ಚಿಕ್ಕಮಗಳೂರಲ್ಲಿ ವರುಣಾರ್ಭಟ: ಮನೆಗಳಿಗೆ ನುಗ್ಗಿದ ಚರಂಡಿ ನೀರು, ಮರ ಬಿದ್ದು ರಸ್ತೆ ಬಂದ್ – Kannada News | Chikkamagaluru Rain Fury: Heavy Showers Flood Houses; Tree Fall Block Roads
ಮನೆಗಳಿಗೆ ನುಗ್ಗಿದ ನೀರುImage Credit source: Tv9 Kannada ಚಿಕ್ಕಮಗಳೂರು, ಮೇ 26: ಜಿಲ್ಲೆಯ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಬಿಸಿಲ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಮುಳ್ಳಯ್ಯನಗಿರಿ ಭಾಗದಲ್ಲಿ ಕಳೆದ ಅರ್ಧಗಂಟೆಯಿಂದ ಭಾರಿ ಮಳೆಯಾಗಿದ್ದು, ಹೊನ್ನಮ್ಮನಹಳ್ಳ ಬಳಿ ಗುಡ್ಡ ಪ್ರದೇಶದಿಂದ ಭಾರಿ ಪ್ರಮಾಣದ ನೀರು ಹರಿದುಬಂದಿದೆ. ಚಂದ್ರದ್ರೋಣ ಪರ್ವತದ ಸಾಲಿನ ಹೊನ್ನಮ್ಮನಹಳ್ಳ, ಮುಳ್ಳಯ್ಯನಗಿರಿ, ಬಾಬಾ ಬುಡನ್ ಗಿರಿ ಭಾಗದಲ್ಲಿ ಗುಡುಗು-ಮಿಂಚು ಮತ್ತು ಗಾಳಿ ಸಹಿತ ಭಾರಿ ಮಳೆಯಾಗಿದೆ. ಮುಖ್ಯಾಂಶಗಳು ಚಿಕ್ಕಮಗಳೂರು ಜಿಲ್ಲೆಯ ಹಲವು…