ದಳಪತಿ ವಿಜಯ್ ರಾಜಕೀಯ ಯಶಸ್ಸಿನಿಂದ ಪವನ್ ಕಲ್ಯಾಣ್ಗೆ ಅಸೂಯೆ; ಸತ್ಯ ಒಪ್ಪಿಕೊಂಡ ಡಿಸಿಎಂ – Kannada News | Pawan Kalyan Feels ‘Jealous’ Of Vijay’s Political Success, Addresses Comparison With TVK Chief
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಇತ್ತೀಚೆಗೆ ತಮಿಳು ನಟ, ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ತಮಿಳುನಾಡು ಸಿಎಂ ವಿಜಯ್ ಅವರ ರಾಜಕೀಯ ಯಶಸ್ಸಿನ ಬಗ್ಗೆ ಆಸಕ್ತಿದಾಯಕ ಮಾತುಗಳನ್ನಾಡಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಜಯ್ ಅವರ ಗೆಲುವನ್ನು ನೋಡಿ ತಮಗೆ ಕೊಂಚ “ಅಸೂಯೆ” ಆಯಿತು ಎಂದು ತಮಾಷೆಯಾಗಿ ಹೇಳಿದ್ದಾರೆ. ‘ನಾನು ಇತ್ತೀಚೆಗೆ ತಮಿಳುನಾಡು ರಾಜಕೀಯವನ್ನು ಗಮನಿಸುತ್ತಿದ್ದೇನೆ. ಅವರು ಎಷ್ಟು ಆರಾಮವಾಗಿ ಚುನಾವಣೆ ಎದುರಿಸಿದರು ಎಂದರೆ ನನಗೆ ಸ್ವಲ್ಪ ಅಸೂಯೆ ಆಯಿತು. ಕಟೌಟ್‌ಗಳು ಮತ್ತು…