Category Archives: Blog

Your blog category

ತಮ್ಮದೇ ಯುಪಿಐ ಸ್ಕ್ಯಾನರ್ ನೀಡಿ ಹಣ ಜೇಬಿಗಿಳಿಸ್ತಾರೆ ಬಿಎಂಟಿಸಿ ಕೆಲ ಕಂಡಕ್ಟರ್​ಗಳು! ನಿಗಮಕ್ಕೆ ಲಕ್ಷಾಂತರ ರೂ. ನಷ್ಟ – Kannada News | BMTC Conductors Use Personal UPI Scanners to Pocket Cash, Corporation Suffers Huge Loss

ಬೆಂಗಳೂರು, ಜನವರಿ 20: ಬಿಎಂಟಿಸಿ (BMTC) ಬಸ್​​ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ನಿಗಮವು ಯುಪಿಐ ಸ್ಕ್ಯಾನರ್​​ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್​​​ಗಳನ್ನು (UPI Scanner) ನೀಡಿ, ತಮ್ಮ ಬ್ಯಾಂಕ್ ಅಕೌಂಟ್​​ಗೆ ಲಕ್ಷಾಂತರ ರೂಪಾಯಿ ಹಣ ಹಾಕಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕನ್ನಡ ಬಾರದವರಿಗೆ ತಮ್ಮ ಮೊಬೈಲ್ ಯುಪಿಐ ಸ್ಕ್ಯಾನರ್ ನೀಡಿ ಹಣ ಪೀಕಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳಿವೆ.

ತನಿಖೆಯಲ್ಲಿ ಬಯಲಾಯ್ತು ಬಿಎಂಟಿಸಿ ಬಸ್ ಕಂಡಕ್ಟರ್​​ಗಳ ಕಳ್ಳಾಟ

ಇದೀಗ ತನಿಖೆ ವೇಳೆ ಕೂಡ, ಕಂಡಕ್ಟರ್​​ಗಳ ಕಳ್ಳಾಟ ಬಯಲಾಗಿದೆ. ಪ್ರತಿಯೊಬ್ಬರ ಅಕೌಂಟ್​ನಲ್ಲೂ ಸುಮಾರು 50 ಸಾವಿರಕ್ಕೂ ಹೆಚ್ಚು ಹಣ ಪ್ರಯಾಣಿಕರಿಂದ ಹಾಕಿಸಿಕೊಂಡಿರುವುದು ಬಯಲಿಗೆ ಬಂದಿದೆ.

ವಂಚನೆ ಎಸಗಲು ಉಪಯೋಗಿಸುವ ತಂತ್ರ ಇದುವೇ ನೋಡಿ!

ಶಕ್ತಿ ಯೋಜನೆಯ ಉಚಿತ ಟಿಕೆಟ್ ಮೇಲೆ ಕನ್ನಡದಲ್ಲಿ ಮಾತ್ರ ‘ಉಚಿತ ಟಿಕೆಟ್’ ಎಂದು ಪ್ರಿಂಟ್ ಮಾಡಲಾಗಿದೆ. ಇಂಗ್ಲಿಷ್​ನಲ್ಲಿ‘ಫ್ರೀ ಟಿಕೆಟ್’ ಎಂದು ಪ್ರಿಂಟ್ ಮಾಡಿಲ್ಲ. ಇದನ್ನು ಬಂಡವಾಳ ಮಾಡಿಕೊಂಡು ಕನ್ನಡ ಬಾರದ ಉತ್ತರ ಭಾರತದ ಹಾಗೂ ದಕ್ಷಿಣ ಭಾರತದ ಇತರ ರಾಜ್ಯಗಳ ಜನರಿಗೆ ಶಕ್ತಿ ಯೋಜನೆಯ ಟಿಕೆಟ್ ನೀಡುವ ಕಂಡಕ್ಟರ್​​ಗಳು ಅವರಿಂದ ವೈಯಕ್ತಿಕ ಯುಪಿಐ ಸ್ಕ್ಯಾನರ್​ಗೆ ದುಡ್ಡು ಹಾಕಿಸಿಕೊಳ್ಳುತ್ತಾರೆ.

ಈ ಕಿಲಾಡಿ ಕಂಡಕ್ಟರ್​​ಗಳು ಡಿಪೋದಿಂದ ಬಸ್​ಗಳು ಹೊರಗೆ ಬರುತ್ತಿದ್ದಂತೆಯೇ ಬಸ್​​​ನಲ್ಲಿರುವ ಬಿಎಂಟಿಸಿ ನಿಗಮದ ಯುಪಿಐ ಸ್ಕ್ಯಾನರ್​​ಗಳನ್ನು ಕಿತ್ತು ಇಟ್ಟುಕೊಳ್ಳುತ್ತಾರೆ. ಪ್ರಯಾಣಿಕರು ಯುಪಿಐ ಪೇಮೆಂಟ್ ಮಾಡಿ ಟಿಕೆಟ್ ಖರೀದಿ ಮಾಡಬೇಕು ಎಂದು ಕಂಡಕ್ಟರ್​​ಗಳ ಬಳಿ ಕೇಳಿದಾಗ, ತಮ್ಮ ಮೊಬೈಲ್​​ನಲ್ಲಿರುವಸ್ಕ್ಯಾನರ್​​​ಗಳನ್ನು ನೀಡಿ ಪ್ರಯಾಣಿಕರಿಂದ ಸ್ವಂತ ಬ್ಯಾಂಕ್ ಖಾತೆಗೆ ಹಣ ಹಾಕಿಸಿಕೊಳ್ಳುತ್ತಿದ್ದಾರೆ.

ಈ ಬಗ್ಗೆ ಆರೋಪ ಕೇಳಿ ಬಂದ ಹಿನ್ನೆಲೆ ಬಿಎಂಟಿಸಿಯ ಸೆಕ್ಯೂರಿಟಿ ಅಧಿಕಾರಿಗಳು ತಪಾಸಣೆ ಮಾಡಿದಾಗ ಹತ್ತಕ್ಕೂ ಹೆಚ್ಚು ಕಂಡಕ್ಟರ್​ಗಳು ಸಿಕ್ಕಿಹಾಕಿಕೊಂಡಿದ್ದಾರೆ. ಪ್ರತಿಯೊಬ್ಬರ ಅಕೌಂಟ್​​​ನಲ್ಲಿ 50 ಸಾವಿರ ರೂಪಾಯಿವರೆಗೆ ಯುಪಿಐ ಮಾಡಿಸಿಕೊಂಡಿರುವುದು ಬಯಲಾಗಿದೆ. ಈಗಾಗಲೇ ಬಿಎಂಟಿಸಿ ಸೆಕ್ಯೂರಿಟಿ ಅಧಿಕಾರಿಗಳು ಈ ಮಾಹಿತಿಯನ್ನು ಬಿಎಂಟಿಸಿ ಎಂಡಿ ಶಿವಕುಮಾರ್​ಗೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಬಿಎಂಟಿಸಿ ಚಾಲಕರ ಹೃದಯ ಹಿಂಡುತ್ತಿದೆಯೇ ಅಧಿಕಾರಿಗಳ ಒತ್ತಡ?

ಒಟ್ಟಿನಲ್ಲಿ ಶಕ್ತಿ ಯೋಜನೆಯ ಟಿಕೆಟ್​​ಗಳನ್ನು ಹೊರ ರಾಜ್ಯದವರಿಗೆ ಕೊಡುತ್ತಿರುವುದು, ನಿಗಮದ ಯುಪಿಐ ಸ್ಕ್ಯಾನರ್​ಗಳನ್ನು ಕಿತ್ತು ತಮ್ಮ ಸ್ವಂತ ಯುಪಿಐ ಸ್ಕ್ಯಾನರ್​​ಗಳನ್ನು ನೀಡಿ ಹಣ ಹಾಕಿಸಿಕೊಳ್ಳುತ್ತಿರುವ ಕಂಡಕ್ಟರ್​​ಗಳ ವಿರುದ್ಧ ಬಿಎಂಟಿಸಿ ನಿಗಮ ಕಠಿಣ ಕ್ರಮ ಕೈಗೊಳ್ಳದೇ ಹೋದರೆ ಮತ್ತಷ್ಟು ಕಂಡಕ್ಟರ್​​ಗಳು ಈ ದಾರಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಮನೆ ಹತ್ರ ಬೇವಿನಮರ ಇದ್ರೆ ಒಳ್ಳೆದಾ? – Kannada News | Daily Devotional: Benefits of Having a Neem Tree Near Your Home

ಬೆಂಗಳೂರು, ಜನವರಿ 20: ನಮ್ಮ ಪರಿಸರದಲ್ಲಿ ಅಥವಾ ಮನೆಗಳ ಹತ್ತಿರ ಬೇವಿನ ಮರ ಇರುವುದು ಶುಭವೋ ಅಶುಭವೋ ಎಂಬ ಪ್ರಶ್ನೆಗೆ ಅನೇಕ ಉತ್ತರಗಳಿವೆ. ಕೆಲವರು ಇದು ನಕಾರಾತ್ಮಕ ಶಕ್ತಿಗಳನ್ನು ಆಕರ್ಷಿಸಬಹುದು ಎಂದು ನಂಬಿದರೆ, ವಾಸ್ತು ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬೇವಿನ ಮರವು ಅನೇಕ ಸಕಾರಾತ್ಮಕ ಪರಿಣಾಮಗಳನ್ನು ಹೊಂದಿದೆ.

ವೈಜ್ಞಾನಿಕವಾಗಿ, ಬೇವಿನ ಮರವು ಆರೋಗ್ಯಕ್ಕೆ ಬಹಳ ಉಪಯುಕ್ತವಾಗಿದೆ. ಇದು ಉಸಿರಾಟದ ಪ್ರಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ರೋಗರುಜಿನಗಳು ಮತ್ತು ಕ್ರಿಮಿಕೀಟಗಳನ್ನು ಮನೆಯಿಂದ ದೂರವಿಡುತ್ತದೆ. ಇದರ ತೊಗಟೆ, ಹಣ್ಣು ಮತ್ತು ಎಲೆಗಳು ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತವೆ.

ಆಧ್ಯಾತ್ಮಿಕವಾಗಿ, ಬೇವಿನ ಮರವನ್ನು ದೇವಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ವಿವಾಹ ಸಮಸ್ಯೆಗಳು, ಮಾಟಮಂತ್ರ ಅಥವಾ ನಕಾರಾತ್ಮಕ ಶಕ್ತಿಗಳಿಂದ ಬಳಲುತ್ತಿರುವವರು ಈ ಮರಕ್ಕೆ ಅರಿಶಿಣ-ಕುಂಕುಮ ಹಚ್ಚಿ ಪೂಜಿಸುವುದರಿಂದ ಶುಭಫಲಗಳು ದೊರೆಯುತ್ತವೆ. ಶನಿ, ರಾಹು, ಕೇತು ಗ್ರಹಗಳ ದುಷ್ಪರಿಣಾಮಗಳನ್ನು ಕಡಿಮೆ ಮಾಡುವ ಶಕ್ತಿಯೂ ಇದಕ್ಕಿದೆ ಎಂದು ನಂಬಲಾಗಿದೆ. ಜೀವನದಲ್ಲಿ ಸ್ಥಿರತೆ, ಆರೋಗ್ಯ ಮತ್ತು ಮನಃಶಾಂತಿ ನೀಡಲು ಬೇವಿನ ಮರ ಸಹಾಯಕವಾಗಿದೆ. ಈಶಾನ್ಯ ಅಥವಾ ನೈಋತ್ಯ ದಿಕ್ಕಿನಲ್ಲಿ ಬೇವಿನ ಮರ ಇರುವುದು ಮಂಗಳಕರ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

‘ಅವರು ಹಾಗೆ ಹೇಳೋಕೆ ಸಾಧ್ಯವಿಲ್ಲ’; ಅಶ್ವಿನಿ ಗೌಡ ಬಗ್ಗೆ ಗಿಲ್ಲಿಗೆ ಎಷ್ಟು ಗೌರವ ನೋಡಿ – Kannada News | Gilli’s Dignified Response to Ashwini Gowda’s Gilli Is not a Poor Man Remarks

‘ಬಿಗ್ ಬಾಸ್ ಕನ್ನ ಸೀಸನ್ 12’ರ  (BBK 12) ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ರ್ಯಾಲಿ ನಡೆಸಿದ್ದಾರೆ. ಇದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು. ತಮ್ಮಿಷ್ಟದ ಸ್ಪರ್ಧಿ, ಊರಿನ ಹುಡುಗ ಗೆದ್ದು ಬಂದಿದ್ದನ್ನು ನೋಡಿ ಊರಿನವರು ಖುಷಿಪಟ್ಟಿದ್ದಾರೆ. ಈಗ ಅಶ್ವಿನಿ ಗೌಡ ಅವರು ಗಿಲ್ಲಿ ಬಗ್ಗೆ ಕಿರಿಕ್ ತೆಗೆದಿದ್ದಾರೆ. ಬಿಗ್ ಬಾಸ್ ಮುಗಿದ ಬಳಿಕವೂ ಅವರು ಆರೋಪ ಮುಂದುವರಿಸಿದ್ದಾರೆ. ‘ಅಶ್ವಿನಿ ಗೌಡ ಹಾಗೆ ಹೇಳಲು ಸಾಧ್ಯವೇ ಇಲ್ಲ’ ಎಂಬುದು ಗಿಲ್ಲಿ ಮಾತು.

ಅಶ್ವಿನಿ ಗೌಡ ಅವರು ಬಿಗ್ ಬಾಸ್ ಮುಗಿಯುತ್ತಿದ್ದಂತೆ, ‘ಸರಿಯಾದ ವ್ಯಕ್ತಿಗೆ ಗೆಲುವು ಸಿಕ್ಕಿದೆ’ ಎಂದು ಹೇಳಿದ್ದರು. ಆದರೆ, ಮರುದಿನ ಅವರು ಮಾತು ಬದಲಾಯಿಸಿದ್ದಾರೆ. ಹೋದಲ್ಲಿ, ಬಂದಲ್ಲಿ ಗಿಲ್ಲಿ ಬಗ್ಗೆ ಮಾತನಾಡುತ್ತಿದ್ದಾರೆ. ‘ಬಡವರ ಮಕ್ಕಳು ಬೆಳೆಯಬೇಕು ಎಂದು ಡಾಲಿ ಧನಂಜಯ್ ಅವರು ಹೇಳಿದ್ದಾರೆ. ಅದು ನಿಜಕ್ಕೂ ಸತ್ಯ. ಬಡವರ ಮಕ್ಕಳು ಬೆಳೆಯಬೇಕು. ಆದರೆ, ಬಡವರ ಮಕ್ಕಳ ರೀತಿ ನಾಟಕ ಆಡುವವರು ಗೆದ್ದರೆ? ಅದು ಸರಿ ಅಲ್ಲ ಎಂದು ನನಗೆ ಅನಿಸುತ್ತದೆ’ ಎಂದು ಗಿಲ್ಲಿ ವಿಜಯದ ಬಗ್ಗೆ ಅಪಸ್ವರ ತೆಗೆದಿದ್ದಾರೆ.

ಈ ಬಗ್ಗೆ ಗಿಲ್ಲಿಗೆ ಪ್ರಶ್ನೆ ಮಾಡಲಾಗಿದೆ. ‘ಅಶ್ವಿನಿ ಗೌಡ ಅವರು ನಿಮ್ಮ ಬಗ್ಗೆ ಹೀಗೆಲ್ಲ ಹೇಳಿದ್ದಾರೆ. ಇದಕ್ಕೆ ಏನಂತೀರಾ’ ಎಂದು ಕೇಳಲಾಗಿದೆ. ಆಗ ಗಿಲ್ಲಿ ಅವರು, ‘ನಾವು ತೀರಾ ಬಡವರು ಎಂದು ಎಲ್ಲಿಯೂ ಹೇಳಿಕೊಂಡಿಲ್ಲ. ಅಶ್ವಿನಿ ಅವರು ಹೊರಗೆ ಬಂದಮೇಲೆ ಹೀಗೆ ಮಾತನಾಡಿದ್ರಾ? ಅವರು ಸಾಮಾನ್ಯವಾಗಿ ಹೀಗೆಲ್ಲ ಹೇಳಲ್ಲ’ ಎಂದರು.

ಇದನ್ನೂ ಓದಿ: ಬಿಗ್ ಬಾಸ್ ಮುಗಿದರೂ ಗಿಲ್ಲಿನ ಕೆಣಕಿದ ಅಶ್ವಿನಿ ಗೌಡ; ಖಡಕ್ ತಿರುಗೇಟು ಕೊಟ್ಟ ಪಳಾರ್

ಗಿಲ್ಲಿ ಅವರ ಈ ಗುಣ ಅನೇಕರಿಗೆ ಇಷ್ಟ ಆಗಿದೆ. ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡಬೇಕು ಎಂಬುದು ಗಿಲ್ಲಿಯ ತತ್ವ. ಹೊರಗೆ ಬಂದ ಬಳಿಕವೂ ಅದನ್ನು ಅವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂಬುದು ವಿಶೇಷ. ಗಿಲ್ಲಿ ಅವರು ತಮಗೆ ಸಿಕ್ಕ ಜನಪ್ರಿಯತೆ ನೋಡಿ ಶಾಕ್ ಆಗಿದ್ದಾರೆ. ಅವರಿಗೆ ಖುಷಿ ಹಾಗೂ ಅಚ್ಚರಿ ಎರಡೂ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:00 am, Tue, 20 January 26

Source link

ದಾಖಲೆ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಭರದ ಸಿದ್ಧತೆ – Kannada News | CM Siddaramaiah Gears Up for Record 16th Budget Presentation, Holds Pre Budget Meetings

ಬೆಂಗಳೂರು, ಜನವರಿ 20: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ ಬಜೆಟ್ ಮಂಡನೆಗೆ ಭರದ ಸಿದ್ಧತೆ ನಡೆಸಿದ್ದಾರೆ. ಅವರು ಬಜೆಟ್ ಪೂರ್ವಭಾವಿ ಸಭೆಗಳನ್ನು ಇಂದಿನಿಂದ (ಜನವರಿ 20) ಆರಂಭಿಸಲಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ನಡೆಯಲಿರುವ ಈ ಸಭೆಗಳಲ್ಲಿ ಇಲಾಖಾವಾರು ಪರಿಶೀಲನೆ ನಡೆಯಲಿದ್ದು, ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯಕ್ಕೆ ದೀರ್ಘಾವಧಿಯ ಸಿಎಂ ಆಗಿ ಸೇವೆ ಸಲ್ಲಿಸಿದ ದಾಖಲೆ ಬರೆದಿದ್ದಾರೆ. ದೇವರಾಜ ಅರಸು ಅವರ ದಾಖಲೆಯನ್ನೂ ಮುರಿದಿದ್ದಾರೆ. ಇದರೊಂದಿಗೆ ಸತತ 16ನೇ ಬಾರಿಗೆ ಅವರು ಬಜೆಟ್ ಮಂಡಿಸಿ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ಒಂದೆಡೆ ಬಜೆಟ್ ಸಿದ್ಧತೆಯಲ್ಲಿರುವ ಸಿಎಂ, ಮತ್ತೊಂದೆಡೆ ಬದಾಮಿಯ ಬನಶಂಕರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ಇದು ಅವರ ಮೊದಲ ದೇಗುಲ ಭೇಟಿಯಾಗಿದೆ. ಸಿಎಂಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರವೆಂದೇ ಪರಿಗಣಿಸಲಾಗಿರುವ ಈ ದೇವಾಲಯಕ್ಕೆ ಭೇಟಿ ನೀಡಿ ಹಣೆಗೆ ಕುಂಕುಮ ಹಚ್ಚಿಕೊಂಡು, ದೇವರ ಬಳಿ ಪ್ರಾರ್ಥನೆ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 20ರ ದಿನಭವಿಷ್ಯ – Kannada News | Jan 20 Numerology Forecast: Birth Numbers 7, 8, 9 – What Awaits You Today?

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 20ರ ಮಂಗವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಶುಭ ಕಾರ್ಯ- ಸಮಾರಂಭ ಆಯೋಜನೆಗೆ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಹಣ ಕಾಸಿನ ವಿಚಾರದಲ್ಲಿ ಇಲ್ಲಿಯ ತನಕ ಕಾಡುತ್ತಿದ್ದ ಒತ್ತಡಗಳು ಏನಾದರೂ ಇದ್ದಲ್ಲಿ ಅವು ನಿವಾರಣೆ ಮಾಡಿಕೊಳ್ಳುವ ಮಾರ್ಗ ಉಪಾಯಗಳು ಗೋಚರಿಸಲಿವೆ. ನಿಮ್ಮಂತೆಯೇ ಆಲೋಚನೆ ಮಾಡುವ ವ್ಯಕ್ತಿಗಳ ಭೇಟಿಯಿಂದ ಒಂದು ಹೊಸ ವಿಶ್ವಾಸ ಮೂಡಲಿದೆ. ವಿರಾಮದ ಸಲುವಾಗಿ ಪ್ರವಾಸ ಹೋಗಬೇಕು ಅಂದುಕೊಂಡವರಿಗೆ ಕೆಲಸ- ಜವಾಬ್ದಾರಿಗಳ ಕಾರಣಕ್ಕೆ ಸದ್ಯಕ್ಕೆ ಇದು ಸಾಧ್ಯವಿಲ್ಲ ಎಂದೆನಿಸಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಜಿಮ್- ಯೋಗ- ಪ್ರಾಣಾಯಾಮ, ಸೈಕ್ಲಿಂಗ್ ಇಂಥ ಅಭ್ಯಾಸಗಳನ್ನು ಈಗಾಗಲೇ ಮಾಡಿಕೊಂಡವರಿಗೆ ಕೆಲ ಸಮಯ ಇದರಿಂದ ದೂರ ಇರಲೇಬೇಕಾದ ಅನಿವಾರ್ಯ ಎದುರಾಗಬಹುದು. ಮುಖ್ಯವಾಗಿ ಕೆಲ ಕಾಲ ಬೇರೆ ಪ್ರದೇಶಕ್ಕೆ ಉದ್ಯೋಗ ಅಥವಾ ವೃತ್ತಿ ನಿಮಿತ್ತವಾಗಿ ತೆರಳಬೇಕಾದ ಸೂಚನೆ ಅಥವಾ ಸುಳಿವು ದೊರೆಯಲಿದೆ. ಮೊದಲಿಗೆ ನೀವು ಅಷ್ಟೇನೂ ಉತ್ಸಾಹ ತೋರದಿದ್ದರೂ ನಂತರದಲ್ಲಿ ಒಪ್ಪಿಕೊಳ್ಳುವಂಥ ಕೆಲಸ- ಕಾರ್ಯಗಳು ಒತ್ತಡವಾಗಿ ಪರಿಣಮಿಸಲಿದೆ. ಹಾಲು- ತುಪ್ಪ ಇಂಥ ಡೇರಿ ಪದಾರ್ಥಗಳ ಸೇವಿಸುವಾಗ ಎಚ್ಚರಿಕೆಯಿರಲಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಇತರರ ವಸ್ತುಗಳನ್ನು ಅಪೇಕ್ಷಿಸುವುದೋ ಅಥವಾ ಅದನ್ನು ನಿಮಗೆ ನೀಡುವಂತೆ ಒತ್ತಾಯ ಮಾಡುವುದೋ ಯಾವ ಕಾರಣಕ್ಕೂ ಈ ದಿನ ಬೇಡ. ನಿಮಗೆ ಎಷ್ಟೇ ಆಪ್ತರು ಅಂತಾದರೂ ಸಲುಗೆ ಬೇಡ. ಇನ್ನು ನಿಮ್ಮ ಉಳಿತಾಯ- ಹೂಡಿಕೆ ಮೊತ್ತ ಎಷ್ಟಿದೆ ಎಂಬುದನ್ನು ಯಾರ ಜೊತೆಗೆ ಚರ್ಚೆ ಮಾಡುವುದಕ್ಕೆ ಹೋಗಬೇಡಿ. ಉದ್ಯೋಗ ಸ್ಥಳದಲ್ಲಿ ತಮಾಷೆಗೆ ಎಂದು ಆರಂಭಿಸಿದ ಮಾತುಕತೆ ಗಂಭೀರ ಸ್ವರೂಪ ಪಡೆದುಕೊಂಡು, ಇತರರಿಗೆ ಬೇಸರ ಉಂಟು ಮಾಡಬಹುದು. ಆದ್ದರಿಂದ ಮಿತಿಯನ್ನು ಅರಿತು ಮಾತುಗಳನ್ನು ಆಡಿ.

ಲೇಖನ- ಸ್ವಾತಿ ಎನ್.ಕೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 20ರ ದಿನಭವಿಷ್ಯ – Kannada News | Jan 20th Numerology Predictions: Birth Numbers 4, 5, 6 Daily Bhavishya

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 20ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ಇಲ್ಲಿಯವರೆಗಿನ ಆದಾಯ- ಖರ್ಚು ಹಾಗೂ ಭವಿಷ್ಯದಲ್ಲಿ ಮಾಡಿಕೊಳ್ಳಬೇಕಾದ ಉಳಿತಾಯ, ಹೂಡಿಕೆ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಲಿದ್ದೀರಿ. ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಿದ್ದೀರಿ. ನಿಮಗೆ ಬಹಳ ಆಪ್ತರಾದ ವ್ಯಕ್ತಿಗಳಿಗೆ ಕೆಲವು ಉಡುಗೊರೆ ನೀಡುವ ಚಿಂತನೆ ಮಾಡಲಿದ್ದೀರಿ. ಒಂದು ವೇಳೆ ಪಿತ್ರಾರ್ಜಿತ ಆಸ್ತಿ ವಿವಾದ ಇದ್ದಲ್ಲಿ ಅದನ್ನು ಬಗೆಹರಿಸಿಕೊಳ್ಳಲು ವೇದಿಕೆ ಸಿಗಲಿದೆ. ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಾ ಇರುವವರಿಗೆ ಹೊಸ ಅವಕಾಶಗಳು ದೊರೆಯಲಿವೆ. ಈ ದಿನ ಸಣ್ಣದಾದರೂ ಗಾಯ ಆಗುವಂಥ ಸಾಧ್ಯತೆ ಇದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಇನ್ನು ಸಾಕು ಎಂದುಕೊಂಡು ನೀವಾಗಿಯೇ ನಿಲ್ಲಿಸಿದ್ದ ಕೆಲಸ- ಕಾರ್ಯಗಳನ್ನು ಮತ್ತೆ ಮುಂದುವರಿಸಿಕೊಂಡು ಹೋಗಲೇಬೇಕು ಎಂಬ ಪರಿಸ್ಥಿತಿ ಎದುರಾಗಲಿದೆ. ದೂರ ಪ್ರಯಾಣವೋ ಅಥವಾ ತೀರ್ಥಕ್ಷೇತ್ರಕ್ಕೆ ಅಂತ ಹೊರಟಿದ್ದೀರಿ ಅಂತಾದಲ್ಲಿ ಸಾಮಾನ್ಯವಾಗಿ ತೆಗೆದುಕೊಂಡು ಹೋಗುವುದಕ್ಕಿಂತ ಹೆಚ್ಚಿನ ಹಣವನ್ನು ಕೈಲಿಟ್ಟುಕೊಂಡು ಹೊರಡಿ. ಒಂದು ವೇಳೆ ಸ್ವಂತ ವಾಹನದಲ್ಲಿ ತೆರಳುತ್ತಿದ್ದೀರಿ ಅಂತಾದಲ್ಲಿ ವಾಹನ ಉತ್ತಮ ಸ್ಥಿತಿಯಲ್ಲಿ ಇದೆಯಾ ಹಾಗೂ ಸರ್ವೀಸ್ ಆಗಿದೆಯಾ ಎಂಬುದನ್ನು ಸರಿಯಾಗಿ ಪರಿಶೀಲಿಸಿದ ನಂತರಷ್ಟೇ ಹೊರಡಿ.

ಇದನ್ನೂ ಓದಿ: ಮನೆಯ ಈ 5 ಸ್ಥಳಗಳಲ್ಲಿ ನವಿಲು ಗರಿ ಇರಿಸಿ; ಹಣಕ್ಕೆಂದೂ ಕೊರತೆಯಾಗದು!

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಕುಟುಂಬ ವಿಚಾರಗಳು ವಿಪರೀತ ಪ್ರಾಮುಖ್ಯ ಪಡೆದುಕೊಳ್ಳಲಿವೆ. ಸಂಗಾತಿಯ ಆರೋಗ್ಯ, ಮಕ್ಕಳ ಶಿಕ್ಷಣ, ತಂದೆ- ತಾಯಿಯ ಪರಿಸ್ಥಿತಿ ಹೀಗೆ ನಾನಾ ವಿಚಾರಗಳು ಏಕ ಕಾಲಕ್ಕೆ ಮುನ್ನೆಲೆಗೆ ಬರಲಿವೆ. ನಿಮ್ಮ ಕೆಲವು ಸಿದ್ಧಾಂತ- ನಂಬಿಕೆಗಳ ಜೊತೆಗೆ ರಾಜೀ ಮಾಡಿಕೊಳ್ಳಲೇಬೇಕು ಎಂಬ ಸನ್ನಿವೇಶ ಸೃಷ್ಟಿ ಆಗಬಹುದು. ನಿಮ್ಮಲ್ಲಿ ಯಾರು ಕಾಲಿನ ಮೀನಖಂಡದ ಸಮಸ್ಯೆಯಿಂದ ಈಗಾಗಲೇ ಬಳಲುತ್ತಾ ಇದ್ದೀರಿ, ಅಂಥವರಿಗೆ ಸಮಸ್ಯೆ ತೀವ್ರವಾಗುವ ಸಾಧ್ಯತೆ ಇದೆ. ಚರ್ಮ ಕಾಯಿಲೆಗಳು ಈಗಾಗಲೇ ಇದ್ದಲ್ಲಿ ಉಲ್ಬಣ ಆಗಬಹುದು.

ಲೇಖನ- ಸ್ವಾತಿ ಎನ್.ಕೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 20ರ ದಿನಭವಿಷ್ಯ – Kannada News | Jan 20 Numerology: Birth Number 1, 2, 3 Forecasts What Your Day Holds

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 20ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)

ಸ್ವಚ್ಛತೆ ವಿಚಾರಕ್ಕೋ ಅಥವಾ ಪಾರ್ಕಿಂಗ್ ಕಾರಣಕ್ಕೋ ನೆರೆಮನೆಯವರು- ಅಪರಿಚಿತರ ಜೊತೆಗೆ ಜೋರು ಮಾತುಕತೆ, ವಾದ- ವಾಗ್ವಾದ ಆಗುವ ಯೋಗ ಈ ದಿನ ಇದೆ. ಸಮಸ್ಯೆಯ ಮೂಲದ ಅರಿವಿಲ್ಲದೆ ನೀವು ಆಡಿದ ಮಾತುಗಳು ವಿವಾದಕ್ಕೆ ಕಾರಣ ಆಗಬಹುದು. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ವಿಷಯಗಳು, ಸಾರ್ವಜನಿಕ ವೇದಿಕೆಯಲ್ಲಿ ನೀವಾಡುವ ಮಾತುಗಳ ಮೇಲೆ ನಿಗಾ ಇರಿಸಿಕೊಳ್ಳಬೇಕು. ನಿಮ್ಮಲ್ಲಿ ಕೆಲವರು ದೊಡ್ಡ ಹುದ್ದೆಗೆ ನೇಮಕ ಆಗುವ ಬಗ್ಗೆ ಮಾಹಿತಿ ದೊರೆಯಬಹುದು.

ಜನ್ಮಸಂಖ್ಯೆ 2 (ಯಾವುದೇ ತಿಂಗಳಿನ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)

ನಿಮ್ಮ ಖ್ಯಾತಿ, ಜನಪ್ರಿಯತೆ ಹೆಚ್ಚಾಗುವ ದಿನ ಇದಾಗಿರುತ್ತದೆ. ಉದ್ಯೋಗ- ವೃತ್ತಿ- ವ್ಯಾಪಾರ ಹೀಗೆ ನೀವು ಯಾವುದೇ ಕ್ಷೇತ್ರದಲ್ಲಿಯೇ ಕಾರ್ಯ ನಿರ್ವಹಣೆ ಮಾಡುತ್ತಾ ಇದ್ದರೂ ಆದಾಯ ಹಾಗೂ ಆದಾಯ ಮೂಲ ಎರಡೂ ಹೆಚ್ಚಾಗಲಿದೆ. ನಿಮ್ಮಲ್ಲಿ ಕೆಲವರು ದುಬಾರಿ ಗ್ಯಾಜೆಟ್ ಖರೀದಿ ಮಾಡುವ ಯೋಗ ಈ ದಿನ ಇದೆ. ಸಣ್ಣದಾಗಿ ಅಥವಾ ಮನೆ ಮಟ್ಟಿಗೆ ಮಾಡಬೇಕು ಅಂದುಕೊಳ್ಳುತ್ತಾ ಇದ್ದ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡುವುದಕ್ಕೆ ತೀರ್ಮಾನ ಮಾಡುತ್ತೀರಿ. ನಿಮಗೆ ಬರಬೇಕಾದ ಸಾಲ ಬಾಕಿಯನ್ನು ವಸೂಲಿ ಮಾಡಬಹುದು.

ಇದನ್ನೂ ಓದಿ: ಜನವರಿ ತಿಂಗಳ ಮೂರನೇ ವಾರ ನಿಮ್ಮ ರಾಶಿಗನುಗುಣವಾಗಿ ಭವಿಷ್ಯ ತಿಳಿಯಿರಿ

ಜನ್ಮಸಂಖ್ಯೆ 3 (ಯಾವುದೇ ತಿಂಗಳಿನ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)

ಕಲಾವಿದರಿಗೆ ಬಹಳ ಉತ್ತಮವಾದ ದಿನ ಇದಾಗಿರಲಿದೆ. ಹೊಸ ಪ್ರಾಜೆಕ್ಟ್ ಗಳು ಹುಡುಕಿಕೊಂಡು ಬರಬಹುದು. ಅಥವಾ ನಿಮಗೆ ಸನ್ಮಾನ, ಗೌರವ ದೊರೆಯುವ ಬಗ್ಗೆ ಮಾಹಿತಿ ಸಹ ಸಿಗಬಹುದು. ನಿಮ್ಮಲ್ಲಿ ಯಾರು ಹೆಣ್ಣುಮಕ್ಕಳ ಅಲಂಕಾರಿಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದೀರಿ ಅಂಥವರಿಗೆ ದೊಡ್ಡ ಮಟ್ಟದ ಆರ್ಡರ್ ದೊರೆಯುವ ಅವಕಾಶ ಇದೆ. ಕುಟುಂಬ ಸದಸ್ಯರ ಒತ್ತಾಯದ ಮೇರೆಗೆ ದೂರ ಪ್ರಯಾಣಕ್ಕೆ ನಿಮ್ಮಲ್ಲಿ ಕೆಲವರು ಸಿದ್ಧತೆ ಮಾಡಿಕೊಳ್ಳ ಬೇಕಾಗುತ್ತದೆ.

ಲೇಖನ- ಸ್ವಾತಿ ಎನ್.ಕೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Horoscope Today 20 January : ಇಂದು ಈ ರಾಶಿಯವರು ತಮ್ಮನ್ನು ಬೇರೆ ರೀತಿಯಲ್ಲಿ ಬಿಂಬಿಸಿಕೊಳ್ಳುವರು – Kannada News | Shalivahana Shaka 1948 Rashiphala: Detailed Daily Horoscope and Zodiac Predictions for Tuesday

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶಿಶಿರ ಋತುವಿನ ಮಾಘ ಮಾಸ ಶುಕ್ಲ ಪಕ್ಷದ ದ್ವಿತೀಯಾ ತಿಥಿ ಮಂಗಳವಾರ ಗೌರವದ ಚಿಂತೆ, ಆರೋಗ್ಯ ಸುಧಾರಣೆ, ದುರಸ್ತಿ, ಅಧಿಕ ಶ್ರಮ, ಹೂಡಿಕೆ, ಅನಿರೀಕ್ಷಿತ ವಾರ್ತೆ ಇವೆಲ್ಲ ಇಂದಿನ ವಿಶೇಷ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಚಾಂದ್ರ ಮಾಸ : ಮಾಘ, ಸೌರ ಮಾಸ : ಮಕರ, ಮಹಾನಕ್ಷತ್ರ : ಉತ್ತರಾಷಾಢ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಸಿದ್ಧಿ, ಕರಣ : ಕೌಲವ, ಸೂರ್ಯೋದಯ – 06 – 54 am, ಸೂರ್ಯಾಸ್ತ – 06 – 16 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15-26 – 16:51, ಯಮಗಂಡ ಕಾಲ 09:45 – 11:10, ಗುಳಿಕ ಕಾಲ 12:35 – 14:01

ಮೇಷ ರಾಶಿ :

ಗಂಭೀರ ವ್ಯಕ್ತಿತ್ವದಿಂದ ತಮಾಷೆಯನ್ನು ನಿರೀಕ್ಷಿಸಲಾಗದು. ಉತ್ತಮ ವ್ಯಕ್ತಿಗಳನ್ನು ಸಂಪಾದಿಸಲು ನೀವು ಸೋಲುವಿರಿ. ಆದಾಯದ ಕಡೆಗೆ ವಿಶೇಷಗಮನವು ಇರಲಿದೆ. ಇತರರ ಧಾರ್ಮಿಕ ನಂಬಿಕೆಯನ್ನು ನೀವು ಘಾಸಿಮಾಡುವಿರಿ. ಅನಂತರದ ಹತಾಶೆಯಿಂದ ಕಷ್ಟವಾದೀತು. ದೂರದ ಬಂಧುವಿನ ಭೇಟಿಯಾಗಿ ಪರಿಚಯ ಮಾಡಿಕೊಳ್ಳುವಿರಿ. ಸಂಗಾತಿಯ ಮಾತನ್ನು ನಿರ್ಲಕ್ಷಿಸಿದ್ದು ಬೇಸರಕ್ಕೆ ಕಾರಣವಾಗಬಹುದು. ನೀವು ಸ್ವತಂತ್ರವಾಗಿದ್ದರೂ ಬೆರೆಯಲು ಮನಸ್ಸಾಗದು. ಭೂಮಿಯ ವ್ಯವಹಾರದಿಂದ ಲಾಭವು ಕಡಿಮೆ ಇರಲಿದೆ.

ವೃಷಭ ರಾಶಿ :

ಸಮರ್ಪಕ ಉತ್ತರದಿಂದ ಸಂತೋಷವಾಗಬಹುದು. ಖಾಲಿಯಾಗಿ ಇರುವ ಬದಲು ಏನನ್ನಾದರೂ ಮಾಡಿ. ಭವಿಷ್ಯಕ್ಕೆ ಉಪಯೋಗವಾಗಬಹುದು. ಉತ್ಕಟವೂ ಯೋಗ್ಯವೂ ಆದ ಇಚ್ಛೆಯು ಪೂರ್ಣವಾಗುವುದು. ಸಂಬಂಧಗಳಲ್ಲಿ ಒಡಕು ಬರಬಹುದು. ಮನಸ್ಸಿಗೆ ಭಾರವಾದ ವಿಚಾರವನ್ನು ನೀವು ಹೇಗಾದರೂ ಮಾಡಿ ತಲೆಯಿಂದ ತೆಗೆಯಿರಿ. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆ ಇರುವುದು. ಆಹಾರದಿಂದ ಆರೋಗ್ಯವನ್ನು ಕೆಡಿಸಿಕೊಳ್ಳುವಿರಿ. ನಿಮಗೆ ಬೇಕಾದ ವಸ್ತುವೇ ಆದರೂ ಯಾರು ಕೇಳಿದರೂ ಕೊಡುವಿರಿ.

ಮಿಥುನ ರಾಶಿ :

ಇಂದು ಸಂಗಾತಿಯ ಜೊತೆ ಕಾಲ ಕಳೆಯಲು ಯೋಜನೆ ಬೇಕು. ತಾಳ್ಮೆಯಿಂದ ಬರುವ ಆಪತ್ತಿಗೆ ಮಾರ್ಗವೂ ಇದೆ. ಚಿತ್ತಚಾಂಚಲ್ಯವು ಕಾರ್ಯದ ಗತಿಯನ್ನು ತಗ್ಗಿಸೀತು. ಕಾರ್ಯದ ನಿರುತ್ಸಾಹವನ್ನು ನಿಮ್ಮದೇ ಆದ ವಿಧಾನದಿಂದ ಸರಿ ಮಾಡಿಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ಅಧ್ಯಯನದ ವಿಚಾರದಲ್ಲಿ ಏಕಾಗ್ರತೆಯ ಕೊರತೆ ಇರಲಿದ್ದು ಧ್ಯಾನ, ಯೋಗಾಭ್ಯಾಸವನ್ನು ಮಾಡಬೇಕಾಗಬಹುದು. ರಾಜಕೀಯ ವ್ಯಕ್ತಿಗಳಿಂದ ನಿಮಗೆ ಸ್ವಲ್ಪಮಟ್ಟಿನ ಲಾಭವಾಗುವುದು.

ಕರ್ಕಾಟಕ ರಾಶಿ :

ಮೃದು ಮಾತಿನಿಂದ ಕಾರ್ಯವಾಗದು. ಮೇಲಧಿಕಾರಿಗಳಿಗೆ ನೀವು ವರದಿಯನ್ನು ನೀಡಬೇಕಾಗುವುದು. ಹಳೆಯದನ್ನು ನೀವು ನೆನೆದು ಸಂಕಟಪಡುವಿರಿ. ವಿನಾಕಾರಣ ಮಿತ್ರರನ್ನು ದೂರ ಮಾಡಿಕೊಳ್ಳುವಿರಿ. ನಿಮ್ಮ ಬಗ್ಗೆ ನೀವೇ ಪ್ರಶಂಸೆ ಮಾಡಿಕೊಳ್ಳುವಿರಿ. ನಿಮ್ಮ ನೋವನ್ನು ಕೇಳಲು ಯಾರೂ ಇಲ್ಲವೆಂದು ಬೇಸರವಾಗಬಹುದು. ಕೋಪದ ವಿಚಾರದಲ್ಲಿ ನೀವು ಬದಲಾಗಬೇಕಾದ ಅವಶ್ಯಕತೆ ಇರಲಿದೆ. ಕಳೆದುಕೊಂಡ ಸಂಬಂಧವನ್ನು ಮತ್ತೆ ಕೂಡಿಸಿಕೊಳ್ಳಲು ಪ್ರಯತ್ನಶೀಲರಾಗುವಿರಿ. ಹೂಡಿಕೆಯನ್ನು ಮಾಡಲು ಎಲ್ಲರಿಂದ ಮಾಹಿತಿಯನ್ನು ಸಂಗ್ರಹಿಸುವಿರಿ.

ಸಿಂಹ ರಾಶಿ :

ಸೇವೆಯಿಂದ ನಿವೃತ್ತಿಯು ಬೇಸರ ತರಿಸುವುದು. ಪರರ ಗುಣದಲ್ಲಿ ಅಸೂಯೆ ಇಟ್ಟುಕೊಳ್ಳುವಿರಿ. ಸಂಗಾತಿಯ ಪ್ರೀತಿಗೆ ನೀವು ಸೋಲಬಹುದು. ಎಷ್ಟೋದಿನಗಳಿಂದ ಬಯಸಿದ್ದ ವಸ್ತುವನ್ನು ನೀವು ಅನಾಯಾಸವಾಗಿ ಯಾರಿಂದಲೋ ಪಡೆಯುವುರಿ. ಹೊಸ ಯೋಜನೆಗಳು ನಿಮ್ಮ ತಲೆಯಲ್ಲಿ ಓಡುತ್ತಿದ್ದು ಅದನ್ನು ಕಾರ್ಯರೂಪಕ್ಕೆ ತರಲು ನೋಡುವಿರಿ. ನಿಮ್ಮ ವೈಯಕ್ತಿಕ ಕಾರ್ಯದಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ನೀವು ನಿರೀಕ್ಷಿಸಿದ ಹಣವು ಬಾರದೇ ಹೋಗಬಹುದು.

ಕನ್ಯಾ ರಾಶಿ :

ವ್ಯಾಪಾರದ ವಿಚಾರದಲ್ಲಿ ಮನೆಯವರ ಜೊತೆ ಜಗಳ ಮಾಡಿಕೊಳ್ಳುವಿರಿ. ನಿಮಗೆ ದ್ವಂದ್ವಗಳು ಒಂದು ಸರಿಯಾದ ನಿರ್ಧಾರಕ್ಕೆ ಬರಲು ಅನುಕೂಲ ಮಾಡಿಕೊಡುವುದಿಲ್ಲ. ಸಂಗಾತಿಯು ಸಾಲವನ್ನು ಮಾಡಲು ಪ್ರಚೋದನೆ ಕೊಡಬಹುದು. ಕತ್ತಲೆಯಲ್ಲಿ ಗುದ್ದಾಟ ಮಾಡಿ ಆಯಾಸ ಮಾಡಿಕೊಳ್ಳುವಿರಿ. ಕಳೆದುಕೊಂಡ ವಿಶ್ವಾಸವನ್ನು ಮತ್ತೆ ಕೂಡಿಸಲು ಪ್ರಯತ್ನಿಸುವಿರಿ. ಅದು ಕನ್ನಡಿಯ ಗಾಜಿನಂತೆ. ಎಷ್ಟೇ ಕೂಡಿಸಿದರೂ ಬಿರುಕು ಎದ್ದು ತೋರುವುದು.

ತುಲಾ ರಾಶಿ :

ನಿಮ್ಮ ಹೊಂದಿಕೊಳ್ಳುವ ಗುಣವನ್ನು ಎಲ್ಲರೂ ಶ್ಲಾಘಿಸುವರು. ಕೃತಘ್ನರಾಗಿ ಮೆರೆಯುವುದು ಬೇಡ. ಜಾರಿ ಬೀಳಲು ಹೆಚ್ಚು ಸಮಯ ಬೇಡ. ಕೊಟ್ಟ ಹಣವು ಮರಳಿ ನಿಮ್ಮ ಸಂಪತ್ತು ಹೆಚ್ಚಾಗಬಹುದು. ವೃತ್ತಿಯಲ್ಲಿ ಅನಿರೀಕ್ಷಿತ ಒತ್ತಡಗಳು ಬರಲಿದ್ದು ಇಂದಿನ ಕಾರ್ಯವನ್ನು ಹಾಳುಮಡುವುದು. ಸ್ತ್ರೀಯರು ಕೆಲವರ ಬಗ್ಗೆ ಇರುವ ಪೂರ್ವಾಗ್ರಹವನ್ನು ಕಳೆದುಕೊಳ್ಳುವರು. ಪ್ರೀತಿಯು ನಿಮಗಾಗದವರ ಮೂಲಕ ಎಲ್ಲರಿಗೂ ತಿಳಿಯುವುದು. ಇದರಿಂದ ನಿಮಗೆ ಬಹಳ ಮುಜುಗರವಾಗಬಹುದು.

ವೃಶ್ಚಿಕ ರಾಶಿ :

ಕಾರ್ಯಕ್ಕೆ ಹೊರಡುವ ಮೊದಲೇ ತನ್ನ್ನಿಂದ ಏನೂ ಆಗದು ಎಂಬ ಭಾವವನ್ನು ಮೊದಲು ತಲೆಯಿಂದ ತೆಗೆದುಹಾಕಬೇಕು. ನೀವು ಶಿಸ್ತಿಗೆ ಒಳಪಟ್ಟಷ್ಟು ನಿಮ್ಮ ಕೆಲಸಗಳು ಸುಲಲಿತವಾಗುವುದು. ಮನೆಯಲ್ಲಿ ಹಣಕಾಸಿನ ಸ್ಥಿತಿ ಸುಧಾರಿಸಲಿದೆ. ಆರ್ಥಿಕ ಸ್ಥಿತಿಯು ನಿಮಗೆ ಸಮಾಧಾನ ಕೊಡುವುದು. ಹಳೆಯ ವಸ್ತುಗಳು ನಿಮಗೆ ಭಾರವಾದೀತು. ತಾಳ್ಮೆಯನ್ನು ಕಳೆದುಕೊಂಡು ಎಲ್ಲರೆದುರು ಸಣ್ಣವರಾಗಬೇಕಾದೀತು. ಕಠೋರ ಮಾತುಗಳು ನಿಮ್ಮರಿಗೆ ಇಷ್ಟವಾಗದು. ನಿಮ್ಮ ಬಗ್ಗೆ ಸಲ್ಲದ್ದನ್ನು ಹೇಳಬಹುದು.

ಧನು ರಾಶಿ :

ಈ ದಿನವನ್ನು ಬಹಳ ಆನಂದದಿಂದ ಕಳೆಯುವಿರಿ. ಏಕೆಂದರೆ ನೀವು ಇಂದು ಸಕಾರಾತ್ಮಕ ಚಿಂತನೆಯಲ್ಲಿ ಇರುವಿರಿ. ವಿದ್ಯಾಭ್ಯಾಸದ ಕಾರಣಕ್ಕೆ ಅಪಮಾನವಾಗಬಹುದು. ಮನೆಯಲ್ಲಿರುವ ಮಕ್ಕಳ ಜೊತೆ ಸ್ವಲ್ಪ ತಾಳ್ಮೆಯನ್ನು ಕಾಪಾಡಿಕೊಳ್ಳಿ. ಸಂಬಂಧಗಳನ್ನು ಬೆಳೆಸಿಕೊಳ್ಳುವ ಇಚ್ಛೆ ಇದ್ದರೂ ಮುನ್ನುಗ್ಗಲು ಮನಸ್ಸು ಇರದು. ತಂದೆಯ ಜೊತೆಗಿನ ಮನಸ್ತಾಪವು ನಿಮ್ಮ ನೆಮ್ಮದಿಯನ್ನು ಹಾಳು ಮಾಡೀತು. ಎಲ್ಲದಕ್ಕೂ ಮುನ್ನುಗಬೇಕೆನ್ನುವ ನಿಮ್ಮ ಯೋಚನೆ ಬದಲಾಗುವುದು. ಭೂಮಿಯ ಬಗ್ಗೆ ಆಸಕ್ತಿಯು ಕಡಿಮೆಯಾಗಲಿದೆ.

ಮಕರ ರಾಶಿ :

ಕಿಟಕಿ ಮುಚ್ಚಿದೆ ಎಂದ ಮಾತ್ರಕ್ಕೆ ದ್ವಾರವೂ ಮುಚ್ಚಿರುತ್ತದೆ ಎಂದು ತಿಳಿದುಕೊಳ್ಳುವುದು ಮೂರ್ಖತನ. ಹಣಕಾಸು ಲಾಭಗಳು ನಿಮ್ಮ ಪರಿಸ್ಥಿತಿಯನ್ನು ಬಲಪಡಿಸುತ್ತದೆ. ಇಂದು ಕುಟುಂಬದಲ್ಲಿ ಸಂತೋಷವನ್ನು ತುಂಬುವಿರಿ. ಒಬ್ಬರಾದರೂ ತಾಳ್ಮೆಯಿಂದ ಇರಬೇಕಾದೀತು. ನಿಮ್ಮ ಕನಸನ್ನು ಪೂರ್ಣ ಮಾಡಿಕೊಳ್ಳುತ್ತಿರುವುದು ನಿಮಗೆ ಖುಷಿಯಾಗಲಿದೆ. ಭೋಜನವನ್ನು ಸಮಯ ಮೀರಿ ಮಾಡುವುದು ಬೇಡ. ನಿಮ್ಮ ಬದಲಾವಣೆಯು ಪೂರ್ಣ ಸತ್ಯವಾಗಿರದು. ಬಂಧುವರ್ಗದಿಂದ ಸೇವೆಯಾಗಬಹುದು.

ಇದನ್ನೂ ಓದಿ: ಜನವರಿ ತಿಂಗಳ ಮೂರನೇ ವಾರ ನಿಮ್ಮ ರಾಶಿಗನುಗುಣವಾಗಿ ಭವಿಷ್ಯ ತಿಳಿಯಿರಿ

ಕುಂಭ ರಾಶಿ :

ನೀವು ಯಾರನ್ನಾದರೂ ಅಳೆಯುವ ಮೊದಲು ಅವರೇ ನಿಮ್ಮ ಬಗ್ಗೆ ಎಲ್ಲವನ್ನೂ ಹೇಳಬಹುದು. ಇನ್ನೊಬ್ಬರ ನಿರ್ಧಾರಗಳನ್ನು ನಿಯಂತ್ರಿಸುವ ಮೂಲಕ ನೀವು ಎಂದಿಗೂ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆಯುವುದಿಲ್ಲ. ವೃತ್ತಿ ಜೀವನದಲ್ಲಿ ಗೌರವವನ್ನು ಪಡೆಯಬೇಕು ಎನಿಸುವುದು. ಅನಗತ್ಯ ಖರ್ಚಿಗೆ ಇಂದು ಹಲವು ಹಾದಿಗಳು ನಿಮ್ಮ ಕಣ್ಣಿಗೆ ಬೀಳಬಹುದು. ಆರ್ಥಿಕ ವ್ಯವಸ್ಥೆಯು ಎತ್ತು ಏರಿಗೆ ಕೋಣ ನೀರಿಗೆ ಎನ್ನುವ ಸ್ಥಿತಿಯು ಬರಬಹುದು. ಒಂದು ಕಡೆ ಬಾಗಲು ಮುಚ್ಚಿದರೆ ಇನ್ಮೊಂದು ಕಡೆ ಕಿಟಕಿ ತೆರುವುದು.

ಮೀನ ರಾಶಿ :

ವ್ಯವಹಾರದ ಹಿನ್ನಡೆಯಿಂದ ಹತಾಶೆಯಾಗುವ ಸಾಧ್ಯತೆ ಇದೆ. ನಿಜವಾದ ಸ್ನೇಹಿತ ನಿಮ್ಮ ಅಗತ್ಯದ ಸಮಯದಲ್ಲಿ ಜೊತೆಯಾಗುವರು. ಅಂತಹವರನ್ನು ಕಳೆದುಕೊಂಡು ಅನಂತರ ಸಂಕಟಪಡುವಿರಿ. ವ್ಯವಹಾರದಲ್ಲಿ ಹಣಕಾಸಿನ ಸ್ಥಿರತೆಗಾಗಿ ಇಂದು ಹೆಚ್ಚು ಪ್ರಯತ್ನ ಮಾಡಬೇಕಾಗುತ್ತದೆ. ಕುಟುಂಬದಲ್ಲಿ ಸಾಮರಸ್ಯ ಹೆಚ್ಚಾಗಿ ಸಂತಸದ ವಾತಾವರಣ ನೀರ್ಮಾನವಾಗಲಿದೆ. ಚರಾಸ್ತಿಗೆ ಸಂಬಂಧಿಸಿದ ಶುಭ ಸುದ್ದಿ ಕೇಳುವಿರಿ.

– ಲೋಹಿತ ಹೆಬ್ಬಾರ್ – 8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WPL 2026: ಸತತ 5ನೇ ಗೆಲುವು; ಪ್ಲೇಆಫ್‌ಗೆ ಎಂಟ್ರಿಕೊಟ್ಟ ಆರ್​ಸಿಬಿ – Kannada News | RCB Secures Playoff Spot with Dominant Win Over Gujarat Giants in Vadodara

ವಡೋದರಾದಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸತತ ಗೆಲುವಿನ ಮೂಲಕ ಪ್ಲೇಆಫ್‌ಗೆ ಮೊದಲ ತಂಡವಾಗಿ ಅರ್ಹತೆ ಪಡೆದುಕೊಂಡಿದೆ. ಗುಜರಾತ್​ ಜೈಂಟ್ಸ್​ನ ತವರು ನೆಲದಲ್ಲಿ ನಡೆದ ಈ ಪಂದ್ಯದಲ್ಲಿ ಗುಜರಾತ್ ತಂಡದಿಂದ ಹೋರಾಟದ ಪ್ರದರ್ಶನ ನಿರೀಕ್ಷಿಸಲಾಗಿತ್ತು. ಏಕೆಂದರೆ ಈ ಉಭಯ ತಂಡಗಳ ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ ಗೆಲುವು ಸಾಧಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಗುಜರಾತ್ ಸೇಡು ತೀರಿಸಿಕೊಳ್ಳಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಆರ್​ಸಿಬಿ ಸಾಂಘಿಕ ದಾಳಿಗೆ ತತ್ತರಿಸಿದ ಗುಜರಾತ್ ಬರೋಬ್ಬರಿ 61 ರನ್​ಗಳಿಂದ ಸೋಲೊಪ್ಪಿಕೊಂಡಿತು.

Source link

BMTC ನಿಗಮಕ್ಕೆ ಚಳ್ಳೆಹಣ್ಣು ತಿನ್ನಿಸುತ್ತಿರುವ ಕಂಡಕ್ಟರ್​ಗಳು: ತನಿಖೆ ವೇಳೆ ಕಳ್ಳಾಟ ಬಯಲು – Kannada News | BMTC Conductors UPI Scam: Shakti Scheme Misused, Personal Accounts Swelled by Lakhs

ಬೆಂಗಳೂರು, ಜನವರಿ 19: ‘ಶಕ್ತಿ’ ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಈ ಯೋಜನೆಯ ಲಾಭವನ್ನು ರಾಜ್ಯದ ಕೋಟ್ಯಂತರ ಹೆಣ್ಣು ಮಕ್ಕಳು ಪಡೆಯುತ್ತಿದ್ದರೆ, ಇತ್ತ ಬಿಎಂಟಿಸಿಯ (BMTC) ಕೆಲ ಕಿಲಾಡಿ ಕಂಡಕ್ಟರ್​ಗಳು (Conductor) ಮಾತ್ರ, ಅನ್ನ ತಿಂದ ಮನೆಗೆ ಕನ್ನ ಹಾಕುವ ಕೆಲಸ ಮಾಡಿ ನಿಗಮಕ್ಕೆ ಸೇರಬೇಕಿದ್ದ, ಲಕ್ಷ ಲಕ್ಷ ಹಣವನ್ನು ತಮ್ಮ ಜೇಬಿಗೆ ಹಾಕಿಕೊಳ್ಳಲು ಮುಂದಾಗುತ್ತಿದ್ದಾರೆ.

ಬಿಎಂಟಿಸಿ ಬಸ್​ಗಳಲ್ಲಿ ಪ್ರಯಾಣಿಕರಿಗೆ ಸಹಾಯವಾಗಲಿ ಎಂದು ಬಿಎಂಟಿಸಿ ನಿಗಮ ಯುಪಿಐ ಸ್ಕ್ಯಾನರ್ ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್​ಗಳು ಬಿಎಂಟಿಸಿ ಬಸ್​ನಲ್ಲಿರುವ ಯುಪಿಐ ಸ್ಕ್ಯಾನರ್​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್​ಗಳನ್ನು ನೀಡಿ, ತಮ್ಮ ಬ್ಯಾಂಕ್ ಅಕೌಂಟ್​ಗೆ ಲಕ್ಷಾಂತರ ರೂ ಹಣ ಹಾಕಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಕನ್ನಡ ಬಾರದವರಿಗೆ ತಮ್ಮ ಮೊಬೈಲ್ ಯುಪಿಐ ಸ್ಕ್ಯಾನರ್ ನೀಡಿ ಹಣ ಹಾಕಿಸಿಕೊಳ್ಳುತ್ತಿದ್ದಾರಂತೆ.

ಇದನ್ನೂ ಓದಿ: ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಬಿಎಂಟಿಸಿ: ಮೂರು ಸಾವಿರ ಬಸ್​​ ಮಾರ್ಗಗಳ ವೇಳಾಪಟ್ಟಿ ಪರಿಷ್ಕರಣೆ

ಇನ್ನು ತನಿಖೆಯಲ್ಲಿ ಈ ಕಂಡಕ್ಟರ್​ಗಳ ಕಳ್ಳಾಟ ಕೂಡ ಬಯಲಾಗಿದೆ. ಪ್ರತಿಯೊಬ್ಬರ ಅಕೌಂಟ್​ನಲ್ಲೂ ಸುಮಾರು 50 ಸಾವಿರಕ್ಕೂ ಹೆಚ್ಚು ಹಣ ಪ್ರಯಾಣಿಕರಿಂದ ಹಾಕಿಸಿಕೊಂಡಿರುವುದು ತನಿಖೆಯಿಂದ ಬಯಲಾಗಿದೆ. ಶಕ್ತಿ ಯೋಜನೆಯ ಉಚಿತ ಟಿಕೆಟ್ ಮೇಲೆ ಕನ್ನಡದಲ್ಲಿ ಉಚಿತ ಟಿಕೆಟ್ ಎಂದು ಮುದ್ರಿಸಲಾಗಿದೆ. ಇಂಗ್ಲಿಷ್​ನಲ್ಲಿ ಉಚಿತ ಟಿಕೆಟ್ ಎಂದು ಮುದ್ರಿಸಿಲ್ಲ. ಇದನ್ನು ಬಂಡವಾಳ ಮಾಡಿಕೊಂಡು ಕನ್ನಡ ಬಾರದ ನಾರ್ತ್, ಸೌತ್ ಇಂಡಿಯನ್ಸ್​ಗೆ ಶಕ್ತಿ ಯೋಜನೆಯ ಉಚಿತ ಟಿಕೆಟ್ ನೀಡುತ್ತಿದ್ದಾರೆ.

ಈ ಕಿಲಾಡಿ ಕಂಡಕ್ಟರ್​ಗಳು ಡಿಪೋದಿಂದ ಬಸ್​ಗಳು ಹೊರಗೆ ಬರ್ತಿದ್ದಂತೆ, ಬಿಎಂಟಿಸಿ ಬಸ್​ನಲ್ಲಿರುವ ಬಿಎಂಟಿಸಿ ನಿಗಮದ ಯುಪಿಐ ಸ್ಕ್ಯಾನರ್​ಗಳನ್ನು ಕಿತ್ತು ಇಟ್ಟುಕೊಳ್ಳುತ್ತಾರಂತೆ. ಪ್ರಯಾಣಿಕರು ಯುಪಿಐ ಮೂಲಕ ಪೇಮೆಂಟ್ ಮಾಡಿ ಟಿಕೆಟ್ ಖರೀದಿ ಮಾಡಬೇಕು ಎಂದು ಕಂಡಕ್ಟರ್​ಗಳ ಬಳಿ ಕೇಳಿದಾಗ, ತಮ್ಮ ಮೊಬೈಲ್​ನಲ್ಲಿರುವ ಸ್ವಂತ ಖಾತೆಯ ಸ್ಕ್ಯಾನರ್​ಗಳನ್ನು ನೀಡಿ ಪ್ರಯಾಣಿಕರಿಂದ ತಮ್ಮ ಅಕೌಂಟ್​ಗೆ ಹಣ ಹಾಕಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಆರೋಪ ಕೇಳಿ ಬಂದ ಹಿನ್ನೆಲೆ ಬಿಎಂಟಿಸಿಯ ಸೆಕ್ಯೂರಿಟಿ ಅಧಿಕಾರಿಗಳು ತಪಾಸಣೆ ಮಾಡಿದಾಗ ಹತ್ತಕ್ಕೂ ಹೆಚ್ಚು ಕಂಡಕ್ಟರ್​ಗಳು ಸಿಕ್ಕಿಬಿದ್ದಿದ್ದಾರೆ.

ಪ್ರಯಾಣಿಕರು ಹೇಳಿದ್ದಿಷ್ಟು

ಹೀಗೆ ಸಿಕ್ಕಿಬಿದ್ದ ಪ್ರತಿಯೊಬ್ಬ ಕಂಡಕ್ಟರ್​ ಅಕೌಂಟ್​ನಲ್ಲಿ 50 ಸಾವಿರ ರೂ. ಯುಪಿಐ ಮಾಡಿಸಿಕೊಂಡಿರುವುದು ಬಯಲಾಗಿದೆ. ಈಗಾಗಲೇ ಬಿಎಂಟಿಸಿ ಸೆಕ್ಯೂರಿಟಿ ಅಧಿಕಾರಿಗಳು ಈ ಬಗ್ಗೆ ಬಿಎಂಟಿಸಿ ಎಂಡಿ ಶಿವಕುಮಾರ್​​ಗೆ ವರದಿ ಸಲ್ಲಿಸಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿದ ಪ್ರಯಾಣಿಕ ಮಂಜುನಾಥ್, ಇಂತಹವರನ್ನು ಮೊದಲು ಕೆಲಸದಿಂದ ಕಿತ್ತು ಮನೆಗೆ ಕಳಿಸಬೇಕು ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಮತ್ತೆ ಕುಖ್ಯಾತಿಗೆ ಒಳಗಾದ ಬಿಎಂಟಿಸಿ ಸಂಸ್ಥೆ; ಬಸ್ ಹರಿದು ಬಾಲಕಿ ದಾರುಣ ಸಾವು

ಶಕ್ತಿ ಯೋಜನೆಯ ಟಿಕೆಟ್​ಗಳನ್ನು ಹೊರ ರಾಜ್ಯದವರಿಗೆ ನೀಡುತ್ತಿರುವುದು, ನಿಗಮದ ಸ್ಕ್ಯಾನರ್​ಗಳನ್ನು ಕಿತ್ತು ತಮ್ಮ ಸ್ವಂತ ಯುಪಿಐ ಸ್ಕ್ಯಾನರ್​ಗಳನ್ನು ನೀಡಿ ಹಣ ಹಾಕಿಸಿಕೊಳ್ಳುತ್ತಿರುವ ಕಂಡಕ್ಟರ್​ಗಳ ವಿರುದ್ಧ ಬಿಎಂಟಿಸಿ ನಿಗಮ ಕಠಿಣ ಕ್ರಮಕೈಗೊಳ್ಳದಿದ್ದರೆ, ಇವರಿಂದ ಮತ್ತಷ್ಟು ಕಂಡಕ್ಟರ್​​ಗಳು ಈ ದಾರಿ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link