ್ಚಾಗುತ್ತದೆ. ಆಗ ಅಲ್ಲಿದ್ದವರು ಬೈಕ್ ಮೇಲೆ ನೀರು ಸುರಿಯುತ್ತಾರೆ. ಇದಿಷ್ಟು ಆ ವಿಡಿಯೋದಲ್ಲಿದೆ. ತಂದೆ ಮಗ ಅಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link