Category Archives: Blog

Your blog category

RCB ಪರ ಇನಿಂಗ್ಸ್ ಆರಂಭಿಸುವವರು ಯಾರು? – Kannada News | Virat Kohli’s Opening Partner: Iyer or Salt for IPL 2026: Qualifier 1

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧವಾಗಿದೆ. ಧರ್ಮಶಾಲಾದ ಹೆಚ್​​ಪಿಸಿಎ ಮೈದಾನದಲ್ಲಿ ಇಂದು (ಮೇ 26) ನಡೆಯಲಿರುವ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸುವವರು ಯಾರು ಎಂಬುದೇ ಪ್ರಶ್ನೆ.

ಏಕೆಂದರೆ ಗಾಯದ ಕಾರಣ ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ಫಿಲ್ ಸಾಲ್ಟ್ ಇದೀಗ ಆರ್​ಸಿಬಿ ತಂಡವನ್ನು ಕೂಡಿಕೊಂಡಿದ್ದಾರೆ. ಇದಾಗ್ಯೂ ಅವರು ಓಪನರ್ ಆಗಿ ಕಣಕ್ಕಿಳಿಯುವ ಬಗ್ಗೆ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಖಚಿತತೆ ನೀಡಿಲ್ಲ.

ಈ ಬಗ್ಗೆ ಮಾತನಾಡಿದ ರಜತ್ ಪಾಟಿದಾರ್, ಫಿಲ್ ಸಾಲ್ಟ್ ತಮ್ಮ ಬೆರಳಿನ ಗಾಯದಿಂದ ಚೇತರಿಸಿಕೊಂಡಿದ್ದು, ನೆಟ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ, ಅವರು ಇನ್ನು ಕೂಡ ವೈದ್ಯಕೀಯ ತಂಡದ ನಿಗಾದಲ್ಲಿದ್ದು, ಧರ್ಮಶಾಲಾ ಪಿಚ್ ನೋಡಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಅಂದರ ವಿರಾಟ್ ಕೊಹ್ಲಿ ಜೊತೆ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ ಎಂಬುದನ್ನು ಇನ್ನೂ ಕೂಡ ನಿರ್ಧರಿಸಲಾಗಿಲ್ಲ. ಪಿಚ್​ ಮೇಲ್ಮೈ ನೋಡಿದ ಬಳಿಕವಷ್ಟೇ ಅವರನ್ನು ಪ್ಲೇಯಿಂಗ್ ಇಲೆವೆನ್​ಗೆ ಸೇರಿಸಿಕೊಳ್ಳಬೇಕಾ ಅಥವಾ ಬೇಡವಾ ಎಂಬುದನ್ನು ನಿರ್ಧರಿಸಲಿದ್ದೇವೆ ಎಂದು ರಜತ್ ಪಾಟಿದಾರ್ ಹೇಳಿದ್ದಾರೆ.

ಈ ಹೇಳಿಕೆಯಿಂದಾಗಿಯೇ ಇದೀಗ ಆರ್​ಸಿಬಿ ಪರ ಇನಿಂಗ್ಸ್ ಆರಂಭಿಸುವವರು ಯಾರು ಎಂಬ ಗೊಂದಲ ಸೃಷ್ಟಿಯಾಗಿದೆ. ಏಕೆಂದರೆ ಸಾಲ್ಟ್ ಅನುಪಸ್ಥಿತಿಯಲ್ಲಿ ಕೆಲ ಮ್ಯಾಚ್​ಗಳಲ್ಲಿ ಜೇಕಬ್ ಬೆಥೆಲ್ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಅವರು ಕೂಡ ಗಾಯಗೊಂಡು ತಂಡದಿಂದ ಹೊರಗುಳಿದಿದ್ದಾರೆ.

ಹೀಗಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ. ಇತ್ತ ಜೇಕಬ್ ಬೆಥೆಲ್ ಗಾಯಗೊಂಡಿದ್ದ ಕಾರಣ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್ ಆರಂಭಿಕನಾಗಿ ಕಾಣಿಸಿಕೊಂಡಿದ್ದರು. ಸಿಕ್ಕ ಅವಕಾಶವನ್ನು ಬಳಸಿಕೊಂಡ ಅಯ್ಯರ್ ಉತ್ತಮ ಆರಂಭ ಒದಗಿಸುವಲ್ಲಿ ಯಶಸ್ವಿಯಾಗಿದ್ದರು.

ಇದೀಗ ಫಿಲ್ ಸಾಲ್ಟ್​​ಗೆ ಅವಕಾಶ ನೀಡಬೇಕಿದ್ದರೆ ಇನ್​ಫಾರ್ಮ್​ನಲ್ಲಿರುವ ವೆಂಕಟೇಶ್ ಅಯ್ಯರ್ ಅವರನ್ನು ಕೈ ಬಿಡಬೇಕಾಗಿ ಬರಬಹುದು. ಇಲ್ಲಾ ಇಂಪ್ಯಾಕ್ಟ್ ಪ್ಲೇಯರ್ ಲಿಸ್ಟ್​ನಲ್ಲಿರಿಸಬೇಕಾಗುತ್ತದೆ. ಹೀಗಾಗಿಯೇ ಇದೀಗ ಆರ್​ಸಿಬಿ ಮ್ಯಾನೇಜ್ಮೆಂಟ್​ಗೆ ಆರಂಭಿಕನ ಆಯ್ಕೆಯೇ ಗೊಂದಲವಾಗಿ ಮಾರ್ಪಟ್ಟಿದೆ.

ಹೀಗಾಗಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್, ಆರಂಭಿಕ ಜೋಡಿಯನ್ನು ಇನ್ನೂ ಕೂಡ ನಿರ್ಧರಿಸಲಾಗಿಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ಗಾಯದಿಂದ ಚೇತರಿಸಿಕೊಂಡಿರುವ ಸಾಲ್ಟ್​ಗೆ ಈ ಪಂದ್ಯದಲ್ಲಿ ಚಾನ್ಸ್ ನೀಡಲು ನಿರ್ಧರಿಸಿದರೆ, ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್ ಇನಿಂಗ್ಸ್ ಆರಂಭಿಸಲಿದ್ದಾರೆ.

ಇದನ್ನೂ ಓದಿ: IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..!

ಇಲ್ಲದಿದ್ದರೆ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ಹಾಗೂ ವೆಂಕಟೇಶ್ ಅಯ್ಯರ್ ಆರಂಭಿಕರಾಗಿ ಮುಂದುವರೆಸಲಿದ್ದಾರೆ. ಅಂದರೆ ಇಲ್ಲಿ ಫಿಲ್ ಸಾಲ್ಟ್ ಹಾಗೂ ವೆಂಕಟೇಶ್ ಅಯ್ಯರ್ ನಡುವೆ ನೇರ ಪೈಪೋಟಿ ಇದೆ. ಈ ಪೈಪೋಟಿಯ ಕಾರಣ ಆರಂಭಿಕನಾಗಿ ತಂಡದಲ್ಲಿರುವ ಮತ್ತೋರ್ವ ಆಟಗಾರ ಜೋರ್ಡನ್ ಕಾಕ್ಸ್ ಈ ಪಂದ್ಯದಲ್ಲೂ ಬೆಂಚ್ ಕಾಯಬೇಕಾಗಿ ಬರಬಹುದು.

Source link

Weather Report: ರಾಜ್ಯದ ಜನತೆಗೆ ಸಿಕ್ತು ಬಿಸಿಲಿನಿಂದ ಬಿಗ್ ರಿಲೀಫ್!; ಬೆಂಗಳೂರು ಸೇರಿದಂತೆ ಹಲವೆಡೆ ಇಂದು ಗುಡುಗು ಸಹಿತ ಭಾರಿ ಮಳೆ – Kannada News | IMD Karnataka Rain Alert: Heavy Showers Expected May 26, Relief from Heat

ಮಳೆಯಲ್ಲಿ ಮಕ್ಕಳು ಆಟವಾಡುವ ಚಿತ್ರ Image Credit source: Tv9 kannada

ಬೆಂಗಳೂರು, ಮೇ,26 :  ತೀವ್ರ ಉಷ್ಣಾಂಶ ಹಾಗೂ ಬೇಸಿಗೆಯ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಕರ್ನಾಟಕದ ಜನತೆಗೆ ವರುಣದೇವ ಕೊನೆಗೂ ತಂಪಾದ ಸುದ್ದಿ ನೀಡಿದ್ದಾನೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಚಂಡಮಾರುತದ ಪ್ರಸರಣ ಹಿನ್ನೆಲೆಯಲ್ಲಿ, ಇಂದು (ಮೇ 26) ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

ಇನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ವಾತಾವರಣ ಸಂಪೂರ್ಣವಾಗಿ ಮೋಡ ಕವಿದಿರಲಿದ್ದು, ಸಂಜೆಯ ವೇಳೆಗೆ ಭಾರಿ ಗುಡುಗು ಮತ್ತು ತೀಕ್ಷ್ಣ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಜಾಗ್ರತೆ ವಹಿಸಲು ಸೂಚಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.

ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಜೊತೆಗೆ ಮಳೆಯಾಗುವ ಮುನ್ಸೂಚನೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಆರಂಭವಾಗಿರುವ ಮಳೆಯ ಮುಂದುವರಿದ ಭಾಗವಾಗಿ ಇಂದೂ ಸಹ ಮಧ್ಯಾಹ್ನದ ನಂತರ ದಟ್ಟ ಮೋಡಗಳು ಆವರಿಸಲಿವೆ. ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ನಗರದಾದ್ಯಂತ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗರಿಷ್ಠ ತಾಪಮಾನವು 32 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯುವ ಮೂಲಕ ನಗರ ಕಂಪ್ಲೀಟ್ ಕೂಲ್ ಆಗಲಿದೆ.

ಇದನ್ನೂ ಓದಿ: ಉತ್ತರ ಮತ್ತು ದಕ್ಷಿಣ ಒಳನಾಡಿನ ಜನರೇ ಎಚ್ಚರ!: ಮುಂದಿನ 5 ದಿನ ರಾಜ್ಯದಲ್ಲಿ ವರುಣನ ಆರ್ಭಟ ಜೋರು

ಕರಾವಳಿಯ ಈ ಅವಳಿ ಜಿಲ್ಲೆಗಳಲ್ಲಿ ಇಂದು ತಾಪಮಾನ 33°C ಹಾಗೂ ಕನಿಷ್ಠ ತಾಪಮಾನ 27°C ದಾಖಲಾಗಲಿದೆ. ಕರಾವಳಿ ಭಾಗದಲ್ಲಿ ದಟ್ಟ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು, ತೀಕ್ಷ್ಣ ಮಿಂಚು ಹಾಗೂ ಬಿರುಗಾಳಿ ಸಹಿತ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ತಂಪಾದ ಪ್ರದೇಶವಾದ ಮಡಿಕೇರಿಯಲ್ಲಿ ಇಂದು ಗರಿಷ್ಠ ತಾಪಮಾನ 29°C ಮತ್ತು ಕನಿಷ್ಠ ತಾಪಮಾನ 22°C ಇರಲಿದೆ. ಜಿಲ್ಲೆಯಾದ್ಯಂತ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಗರಿಷ್ಠ ತಾಪಮಾನ 33°C ಹಾಗೂ ಕನಿಷ್ಠ ತಾಪಮಾನ 24°C ದಾಖಲಾಗುವ ನಿರೀಕ್ಷೆಯಿದೆ. ಮಧ್ಯಾಹ್ನದ ನಂತರ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಲಿದ್ದು, ಗಾಳಿಯ ರಭಸದೊಂದಿಗೆ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಪ್ರೀ-ಮಾನ್ಸೂನ್ (ಮುಂಗಾರು ಪೂರ್ವ) ಮಳೆಯಾಗಲಿದೆ. ಒಟ್ಟಾರೆಯಾಗಿ ಈ ಎಲ್ಲಾ ಜಿಲ್ಲೆಗಳಲ್ಲಿ ತಾಪಮಾನವು ಕೊಂಚ ತಂಪಾಗಿದ್ದು, ಗಾಳಿಯ ತೀವ್ರತೆ ಹೆಚ್ಚಿರಲಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಉಪೇಂದ್ರ ಅಣ್ಣನ ಮಗ ನಿರಂಜನ್ ಸುದಿಂದ್ರ ನಿಶ್ಚಿತಾರ್ಥ; ಹುಡುಗಿ ಬಗ್ಗೆ ಇಲ್ಲಿದೆ ಮಾಹಿತಿ

Source link

ರೇವತಿ ನಕ್ಷತ್ರಕ್ಕೆ ಶನಿ ಎಂಟ್ರಿ!: ಯಾರಿಗೆ ಕಷ್ಟ, ಯಾರಿಗೆ ಒಲಿಯಲಿದೆ ಅದೃಷ್ಟ? – Kannada News | Daily Devotional: Shanis Entry into Revati Nakshatra and Its Effects on Your Rashi

ಬೆಂಗಳೂರು, ಮೇ.26: ಶನಿ ಭಗವಾನರ ರೇವತಿ ನಕ್ಷತ್ರ ಸಂಚಾರದ ಫಲಗಳನ್ನು ತಿಳಿಸಲಾಗಿದೆ. ಕರ್ಮಕಾರಕ ಹಾಗೂ ನ್ಯಾಯಾಧೀಶರಾದ ಶನಿಯ ಸಂಚಾರವು ಇಡೀ ಬ್ರಹ್ಮಾಂಡಕ್ಕೆ ಮುಖ್ಯವಾಗಿರುತ್ತದೆ. ಪ್ರಸ್ತುತ ಶನಿ ಮೀನ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದು, ಮೇಷ ರಾಶಿಯವರಿಗೆ ಸಾಡೆಸಾತಿ, ಮೀನ ರಾಶಿಯವರಿಗೆ ಗರ್ಭ ಸಾಡೆಸಾತಿ ಹಾಗೂ ಕುಂಭ ರಾಶಿಯವರಿಗೆ ಕಟ್ಟಕಡೆಯ ಸಾಡೆಸಾತಿ ನಡೆಯುತ್ತಿದೆ. ಶನಿ ಭಗವಾನರು 2026ರ ಮೇ 17ರಂದು ರೇವತಿ ನಕ್ಷತ್ರ ಪ್ರವೇಶ ಮಾಡಿದ್ದಾರೆ. ಇದು ಬುಧನ ನಕ್ಷತ್ರವಾಗಿದೆ. ಈ ಸಂಚಾರವು ದ್ವಾದಶ ರಾಶಿಗಳ ಮೇಲೆ ವಿಭಿನ್ನ ಪ್ರಭಾವ ಬೀರುತ್ತದೆ. ಉದಾಹರಣೆಗೆ, ಮೇಷ ರಾಶಿಯವರಿಗೆ ನಿಧಾನ ಗತಿ, ವೃಷಭ ರಾಶಿಯವರಿಗೆ ಅದೃಷ್ಟ, ಮಿಥುನ ರಾಶಿಯವರಿಗೆ ವೃತ್ತಿಯಲ್ಲಿ ಪ್ರಗತಿ ಇರುತ್ತದೆ. ಕರ್ಕಾಟಕ ರಾಶಿಯವರಿಗೆ ಆಸ್ತಿ ಸಂಬಂಧಿತ ವಿಷಯಗಳಲ್ಲಿ ಶುಭವಾಗಲಿದ್ದು, ಸಿಂಹ ರಾಶಿಯವರು ಈಗ ಚೇತರಿಕೆ ಕಾಣುತ್ತಾರೆ. ಈ ಎಲ್ಲವೂ ನಂಬಿಕೆಯ ಆಧಾರದ ಮೇಲೆ ಇದ್ದು, ಪ್ರತಿಯೊಬ್ಬರೂ ಧನಾತ್ಮಕ ಚಿಂತನೆಗಳನ್ನು ರೂಢಿಸಿಕೊಳ್ಳುವುದು ಉತ್ತಮ ಎಂದು ಖ್ಯಾತ ಜ್ಯೋತಿಷಿ ಬಸವರಾಜ ಗೂರುಜಿ ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕನ್ನಿಂಗ್​ಹ್ಯಾಮ್ ರಸ್ತೆ To ದೆಹಲಿ, ರೋಚಕವಾಗಿದೆ ಸಿದ್ದರಾಮಯ್ಯ ತಂತ್ರಗಾರಿಕೆ! ಡಿಕೆ ಸಹೋದರರಿಂದ ಕೌಂಟರ್ ಪ್ಲಾನ್ – Kannada News | Karnataka CM Chair Climax: CM Siddaramaiah Ready with Blueprint as DK Shivakumar Plans Counter Strategy

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯImage Credit source: tv9

ಬೆಂಗಳೂರು, ಮೇ 26: ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಕುರಿತಾದ ಆಂತರಿಕ ರಾಜಕೀಯ ಬಿಕ್ಕಟ್ಟು ಈಗ ಅಂತಿಮ ಘಟ್ಟಕ್ಕೆ ತಲುಪಿರುವಂತೆ ಕಾಣಿಸುತ್ತಿದೆ. ಹೈಕಮಾಂಡ್‌ನಿಂದ ದಿಢೀರ್ ಕರೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಇಬ್ಬರೂ ದೆಹಲಿಗೆ ತೆರಳಿದ್ದು, ಇಂದು (ಮೇ 26 ರ ಬುಧವಾರ) ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಮಹತ್ವದ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಿದ್ದರಾಮನಹುಂಡಿಯ ಮಾಸ್ ಲೀಡರ್ ಸಿದ್ದರಾಮಯ್ಯ ಹಾಗೂ ಕನಕಪುರದ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರ ನಡುವಿನ ಈ ‘ಪವರ್ ಫೈಟ್’ಗೆ ದಿಲ್ಲಿ ದರ್ಬಾರ್‌ನಲ್ಲಿ ಕ್ಲೈಮ್ಯಾಕ್ಸ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಹೈಕಮಾಂಡ್ ಸಭೆಯ ಅಜೆಂಡಾ ಎದುರಿಸಲು ಇಬ್ಬರೂ ನಾಯಕರು ತಮ್ಮದೇ ಆದ ಅಸ್ತ್ರಗಳೊಂದಿಗೆ ಸಜ್ಜಾಗಿದ್ದಾರೆ.

ಮುಖ್ಯಾಂಶಗಳು

  • ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿ ಸಿದ್ದರಾಮಯ್ಯ ಸೀಕ್ರೆಟ್ ಪ್ಲ್ಯಾನ್.
  • ಅಧಿಕಾರ ಹಂಚಿಕೆ ಪ್ರಸ್ತಾಪವಾದರೆ ಸಿದ್ದು ಪರ್ಯಾಯ ದಾಳ ಸಿದ್ಧ.
  • ಹೈಕಮಾಂಡ್ ಕರೆ ಬೆನ್ನಲ್ಲೇ ಡಿಕೆ ಸಹೋದರರು ಜಂಟಿ ಸಭೆ ನಡೆಸಿದ್ದು, ಪ್ರತಿ ತಂತ್ರ ರೂಪಿಸಿದ್ದಾರೆ.

ಪ್ರತಿಷ್ಠೆಯ ಕಣವಾದ ದಿಲ್ಲಿ ಸಭೆ: ಹೈಕಮಾಂಡ್‌ಗೆ ಸವಾಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವರ ದಂಡನ್ನೇ ಕಟ್ಟುಕೊಂಡು ದೆಹಲಿಗೆ ತೆರಳುವ ಮೂಲಕ ಪರೋಕ್ಷವಾಗಿ ಶಕ್ತಿ ಪ್ರದರ್ಶನಕ್ಕೆ ಇಳಿದಿದ್ದಾರೆ. ಒಂದು ವೇಳೆ ಹೈಕಮಾಂಡ್ ಮುಖ್ಯಮಂತ್ರಿ ಬದಲಾವಣೆಯ ಒತ್ತಡ ಹೇರಿದರೆ, ಜಿ. ಪರಮೇಶ್ವರ್ ಅವರ ಹೆಸರನ್ನು ಮುಂಚೂಣಿಗೆ ತರುವ ಅಥವಾ ಆಪ್ತರ ಸಲಹೆ ಪಡೆದು ನಿರ್ಧಾರ ಪ್ರಕಟಿಸುವುದಾಗಿ ಹೇಳಿ ಕಾಲಹರಣ ಮಾಡುವ ಸೂತ್ರವನ್ನು ಸಿದ್ದರಾಮಯ್ಯ ಸಿದ್ಧಪಡಿಸಿಕೊಂಡಿದ್ದಾರೆ. ಇದರೊಂದಿಗೆ ಸಂಪುಟ ವಿಸ್ತರಣೆ ಮಾಡದಿದ್ದರೆ ಉಂಟಾಗಬಹುದಾದ ರಾಜಕೀಯ ನಷ್ಟದ ಬಗ್ಗೆ ವರಿಷ್ಠರಿಗೆ ಮನವರಿಕೆ ಮಾಡಲು ತಯಾರಿ ನಡೆಸಿದ್ದಾರೆ.

ಇನ್ನೊಂದೆಡೆ, ಡಿಕೆ ಶಿವಕುಮಾರ್ ತಮಗೆ ಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಪಟ್ಟು ಹಿಡಿಯಲಿದ್ದಾರೆ. ಮುಂಬರುವ 2028ರ ವಿಧಾನಸಭೆ ಮತ್ತು 2029ರ ಲೋಕಸಭೆ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತಮ್ಮ ನಾಯಕತ್ವದ ಅನಿವಾರ್ಯತೆ ಹಾಗೂ ಗಾಂಧಿ ಕುಟುಂಬಕ್ಕೆ, ವಿಶೇಷವಾಗಿ ಸೋನಿಯಾ ಗಾಂಧಿ ಅವರಿಗೆ ತಾವು ತೋರಿರುವ ನಿಷ್ಠೆಯ ಭಾವನಾತ್ಮಕ ವಿಷಯಗಳನ್ನು ಮುಂದಿಡಲಿದ್ದಾರೆ. ಕೇವಲ ಸಂಪುಟ ಪುನಾರಚನೆಗೆ ದೆಹಲಿ ಭೇಟಿ ಸೀಮಿತವಾದರೆ ತಮಗೆ ಹಿನ್ನಡೆಯಾಗಲಿದೆ ಎಂಬ ಆತಂಕದಲ್ಲಿರುವ ಡಿಸಿಎಂ, ಮೊದಲು ನಾಯಕತ್ವದ ಗೊಂದಲ ನಿವಾರಣೆಗೆ ಹಠ ಹಿಡಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ಸಿದ್ದರಾಮಯ್ಯ ದೆಹಲಿ ಭೇಟಿ ಹಿಂದೆಯೇ ಸತೀಶ್ ಜಾರಕಿಹೊಳಿ ಸೇರಿ 7 ಮಂದಿ ಸಚಿವರ ಪಟಲಾಂ ರಾಜಧಾನಿಗೆ ದೌಡು!

ಒಟ್ಟಿನಲ್ಲಿ, ಇಬ್ಬರು ಮಹಾ ನಾಯಕರ ಹಿತಾಸಕ್ತಿ ಕಾಯ್ದು ಪಕ್ಷವನ್ನು ಮುನ್ನಡೆಸುವುದು ಈಗ ಎಐಸಿಸಿ ನಾಯಕತ್ವಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಇಂದು ಹನುಮನಿಗೆ ಬೆಲ್ಲದ ದೀಪ ಹಚ್ಚಿದರೆ ಈ ರಾಶಿಯವರಿಗೆ ಭರ್ಜರಿ ಅದೃಷ್ಟ!: ಕುಜದೋಷ ನಿವಾರಣೆಗೆ ಇಂದು ಅತ್ಯಂತ ಶುಭ ದಿನ! – Kannada News | Zodiac Sign Effects on 26 May 2026: Comprehensive Daily Horoscope by Dr. Basavaraj Guruji

ಬೆಂಗಳೂರು, ಮೇ.26: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 26 ಮೇ 2026 ರ ಮಂಗಳವಾರದ ದ್ವಾದಶ ರಾಶಿಗಳ ದೈನಿಕ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ ದಶಮಿ, ಉತ್ತರಾ ನಕ್ಷತ್ರ, ಸಿದ್ಧಿ ಯೋಗ ಮತ್ತು ಗರಜ ಕರಣ ಇರುತ್ತದೆ. ರವಿ ವೃಷಭ ರಾಶಿಯಲ್ಲಿ ಹಾಗೂ ಚಂದ್ರ ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ರಾಹುಕಾಲ ಮಧ್ಯಾಹ್ನ 3:26 ರಿಂದ 5:02 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ (ಶುಭಕಾಲ) ಮಧ್ಯಾಹ್ನ 12:16 ರಿಂದ 1:52 ರವರೆಗೆ ಇದೆ. ಇಂದು ಮಂಗಳವಾರವಾದ್ದರಿಂದ ಸುಬ್ರಹ್ಮಣ್ಯನ ಕೃಪೆಗೆ ಪಾತ್ರರಾಗಲು ಹಾಗೂ ಕುಜದೋಷ ನಿವಾರಣೆಗೆ ಪೂಜೆ ಸಲ್ಲಿಸಲು ಸೂಕ್ತ ದಿನ. ಹನುಮನಿಗೆ ಬೆಲ್ಲದ ದೀಪ ಹಚ್ಚುವುದರಿಂದ ಶುಭ ಫಲಗಳು ದೊರೆಯುತ್ತವೆ. ಈ ರಾಶಿ ಭವಿಷ್ಯದಲ್ಲಿ ಪ್ರತಿಯೊಂದು ರಾಶಿಯವರಿಗೆ ಆರ್ಥಿಕ, ಕೌಟುಂಬಿಕ, ವೈವಾಹಿಕ, ಉದ್ಯೋಗ ಮತ್ತು ಆರೋಗ್ಯ ಸಂಬಂಧಿತ ಫಲಿತಾಂಶಗಳನ್ನು ವಿವರಿಸಲಾಗಿದೆ. ಅಲ್ಲದೆ, ಪ್ರತಿಯೊಂದು ರಾಶಿಗೆ ನಿರ್ದಿಷ್ಟ ಅದೃಷ್ಟ ಸಂಖ್ಯೆ, ಶುಭ ಬಣ್ಣ, ಶುಭ ದಿಕ್ಕು ಮತ್ತು ಪಠಿಸಬೇಕಾದ ಮಂತ್ರಗಳ ಬಗ್ಗೆಯೂ ಮಾಹಿತಿ ಒದಗಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಮಾತಿಗೆ ಬೆಲೆ ಕೊಡಬೇಕೆಂದು ಬಯಸುವರು – Kannada News | May 26 Horoscope: Daily Predictions for All Zodiac Signs Love, Career, Finance

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ದಶಮೀ ತಿಥಿಯ ಮಂಗಳವಾರದಂದು ಹಣವಿಲ್ಲದೇ ಹಗುರ, ಕೋಪದಿಂದ‌ ಮನಸ್ತಾಪ, ಯಶಸ್ಸಿನಿಂದ ಅಭಿಮಾನ, ಪ್ರೀತಿಯ ಕಾಳಜಿ, ವಿರೋಧಿಗಳಿಗೆ ಮಿತ್ರರ ಸಹಾಯ ಎಲ್ಲವೂ ಈ ದಿನದ ವಿಶೇಷ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ದಶಮೀ, ನಿತ್ಯನಕ್ಷತ್ರ : ಹಸ್ತಾ, ಯೋಗ : ಹರ್ಷಣ, ಕರಣ : ವಣಿಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:34 – 17:10, ಯಮಗಂಡ ಕಾಲ 09:09 – 10:45, ಗುಳಿಕ ಕಾಲ 12:22 – 13:58

ಮೇಷ ರಾಶಿ :

ಅತ್ಯಂತ ಶ್ರಮವಹಿಸಿ ಕಾರ್ಯವನ್ನು ಮಾಡಲಿದ್ದೀರಿ. ಸ್ನೇಹಿತರ ಸಹಾಯವೂ ದೊರೆಯಲಿದೆ. ದಾಂಪತ್ಯದಲ್ಲಿ ಪರಸ್ಪರ ಮನಸ್ತಾಪವೆದ್ದು ತಣ್ಣಗಾಗಲಿದೆ. ಮಾತಮಾಡುವಿದೇ ಸಾಧನೆಯೆಂದುಕೊಳ್ಳುವುದು ಬೇಡ. ನಾಚಿಕೆಯನ್ನು ಬಿಟ್ಟು ಕೇಳಿದರೆ ನಿಮಗೆ ಬೇಕಾದ ವಸ್ತುಗಳು ಸಿಗಬಹುದು.‌ ಯಾರ ಮೇಲಿರುವ ಬೇಸರವನ್ನು ಮತ್ಯಾರದೋ ಮೇಲೆ ತೋರಿಸಿ ನಿಮ್ಮವರ ದ್ವೇಷಕ್ಕೆ ಕಾರಣವಾಗಬೇಡಿ. ನೀವು ಇಂದು ಅಸಹಾಯಕರಂತೆ ತೋರುವಿರಿ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು.

ವೃಷಭ ರಾಶಿ :

ಇಂದು ನಿಮ್ಮ ಮಾತು ಎಲ್ಲರಿಗೂ ಪ್ರಿಯವಾದುದು. ಅಚಾತುರ್ಯದಿಂದ ಅನಾಹುತ ಮಾಡಿಕೊಳ್ಳುವಿರಿ. ಆಲಸ್ಯದಿಂದ ಮೇಲೆಳಬೇಕಾದ ಸ್ಥಿತಿ ಇದೆ. ನಿಮ್ಮ ಪ್ರತಿಭೆಯ ಅನಾವರಣಕ್ಕೆ ಸಕಾಲವಾಗಿದೆ. ನಿಮ್ಮವರನ್ನು ಬಂಧಿಸಿಡುವ ಕೆಲಸಕ್ಕೆ ಹೋಗಬೇಡಿ. ಪ್ರೀತಿಯಿಂದ ಕೊಟ್ಟ ಉಡುಗೊರೆಯನ್ನು ಸ್ವೀಕರಿಸುವಿರಿ. ನಿಮ್ಮ ಸಹಕಾರದ ಗುಣವು ಎಲ್ಲರಿಗೂ ಮೆಚ್ಚುಗೆಯಾಗುವುದು. ಒಂದೇ ವಿಚಾರವನ್ನು ಮನನ‌ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ.

ಮಿಥುನ ರಾಶಿ :

ಆಪ್ತರು ನಿಮಗೆ ಒದಗುವ ಸಂಕಟದಲ್ಲಿ ಜೊತೆಯಾಗುವರು. ಧೈರ್ಯದಿಂದ ನೀವು ಇರಬಹುದು. ತಂತ್ರಜ್ಞರಿಗೆ ಉತ್ತಮ ಕೆಲಸ ಸಿಗಲಿದೆ ಅಥವಾ ಈಗಾಗಲೇ ಕೆಲಸ ಮಾಡುತ್ತಿದ್ದರೆ ಬಡ್ತಿ ಸಿಗಲಿದೆ. ಹೊಸದಾದ ವಾಹನವನ್ನು ಖರೀದಿ ಮಾಡಲಿದ್ದೀರಿ. ಸಾಲದ ಹೊರೆಯನ್ನು ಕಂಡು ಚಿಂತೆಗೆ ಒಳಗಾಗಬೇಕಾಗಬಹುದು. ಇಂದು ಒಂದೇ ಕೆಲಸದಿಂದ ಎರಡು ಪ್ರಯೋಜನವನ್ನು ಪಡೆಯುವಿರಿ. ಭೂಮಿಯ ವ್ಯವಹಾರವು ಸುಲಭಕ್ಕೆ ಕೈ ಹಿಡಿಯದು. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು.

ಕರ್ಕಾಟಕ ರಾಶಿ :

ಉದ್ಯೋಗದ ಸ್ಥಳದಿಂದ ನಿಮ್ಮನ್ನು ಕೈ ಬಿಡವ ಸಾಧ್ಯತೆ ಇದೆ. ನಿರಾಸೆಯು ಮೂಡಲಿದೆ. ಸರ್ಕಾರದ ಉದ್ಯೋಗ ಗಗನ‌ ಕುಸಿಮದಂತೆ ಆಗಬಹುದು. ವ್ಯಾಪರವು ಅಧೋಗತಿಗೆ ಹೋಗಲಿದೆ. ಶತ್ರುಗಳ ಪಿತೂರಿಯ ಕುರಿತು ನಿಮಗೆ ಶಂಕೆ ಉಂಟಾಗಲಿದೆ. ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಕುರಿತು ಆತಂಕವಿರಬಹುದು. ನಿಮ್ಮರನ್ನು ನೀವು ಕಳೆದುಕೊಳ್ಳುವ ಭೀತಿಯು ಇರುವುದು. ಆಲಸ್ಯದಿಂದ ನಿಮ್ಮ ಅನೇಕ ಕಾರ್ಯಗಳು ಹಿಂದುಳಿಯಬಹುದು.

ಸಿಂಹ ರಾಶಿ :

ಯಾರದೋ ಅದೃಷ್ಟ ನಿಮಗೆ ದುರದೃಷ್ಟಕರವೆನಿಸಬಹುದು. ಖರ್ಚನ್ನು ನಿಯಂತ್ರಿಸುವುದಕ್ಕಾಗಿ ನಿಮ್ಮ ಅವಶ್ಯಕತೆಗಳನ್ನು ಸದ್ಯ ನಿಲ್ಲಿಸುವಿರಿ. ಕ್ರೀಡೆಯಲ್ಲಿ ಮನಸ್ಸು ಇಡುವಿರಿ. ಓಡಾಟದ ಸುಸ್ತು ನಿಮಗೆ ಅನಾರೋಗ್ಯವಾಗಲಿದೆ. ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ಇದು ನಿಮಗೆ ಇಂದಿನ ಅಚ್ಚರಿಯ ವಿಚಾರವೇ ಆಗಲಿದೆ. ನಿಮ್ಮ ಮನಸ್ಸಿಗೆ ಹಿತವಾದುದನ್ನು ಮಾತ್ರ ಮಾಡುವಿರಿ. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ.

ಕನ್ಯಾ ರಾಶಿ :

ಇಂದಿನ ಅತಿಯಾದ ಸಂತೋಷ ದುಃಖಕ್ಕೂ ಕಾರಣವಾಗಬಹುದು. ಯಂತ್ರೋಪಕರಣದ ಮಾರಾಟಗಾರಿಗೆ ಲಾಭವು ಆಗುವುದು. ಶಿಕ್ಷಕರು ತಮ್ಮ ವೃತ್ತಿಯಲ್ಲಿ ಕೀರ್ತಿಯನ್ನು ಗಳಿಸುವರು. ನಿಮಗೆ ಅಪಮಾನವಾಗುವ ಕೆಲಸವು ನಡೆಯಬಹುದು. ಸ್ತ್ರೀಸಂಬಂಧವಾದ ಅಪವಾದಗಳು ಬರಬಹುದು. ಮಾನಸಿಕ ಕಿರುಕುಳವನ್ನು ಅನ್ಯರಿಂದ ಅನುಭವಿಸುವಿರಿ. ಇಂದಿನ ನಿಮ್ಮ ಮಾರಾಟದಿಂದ ಅಧಿಕಲಾಭವೂ ಆಗದು.

ತುಲಾ ರಾಶಿ :

ಇಂದು ಇಷ್ಟು ದಿನ ನಂಬಿ ಬಂದಿದ್ದ ಆಸ್ತಿಯು ಕೈ ತಪ್ಪುವ ಸಾಧ್ಯತೆ ಇದೆ. ಸಹನೆಯನ್ನು ಕಳೆದುಕೊಳ್ಳುವ ಸಂದರ್ಭದಲ್ಲಿ ನಿಮಗೆ ಎಚ್ಚರಿಕೆ ಇರಲಿ. ಸರ್ಕಾರಿ ಕಾರ್ಯಗಳು ಹಿಂದೆ ಬೀಳಲಿವೆ. ಅನಿವಾರ್ಯವಾಗಿ ಮಾಡಿದ ಸಣ್ಣ ಸಾಲವು ಇಂದು ದೊಡ್ಡದಾಗಿದೆ. ಇನ್ನೂ ಸಾಲಕ್ಕೆಂದು ಇನ್ನೊಬ್ಬರ ಬಳಿ ಕೈ ಚಾಚ ಬೇಕಾಗಬಹುದು.‌ ಮನೋಬಲವನ್ನು ಹೆಚ್ಚಿಸಿಕೊಳ್ಳಲು ಬೇಕಾದ ಕ್ರಮಗಳನ್ನು ಇಟ್ಟುಕೊಳ್ಳಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಬೇಕು ಎಂದು ಅನ್ನಿಸುವುದು. ಹವ್ಯಾಸಗಳು ನಿಮಗೆ ಪ್ರಯೋಜನವನ್ನು ಕೊಡುತ್ತದೆ.

ವೃಶ್ಚಿಕ ರಾಶಿ :

ನಿಮ್ಮ ಮಕ್ಕಳ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳಿ. ಈಗಿರುವ ಕೆಲಸವನ್ನು ಬಿಟ್ಟು ಸ್ವಂತ ಉದ್ಯೋಗಕ್ಕೆ ತೊಡಗಬಹುದು. ಸಂತೋಷವಾಗಿರಲು ಬೇಕಾದಂತೆ ನಿಮ್ಮ ಶ್ರಮವನ್ನು ಇಟ್ಟುಕೊಳ್ಳಿ.‌ ಬಂಧುಗಳ ಭೇಟಿ ಸ್ವಲ್ಪ ಕಿರಿಕಿರಿ ಎನಿಸಿದರೂ ಅನಿವಾರ್ಯವಾಗಿ ಸುಮ್ಮನಿರುವಿರಿ. ಮನಸ್ಸಿಗೆ ಬುದ್ಧಿಗೆ ಕೆಲಸವನ್ನು ಕೊಡಬೇಡಿ. ಧನಾಗಮನದ ವಾರ್ತೆಯು ಇರಲಿದೆ. ಮರಗೆಲಸದವರಿಗೆ ಉತ್ತಮ ಕೆಲಸಗಳು ಸಿಗಲಿವೆ. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ.

ಧನು ರಾಶಿ :

ಇಂದು ನೀವು ಮಾಡಲೇಬೇಕಾದ ಕೆಲಸವನ್ನು ಮಾಡದೇ ಆಲಸ್ಯದಿಂದ ಕಳೆಯುವಿರಿ. ಆಸ್ತಿಯ ವಿಚಾರದಲ್ಲಿ ನಿಮಗೆ ಅಕ್ಕಪಕ್ಕದವರ ಜೊತೆ ಅಸಮಾಧಾನ ವ್ಯಕ್ತವಾಗುವುದು. ಪ್ರಾಣಿಗಳ ಜೊತೆ ಸಮಯವನ್ನು ಕಳೆಯುವ ಮನಸ್ಸು ಮಾಡುವಿರಿ. ಊರಿನ ಉತ್ಸವದಲ್ಲಿ ಭಾಗಿಯಾಗುವಿರಿ. ರಾಜಕೀಯ ವ್ಯಕ್ತಿಗಳಾಗಿದ್ದರೆ ಇಂದು ಜನಸೇವೆಯನ್ನು ಮಾಡುವಿರಿ. ವಾಹನವನ್ನು ಚಾಲಾಯಿಸುವಾಗ ಅನೇಕ ಸಕಾರಾತ್ಮಕ ಯೋಚನೆಗಳು ಇರಲಿ. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗೊಂದಲಗಳು ಬರುವುದು.

ಮಕರ ರಾಶಿ :

ಇಂದು ಕುಟುಂಬದವರ ಮಾತಿನ ಅಲಕ್ಷ್ಯದಿಂದ ತೊಂದರೆಯಾದಂತೆ ಅನ್ನಿಸುವುದು. ಹಿರಿಯರಿಗೆ ತೊಂದರೆಯನ್ನು ಕೊಡಲು ಹೋಗಬೇಡಿ. ಯಶಸ್ಸು ನಿಮಗೆ ಬೇಡವೆಂದೆನಿಸಬಹುದು. ಯಾರ ಜೊತೆಗೂ ಇರಲು ನೀವು ಇಷ್ಟಪಡುವುದಿಲ್ಲ. ನಿದ್ರೆಯಲ್ಲಿ‌ ಬಿದ್ದ ದುಶಸ್ವಪ್ನವು ನಿಮ್ಮನ್ನು ಚಿಂತೆಗೆ ತಳ್ಳುವುದು. ಅನವಶ್ಯಕವಾಗಿ ಚಿಂತನೆಯಿಂದ ನಿಮ್ಮ ಆತ್ಮವಿಶ್ವಾಸವನ್ನು ನೀವೇ ಹಾಳುಮಾಡಿಕೊಳ್ಳುವಿರಿ. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು.

ಕುಂಭ ರಾಶಿ :

ಇಂದು ನಿಮ್ಮ ಅಧಿಕವಾದ ಮಾತು ಕೇಳುವವರಿಗೆ ಹಿಂಸೆ ಕೊಡುವುದು. ಆಪ್ತರ ಜೊತೆ ಮಾತುಕತೆಗಳು ಆಗಬಹುದು. ಮನಸ್ಸಿಗೆ ಹಿತವಾದ ಕೆಲಸವನ್ನು ಮಾಡಿ. ಇಲ್ಲವಾದರೆ ಕೊರಗಬೇಕಾದೀತು. ಉತ್ತಮ ಆಹಾರವನ್ನು ಸೇವಸಲಿದ್ದೀರಿ. ಅಹಿತಕರವಾದ ಘಟನೆಯು ನಿಮ್ಮನ್ನು ಸ್ತಬ್ಧಗೊಳಿಸಬಹುದು. ಯಾವುದೇ ಪ್ರಭಾವಕ್ಕೆ ಒಳಗಾಗದೆ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ. ಭೂ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯಲಿದೆ. ಚರಾಸ್ತಿಯನ್ನು ಮಾರಾಟ ಮಾಡಿ ಹಣ ಸಿಗುವುದು.

ಇದನ್ನೂ ಓದಿ: ಉದ್ಯೋಗ ಭವಿಷ್ಯ: ಈ ವಾರ ಬಾಸ್‌ನಿಂದ ಮೆಚ್ಚುಗೆಯೋ ಅಥವಾ ಕೆಲಸದಲ್ಲಿ ಕಿರಿಕಿರಿಯೋ?: ಕೆರಿಯರ್ ಗ್ರಹಗತಿಯಲ್ಲಿ ಮಹತ್ವದ ಬದಲಾವಣೆ

ಮೀನ ರಾಶಿ :

ಕಡಿಮೆ ವೆಚ್ಚದಲ್ಲಿ ಹೆಚ್ಚು ಸಂಪಾದಿಸುವ ಯೋಜನೆಯನ್ನು ಹಾಕಿಕೊಳ್ಳುವುದಕ್ಕೆ ಎಲ್ಲಿಂದಲಾದರೂ ನಿಮಗೆ ಐಡಿಯಾ ಸಿಗಬಹುದು. ತಂದೆಯ ಜೊತೆ ವಿವಾದ ಮಾಡಿಕೊಳ್ಳುವಿರಿ. ಹಿರಿಯರ ಹಾರೈಕೆ ನಿಮಗೆ ಸಿಗಲಿದೆ. ಕಛೇರಿಯ ಕೆಲಸಕ್ಕೂ ಸಮಯ ಸಿಗದೇ ಒತ್ತಡದಲ್ಲಿ ಇರುವಿರಿ. ಕಲಹವಾಗಿ ಸಂಗಾತಿಯಿಂದ ದೂರವಿರಬೇಕಾದೀತು. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಸಾವಾಗಲಿದೆ. ಪ್ರೀತಿಪಾತ್ರರಿಗೆ ಸಮಯ ವ್ಯರ್ಥ ಮಾಡುವಿರಿ. ಪ್ರೇಮವು ಯಾರಿಂದಲೋ ಬಹಿರಂಗವಾಗುವುದು.

-ಲೋಹಿತ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

CM ವಿಜಯ್‌ ಗೆ ಮೊದಲ ಶಾಕ್:ಮೇಕೆದಾಟುಗೆ ಅಡ್ಡಗಾಲು ಹಾಕಲು ಮುಂದಾದ ತಮಿಳುನಾಡಿಗೆ ಹಿನ್ನಡೆ – Kannada News | Supreme Court dismisses review petition by Tamil Nadu govt against Karnataka Mekedatu project

ನವದೆಹಲಿ, (ಮೇ 25): ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು  ಯೋಜನೆಗೆ (mekedatu project) ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡು (Tamil Nadu) ಮುಖ್ಯಮಂತ್ರಿ ಜೋಸೆಫ್‌ ವಿಜಯ್‌ (Vijay) ಸುಪ್ರೀಂಕೋರ್ಟ್ (Supreme court)  ಶಾಕ್ ಕೊಟ್ಟಿದೆ. ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರುದ್ಧದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ 2025ರ ತೀರ್ಪನ್ನು ಮರುಪರಿಶೀಲನೆಗೆ ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರೊಂದಿಗೆ ಕರ್ನಾಟಕದ ವಿರುದ್ಧ ಹೆಜ್ಜೆ ಇಟ್ಟಿದ್ದ ತಮಿಳುನಾಡು ಸಿಎಂ ವಿಜಯ್​​ಗೆ ಮೊದಲ ಶಾಕ್ ಇದಾಗಿದೆ.

ಮುಖ್ಯಾಂಶಗಳು

  • ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು ವಿಚಾರ
  • ಸುಪ್ರೀಂಕೋರ್ಟ್​ನಲ್ಲಿ ತಮಿಳುನಾಡು ಸರ್ಕಾರಕ್ಕೆ ಮತ್ತೆ ಹಿನ್ನಡೆ
  • ತಮಿಳುನಾಡು ಸಲ್ಲಿಸಿದ್ದ ತೀರ್ಪು ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ‘ಸುಪ್ರೀಂ’
  • ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
  • ಮೇಕೆದಾಟು ಯೋಜನೆ ಬಗ್ಗೆ 2025ರ ನವೆಂಬರ್​ನಲ್ಲಿ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್​

ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಯೋಜನೆಗೆ ತಡೆ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ 2025 ನವೆಂಬರ್​​ ನಲ್ಲಿ ವಜಾಗೊಳಿಸಿತ್ತು. ಆದ್ರೆ, ಇದೀಗ ಈ ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜಾಯ್ ಮಾಲ್ಯ ಬಾಗ್ಚಿ, ವಿಪುಲ್ ಎಂ. ಪಂಚೋಲಿ ಅವರಿದ್ದ ಪೀಠ ವಜಾ ಮಾಡಿ ಆದೇಶ ಹೊರಡಿಸಿದೆ. ಮರು ಪರಿಶೀಲನಾ ಅರ್ಜಿಯ ವಿಷಯಗಳು ಮತ್ತು ಅದರೊಂದಿಗೆ ಲಗತ್ತಿಸಲಾದ ದಾಖಲೆಗಳನ್ನು ನಾವು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ತೀರ್ಪಿನ ಪುನರ್ ಪರಿಶೀಲನೆ ಅಗತ್ಯ ಇಲ್ಲ ಎಂದು ಪೀಠ ತಿಳಿಸಿದೆ.

ಇದನ್ನೂ ಓದಿ: ಮೇಕೆದಾಟು ಯೋಜನೆ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್​​ನಲ್ಲಿ ಗೆಲುವು, ತಮಿಳುನಾಡಿನ ಅರ್ಜಿ ವಜಾ

2025ರಲ್ಲೇ ಮಧ್ಯಪ್ರವೇಶ ಮಾಡಲ್ಲ ಎಂದಿದ್ದ ಸುಪ್ರೀಂ

ಮೇಕೆದಾಟು ಯೋಜನೆಯ ಪ್ರಸ್ತಾವನೆಯು ಇನ್ನೂ ತಜ್ಞ ಸಂಸ್ಥೆಗಳ ಪರಿಶೀಲನಾ ಹಂತದಲ್ಲಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ) ಸೇರಿದಂತೆ ಹಲವಾರು ಸಮಿತಿಗಳು ಇದರ ಬಗ್ಗೆ ಚರ್ಚೆ ನಡೆಸುತ್ತಿವೆ. ಹೀಗಾಗಿ, ಈ ಹಂತದಲ್ಲಿ ನ್ಯಾಯಾಲಯವು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು 2025ರಲ್ಲೇ ಸುಪ್ರೀಂಕೋರ್ಟ್ ಹೇಳಿತ್ತು.

ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕಿದ್ದ ವಿಜಯ್


ಕರ್ನಾಟಕ ಸರ್ಕಾರವು ಮೇಕೆದಾಟು ಯೋಜನೆಗಾಗಿ ಶೀಘ್ರದಲ್ಲೇ ‘ಭೂಮಿ ಪೂಜೆ’ ನೆರವೇರಿಸಲು ಸಿದ್ಧತೆ ನಡೆಸುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿಜಯ್ ಈ ತುರ್ತು ಸಭೆ ಕರೆದಿದ್ದು, ಕರ್ನಾಟಕವು ಮೇಕೆದಾಟು ಅಣೆಕಟ್ಟು ನಿರ್ಮಿಸುವುದನ್ನು ತಡೆಯಲು ಮತ್ತು ತಮಿಳುನಾಡಿನ ಕಾವೇರಿ ನೀರಿನ ಹಕ್ಕನ್ನು ರಕ್ಷಿಸಲು ಕಾನೂನು ಹೋರಾಟವನ್ನು ತೀವ್ರಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು ಎನ್ನಲಾಗಿದೆ. ಇದರ ಮಧ್ಯೆ ಇದೀಗ ಸುಪ್ರೀಂಕೋರ್ಟ್ ಶಾಕ್ ಕೊಟ್ಟಿದೆ.

Source link

ನಮ್ಮ ಮೆಟ್ರೋ ಬ್ಲೂ ಲೈನ್ ನಿರ್ವಹಣೆಯನ್ನು ಖಾಸಗಿ ಕಂಪನಿಗೆ ನೀಡಲು ಪ್ಲಾನ್! – Kannada News | BMRCL Plans to Hand Over Namma Metro Blue Line Operations to Private Company

ನಮ್ಮ ಮೆಟ್ರೋ ಬ್ಲೂ ಲೈನ್ (ಎಐ ಚಿತ್ರ)Image Credit source: tv9 kannada

ಬೆಂಗಳೂರು, ಮೇ 25: ಬ್ಲೂ ಲೈನ್ ಸಿಲಿಕಾನ್ ಸಿಟಿ ಬೆಂಗಳೂರಿನ ಬಹುನಿರೀಕ್ಷಿತ ಮೆಟ್ರೋ (Namma Metro) ಮಾರ್ಗ. ಈ ವರ್ಷ ಡಿಸೆಂಬರ್​ನಲ್ಲಿ ಓಪನ್ ಮಾಡಲು ಬಿಎಂಆರ್​​ಸಿಎಲ್ (BMRCL)​​ ಸಿದ್ಧತೆ ಮಾಡಿಕೊಳ್ಳುತ್ತಿದೆ. ಆದರೆ ಈ ಮಾರ್ಗದ ನಿರ್ವಹಣೆಯನ್ನು ಖಾಸಗಿ ಅವರಿಗೆ ಟೆಂಡರ್ ನೀಡಲು ಪ್ಲ್ಯಾನ್​ ಮಾಡಿದ್ದು, ಇದಕ್ಕೆ ಮೆಟ್ರೋ ಪ್ರಯಾಣಿಕರು ವಿರೋಧ ವ್ಯಕ್ತಪಡಿಸಿದ್ದು, ಹೋರಾಟದ ಎಚ್ಚರಿಕೆ ಕೂಡ ನೀಡಿದ್ದಾರೆ.

ಮುಖ್ಯಾಂಶಗಳು

  • ಬ್ಲೂ ಲೈನ್ ಮಾರ್ಗದ ಸಂಪೂರ್ಣ ನಿರ್ವಹಣೆ ಖಾಸಗಿಗೆ ನೀಡಲು ಬಿಎಂಆರ್ಸಿಎಲ್ ಸಿದ್ಧತೆ
  • ಮೊದಲ ಬಾರಿಗೆ ಇಂತಹ ಒಪ್ಪಂದ
  • ನಮ್ಮ ಮೆಟ್ರೋ ಪ್ರಯಾಣಿಕರು ತೀವ್ರ ಗರಂ: ಹೋರಾಟದ ಎಚ್ಚರಿಕೆ

ಬರೋಬ್ಬರಿ 14,788 ಕೋಟಿ ರೂ ವೆಚ್ಚ

ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್. ಪುರಂ ಮೂಲಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಈ ಬ್ಲೂ ಲೈನ್ ಮೆಟ್ರೋ ಮಾರ್ಗವು ಬರೋಬ್ಬರಿ 58.19 ಕಿ.ಮೀ ಉದ್ದವಿದ್ದು, ಒಟ್ಟು 30 ನಿಲ್ದಾಣಗಳನ್ನು ಒಳಗೊಂಡಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್​​ನಿಂದ ಕೆ.ಆರ್ ಪುರ 19.75 ಕಿಮೀ ಮಾರ್ಗದಲ್ಲಿ 13 ಸ್ಟೇಷನ್​​ಗಳು. ಕೆ.ಆರ್ ಪುರ ಟು ಏರ್ಪೋರ್ಟ್ 38.44 ಕಿಮೀ ಮಾರ್ಗದಲ್ಲಿ 17 ಮೆಟ್ರೋ ಸ್ಟೇಷನ್ ಗಳಿರಲಿವೆ. ನೀಲಿ ಮಾರ್ಗವನ್ನು ಬರೋಬ್ಬರಿ 14,788 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಏರ್ಪೋರ್ಟ್​ ಟು ಸಿಲ್ಕ್ ಬೋರ್ಡ್ ನೀಲಿ ಮೆಟ್ರೋ ಮಾರ್ಗದ ನಿರ್ವಹಣೆ ಖಾಸಗಿಯವರಿಗೆ ನೀಡಲು ಬಿಎಂಆರ್​​ಸಿಎಲ್​​ ಟೆಂಡರ್ ಕರೆಯಲು ಮುಂದಾಗಿದೆ.

ಬಿಎಂಆರ್​​ಸಿಎಲ್​ ಮುಖ್ಯ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್ ಹೇಳಿದ್ದಿಷ್ಟು

ಈ ಬಗ್ಗೆ ಮಾತನಾಡಿದ ಬಿಎಂಆರ್​​ಸಿಎಲ್​ ಮುಖ್ಯ ಸಂಪರ್ಕಾಧಿಕಾರಿ ಯಶ್ವಂತ್ ಚೌವ್ಹಾಣ್, ಈಗಾಗಲೇ ನಾವು ಬೇರೆ ಮಾರ್ಗದಲ್ಲಿ, ಹೌಸ್ ಕೀಪಿಂಗ್, ಸೆಕ್ಯೂರಿಟಿಯನ್ನು ಹೊರಗುತ್ತಿಗೆ ಮಾಡಿದ್ದೇವೆ. ಬ್ಲೂ ಲೈನ್ ಮತ್ತು ಮುಂದೆ ಬರುವಂತಹ ಯೋಜನೆಗಳಲ್ಲಿ ದೆಹಲಿ, ಚೆನ್ನೈ ಮೆಟ್ರೋ ಮಾದರಿಯಲ್ಲಿ ಆಪರೇಷನ್ ಅಂಡ್ ಮೆಂಟೆನೆನ್ಸ್, ರೈಲು ಓಡಿಸುವುದು, ಸ್ಟೇಷನ್ ಕಂಟ್ರೋಲರ್, ಸಿಗ್ನಲಿಂಗ್, ಎಲೆಕ್ಟ್ರಿಸಿಟಿ, ಲಿಫ್ಟ್, ಎಸ್ಕೆಲೇಟರ್ ಇದನ್ನು ನಿರ್ವಹಣೆ ಮಾಡಲು ಹೊರಗುತ್ತಿಗೆ ನೀಡಲು ಈಗಾಗಲೇ ಚಿಂತನೆ ಮಾಡಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ದಶಕಗಳ ಕನಸು ನನಸಾಗುವ ಕಾಲ: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯ ಡಿಪಿಆರ್ ಸಲ್ಲಿಕೆ; ಎಲ್ಲೆಲ್ಲಿ ಸ್ಟಾಪ್?

ಒಂದು ವೇಳೆ ಈ ಒಪ್ಪಂದ ಓಕೆ ಆದರೆ ಬಿಎಂಆರ್‌ಸಿಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಂತಹದೊಂದು ಒಪ್ಪಂದ ಆಗಲಿದೆ. ಇನ್ನು ಬಿಎಂಆರ್​​​ಸಿಎಲ್​​ ಸಿಲ್ಕ್ ಬೋರ್ಡ್ ಟು ಏರ್ಪೋರ್ಟ್ ಬ್ಲೂ ಲೈನ್ ಮಾರ್ಗದ ಎಲ್ಲಾ ನಿರ್ವಹಣೆಯನ್ನು ಖಾಸಗಿ ಅವರಿಗೆ ನೀಡಲು ಟೆಂಡರ್ ಕರೆಯಲು ಮುಂದಾಗಿರುವ ನಮ್ಮ ಮೆಟ್ರೋ ವಿರುದ್ಧ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೋರಾಟದ ಎಚ್ಚರಿಕೆ ನೀಡಿದ ಪ್ರಯಾಣಿಕರು

ಈ ಬಗ್ಗೆ ಮಾತನಾಡಿದ ಮೆಟ್ರೋ ಪ್ರಯಾಣಿಕರಾದ ರಾಜು ಎನ್ನುವವರು, ಈಗಾಗಲೇ ದೇಶದಲ್ಲಿ ದುಬಾರಿ ಮೆಟ್ರೋ ಅನ್ನಿಸಿಕೊಂಡಿರುವ ನಮ್ಮ ಮೆಟ್ರೋ ಬೇರೆ ರಾಜ್ಯದ ಮೆಟ್ರೋಗಳಿಗೆ ಹೋಲಿಕೆ ಮಾಡಿದರೆ ತುಂಬಾ ಕ್ಲೀನ್ ಆಗಿದೆ. ಇದೀಗ ಮತ್ತೆ ಬ್ಲೂ ಲೈನ್ ಅನ್ನು ಖಾಸಗಿ ಅವರಿಗೆ ನೀಡ್ತಿರುವುದರಿಂದ ಸ್ವಚ್ಛತೆ ಇರುತ್ತೋ ಇಲ್ಲವೋ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಮೆಟ್ರೋ ಸಂಪೂರ್ಣ ನಿರ್ವಹಣೆಯನ್ನು ಖಾಸಗಿ ಅವರಿಗೆ ಕೊಡಲು ಬಿಡಲ್ಲ, ಒಂದೇ ವೇಳೆ ಕೊಡಲು ಮುಂದಾದರೆ ದೊಡ್ಡಮಟ್ಟದಲ್ಲಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಭಾರಿ ಗಾಳಿ ಮಳೆಯಿಂದ ಅರ್ಧದಲ್ಲೇ ನಿಂತ ಮೆಟ್ರೋ, ಸಂಚಾರದಲ್ಲಿ ವ್ಯತ್ಯಯ

ಒಟ್ಟಿನಲ್ಲಿ ಏರ್ಪೋರ್ಟ್ ಮಾರ್ಗದ ಬ್ಲೂ ಲೈನ್ ಅನ್ನ ಸಂಪೂರ್ಣವಾಗಿ ಖಾಸಗಿ ಅವರಿಗೆ ನೀಡಲು ಬಿಎಂಆರ್​​ಸಿಎಲ್​ ಮುಂದಾಗಿದ್ದು, ಇದಕ್ಕೆ ಮೆಟ್ರೋ ಪ್ರಯಾಣಿಕರು ವಿರೋಧ ವ್ಯಕ್ತಪಡಿಸ್ತಿದ್ದು, ಮುಂದೆ ಬಿಎಂಆರ್​​ಸಿಎಲ್​​ ಈ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ನಿಮ್ಮ ಮನೆಯ ಮಿಕ್ಸರ್ ಸರಿಯಾಗಿ ಕೆಲಸ ಮಾಡುತ್ತಿಲ್ಲವೇ? ಈ ರೀತಿ ಮಾಡಿ ನೋಡಿ – Kannada News | How to Sharpen your Kitchen Mixer Grinder Blades Instantly check this hack

ನವದೆಹಲಿ, ಮೇ 25: ಅಡುಗೆಮನೆಯಲ್ಲಿ ಬಳಸುವ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಮಿಕ್ಸರ್ (Mixer) ಮತ್ತು ಗ್ರೈಂಡರ್‌ಗಳು ಪ್ರಮುಖವಾಗಿವೆ. ಚಟ್ನಿಗಳು, ಮಸಾಲೆಗಳು, ಸಾಂಬಾರ್ ಪುಡಿಗಳಂತಹ ವಿವಿಧ ಆಹಾರ ಪದಾರ್ಥಗಳನ್ನು ಪುಡಿ ಮಾಡಲು ನಾವು ಪ್ರತಿದಿನ ಅವುಗಳನ್ನು ಬಳಸುತ್ತೇವೆ. ಆದರೆ, ನಿರಂತರ ಬಳಕೆಯಿಂದಾಗಿ ಮಿಕ್ಸರ್ ಬ್ಲೇಡ್‌ಗಳು ಕಾಲಾನಂತರದಲ್ಲಿ ಹರಿತ ಕಡಿಮೆಯಾಗುತ್ತವೆ. ಇದರಿಂದಾಗಿ, ನಾವು ಎಷ್ಟೇ ರುಬ್ಬಿದರೂ, ಪದಾರ್ಥಗಳು ನುಣ್ಣಗಾಗುವುದಿಲ್ಲ. ಸಾಮಾನ್ಯವಾಗಿ, ಮಿಕ್ಸರ್ ಜಾರ್ ಹರಿತವಾಗದಿದ್ದರೆ ನಾವೆಲ್ಲರೂ ಅದನ್ನು ಮೆಕ್ಯಾನಿಕ್‌ಗೆ ಕರೆದೊಯ್ಯುತ್ತೇವೆ. ಅಥವಾ ಜಾರ್ ಅನ್ನು ಬದಲಾಯಿಸುತ್ತೇವೆ. ಆದರೆ ಒಂದು ರೂ. ಕೂಡ ಖರ್ಚು ಮಾಡದೆ ಮನೆಯಲ್ಲಿ ಲಭ್ಯವಿರುವ ಒಂದೇ ಒಂದು ಪದಾರ್ಥದಿಂದ ನೀವು ಮತ್ತೆ ಚಾಕುವಿನಂತೆ ಬ್ಲೇಡ್ ಅನ್ನು ಹರಿತಗೊಳಿಸಬಹುದು ಎಂದು ನಿಮಗೆ ತಿಳಿದಿದೆಯೇ?

ಎಲ್ಲರ ಮನೆಯಲ್ಲೂ ಇರುವ ಉಪ್ಪು ಮಿಕ್ಸರ್ ಬ್ಲೇಡ್‌ಗಳನ್ನು ಹರಿತಗೊಳಿಸಲು ಸಹಾಯ ಮಾಡುತ್ತದೆ. ಆದರೆ, ಇದಕ್ಕಾಗಿ ನಾವು ಪ್ರತಿದಿನ ಬಳಸುವ ಮೃದುವಾದ ಉಪ್ಪಿನ ಪುಡಿಯ ಬದಲಿಗೆ ಕಲ್ಲು ಉಪ್ಪನ್ನು ಬಳಸಬೇಕು. ಕಲ್ಲು ಉಪ್ಪು ಅತ್ಯುತ್ತಮ ಸ್ಕ್ರಬ್ಬರ್ ಆಗಿ ಕಾರ್ಯನಿರ್ವಹಿಸುತ್ತದೆ ಮತ್ತು ನೈಸರ್ಗಿಕವಾಗಿ ಬ್ಲೇಡ್‌ಗಳನ್ನು ಹರಿತಗೊಳಿಸುತ್ತದೆ.

ಇದನ್ನೂ ಓದಿ: Pomegranate Juice: ಜ್ಯೂಸರ್, ಮಿಕ್ಸರ್ ಇಲ್ಲದೆಯೂ ದಾಳಿಂಬೆ ರಸವನ್ನು ಸುಲಭವಾಗಿ ತೆಗೆಯಬಹುದು ಹೇಗೆ?

ಮಿಕ್ಸರ್ ಬ್ಲೇಡ್ ಹರಿತಗೊಳಿಸುವುದು ಹೇಗೆ?:

ಹರಿತ ಕಡಿಮೆಯಾಗಿರುವ ಮಿಕ್ಸರ್ ಜಾರ್ ತೆಗೆದುಕೊಳ್ಳಿ. ಆ ಬ್ಲೇಡ್ ಸಂಪೂರ್ಣವಾಗಿ ಮುಳುಗುವವರೆಗೆ ಕಲ್ಲು ಉಪ್ಪನ್ನು ಸೇರಿಸಿ. ಇದಾದ ನಂತರ, ಜಾರ್ ಮುಚ್ಚಳವನ್ನು ಬಿಗಿಯಾಗಿ ಮುಚ್ಚಿ ಮಿಕ್ಸರ್ ಮೇಲೆ ಇರಿಸಿ. ಮಿಕ್ಸರ್ ಅನ್ನು ನಿರಂತರವಾಗಿ ತಿರುಗಿಸದೆ, ಆಗಾಗ ನಿಲ್ಲಿಸುತ್ತಾ ಆನ್ ಮಾಡಬೇಕು. ಮಿಕ್ಸರ್ ಅನ್ನು ಒಂದು ಅಥವಾ 2 ನಿಮಿಷಗಳ ಕಾಲ ಹೆಚ್ಚಿನ ವೇಗದಲ್ಲಿ ಚಲಾಯಿಸಿ. ಇದು ಜಾರ್​​ನೊಳಗಿನ ಉಪ್ಪನ್ನು ಸಂಪೂರ್ಣವಾಗಿ ನಯವಾದ ಪುಡಿಯಾಗಿ ಮಾಡುತ್ತದೆ. ಚಾಕುವಿನಷ್ಟು ಹರಿತವಾಗಿರುವುದಲ್ಲದೆ ಕೊಳಕೆಲ್ಲ ಸ್ವಚ್ಛವಾಗಿದೆ. ಈ ಪ್ರಕ್ರಿಯೆಯಲ್ಲಿ, ಕಲ್ಲು ಉಪ್ಪಿನ ಘರ್ಷಣೆಯಿಂದ ಬ್ಲೇಡ್‌ಗಳು ಚಾಕುವಿನಂತೆ ಹರಿತವಾಗುತ್ತವೆ.

ನಿಮ್ಮ ಮನೆಯಲ್ಲಿ ಕಲ್ಲುಪ್ಪು ಲಭ್ಯವಿಲ್ಲದಿದ್ದರೆ, ಅಲ್ಯೂಮಿನಿಯಂ ಫಾಯಿಲ್ ಅನ್ನು ಕೂಡ ಬಳಸಬಹುದು. ಅಲ್ಯೂಮಿನಿಯಂ ಫಾಯಿಲ್ ಅನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಮಿಕ್ಸಿಂಗ್ ಜಾರ್‌ನಲ್ಲಿ ಹಾಕಿ. ಒಂದು ನಿಮಿಷ ಹೆಚ್ಚಿನ ವೇಗದಲ್ಲಿ ಮಿಕ್ಸ್ ಮಾಡಿ. ಇದು ಜಾರ್​​ನ ಬ್ಲೇಡ್‌ಗಳ ಅಂಚುಗಳನ್ನು ಹರಿತಗೊಳಿಸುತ್ತದೆ.

ಇದನ್ನೂ ಓದಿ: ಗರ್ಭಿಣಿಯರು ಮಿಕ್ಸರ್ ಗ್ರೈಂಡರ್ ಬಳಸೋದು ಅಪಾಯಕಾರಿಯೇ? ಈ ಬಗ್ಗೆ ತಜ್ಞರು ಹೇಳುವುದು ಏನು?

ಬ್ಲೇಡ್‌ಗಳನ್ನು ಹರಿತಗೊಳಿಸಿದ ನಂತರ ಜಾರ್ ಅನ್ನು ಸ್ವಚ್ಛಗೊಳಿಸಲು ಮರೆಯಬೇಡಿ. ಬೆರೆಸಿದ ಉಪ್ಪನ್ನು ಎಸೆಯುವ ಬದಲು, ನೀವು ಅದನ್ನು ಬೇರೆ ಪಾತ್ರೆಯಲ್ಲಿ ಹಾಕಿ ಮರುಬಳಕೆ ಮಾಡಬಹುದು. ಜಾರ್ ನಿಂದ ಉಪ್ಪು ಅಥವಾ ಫಾಯಿಲ್ ತುಂಡುಗಳನ್ನು ತೆಗೆದ ನಂತರ, ಸ್ವಲ್ಪ ನೀರು ಮತ್ತು ಪಾತ್ರೆ ತೊಳೆಯುವ ಜೆಲ್ ಸೇರಿಸಿ ಮಿಕ್ಸರ್ ಅನ್ನು ಒಮ್ಮೆ ಆನ್ ಮಾಡಿ. ಅದರ ನಂತರ, ಜಾರ್ ಅನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆಯಿರಿ. ತೊಳೆದ ತಕ್ಷಣ ಜಾರ್ ಅನ್ನು ತಲೆಕೆಳಗಾಗಿ ಇಡಬೇಕು. ಬ್ಲೇಡ್‌ಗಳು ಒದ್ದೆಯಾಗಿದ್ದರೆ ತುಕ್ಕು ಹಿಡಿಯುವ ಸಾಧ್ಯತೆ ಹೆಚ್ಚಿರುವುದರಿಂದ, ಜಾರ್ ಸಂಪೂರ್ಣವಾಗಿ ಒಣಗಿದ ನಂತರವೇ ಅದನ್ನು ತೆಗೆದಿಡಬೇಕು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link