ಬಿಜೆಪಿ ಹೈಕಮಾಂಡ್‌ಗೆ ಬ್ಲಾಕ್‌ಮೇಲ್ ತಂತ್ರ ಗೊತ್ತಾಗಿದೆ: ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಯತ್ನಾಳ್ ಹೇಳಿದ್ದೇನು ನೋಡಿ – Kannada News | High Command Aware of Blackmail Tactics: Rebel MLA Yatnal Slams BSY Family Over Karnataka BJP President Change Rumours
ಬೆಂಗಳೂರು, ಮೇ 26: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಕ್ ಯತ್ನಾಳ್ ಪ್ರತಿಕ್ರಿಯಿಸಿದ್ದು, ಪಕ್ಷದಲ್ಲಿ ಆಂತರಿಕ ಸಮಸ್ಯೆಗಳು ಹೆಚ್ಚಾಗಿವೆ ಎಂದಿದ್ದಾರೆ. ಪಕ್ಷದಲ್ಲಿ ವ್ಯವಸ್ಥಿತವಾಗಿ ಕೆಲಸ ನಡೆಯುತ್ತಿಲ್ಲ, ವ್ಯಕ್ತಿ ಪೂಜೆ ಅತಿಯಾಗಿದೆ ಹಾಗೂ ಪಕ್ಷಕ್ಕಿಂತ ವ್ಯಕ್ತಿ ವೈಭವೀಕರಣ ಹೆಚ್ಚಾಗಿದೆ ಎಂದು ಅವರು ಟೀಕಿಸಿದ್ದಾರೆ. ಬಿಜೆಪಿ ಹೈಕಮಾಂಡ್ ಅನ್ನು ಬ್ಲಾಕ್‌ಮೇಲ್ ಮಾಡುವಂತಹ ತಂತ್ರಗಳು ನಡೆಯುತ್ತಿವೆ. ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ನಡೆದ ಸ್ವಾಮೀಜಿಗಳ ಮೆರವಣಿಗೆ ಇಂತಹ ಕಾರ್ಯತಂತ್ರದ ಭಾಗವಾಗಿತ್ತು. ಹೈಕಮಾಂಡ್‌ಗೆ ಈ ಕುರಿತು ಮನವರಿಕೆಯಾಗಿದೆ ಎಂದು ಯತ್ನಾಳ್…