Category Archives: Blog

Your blog category

ಕರ್ನಾಟಕ ಹವಾಮಾನ ವರದಿ: ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಒಣ ಹವೆ, ಬೆಂಗಳೂರಿನಲ್ಲಿ ಶೀತ – Kannada News | Bengaluru temperature: Dry weather all over karnataka for next 4 days, misty weather in Bengaluru

ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಒಣ ಹವೆ

ಬೆಂಗಳೂರು, ಜನವರಿ 21: ರಾಜ್ಯದೆಲ್ಲೆಡೆ ಕಳೆದ ಕೆಲ ದಿನಗಳಿಂದ ಒಣ ಹವೆಯ ವಾತಾವರಣವಿದ್ದು (Weather Forecast), ಇನ್ನೂ ನಾಲ್ಕು ದಿನ ಇದೇ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ. ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ. ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಬೆಂಗಳೂರಿನಲ್ಲಿ ಮಂಜು

ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Daily Devotional: ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು ಯಾವವು? – Kannada News | Daily Devotional: Office Vastu Tips, Choosing the Right God Photos and Idols for Your Workplace

ಬೆಂಗಳೂರು, ಜನವರಿ 21: ಕಚೇರಿಗಳಲ್ಲಿ ದೇವರ ಫೋಟೋಗಳು ಮತ್ತು ವಿಗ್ರಹಗಳನ್ನು ಇಡುವುದು ಸಾಮಾನ್ಯ. ಆದರೆ, ಯಾವ ರೀತಿಯ ವಿಗ್ರಹಗಳನ್ನು ಅಥವಾ ಫೋಟೋಗಳನ್ನು ಇಡುವುದು ಹೆಚ್ಚು ಶುಭಕಾರಿ ಎಂಬುದರ ಬಗ್ಗೆ ಗೊಂದಲವಿರುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ಕಚೇರಿಯಲ್ಲಿ ದೊಡ್ಡ ವಿಗ್ರಹಗಳನ್ನು, ವಿಶೇಷವಾಗಿ ಕಂಚು, ತಾಮ್ರ, ಹಿತ್ತಾಳೆ ಅಥವಾ ಬೆಳ್ಳಿಯದ್ದಾಗಿದ್ದರೆ, ಎಡಗೈ ಮುಷ್ಟಿಗಿಂತ ದೊಡ್ಡದಾಗಿರುವ ವಿಗ್ರಹಗಳನ್ನು ಇಡುವುದು ಸೂಕ್ತವಲ್ಲ. ಖಾಲಿ ಅಥವಾ ಟೊಳ್ಳಾದ ವಿಗ್ರಹಗಳನ್ನು ಪೂಜೆ ಇಲ್ಲದೆ ಇಡಬಹುದು. ಕುಳಿತ ಭಂಗಿಯಲ್ಲಿರುವ ವಿಷ್ಣು, ಮಹಾಲಕ್ಷ್ಮಿ ಅಥವಾ ಗಣಪತಿಯಂತಹ ದೇವರುಗಳ ದೊಡ್ಡ ವಿಗ್ರಹಗಳನ್ನು ಸಹ ಕಚೇರಿಯಲ್ಲಿ ಇಡಬಾರದು ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

Source link

ಬ್ಯಾನರ್ ಗಲಾಟೆಗಳ ಬೆನ್ನಲ್ಲೇ ಎಚ್ಚೆತ್ತ ಜಿಬಿಎ: ಬೆಂಗಳೂರಿನಾದ್ಯಂತ ಅನಧಿಕೃತ ಬ್ಯಾನರ್ ತೆರೆವು ಕಾರ್ಯ ಚುರುಕು – Kannada News | GBA Cracks Down on Illegal Banners Across Bengaluru After Ballari, Chikkaballapur Row

ಬೆಂಗಳೂರು, ಜನವರಿ 21: ಬಳ್ಳಾರಿ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದ ಬ್ಯಾನರ್ ಗಲಾಟೆಗಳ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಧಿಕಾರಿಗಳು ಬೆಂಗಳೂರಿನಾದ್ಯಂತ (Bangalore) ಅಕ್ರಮವಾಗಿ ಅಳವಡಿಸಿರುವ ಬ್ಯಾನರ್, ಫ್ಲೆಕ್ಸ್​​ಗಳ ತೆರೆವು ಕಾರ್ಯ ಚರುಕುಗೊಳಿಸಿದ್ದಾರೆ. ನಗರದಾದ್ಯಂತ ಸ್ಕೈವಾಕ್ ಮತ್ತು ಬಸ್ ಶೆಲ್ಟರ್‌ಗಳ ಸಮೀಪ ಅನಧಿಕೃತವಾಗಿ ಅಳವಡಿಸಲಾಗಿದ್ದ ಫ್ಲೆಕ್ಸ್‌ಗಳು ಮತ್ತು ಬ್ಯಾನರ್‌ಗಳನ್ನು ತೆಗೆದುಹಾಕಲಾಗಿದೆ. ಶಾಂತಿನಗರ ವಿಭಾಗದಲ್ಲಿ ಏಳು, ಸಿ.ವಿ. ರಾಮನ್ ನಗರದಲ್ಲಿ ಆರು, ಶಿವಾಜಿನಗರದಲ್ಲಿ ಹದಿಮೂರು, ಚಿಕ್ಕಪೇಟೆಯಲ್ಲಿ ಇಪ್ಪತ್ತೆರಡು ಹಾಗೂ ಗಾಂಧಿನಗರದಲ್ಲಿ ಮೂರು ಹೋರ್ಡಿಂಗ್ಸ್‌ಗಳನ್ನು ತೆರವು ಮಾಡಲಾಗಿದೆ.

ಇದಲ್ಲದೆ, ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 473 ಫ್ಲೆಕ್ಸ್‌ಗಳು ಮತ್ತು ಬ್ಯಾನರ್‌ಗಳನ್ನು ತೆರವುಗೊಳಿಸಿ 15,000 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಹೆಚ್ಚುತ್ತಿರುವ ಅನಧಿಕೃತ ಫ್ಲೆಕ್ಸ್‌ಗಳು ಮತ್ತು ಬ್ಯಾನರ್‌ಗಳ ಪಿಡುಗು ನಿವಾರಣೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಇತ್ತೀಚೆಗೆ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸೂಚನೆ ನೀಡಿದ್ದರು. ಅದರಂತೆ ಕ್ರಮ ಕೈಗೊಳ್ಳುತ್ತಿರುವ ಜಿಬಿಎ, ಅನಧಿಕೃತವಾಗಿ ಬ್ಯಾನರ್ ಹಾಗೂ ಫ್ಲೆಕ್ಸ್ ಅಳವಡಿಸುವವರ ವಿರುದ್ಧ ಪ್ರಕರಣ ದಾಖಲಿಸುವುದಾಗಿಯೂ ಎರಡು ದಿನಗಳ ಹಿಂದೆ ಎಚ್ಚರಿಕೆ ನೀಡಿತ್ತು.

ಜಂಕ್ಷನ್‌ಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಬ್ಯಾನರ್‌ಗಳು ಮತ್ತು ಫ್ಲೆಕ್ಸ್‌ಗಳು ತೀವ್ರವಾಗಿ ಹೆಚ್ಚಿವೆ. ಇಂಥ ಪ್ರಕರಣಗಳನ್ನು ಹಗುರವಾಗಿ ಪರಿಗಣಿಸುವುದಿಲ್ಲ. ಇದು ನಗರದ ನೋಟವನ್ನು ಹಾಳು ಮಾಡುವುದಲ್ಲದೆ, ಪ್ರಯಾಣಿಕರಿಗೆ ಸುರಕ್ಷತೆಯ ಅಪಾಯಗಳನ್ನುಂಟುಮಾಡುತ್ತದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಹೇಳಿದ್ದರು.

ಇದನ್ನೂ ಓದಿ: ಬೆಂಗಳೂರು: ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾಂಗ್ರೆಸ್​​​ನಲ್ಲೇ ಅಪಸ್ವರ!

ಈವರೆಗೆ ಅಧಿಕಾರಿಗಳು ನೋಟಿಸ್ ನೀಡುವುದು ಅಥವಾ ಹೊಣೆಗಾರರಿಗೆ ದಂಡ ವಿಧಿಸುವುದನ್ನಷ್ಟೇ ಮಾಡುತ್ತಿದ್ದರು. ಇನ್ನು ಮುಂದೆ, ಅನುಮೋದನೆಯಿಲ್ಲದೆ ಬ್ಯಾನರ್‌ಗಳನ್ನು ಹಾಕುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ಮುಖ್ಯ ಆಯುಕ್ತರು ಎಚ್ಚರಿಕೆ ನೀಡಿದ್ದರು. ಈ ಕ್ರಮದಿಂದ ಪುನರಾವರ್ತಿತ ನಿಯಮ ಉಲ್ಲಂಘನೆಗಳನ್ನು ತಡೆಯಬಹುದು ಎಂದು ಅವರು ಆಶಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:03 am, Wed, 21 January 26

Source link

ಸುದೀಪ್ ಹಾಗೂ ಶಿವಣ್ಣ ಭೇಟಿ ಮಾಡಿ ಆಶೀರ್ವಾದ ಪಡೆದ ಗಿಲ್ಲಿ; ನಟರು ಹೇಳಿದ್ದೇನು? – Kannada News | Big Boss Kannada 12 Winner Gilli Nata Meets Shiva Rajkumar and Sudeep for Blessings

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ವಿನ್ನರ್ ಆಗಿ ಹೊರ ಹೊಮ್ಮಿರೋ ಗಿಲ್ಲಿ ನಟ ಅವರು ಇತ್ತೀಚೆಗೆ ತಮ್ಮ ಹುಟ್ಟೂರಲ್ಲಿ ದೊಡ್ಡದಾದ ರ್ಯಾಲಿ ಮಾಡಿದ್ದರು. ಆ ಬಳಿಕ ಅವರು ಮರಳಿ ಬೆಂಗಳೂರಿಗೆ ಬಂದಿದ್ದರು. ಈಗ ಅವರು ಶಿವರಾಜ್​​​ಕುಮಾರ್ ಹಾಗೂ ಸುದೀಪ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಇಬ್ಬರೂ ಗಿಲ್ಲಿ ಬದುಕಿಗೆ ದಾರಿ ದೀಪ ಆದವರು. ಹೀಗಾಗಿ, ಅವರನ್ನು ಗಿಲ್ಲಿ ಭೇಟಿ ಮಾಡಿದ್ದಾರೆ.

ಗಿಲ್ಲಿ ನಟ ಅವರಿಗೆ ಶಿವರಾಜ್​​ಕುಮಾರ್ ಮೊದಲೇ ಪರಿಚಯ. ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್​​ಕುಮಾರ್ ಜಡ್ಜ್ ಸ್ಥಾನದಲ್ಲಿ ಇದ್ದರು. ಸ್ಪರ್ಧಿಯಾಗಿ ತೆರಳಿದ್ದ ಗಿಲ್ಲಿ ಅವರು ಎಲ್ಲರನ್ನೂ ರಂಜಿಸಿದ್ದರು. ಆಗಲೇ ಶಿವರಾಜ್​​ಕುಮಾರ್​​ಗೆ ಗಿಲ್ಲಿ ಇಷ್ಟ ಆಗಿದ್ದರು. ಗಿಲ್ಲಿ ಬಿಗ್ ಬಾಸ್ ಮನೆಯಲ್ಲಿರುವಾಗ ಶಿವಣ್ಣ ಶುಭ ಹಾರೈಸಿದ್ದರು. ಗಿಲ್ಲಿನೇ ಗೆಲ್ಲೋದು ಎಂದು ಹೇಳಿದ್ದರು. ಹೊರ ಬಂದ ಬಳಿಕ ಗಿಲ್ಲಿಗೆ ಈ ವಿಷಯ ಗೊತ್ತಾಗಿದೆ. ಹೀಗಾಗಿ, ತಕ್ಷಣವೇ ಶಿವಣ್ಣ ಹಾಗೂ ಗೀತಕ್ಕನ ಭೇಟಿ ಮಾಡಿದ್ದಾರೆ.

ಸುದೀಪ್ ಅವರನ್ನೂ ಗಿಲ್ಲಿ ಭೇಟಿ ಮಾಡಿದ್ದಾರೆ. ಬಿಗ್ ಬಾಸ್ ಮನೆಯಲ್ಲಿರೋವಾಗ ಎಲ್ಲ ವಿಷಯಗಳನ್ನು ಸುದೀಪ್ ಮನಬಿಚ್ಚಿ ಮಾತನಾಡಲು ಸಾಧ್ಯವಿಲ್ಲ. ಈ ಕಾರಣದಿಂದ ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಗಿಲ್ಲಿ ಹೋಗಿ ಸುದೀಪ್​​ನ ಭೇಟಿ ಮಾಡಿದ್ದಾರೆ. ಗಿಲ್ಲಿ ಅಭಿಮಾನಿಗಳು ಸುದೀಪ್ ಅವರ ಬಗ್ಗೆ ಈ ಮೊದಲು ಅಸಮಾಧಾನ ಹೊರಹಾಕಿದ್ದು ಇದೆ. ಇದಕ್ಕೆ ಕಾರಣ ಆಗಿದ್ದು ಸೀಸನ್ ಚಪ್ಪಾಳೆ. ಈ ವಿಷಯದಲ್ಲಿ ಗಿಲ್ಲಿ ಅವರು ಅಭಿಮಾನಿಗಳ ಪರವಾಗಿ ಸುದೀಪ್ ಬಳಿ ಕ್ಷಮೆ ಕೇಳಿರಬಹುದು ಎಂದು ಊಹಿಸಲಾಗುತ್ತಿದೆ.

ಇದನ್ನೂ ಓದಿ: ಊರಿಗೆ ಬಂದರೂ ಮನೆಗೆ ಹೋಗದೇ ವಾಪಸ್ ಬೆಂಗಳೂರಿಗೆ ತೆರಳಿದ ಗಿಲ್ಲಿ ನಟ

ಸುದೀಪ್ ಹಾಗೂ ಶಿವರಾಜ್​​ಕುಮಾರ್ ಅವರು ಗಿಲ್ಲಿಗೆ ಒಳ್ಳೆಯದಾಗಲಿ ಎಂದು ಮನಸ್ಫೂರ್ತಿಯಾಗಿ ಹಾರೈಸಿದ್ದಾರೆ. ಈ ಹಾರೈಕೆಯಿಂದ ಅವರು ತುಂಬಾನೇ ಖುಷಿಪಟ್ಟಿದ್ದಾರೆ. ಇನ್ನಷ್ಟು ಸಿನಿಮಾ ಆಫರ್​​​ಗಳು ಅವರನ್ನು ಹುಡುಕಿ ಬರೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಬೆಂಗಳೂರು: ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾಂಗ್ರೆಸ್​​​ನಲ್ಲೇ ಅಪಸ್ವರ! – Kannada News | GBA Election: Congress Divided Over Ballot Paper Use in Greater Bengaluru Authority Polls

ಬೆಂಗಳೂರು, ಜನವರಿ 21: ಸುಪ್ರೀಂ ಕೋರ್ಟ್ ಸೂಚನೆ ಬೆನ್ನನ್ನೇ ಜಿಬಿಎ (GBA) ಚುನಾವಣೆಯ ತಯಾರಿ ಬಿರುಸಿನಿಂದ ಸಾಗಿದೆ. ಜಿಬಿಎ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗ ತಯಾರಿ ಮಾಡಿಕೊಳ್ಳುತ್ತಿದೆ. ಈ ಬಾರಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ಮಾಡಲು ಆಯೋಗ ನಿರ್ಧಾರ ಮಾಡಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್​​​ನಲ್ಲೇ (Congress) ಅಪಸ್ವರ ಎದ್ದಿದೆ. ಮಂಗಳವಾರ ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ನಾವು ಈಗಾಗಲೇ ಒಂದು ಹೆಜ್ಜೆ‌ ಮುಂದೆ ಹೋಗಿದ್ದೇವೆ. ಮತ್ತೆ ಬ್ಯಾಲೆಟ್ ಪೇಪರ್​ ತರುವುದು ಬೇಡ ಎನಿಸುತ್ತಿದೆ ಎಂದಿದ್ದಾರೆ.

ಮತ್ತೆ ಹಿಂದಕ್ಕೆ ಹೆಜ್ಜೆ ಹಾಕೋದು ಬೇಡ: ಇವಿಎಂ ಪರ ಡಿಕೆ ಸುರೇಶ್ ಬ್ಯಾಟ್

ರಾಜ್ಯದಲ್ಲಿ ಚುನಾವಣೆಗಳನ್ನು ನಡೆಸುವುದು ನಾವೇ. ನಮ್ಮದೇ ಸರ್ಕಾರ ಇದೆ. ಹೀಗಾಗಿ ಅಕ್ರಮ ನಡೆಯುತ್ತದೆ ಎಂದು ಹೇಳಲಾಗದು. ಕೇಂದ್ರದಲ್ಲಾದರೆ ಬೇರೆ ವಿಚಾರ. ನಾವೀಗಾಗಲೇ ಒಂದು ಹೆಜ್ಜೆ ಮುಂದೆ ಹೋಗಿರುವುದರಿಂದ ಮತ್ತೆ ಹಿಂದಕ್ಕೆ ಬರುವ ಅಗತ್ಯ ಇಲ್ಲ ಎನಿಸುತ್ತದೆ. ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ ಎಂದು ಡಿಕೆ ಸುರೇಶ್ ಹೇಳಿದ್ದಾರೆ.

ಏತನ್ಮಧ್ಯೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಇವಿಎಂನಿಂದ ಮತಗಳ್ಳತನ ಅಗುತ್ತಿದೆ. ಹೀಗಾಗಿ ಬ್ಯಾಲೆಟ್ ಪೇಪರ್ ಒಳ್ಳೆಯದು ಎಂದು ಹೇಳಿದ್ದಾರೆ. ಮತಗಳ್ಳತನ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ ಬ್ಯಾಲೆಟ್ ಪೇಪರ್ ಚುನಾವಣೆ ಮಾಡಿದರೆ ಒಳ್ಳೆಯದು ಎಂದಿದ್ದಾರೆ.

ಬ್ಯಾಲೆಟ್ ಪೇಪರ್ ಬಳಸಿದರೂ ಬಿಜೆಪಿ ಗೆಲ್ಲೋದು ಪಕ್ಕಾ: ಅಶೋಕ್

ಇವಿಎಂ ತಂದಿದ್ದೇ ಕಾಂಗ್ರೆಸ್​, ಈಗ ಅವರಿಗೆ ನಂಬಿಕೆ ಇಲ್ವಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಬ್ಯಾಲೆಟ್ ಪೇಪರ್ ಆದರೂ ತರಲಿ, ಏನಾದರೂ ತರಲಿ. ಜಿಬಿಎ ಚುನಾವಣೆಯಲ್ಲಿ ಬಿಜೆಪಿನೇ ಗೆಲ್ಲೋದು ಎಂದಿದ್ದಾರೆ.

ಹೆಚ್​.ಕೆ.ಪಾಟೀಲ್, ಸಿಟಿ ರವಿ ಮಧ್ಯೆ ಇವಿಎಂ ಫೈಟ್

ನಮಗೆ ಇವಿಎಂ ಮೇಲೆ ಅನುಮಾನ ಇದೆ ಎಂದು ಸಚಿವ ಹೆಚ್​.ಕೆ.ಪಾಟೀಲ್ ಹೇಳಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟ ಪರಿಷತ್ ಸದಸ್ಯ ಸಿ.ಟಿ.ರವಿ, ವಿಧಾನಸಭೆ ಚುನಾವಣೆಯಲ್ಲಿ ಹೇಗೆ ಗೆದ್ದಿದ್ದು ಎಂದು ಪ್ರಶ್ನಿಸಿದ್ದಾರೆ.

ಮತ್ತೊಂದೆಡೆ, ಜಿಬಿಎ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಿಕೊಂಡರೆ ತಪ್ಪೇನಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಇಡೀ ವಿಶ್ವದಲ್ಲಿ ಎಲ್ಲಾ ಕಡೆ ಬ್ಯಾಲೆಟ್ ಪೇಪರ್​​ನಲ್ಲಿ ಚುನಾವಣೆ ನಡೆಸುತ್ತಿದ್ದಾರೆ. ನಮ್ಮಲ್ಲಿ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದರು.

ರಾಹುಲ್ ಮೆಚ್ಚಿಸಲು ಬ್ಯಾಲೆಟ್ ಪೇಪರ್ ಬಳಕೆ: ಸದಾನಂದ ಗೌಡ

ಬ್ಯಾಲೆಟ್ ಪೇಪರ್​ ಬಳಕೆಯಿಂದ ಗೊಂದಲವಾಗುತ್ತದೆ ಎಂದು ಮಾಜಿ ಸಂಸದ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ತಾಂತ್ರಿಕವಾಗಿ ಮುಂದುವರೆಯುವ ವೇಳೆ ಹೀಗೆ ಮಾಡಬಾರದು.
ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪಾಲಿಕೆ ಆಯುಕ್ತರ ಉಪಸ್ಥಿತಿಗೆ ಬಿಜೆಪಿ ಆಕ್ಷೇಪ

ರಾಜ್ಯ ಚುನಾವಣಾ ಆಯೋಗದ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ನಗರ ಪಾಲಿಕೆ ಆಯುಕ್ತರ ಉಪಸ್ಥಿತಿಗೆ ಆಕ್ಷೇಪ ವ್ಯಕ್ತವಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯೂ ಆಗಿರುವ ರಾಜೇಂದ್ರ ಚೋಳನ್ ಭಾಗಿಯಾಗಿದ್ದಕ್ಕೆ ರಾಜಾಜಿನಗರ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯುಕ್ತರ ಜತೆ ಕುಳಿತುಕೊಳ್ಳುವುದೆಷ್ಟು ಸೂಕ್ತ? ಇದು ಹಿತಾಸಕ್ತಿಗಳ ಸಂಘರ್ಷ ಆಗುವುದಿಲ್ಲವೇ ಎಂದು ಸುರೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 21 January : ಇಂದು ಈ ರಾಶಿಯವರು ಮಾಡಿದ ಕಾರ್ಯಗಳು ಕೃತ್ರಿಮದಂತೆ ತೋರುವುದು

ಮೇಷ ರಾಶಿ:

ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿ, ಅದರೆ ಮನಸ್ಸಿಗೆ ಹಾಕಿಕೊಳ್ಳುವ ಅವಶ್ಯಕತೆ ಇಲ್ಲ. ಮಕ್ಕಳ ಜಗಳದಲ್ಲಿ ಮಧ್ಯಪ್ರವೇಶಿಸಿ ಸಮಾಧಾನ ಮಾಡುವಿರಿ. ಆಪ್ತರಿಗೆ ಉಡುಗೊರೆ ಕೊಡಲಿದ್ದೀರಿ. ಯಾವುದಾದರೂ ಆಮಿಷಕ್ಕೆ ಬಲಿಯಾಗುವ ಸಾಧ್ಯತೆ ಇದೆ. ನೀವು ನಿಮ್ಮ ನಿಯಂತ್ರಣದಲ್ಲಿ ಇದ್ದರೆ ಯಾವ ಏರಿಳಿತವೂ ನಿಮ್ಮನ್ನು ಏನೂ ಮಾಡಲಾಗದು. ಸಂಗಾತಿಯನ್ನು ದೂರ ಕಳಿಸಿಕೊಂಡು ಸಂಕಟಪಡುವಿರಿ. ನಿಮ್ಮ ಆದಾಯವು ಹೆಚ್ಚು ಮಾಡಿಕೊಳ್ಳುವ ಆಕಾಂಕ್ಷೆಯು ಇರಲಿದೆ. ಸಹೋದ್ಯೋಗಿಗಳ ಸಹಕಾರದಿಂದ ಒತ್ತಡವನ್ನು ಕಡಿಮೆ ಆಗುವುದು.

ವೃಷಭ ರಾಶಿ:

ಕಳೆದುಕೊಂಡಿದ್ದನ್ನು ನೀವು ಪುನಃ ಪಡೆದುಕೊಳ್ಳುವ ಪ್ರಯತ್ನದಲ್ಲಿ ನೀವು ಇರುವಿರಿ. ಲೆಕ್ಕಕ್ಕೆ ಸಿಗದೇ ಇರುವ ಎಷ್ಟೋ ಹಣವನ್ನು ಕಳೆದುಕೊಳ್ಳಬೇಕಾಗುವುದು. ಕೇಳಬಾರದ ವಿಚಾರಗಳನ್ನು ಬಂಧುಗಳಿಂದ ಪಡೆಯುವಿರಿ. ಅತಿಯಾದ ಸಂತೋಷದ ಕ್ಷಣವು ನಿಮ್ಮ ಪಾಲಿಗೆ ಇರಲಿದೆ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ಯಾವುದನ್ನೂ ಹೆಚ್ಚು ಕಾಲ ಉಳಿಸಿಕೊಳ್ಳುವುದು ಕಷ್ಟ. ನಿಮ್ಮ ಸೋಲನ್ನು ಒಪ್ಪಿಕೊಳ್ಳದೇ ವಾದಿಸುವಿರಿ. ನಿಮ್ಮ ಪರೀಕ್ಷೆಯ ದಿನವು ಇಂದಾಗಿದ್ದು ಫಲಿತಾಂಶವೂ ನಿಮ್ಮ ವರ್ತನೆಯ ಮೇಲಿರುವುದು.

ಮಿಥುನ ರಾಶಿ:

ವ್ಯಾಪಾರದ ನಷ್ಟವನ್ನು ಇನ್ನಾವುದರಿಂದಲೇ ತುಂಬಿಕೊಳ್ಳುವಿರಿ. ಮನೆಯ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವುದಿಲ್ಲ. ಹೂಡಿಕೆಯನ್ನು ನಿಲ್ಲಿಸುವ ಮನಸ್ಸಾಗುವುದು. ಒಳ ಮನಸ್ಸು ನಿಮ್ಮ ದಾರಿಯನ್ನು ತಪ್ಪಿಸದು. ತೀರ್ಥಕ್ಷೇತ್ರಗಳಿಗೆ ಹೋಗುವ ಮನಸ್ಸಾಗುವುದು. ನೀರಿನ ವಿಷಯದಲ್ಲಿ ಜಾಗಾರೂಕತೆ ಇರಲಿ. ಎಲ್ಲ ಸನ್ನಿವೇಶಕ್ಕೂ ಒಂದೇ ಪರಿಹಾರವು ಇರದು. ಒಂದೇ ವಿಚಾರವನ್ನು ಹೆಚ್ಚು ಯೋಚಿಸಿದಷ್ಟೂ ಮನಸ್ಸು ದುರ್ಬಲವಾಗಬಹುದು. ಅಲ್ಪ ಮೊತ್ತವನ್ನು ಸಾಮಾಜಿಕ ಕಾರ್ಯಕ್ಕೆ ಕೊಡುವಿರಿ.

ಕರ್ಕಾಟಕ ರಾಶಿ:

ಚಟುವಟಿಕೆಯಿಂದ ಇದ್ದರೂ ನಿಮ್ಮ ಕೆಲಸ ಮಾತ್ರ ಆಗದೇ ಇರುವುದು. ಪಾಲುದಾರಿಕೆಯನ್ನು ಪಡೆಯುವ ಮೊದಲು ಸಾಧ್ಯಾಸಾಧ್ಯತೆಗಳ ಬಗ್ಗೆ ಗಮನವಿರಲಿ. ನಿಮ್ಮ ಜೀವನಕ್ಕೆ ಆಗದವರ ಬಗ್ಗೆ ತಾತ್ಸಾರ ಭಾವ ಬರಬಹುದು. ನಿಮ್ಮ ಉದ್ಯೋಗಕ್ಕೆ ಯಾರಿಂದಲಾದರೂ ಹೂಡಿಕೆಯನ್ನು ಮಾಡಿಸಿಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ನಿಮಗೆ ವಂಚನೆಯಾಗಿದೆ ಎಂದನಿಸಬಹುದು. ನಿಯಮಿತ ಚೌಕಟ್ಟನ್ನು ಬಿಟ್ಟು ಆಚೆ ಬರಲು ಆಗದು. ನಿಮ್ಮ ನಡತೆಯಿಂದ ಕುಲಕ್ಕೆ ಅವಮಾನವಾಗಬಹುದು. ನಿದ್ರೆಯನ್ನು ಹೆಚ್ಚು ಮಾಡುವಿರಿ. ಜವಾಬ್ದಾರಿಯನ್ನು ಪಡೆದ ಬೆನ್ನಲ್ಲೇ ಹಿತಶತ್ರುಗಳನ್ನೂ ಹೆಚ್ಚಿಸಿಕೊಳ್ಳುವಿರಿ.

ಸಿಂಹ ರಾಶಿ:

ಇಂದು ಮನೆಯಲ್ಲಿ ಹಬ್ಬದ ವಾತಾವರಣ ಇರಲಿದ್ದು ನೀವೂ ಬಹಳ ದಿನಗಳ ಅನಂತರ ಇಂತಹ ಸಂತೋಷವನ್ನು ಪಡೆಯುವಿರಿ. ಸಾಲಕ್ಕಾಗಿ ಮತ್ತೆ ಮತ್ತೆ ದೂರವಾಣಿ ಕರೆಗಳು ಪೀಡಿಸಬಹುದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ನಿಮಗೆ ಬೇಕಾದ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳುವಿರಿ. ಸ್ನೇಹಿತರ ತಮಾಷೆಯು ನಿಮಗೆ ಇಷ್ಟವಾಗದು. ದ್ವಿಚಕ್ರ ವಾಹನವನ್ನು ಓಡಿಸುವಾಗ ಎಚ್ಚರ ಇರಲಿ. ಸಂಗಾತಿಯ ಮನಃಸ್ಥಿತಿಗೆ ಪೂರಕವಾಗಿ ನಿಮ್ಮ ಆಲೋಚನೆಯೂ ಇರಲಿದ್ದು ನಿಮಗೆ ಖುಷಿಯಾಗುವುದು.

ಕನ್ಯಾ ರಾಶಿ:

ನೀವು ಹೇಳುವ ಸುಳ್ಳುಗಳೇ ಸತ್ಯವಾಗಬಹುದು. ನೆನಪಿನ ಶಕ್ತಿಗೆ ಸೂಕ್ತವಾದ ಪರಿಹಾರವನ್ನು ಮೊದಲು ಮಾಡಿಕೊಳ್ಳಬೇಕಾಗುವುದು. ಕೆಲವು ಶುಭ ಸೂಚನೆಗಳು ನಿಮಗೆ ಗೊತ್ತಾಗಲಿದ್ದು ನಿರೀಕ್ಷೆಯೂ ಎಂದಿಗಿಂತ ಹೆಚ್ಚಿರಲಿದೆ. ಮಾತುಗಾರರು ಎಂದಿನ ವಾಚಾಳಿತನವನ್ನು ಕಡಿಮೆಮಾಡುವರು. ಮನೆಯ ಕಾರ್ಯದಲ್ಲಿ ಸಮಯವು ಕಳೆದುಹೋಗುವುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ಹೂಡಿಕೆಯ ನಷ್ಟದಿಂದ ವಿಚಲಿತರಾಗಬೇಕಾಗಿಲ್ಲ. ಎಲ್ಲದಕ್ಕೂ ವಿಧಿಯನ್ನು ಹೀಗಳೆಯುವುದಕ್ಕಿಂತ ನಿಮ್ಮ ಪ್ರಯತ್ನವನ್ನು ಮುಂದುವರೆಸಿರಿ.

ತುಲಾ ರಾಶಿ:

ಸ್ನೇಹತರ ಜೊತೆ ಮೋಜಿನಲ್ಲಿ ದಿನವನ್ನು ಮುಗಿಸುವಿರಿ. ಮಾರಾಟಕ್ಕೆ ಬೇಕಾದ ವ್ಯವಸ್ಥೆಯನ್ನು ರೂಪಿಸಿಕೊಳ್ಳುವಿರಿ. ಜಾಹಿರಾತು ವಿಭಾಗದಲ್ಲಿ ಇರುವವರಿಗೆ ಅವಕಾಶವು ಹೆಚ್ಚು ಸಿಗಬಹುದು. ವಾಗ್ಮಿಗಳು ಸಿಕ್ಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವರು. ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು. ಎಲ್ಲ ತಪ್ಪಿಗೂ ನೀವೇ ಕಾರಣಕರ್ತರಾಗಬಹುದು. ನಿಮ್ಮ ಕರ್ತವ್ಯವನ್ನು ಮಾಡಲು ಹಿಂದೇಟು ಹಾಕುವಿರಿ. ಲೆಕ್ಕಪತ್ರದ ವಿಚಾರದಲ್ಲಿ ನಿಷ್ಠುರವಾದ ಮನೋಭಾವವನ್ನು ಇಟ್ಟುಕೊಳ್ಳುವಿರಿ. ನಿಮ್ಮ ಮನಸ್ಸಿಗೆ ಹಿಡಿಸದೇ ಇರುವವರಿಂದ ದೂರ ಉಳಿಯುವಿರಿ.

ವೃಶ್ಚಿಕ ರಾಶಿ:

ಲಾಭಾಕ್ಕಾಗಿ ವ್ಯಾಪಾರದಲ್ಲಿ ಹೊಸದಾದ ಆಕರ್ಷಕ ಯೋಜನೆಗಳನ್ನು ಹಾಕಿಕೊಳ್ಳುವಿರಿ. ಔದಾಸೀನ್ಯದಿಂದ ವ್ಯಾಪಾರದಲ್ಲಿ ನಷ್ಟವಾಗಲಿದೆ. ಇಂದಿನ ಪ್ರಯಾಣದಿಂದ ಹಿಂಸೆ ಆಗಬಹುದು. ಮಿತ್ರರಿಂದ ಸಿಗಬೇಕಾದ ಹಣಕ್ಕೆ ಕತ್ತರಿ ಬೀಳುವುದು. ನಿರೀಕ್ಷಿತ ಫಲವು ಲಭಿಸದು. ಆಧ್ಯಾತ್ಮಿಕ ಮೇಲೆ ಪ್ರೀತಿ ಹೆಚ್ಚಾಗಿ ಲೌಕಿಕ ವಿಚಾರಕ್ಕೆ ಆಸಕ್ತಿ ಕಡಿಮೆಯಾಗಲಿದೆ. ಸಹೋದ್ಯೋಗಿಗಳ ಮೇಲೆ ನಿಮಗೆ ಅಸೂಯೆ ಉಂಟಾಗಬಹುದು. ನಿಮ್ಮ ಇಚ್ಛಾಶಕ್ತಿಯು ವಹಿಸಿದ ಕೆಲಸವನ್ನು ಪೂರ್ಣಗೊಳಿಸಲು ಸಹಕಾರಿ. ನಿಮ್ಮ ಯೋಜನೆ ಉತ್ತಮವಿದ್ದರೂ ಅದನ್ನು ಕಾರ್ಯರೂಪಕ್ಕೆ ತರಲು ಕಷ್ಟವಾದೀತು.

ಧನು ರಾಶಿ:

ಯಂತ್ರದ ವ್ಯಾಪಾರದಿಂದ ನಿಮಗೆ ಲಾಭವು ಅಧಿಕವಾಗುವುದು. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಿಕೊಂಡು ಅನಂತರ ಬೇಸರಿಸುವರು. ಉದ್ಯಮದ ಕಾರಣ ಇರುವ ಸ್ಥಳದಿಂದ ದೂರ ಹೋಗಬೇಕಾಗುವದು. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಒಂದೇ ಕಾರ್ಯಕ್ಕೆ ಮತ್ತೆ ಮತ್ತೆ ವಿಘ್ನಗಳು ಬರುತ್ತಿದ್ದು ದೈವಜ್ಞರನ್ನು ಸಂಪರ್ಕಿಸಿ ಸೂಕ್ತ ಪರಿಹಾರವನ್ನು ಕಂಡುಕೊಳ್ಳುವುದು ಉತ್ತಮ. ನಿಮ್ಮ ಬಗ್ಗೆ ಯಾರಿಗೂ ಗೊತ್ತಿಲ್ಲ ಮಾಹಿತಿಯು ಪ್ರಕಟವಾಗಬಹುದು. ಸ್ವಂತ ವಾಹನ ಸಂಚಾರದಿಂದ ಭಯವಾಗಲಿದೆ.

ಮಕರ ರಾಶಿ:

ದಿನನಿತ್ಯದ ಬಳಕೆಯ ವಸ್ತುಗಳ ವ್ಯಾಪಾರ ಮಾಡುವವರ ಮಾರಾಟ ನಿರೀಕ್ಷೆಗಿಂತ ಹೆಚ್ಚಾಗಿರುತ್ತದೆ. ಎಲ್ಲದಕ್ಕೂ ಸಂಶಯಪಟ್ಟು ಗೊಂದಲವಾಗಲಿದೆ. ಸರ್ಕಾರ ಕಾರ್ಯವು ಇಂದು ಪೂರ್ಣವಾಗದು ಎಂದು ಅಂದುಕೊಂಡಿದ್ದರೂ ಕೊನೆಗೆ ಕೆಲಸವಾಗುವುದು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು. ಸಿಕ್ಕ ಅವಕಾಶವನ್ನು ಪ್ರೀತಿಸಿ. ಅದೇ ಮಹತ್ತ್ವದ ಮಾರ್ಗದಲ್ಲಿ ತೋರುವುದು. ಪ್ರೀತಿಯ ವಿಷಯದಲ್ಲಿ ಇಂದು ದುಃಖವುಂಟಾಗಬಹುದು. ಮನಸ್ತಾಪವನ್ನು ದ್ವೇಷವಾಗಿ ಪರಿವರ್ತಿಸಿಕೊಳ್ಳುವುದು ಬೇಡ.

ಕುಂಭ ರಾಶಿ:

ಇಂದು ನಿಮಗೆ ಸಾಮಾಜಿಕ ಕಾರ್ಯಗಳಿಗೆ ಪ್ರೇರಣೆ ಸಿಗಬಹುದು. ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಓಡಾಟವು ಅಧಿಕವಾಗಿ ಇರುವುದು. ಉದ್ಯಮದ ನಿಮಿತ್ತ ದೂರ ಪ್ರಯಾಣ ಹಾಗೂ ಕಾರ್ಯ ಸಫಲವಾಗದೇ ಬೇಸರ. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಹೂಡಿಕೆಗೆ ಯಾರಿಂದಲಾದರೂ ಪ್ರೇರಣೆ ಸಿಗಬಹುದು. ಇಂದು ನಿಮ್ಮ ಉತ್ಸಾಹವನ್ನು ಯಾರಿಂದಲೂ ಸಾಧ್ಯವಾಗದು. ಆದಾಯದ ವಿಚಾರದಲ್ಲಿ ಹಿನ್ನಡೆಯಾಗಿದ್ದು ನಿಮ್ಮ ತಂತ್ರವು ಪೂರ್ಣವಾಗಿ ಫಲಿಸದು.

ಮೀನ ರಾಶಿ:

ಕಛೇರಿ ಕೆಲಸವು ನಿಮ್ಮ ಸ್ವಂತ ಕೆಲಸಕ್ಕೆ ತೊಂದರೆಯನ್ನು ಕೊಡಬಹುದು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನವನ್ನು ನೀಡುವರು. ಯಾರದೋ ವಿವಾಹದ ಕಾರ್ಯಕ್ಕೆ ಓಡಾಟ ಮಾಡಬೇಕಾದೀತು. ನಿಮ್ಮ ಭೂವ್ಯವಹಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಸಂಗಾತಿಯ ಜೊತೆ ಭಿನ್ನಮತವು ಬರಬಹುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು. ಆಭರಣ ಖರೀದಿಗೆ ಉತ್ತಮ ದಿನವಿದಾಗಲಿದೆ. ಉದ್ಯೋಗವನ್ನು ನಂಬಿ ಜೀವನ ಸಾಗಿಸುವವರಿಗೆ ಬೇಸರ ಎದುರಾಗಬಹುದು.

ಜನವರಿ 21,​​ 2026ರ ಪಂಚಾಂಗ:

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರ ಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಉತ್ತರಾಷಾಢ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಶತಭಿಷಾ, ಯೋಗ : ವ್ಯತಿಪಾತ್, ಕರಣ : ಗರಜ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 17 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12-36 – 15:01, ಯಮಗಂಡ ಕಾಲ 08:20 – 09:45, ಗುಳಿಕ ಕಾಲ 11:10 – 12:36

-ಲೋಹಿತ ಹೆಬ್ಬಾರ್ – 8762924271 (what’s app only)

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನೀವು ಇತರರ ಜೊತೆಗೆ ಸ್ಪರ್ಧಿಸಬೇಕಿಲ್ಲ, ಆದರೆ ನಿಮ್ಮ ಸ್ಪರ್ಧೆ ಇರುವುದು ಈ ಹಿಂದೆ ಮಾಡಿದ ತಪ್ಪುಗಳಿಂದ ಆಚೆ ಬರುವುದರಲ್ಲಿ, ನಿರ್ಧಾರ ಮಾಡಿದಂತೆಯೇ ಬದುಕುವುದರಲ್ಲಿ ಎಂಬ ವಿಷಯ ಈ ದಿನ ಪ್ರಾಮುಖ್ಯ ಪಡೆದುಕೊಳ್ಳುತ್ತದೆ. ನೀವು ಯಾವುದೇ ಕ್ಷೇತ್ರಕ್ಕೆ ಸಂಬಂಧಪಟ್ಟವರೇ ಆಗಿದ್ದರೂ ಹೆಚ್ಚಿನ ಶ್ರಮವನ್ನು ಹಾಕಲೇಬೇಕಾಗುತ್ತದೆ. ದಂಪತಿಗಳು- ಪ್ರೀತಿ, ಪ್ರೇಮದಲ್ಲಿ ಇರುವವರು ನಿಮ್ಮ ಒಳಗಿನ ಪ್ರೀತಿಯನ್ನು ಸಾಬೀತು ಮಾಡುವುದಕ್ಕೆ ಅಂತಲೇ ಹೆಚ್ಚು ಸಮಯವನ್ನು ಮೀಸಲಿಡುತ್ತೀರಿ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಉದ್ಯಮಿಗಳಿಗೆ ಹಾಗೂ ಉದ್ಯೋಗಿಗಳಿಗೆ ಬಹಳ ಉತ್ತಮವಾದ ದಿನ ಇದಾಗಿರುತ್ತದೆ. ನಿಮ್ಮ ಯೋಜನೆಗಳು ಹಾಗೂ ಅದನ್ನು ಅನುಷ್ಠಾನಕ್ಕೆ ತರುವುದಕ್ಕೆ ಏನು ಮಾಡಬೇಕು ಎಂಬುದನ್ನು ಹೇಳುವ ರೀತಿ ಎಲ್ಲರನ್ನೂ ಆಕರ್ಷಿಸುತ್ತದೆ. ನಿಮ್ಮ ಜಡ್ಜ್ ಮೆಂಟ್ ಬಹಳ ಚೆನ್ನಾಗಿರುತ್ತದೆ. ಆದ್ದರಿಂದ ಅನಿಸಿದ್ದನ್ನು ಹೇಳುವುದಕ್ಕೆ ಹಿಂಜರಿಕೆ ಬೇಡ. ಷೇರು ಮಾರುಕಟ್ಟೆ- ಮ್ಯೂಚುವಲ್ ಫಂಡ್ ಇಂಥದ್ದರಲ್ಲಿ ಈ ಹಿಂದೆ ಯಾವಾಗಲೋ ನೀವು ಮಾಡಿದ್ದ ಸಣ್ಣ ಹೂಡಿಕೆ ಒಳ್ಳೆ ಲಾಭ ತಂದುಕೊಡಲಿದೆ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ನಿಮ್ಮ ನಿಯಂತ್ರಣದಲ್ಲಿ ಇರುವಂಥ ವಿಷಯಗಳನ್ನು ಮಾತ್ರ ಕಾಳಜಿ ಮಾಡಿ. ಕೈ ಅಳತೆ ಮೀರಿದ ವಿಚಾರಗಳ ತಲೆ ಕೆಡಿಸಿಕೊಳ್ಳಬೇಡಿ. ನೀವು ಸಮಸ್ಯೆಗಳು ಅಂತ ಏನನ್ನು ಅಂದುಕೊಂಡಿರುತ್ತೀರೋ ವಾಸ್ತವಕ್ಕಿಂತ ಹೆಚ್ಚು ಉತ್ಪ್ರೇಕ್ಷೆ ಮಾಡಿಕೊಳ್ಳುತ್ತಿದ್ದೀರಿ ಎಂಬುದು ಗಮನಕ್ಕೆ ಬರಲಿದೆ. ಮದುವೆಗೆ ಪ್ರಯತ್ನಿಸುತ್ತಿರುವ ವಿವಾಹ ವಯಸ್ಕರಿಗೆ ಸೂಕ್ತ ಸಂಬಂಧಗಳ ರೆಫರೆನ್ಸ್ ದೊರೆಯಲಿದೆ. ದುಡ್ಡಿನ ಖರ್ಚು ಮಾಡುವಾಗ ಯಾವ ಉದ್ದೇಶಕ್ಕೆ ಮಾಡುತ್ತಿದ್ದೀರಿ ಎಂಬ ಸ್ಪಷ್ಟತೆ ಇರಲಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನಿಮ್ಮಲ್ಲಿ ಏನೋ ಬದಲಾವಣೆ ಮಾಡಿಕೊಳ್ಳಬೇಕಿದೆ ಅಂತೇನಾದರೂ ಅನಿಸಿದಲ್ಲಿ ಮೊದಲಿಗೆ ನಿಮ್ಮ ದಿನಚರಿಯಲ್ಲಿ ಏನೇನು ಬದಲಾಗಬೇಕು ಎಂಬುದನ್ನು ತೀರ್ಮಾನ ಮಾಡಿಕೊಳ್ಳಿ. ಸಣ್ಣ- ಪುಟ್ಟ ಹೊಸ ಅಭ್ಯಾಸಗಳು ಸಹ ಅತಿ ದೊಡ್ಡ ಜಾದೂ ಮಾಡಿಬಿಡುತ್ತವೆ. ನಿಮ್ಮ ಮನಸ್ಸಿನಲ್ಲಿ ಇರುವಂಥ ನೋವನ್ನು ಮಾತಿನಲ್ಲಿ ತೋರಿಸಿಕೊಳ್ಳಬೇಡಿ. ಅದರಿಂದ ಸಮಸ್ಯೆ ಮತ್ತೂ ಹೆಚ್ಚಾಗುತ್ತದೆ. ಬೇರೆಯವರ ನಿರ್ಧಾರದ ಕಾರಣಗಳಿಗೆ ನಿಮ್ಮ ಸಂತೋಷ ಹಾಳಾಗಬಾರದು. ಆದ್ದರಿಂದ ಸಾಧ್ಯವಿಲ್ಲ ಎಂಬಂಥ ಕೆಲಸ- ಕಾರ್ಯಗಳನ್ನು ನೇರವಾಗಿ ಹೇಳಿ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಈ ದಿನ ನೀವು ಮಾಡುವ ಕೆಲಸದಲ್ಲಿ ಸಂಖ್ಯೆಗಿಂತ ಹೆಚ್ಚಾಗಿ ಗುಣಮಟ್ಟಕ್ಕೆ ಆದ್ಯತೆಯನ್ನು ನೀಡಿ. ಇದರಿಂದಾಗಿ ನೀವು ಇಡುವಂಥ ಚಿಕ್ಕ ಹೆಜ್ಜೆಗಳು ಸಹ ದೊಡ್ಡ ಮಟ್ಟದಲ್ಲಿ ಪರಿಣಾಮವನ್ನು. ಬೀರುತ್ತವೆ. ಉದ್ಯೋಗಸ್ಥರು ತಮ್ಮ ಜತೆಗೆ ಕೆಲಸ ಮಾಡುವವರೊಂದಿಗೆ ಸರಿಯಾದ ಸಮನ್ವಯ ಸಾಧಿಸಿದಲ್ಲಿ ಪರಿಣಾಮಕಾರಿ ಫಲಿತಾಂಶವನ್ನು ಕಾಣಬಹುದು. ನೀವು ನಿರೀಕ್ಷೆ ಮಾಡುತ್ತಿರುವುದು ಏನು ಎಂಬ ಬಗ್ಗೆ ಸ್ಪಷ್ಟವಾದ ಪದಗಳಲ್ಲಿ ವಿವರಿಸಿ. ಇನ್ನು ಕೌಟುಂಬಿಕವಾಗಿ ಸರಳವಾಗಿ ಬಗೆಹರಿಸಬಹುದಾದ ಸಮಸ್ಯೆಯನ್ನು ನೀವಾಗಿಯೇ ಕಗ್ಗಂಟು ಮಾಡಿಬಿಡುವ ಸಾಧ್ಯತೆಯಿದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ನಿಮ್ಮ ಮಾನಸಿಕ ಶಾಂತಿಗೆ ಹೊರಗಿನ ಒತ್ತಡ- ಬೆಳವಣಿಗೆ ಕಾರಣ ಎಂಬ ಆಕ್ಷೇಪದಿಂದ ಹೊರಗೆ ಬರುವ ದಿನ ಇದಾಗಿರುತ್ತದೆ. ಪ್ರತಿ ಸಣ್ಣ ವಿಚಾರವನ್ನು ದೊಡ್ಡ ಸಮಸ್ಯೆಯಾಗಿ ನೋಡುವ ಮನೋಭಾವದಿಂದ ಹೊರಗೆ ಬರಲಿದ್ದೀರಿ. ನಿಮ್ಮ ಹಲವು ಸಮಸ್ಯೆಗಳ ಮೂಲ ಇರುವುದು ಸಿಟ್ಟಿನಲ್ಲಿ. ಕೂತು- ಮಾತನಾಡಿ ಬಗೆಹರಿಸಿಕೊಳ್ಳಬೇಕಾದ ಸಮಯದಲಿ ಮಾತೇ ಆಡದಂತೆ ಸುಮ್ಮನಾಗಿಬಿಟ್ಟರೆ ಹೇಗೆ? ಕಾಲಿನ ನೋವು ಕಾಡಲಿದೆ. ಒಂದು ವೇಳೆ ಈಗಾಗಲೇ ಆ ಸಮಸ್ಯೆಯಿಂದ ಬಳಲುತ್ತಾ ಇದ್ದೀರಿ ಅಂತಾದಲ್ಲಿ ಸೂಕ್ತ ವೈದ್ಯೋಪಚಾರ ಮಾಡಿಕೊಳ್ಳುವ ಕಡೆಗೆ ಗಮನ ನೀಡಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 21ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1):

ಈ ದಿನ ನಿಮ್ಮ ಮಾತು ಮತ್ತು ನಿರ್ಧಾರಗಳು ಉದ್ಯೋಗ ಸ್ಥಳದಲ್ಲಿ ಆಗಬೇಕಾದ ಕೆಲಸದ ಗತಿಯನ್ನೇ ಬದಲಿಸಲಿದೆ. ವ್ಯಾಪಾರ- ವ್ಯವಹಾರ ಅಂತ ಬಂದಲ್ಲಿ ಭವಿಷ್ಯವನ್ನು ಗಮನ ಇಟ್ಟುಕೊಂಡು ಜಾಣ್ಮೆಯಿಂದ ಮಾತನಾಡಿ. ಸಹೋದ್ಯೋಗಿಗಳು ಸಹ ನಿಮ್ಮ ಅಭಿಪ್ರಾಯಕ್ಕೆ ಸಮ್ಮತ ನೀಡುವ ಸಾಧ್ಯತೆಯಿದೆ. ಹಣಕಾಸಿನ ನಿರ್ಧಾರಗಳಲ್ಲಿ ಸಂಯಮದಿಂದ ವರ್ತಿಸಿದರೆ ಲಾಭ ತಂದು ಕೊಡಲಿದೆ. ಕುಟುಂಬ ಸದಸ್ಯರಿಗೆ ನೀವು ನೀಡುವ ಬೆಂಬಲ ಬಹಳ ಮುಖ್ಯವಾಗುತ್ತದೆ. ನಿಮ್ಮ ಸಂಗಾತಿಯ ಬಗ್ಗೆ ಇರುವಂಥ ಕಾಳಜಿಯನ್ನು ವ್ಯಕ್ತಿಪಡಿಸುವಾಗ ಅದು ಪೊಸೆಸಿವ್ ನೆಸ್ ಅನಿಸದಂತೆ ನೋಡಿಕೊಳ್ಳಿ.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2):

ನಿಮ್ಮ ಜೀವನದಲ್ಲಿ ದೊಡ್ಡ ಬದಲಾವಣೆ ತರುವಂಥ ಹಾಗೂ ಒಳಿತು ಆಗುವಂಥ ಹೊಸ ವಿಚಾರಗಳನ್ನು ಹೊಸ ಜನರು ತೆಗೆದುಕೊಂಡು ಬರಲಿದ್ದಾರೆ. ಇಷ್ಟು ಸಮಯ ನಿಮ್ಮ ಮಾತನ್ನು ಯಾರು ಕೇಳಿಸಿಕೊಳ್ಳುತ್ತಾರೆ ಅಂತೇನಾದರೂ ನೀವು ಅಂದುಕೊಳ್ಳುತ್ತಾ ಇದ್ದಲ್ಲಿ ನಿಮ್ಮ ಮಾತಿಗೆ ಮನ್ನಣೆ ದೊರೆಯಲಿದೆ. ಇಂಥ ಸಂದರ್ಭದಲ್ಲಿ ನೀವು ಮಾತನಾಡುವ ವಿಷಯ ಹಾಗೂ ಬಳಸುವ ಪದಗಳ ಕಡೆಗೆ ಗಮನವನ್ನು ನೀಡಿ. ಕೆಲಸಗಳು ನಿಧಾನ ಗತಿಯಲ್ಲಿಯೇ ಸಾಗಿದರೂ ಫಲಗಳು ಉತ್ತಮ ರೀತಿಯಲ್ಲಿ ದೊರೆಯಲಿದೆ.

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3):

ಸಣ್ಣ- ಸಣ್ಣ ಸಂಗತಿಗಳಿಗೂ ನೀವು ನೀಡುವ ಪ್ರಾಮುಖ್ಯ, ಕೆಲಸಗಳಲ್ಲಿ ಕಾಣುವ ಅಚ್ಚುಕಟ್ಟುತನಕ್ಕೆ ಮೆಚ್ಚುಗೆ ಬರಲಿದೆ. ಉದ್ಯೋಗ ಸ್ಥಳದಲ್ಲಿ ನಿಮ್ಮ ಶಿಸ್ತು ಹಾಗೂ ಯಾವುದೇ ವಿಚಾರದಲ್ಲಿಯೂ ಇರುವ ಸ್ಪಷ್ಟತೆಗೆ ಫಲಿತಾಂಶಗಳು ನಿದರ್ಶನ ಆಗುತ್ತವೆ. ಇತರರಿಗೆ ಚಿಕ್ಕದು ಎನಿಸಿದಂಥ ಹಣಕಾಸಿನ ವಿಚಾರದ ನಿರ್ಧಾರವೊಂದು ದೊಡ್ಡ ಬದಲಾವಣೆಯನ್ನೇ ತರಲಿದೆ. ಭವಿಷ್ಯಕ್ಕೂ ಸಹಾಯಕ ಆಗಲಿದೆ. ನಿಮ್ಮ ಪ್ರೀತಿಪಾತ್ರರ ಜೊತೆಗೆ ನೀವು ಮಾತನಾಡುವುದಕ್ಕಿಂತ ಹೆಚ್ಚಾಗಿ ಅವರು ಹೇಳುವುದನ್ನು ಕೇಳಿಸಿಕೊಳ್ಳಿ.

ಲೇಖನ- ಸ್ವಾತಿ ಎನ್.ಕೆ.

Source link

ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ ನೂತನ ಅಧ್ಯಕ್ಷ – Kannada News | BJP High command appoints party incharge for the Greater Bengaluru Corporation election

ಬೆಂಗಳೂರು, (ಜನವರಿ 20): ಇದೇ ಜೂನ್ 30ರೊಳಗಾಗಿ ಜಿಬಿಎ (ಗ್ರೇಟರ್ ಬೆಂಗಳೂರು ಪ್ರಾಧಿಕಾರ) ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್,  ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಜಿಬಿಎ ಚುನಾವಣಾ ಉಸ್ತುವಾರಿಯನ್ನಾಗಿ ರಾಮ್ ಮಾಧವ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಸಹ ಉಸ್ತವಾರಿಗಳಾಗಿ ಸತೀಶ್ ಪೂನಿಯಾ, ಸಂಜಯ್ ಉಪಧ್ಯಾಯ್ ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುತ್ತಿದೆ. ಹೀಗಾಗಿ ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರನ್ನೇ ಬಿಜೆಪಿ ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇನ್ನುಳಿದಂತೆ ರಾಜಸ್ಥಾನದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಹಾಗೂ ಮಹಾರಾಷ್ಟ್ರ ಬಿಜೆಪಿ ಶಾಸಕರಾಗಿರುವ ಸಂಜಯ್ ಉಪಾಧ್ಯಾಯ್ ಅವರನ್ನು ಸಹ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.

ಇದನ್ನೂ ನೋಡಿ: ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ತಂತ್ರಗಾರಿಕೆ ಏನು? ಹೆಚ್​ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರು ಇಂದು (ಜನವರಿ 20) ದೆಹಲಿಯ ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇದರ ಬೆನ್ನಲ್ಲೇ ಗ್ರೇಟರ್ ಬೆಂಗಳೂರು ಚುನಾವಣೆಗೆ ಉಸ್ತುವಾರಿ ಹಾಗೂ ಸಹುಸ್ತುವಾರಿಗಳನ್ನು ನೇಮಕ ಮಾಡುವ ಮೂಲಕ ಪಕ್ಷದ ಕಾರ್ಯಚಟುವಟಿಕೆಗಳನ್ನು ಆರಂಭಿಸಿದ್ದಾರೆ.

ಬಿಜೆಪಿ ಜೆಡಿಎಸ್ ಮೈತ್ರಿ

ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಸ್ಥಳೀಯ ಚುನಾವಣೆಯಲ್ಲಿ ಜಯ ಸಾಧಿಸಿದ ನಂತರ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರು. ಇದರಿಂದ ಸೃಷ್ಟಿಯಾಗಿದ್ದ ಗೊಂದಲವನ್ನು ಪರಿಹರಿಸಲು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸಭೆ ಮಾಡಿದ್ದು, ಜಿಬಿಎ ಚುನಾವಣೆಯನ್ನು ಮೈತ್ರಿಯಾಗಿ ಎದುರಿವುದಾಗಿ ಘೋಷಣೆ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On – 11:22 pm, Tue, 20 January 26

Source link