ತೈಲ ಬೆಲೆ ಏರಿಕೆ ಬಿಸಿ: ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಮರಳಿದ ರೈತರು; ಟ್ರ್ಯಾಕ್ಟರ್ ಬಿಟ್ಟು ಎತ್ತುಗಳಿಂದ ಉಳುಮೆ – Kannada News | Fuel price hike forces farmers to return to bullock plowing as tractor costs rise
ಎತ್ತುಗಳಿಂದ ಉಳುಮೆ ಮಾಡುತ್ತಿರುವುದು Image Credit source: tv9 kannada ಬೀದರ್, ಮೇ 25: ರಾಜ್ಯದಲ್ಲಿ ತೈಲ ಬೆಲೆ ಏರಿಕೆಯ ಬಿಸಿ (Fuel Price Hike) ಇದೀಗ ನೇರವಾಗಿ ದೇಶದ ಅಣ್ಣದಾತನಿಗೂ ತಟ್ಟಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದಾಗಿ ಕೃಷಿ ಚಟುವಟಿಕೆಗಳ ವೆಚ್ಚ ಗಗನಕ್ಕೇರಿದ್ದು, ರೈತರು ಕಂಗಾಲಾಗಿದ್ದಾರೆ. ಟ್ರ್ಯಾಕ್ಟರ್ ಬಾಡಿಗೆ ದರ ದುಬಾರಿಯಾದ ಹಿನ್ನೆಲೆಯಲ್ಲಿ, ಬೀದರ್ (bidar) ಜಿಲ್ಲೆಯ ರೈತರು ಮತ್ತೆ ಹಳೆಯ ಸಾಂಪ್ರದಾಯಿಕ ಕೃಷಿ ಪದ್ಧತಿಯತ್ತ ಮುಖ ಮಾಡಿದ್ದಾರೆ. ಟ್ರ್ಯಾಕ್ಟರ್ ಬದಲಿಗೆ ಎತ್ತುಗಳನ್ನು ಖರೀದಿಸಿ…