ಭಾರತದ ವಿರುದ್ಧದ ಸರಣಿ ಆರಂಭಕ್ಕೂ ಮುನ್ನವೇ ನ್ಯೂಝಿಲೆಂಡ್ಗೆ ಆಘಾತ – Kannada News | Michael Bracewell in doubt for India T20Is
ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯು ನಾಳೆಯಿಂದ (ಜ.21) ಶುರುವಾಗಲಿದೆ. ಈ ಸರಣಿ ಆರಂಭಕ್ಕೂ ಮುನ್ನವೇ ಕಿವೀಸ್ ಪಡೆಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಮೈಕೆಲ್ ಬ್ರೇಸ್ವೆಲ್ ಇಡೀ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಇಂದೋರ್ನಲ್ಲಿ ನಡೆದ ಭಾರತದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮೈಕೆಲ್ ಬ್ರೇಸ್ವೆಲ್ ಕಾಲು ನೋವಿಗೆ ಒಳಗಾಗಿ ಮೈದಾನ ತೊರೆದಿದ್ದರು. ಇದೀಗ ಈ ಗಾಯದ ಕಾರಣ ಸಂಪೂರ್ಣ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮೈಕೆಲ್…