Headlines

ಮೈಸೂರಿನ ಪಬ್​​​​ನಲ್ಲಿ ಭಾರೀ ಅಗ್ನಿ ಅವಘಡ: ಇಬ್ಬರು ಸಜೀವ ದಹನ, 7 ಜನರಿಗೆ ಗಂಭೀರ ಗಾಯ – Kannada News | Several Death And Injured after massive fire breaks out in Pub at Mysuru

ಮೈಸೂರು, (ಜೂನ್ 15): ಮೈಸೂರಿನ (Mysuru) ದಟ್ಟಗಳ್ಳಿ 4ನೇ ಹಂತದ ಬಳಿಯಿರುವ ಪಬ್ ನಲ್ಲಿ (Pub) ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಈ ಬೆಂಕಿ ದುರಂತದಲ್ಲಿ ಇಬ್ಬರು ಸಜೀವ ದಹನವಾಗಿದ್ದರೆ, ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಪಬ್​ನಲ್ಲಿ ಕೆಲಸ ಮಾಡುತ್ತಿದ್ದ ಶಾಹಿಲ್, ಪ್ರಕಾಶ್ ಮೃತ ದುರ್ವೈವಿಗಳು. ಇನ್ನು ಗಾಯಗೊಂಡಿರುವ ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Source link

Read More

ಕೊಪ್ಪಳದಲ್ಲಿ ಪತ್ತೆಯಾದ ಶಿವಲಿಂಗಕ್ಕೂ ಸಿಎಂ ಡಿಕೆ ಶಿವಕುಮಾರ್​​ಗೂ ಲಿಂಕ್: ಉದ್ಯಮಿ ಕನಸಲ್ಲಿ ಕಂಡಿದ್ದೇನು? – Kannada News | Shivalinga Discovery: Businessman’s Dream and CM DK Shivakumar Connection Explained

ಸಿಎಂ ಡಿಕೆ ಶಿವಕುಮಾರ್​, ಶಿವಲಿಂಗImage Credit source: tv9 kannada ಕೊಪ್ಪಳ, ಜೂನ್​​ 15: ಜಿಲ್ಲೆಯಲ್ಲಿ ಕುತೂಹಲಕಾರಿ ಮತ್ತು ದೈವಿಕ ಪವಾಡದಂತಹ ಘಟನೆಯೊಂದು ನಡೆದಿದೆ. ಉದ್ಯಮಿಯೊಬ್ಬರ ಜಮೀನಿನಲ್ಲಿ ಶಿವಲಿಂಗ (Shivalinga) ಪತ್ತೆಯಾಗಿದೆ. ವಿಶೇಷ ಅಂದರೆ ಈ ಶಿವಲಿಂಗಕ್ಕೂ ರಾಜ್ಯದ ನೂತನ ಸಿಎಂ ಡಿಕೆ ಶಿವಕುಮಾರ್​​ಗೂ (DK Shivakumar) ಒಂದು ಅಪೂರ್ವ ಸಂಬಂಧ ಬೆಸೆದುಕೊಂಡಿದೆ. ಕನಸಿನಲ್ಲಿ ಕಂಡಂತೆ ಜಮೀನಿನಲ್ಲಿ ಶಿವಲಿಂಗ ಸಿಕ್ಕಿದ್ದು, ಇದೀಗ ಇಡೀ ಜಿಲ್ಲೆಯ ಜನರ ಹಿತದೃಷ್ಟಿ ಹಿನ್ನೆಲೆ ಈ ಅಪರೂಪದ ಲಿಂಗವನ್ನು ಸಿಎಂ ಕೈಗಿಡಲು ಉದ್ಯಮಿ…

Read More

ನಿಧನರಾಗಿ ಆರೇ ವರ್ಷಕ್ಕೆ ಸುಶಾಂತ್ ಸಿಂಗ್ ರಜಪೂತ್ ಯಾರಿಗೂ ನೆನಪಿಲ್ಲ; ಪುಣ್ಯತಿಥಿಗೆ ಬಾಲಿವುಡ್ ಮೌನ – Kannada News | Hindi Cinema Celebrities silent on Sushant Singh Rajput sixth Death Anniversary Fans react

ಪ್ರತಿಭಾವಂತ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ನಿಧನರಾಗಿ ಭರ್ತಿ ಆರು ವರ್ಷಗಳು ಸಂದಿವೆ. ಆದರೆ ಈ ಬಾರಿ ಅವರ ಪುಣ್ಯತಿಥಿಯಂದು (ಜೂನ್ 14) ಬಾಲಿವುಡ್ ಚಿತ್ರರಂಗ ತೋರಿದ ಮೌನವು ಅವರ ಲಕ್ಷಾಂತರ ಅಭಿಮಾನಿಗಳ ಆಕ್ರೋಶ ಮತ್ತು ಬೇಸರಕ್ಕೆ ಕಾರಣವಾಗಿದೆ. ‘ಹಿಂದಿ ಚಿತ್ರರಂಗ (Bollywood) ಸುಶಾಂತ್ ಅವರನ್ನು ಸಂಪೂರ್ಣವಾಗಿ ಮರೆತುಬಿಟ್ಟಿತೇ?’ ಎಂಬ ಪ್ರಶ್ನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಕೇಳಿಬರುತ್ತಿದೆ. ಈ ಮೊದಲು ನಟನಿಗೆ ಆಪ್ತವಾಗಿದ್ದವರು ಕೂಡ ಈಗ ಮರೆತುಬಿಟ್ಟಿದ್ದಾರೆ ಎಂಬುದು ವಿಪರ್ಯಾಸ. ಹಿಂದಿನ…

Read More

RSS ವಿಚಾರವಾಗಿ ಮೋಹನ್ ಭಾಗವತ್​ಗೆ ಪ್ರಿಯಾಂಕ್ ಖರ್ಗೆ ಪತ್ರ, ಈ 8 ಅಂಶಗಳಿಗೆ ವಿವರ ನೀಡುವಂತೆ ಆಗ್ರಹ – Kannada News | Minister Priyank Kharge Asks some Details from Mohan bhagwat about RSS via Letter

ಬೆಂಗಳೂರು, (ಜೂನ್ 15): ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಆರ್​​ಎಸ್​​ಎಸ್ (Rashtriya Swayamsevak Sangh)​ ನೋಂದಣಿ ವಿಚಾರವನ್ನು ಎತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಇದರ ನಡುವೆ ಇದೀಗ ಪ್ರಿಯಾಂಕ್ ಖರ್ಗೆ, ಇದೇ ವಿಚಾರವಾಗಿ ಆರ್​​ಎಸ್​​ಎಎಸ್​ ಮುಖ್ಯಸ್ಥ ಮೋಹನ್ ಭಾಗವತ್ (Mohan bhagwat) ಅವರಿಗೆ ಪತ್ರ ಬರೆದಿದ್ದು, ಹಲವು ವಿಚಾರಗಳ ಬಗ್ಗೆ ಮಾಹಿತಿ ನೀಡುವಂತೆ ಆಗ್ರಹಿಸಿದ್ದಾರೆ. ಇಷ್ಟು ದೊಡ್ಡ ಸಂಘಟನೆ ಯಾವ ಕಾನೂನಿನ ಆಧಾರದಲ್ಲಿ ನಿರ್ವಹಿಸುತ್ತಿದೆ. ಏಕೆ ನೋಂದಾಯಿತ ಕಾನೂನು ಬದ್ಧ…

Read More

ಸಂಬಳ ₹15,000 ಇದ್ದರೂ ಸಾಲವಿಲ್ಲದೆ ಬದುಕಬಹುದೇ? ಹೌದು ಎನ್ನುತ್ತದೆ ಈ ಸರಳ ಬಜೆಟ್ ಸೂತ್ರ – Kannada News | Budgeting on ₹15,000 Salary: Smart Financial Planning for a Debt Free Life

ಇಂದಿನ ದುಬಾರಿ ಕಾಲದಲ್ಲಿ ₹15,000 ಸಂಬಳದಲ್ಲಿ ಬದುಕು ನಡೆಸುವುದು ದೊಡ್ಡ ಸವಾಲಿನ ಕೆಲಸ. ಅದರಲ್ಲೂ ಬೆಂಗಳೂರಿನಂಥ ದುಬಾರಿ ಜೀವನ ವೆಚ್ಚದ (lifestyle expense) ನಗರದಲ್ಲಿ ಲಕ್ಷಾಂತರ ಸಂಬಳ ತೆಗೆಯುವ ಟೆಕ್ಕಿಗಳೇ ಹಣ ಉಳಿಸಲಾಗದೆ ಪರದಾಡುತ್ತಿರುತ್ತಾರೆ. ಅಂಥದ್ದರಲ್ಲಿ ಬಹಳ ಅಲ್ಪ ಸಂಬಳದಲ್ಲಿ ಬದುಕು ನಡೆಸುವುದೆಂದರೆ ಖಂಡಿತ ಸುಮ್ಮನೆ ಅಲ್ಲ. ಆದರೆ, ಸರಿಯಾದ ಹಣಕಾಸಿನ ಯೋಜನೆ ಮತ್ತು ಕಟ್ಟುನಿಟ್ಟಾದ ಶಿಸ್ತು ಇದ್ದರೆ ಸಾಲದ ಸುಳಿಗೆ ಸಿಲುಕದೆ ನೆಮ್ಮದಿಯ ಜೀವನ ನಡೆಸಲು ಸಾಧ್ಯವಿದೆ. ಅದಕ್ಕಾಗಿ ಹಣಕಾಸು ತಜ್ಞರು 50-30-20, 60-30-10 ಇತ್ಯಾದಿ…

Read More

ಲೆಬನಾನ್‌ನಿಂದ ಹಿಂದೆ ಸರಿಯಲ್ಲ; ಅಮೆರಿಕ-ಇರಾನ್ ಶಾಂತಿ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲ್ – Kannada News | Trump’s Agreement Does Not Bind Us; Israel Rejects US Iran Deal says won’t retreat from Lebanon

ಜೆರುಸಲೇಂ, ಜೂನ್ 15: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧವನ್ನು ಕೊನೆಗೊಳಿಸಲು ಸಿದ್ಧವಾಗಿರುವ ಶಾಂತಿ ಒಪ್ಪಂದದ ಕುರಿತು ಇಸ್ರೇಲ್ ತನ್ನ ಮೊದಲ ಅಧಿಕೃತ ಮತ್ತು ಆಕ್ರೋಶದ ಪ್ರತಿಕ್ರಿಯೆಯನ್ನು ನೀಡಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ಮಧ್ಯಸ್ಥಿಕೆಯಲ್ಲಿ ನಡೆದಿರುವ ಈ ಒಪ್ಪಂದವು ಇಸ್ರೇಲ್ ಅನ್ನು ಯಾವುದೇ ರೀತಿಯಲ್ಲೂ ಕಟ್ಟಿಹಾಕಲು ಸಾಧ್ಯವಿಲ್ಲ ಎಂದು ಇಸ್ರೇಲ್‌ನ ರಾಷ್ಟ್ರೀಯ ಭದ್ರತಾ ಸಚಿವ ಇತಾಮರ್ ಬೆನ್-ಗ್ವಿರ್ ಸ್ಪಷ್ಟಪಡಿಸಿದ್ದಾರೆ. ಜೂನ್ 19ರ ಶುಕ್ರವಾರದಂದು ಸ್ವಿಜರ್ಲೆಂಡ್‌ನಲ್ಲಿ ಅಧಿಕೃತವಾಗಿ ಸಹಿ ಆಗಲಿರುವ ಈ ಒಪ್ಪಂದವು,…

Read More

ಹಗಲು ದರೋಡೆ: ಬೀದರ್​ನಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ಕೆಂಪು ಕಲ್ಲು ಗಣಿಗಾರಿಕೆ – Kannada News | Red Stone Scandal: Illegal Mining Runs Unchecked Across Border District

ಕೆಂಪು ಕಲ್ಲು ಗಣಿಗಾರಿಕೆImage Credit source: tv9 kannada ಬೀದರ್​​, ಜೂನ್​​ 15: ಎರಡು ರಾಜ್ಯದ ಗಡಿ ಹಂಚಿಕೊಂಡಿರುವ ಜಿಲ್ಲೆಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ (illegal mining) ಅವ್ಯಾಹತವಾಗಿ ನಡೆಯುತ್ತಿದೆ. ಬೀದರ್‌ (bidar) ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ 40ಕ್ಕೂ ಹೆಚ್ಚು ಸ್ಥಳದಲ್ಲಿ  ಭೂಮಿಯ ಒಡಲನ್ನ ಬಗೆದು ಕೆಂಪು ಕಲ್ಲು ತೆಗೆಯಲಾಗುತ್ತಿದೆ. ಇಷ್ಟೇಲ್ಲಾ ನಡೆಯುತ್ತಿದ್ದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಾತ್ರ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮುಖ್ಯಾಂಶಗಳು ಬೀದರ್‌ನಲ್ಲಿ ಅಕ್ರಮ ಕೆಂಪು…

Read More

ಪೋಕ್ಸೋ ಆರೋಪಿ ಜಾನಿ ಮಾಸ್ಟರ್ ಜತೆ ನಂಟು; ಅನಿರುದ್ಧ್ ರವಿಚಂದರ್ ವಿರುದ್ಧ ಜನಾಕ್ರೋಶ – Kannada News | Anirudh Ravichander faces backlash after collaboration with Jani Master for Aravindh song

ಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ಅನಿರುದ್ಧ್ ರವಿಚಂದರ್ (Anirudh Ravichander) ಅವರು ತಮ್ಮ ಹೊಸ ಸ್ವತಂತ್ರ ಆಲ್ಬಂ ಸಾಂಗ್ ‘ಅರವಿಂದ್’ ಬಿಡುಗಡೆಯಾದ ಬೆನ್ನಲ್ಲೇ ತೀವ್ರ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯದ ಹಿನ್ನೆಲೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಬಂಧನಕ್ಕೊಳಗಾಗಿ, ಸದ್ಯ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿರುವ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ (Jani Master) ಅವರೊಂದಿಗೆ ಅನಿರುದ್ಧ್ ಕೈಜೋಡಿಸಿರುವುದು ಈ ಆಕ್ರೋಶಕ್ಕೆ ಕಾರಣವಾಗಿದೆ. ‘ಅರವಿಂದ್’ ಹಾಡು ಅನಿರುದ್ಧ್ ರವಿಚಂದರ್ ಅವರ ಸ್ವಂತ…

Read More

ಅಮೆರಿಕ-ಇರಾನ್ ಶಾಂತಿ ಒಪ್ಪಂದಕ್ಕೆ ಭಾರತದ ಸ್ವಾಗತ; ಪಶ್ಚಿಮ ಏಷ್ಯಾದಲ್ಲಿ ಶಾಂತಿಗೆ ಕರೆ ನೀಡಿದ ಮೋದಿ – Kannada News | PM Narendra Modi welcomes US Iran peace deal hopeful of restoration of peace and stability in West Asia

ನವದೆಹಲಿ, ಜೂನ್ 15: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿದ್ದ ಯುದ್ಧದ ವಾತಾವರಣವನ್ನು ತಿಳಿಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಮಹತ್ವದ ಶಾಂತಿ ಒಪ್ಪಂದವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅಧಿಕೃತವಾಗಿ ಸ್ವಾಗತಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಜಾಗತಿಕ ಸ್ಥಿರತೆಗಾಗಿ ಈ ಒಪ್ಪಂದದ ಅಗತ್ಯವನ್ನು ಒತ್ತಿಹೇಳಿದ್ದಾರೆ. “ಪಶ್ಚಿಮ ಏಷ್ಯಾದ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಒಪ್ಪಂದವನ್ನು ನಾನು ಸ್ವಾಗತಿಸುತ್ತೇನೆ. ಈ…

Read More

ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ

ಬೆಂಗಳೂರು, (ಜೂನ್ 15): ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ (BZ Zameer ahmed khan) ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಸ್ಲಿಂ ಸಮುದಾಯ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುತ್ತಿವೆ. ಅದಂತೆ ಇಂದು (ಜೂನ್ 15) ಬೆಂಗಳೂರಿನ ಪಾದರಾಯನಪುರದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ವಿಧಾನಸೌಧಕ್ಕೆ ತೆರಳಲು ಮುಂದಾಗಿದ್ದಾರೆ. ಇದಕ್ಕೆ ಪೊಲೀಸರು ತಡೆ ಹಿಡಿದಿದ್ದರಿಂದ ಭಾರೀ ಹೈಡ್ರಾಮಾವೇ ಆಗಿದೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಬಳಿಕ ಅಲರ್ಟ್ ಆದ ಪೊಲೀಸರು,…

Read More