ಅಕ್ರಮ ಸಂಬಂಧವಿದೆಯೆಂಬ ಶಂಕೆ, ಪತಿ ಮಲಗಿರುವಾಗ ಖಾಸಗಿ ಅಂಗ ಕತ್ತರಿಸಿದ ಪತ್ನಿ – Kannada News | Woman Arrested After Violent Domestic Attack in Chhattisgarh
ಬಿಲಾಸ್‌ಪುರ, ಮೇ 26: ವಿವಾಹೇತರ ಸಂಬಂಧದ ಶಂಕೆಯಲ್ಲಿ ಪತ್ನಿಯೊಬ್ಬಳು ಗಾಢ ನಿದ್ದೆಯಲ್ಲಿದ್ದ ಪತಿ(husband)ಯ ಮೇಲೆ ಕತ್ತಿಯಿಂದ ಭೀಕರವಾಗಿ ಹಲ್ಲೆ ನಡೆಸಿ, ಅವರ ಖಾಸಗಿ ಅಂಗವನ್ನೇ ಕತ್ತರಿಸಿರುವ ಅತ್ಯಂತ ಆಘಾತಕಾರಿ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿರುವ ರಾಜೇಶ್ ಕೌಶಿಕ್ ಎಂಬುವವರೇ ಈ ಭೀಕರ ದಾಳಿಗೆ ಒಳಗಾದ ದುರ್ದೈವಿ. ಸದ್ಯ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಸ್ಥಳೀಯ ಸರ್ಕಾರಿ ಸಿಮ್ಸ್ (CIMS)…