Headlines

Tv9 Kannada News Live: GBA ಚುನಾವಣೆಗೆ ಜೆಡಿಎಸ್​​ ಪ್ರತ್ಯೇಕ ಸ್ಪರ್ಧೆ, ಪಾಕ್​​ನಲ್ಲಿ ಬಾಂಬ್ ಸ್ಫೋಟಕ್ಕೆ 23 ಮಂದಿ ಬಲಿ; ಇಲ್ಲಿವೆ ಈ ಹೊತ್ತಿನ ಟಾಪ್​​ ಸುದ್ದಿಗಳು – Kannada News | Tv9 Kannada News Live: JDS to Discuss Solo GBA Poll Strategy Today; 23 Killed in Pakistan Blast

ಬೆಂಗಳೂರು, ಮೇ 24: ಬಿಜೆಪಿ ಜೊತೆಗಿನ ಮೈತ್ರಿ ನಡುವೆಯೂ ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಪ್ರತ್ಯೇಕವಾಗಿ ಸ್ಫರ್ಧಿಸಲು ಜೆಡಿಎಸ್​​ ಪ್ಲ್ಯಾನ್​​ ಮಾಡಿದೆ. ಇದರ ನಡುವೆ ಕೇಂದ್ರ ಸಚಿವ ಮತ್ತು ಜೆಡಿಎಸ್​​ ನಾಯಕ ಹೆಚ್​​.ಡಿ. ಕುಮಾರಸ್ವಾಮಿ ಜಿಬಿಎ ಜಿಬಿಎ ಚುನಾವಣೆ ಸಂಬಂಧ ಇಂದು (ಮೇ 24) ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ JDS ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಬೆಂಗಳೂರು ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಧ್ಯಕ್ಷರು, ಪದಾಧಿಕಾರಿಗಳು, ಪಾಲಿಕೆ ಮಾಜಿ ಸದಸ್ಯರು ಭಾಗಿಯಾಗಲಿದ್ದಾರೆ. ಈ ವೇಳೆ ಅಭ್ಯರ್ಥಿಗಳ…

Read More

ಯೂತ್​​ ಕಾಂಗ್ರೆಸಿಗರ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್​​: ಸ್ಫೋಟಕ ಹೇಳಿಕೆ ಕೊಟ್ಟ ಉಪಾಧ್ಯಕ್ಷೆ

ಬೆಂಗಳೂರು, ಮೇ 24: ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ವಿಚಾರ ಸಂಬಂಧ ದೀಪಿಕಾ ರೆಡ್ಡಿ ಮಾಡಿರುವ ಆರೋಪ ಸುಳ್ಳು ಎಂದು ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದಿವ್ಯಾ ಹೇಳಿದ್ದಾರೆ. ಸಭೆ ಶುರುವಾದಾಗ ಗಲಾಟೆ ಮಾಡಬೇಕಂತಲೇ ಬಂದು ಕೆಲವರು ಸುಳ್ಳು ಆರೋಪ ಮಾಡಿದ್ದಾರೆ. ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲ ಎಂಬುದನ್ನು ನಾವು ಒಪ್ಪಲ್ಲ. ದೀಪಿಕಾ ರೆಡ್ಡಿ 12 ಲಕ್ಷ ಮತ​ ತೆಗೆದುಕೊಂಡಿದ್ದೇನೆ ಅಂತಾರೆ. JDSಗೆ ಹೋಗಿದ್ದ ದೀಪಿಕಾ ರೆಡ್ಡಿ ಮತ್ತೆ ಕಾಂಗ್ರೆಸ್​ಗೆ ಬಂದಿದ್ದಾರೆ. ರಾಜ್ಯ ಯುವ ಕಾಂಗ್ರೆಸ್…

Read More

ದರ್ಶನ್ ಕೇಸ್: ಚುರುಕುಗೊಳ್ಳಲಿದೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಕೋರ್ಟ್ ವಿಚಾರಣೆ – Kannada News | Darshan Case Court hearing of Renukaswamy murder case to speed up

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲು ಆಗಿರುವ ನಟ ದರ್ಶನ್ (Darshan) ಅವರಿಗೆ ಸಾಕಷ್ಟು ಆತಂಕ ಇದೆ. ಒಂದು ವರ್ಷದ ಒಳಗೆ ಎಲ್ಲ ಸಾಕ್ಷಿಗಳ ವಿಚಾರಣೆ ಮುಗಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾರಕ್ಕೆ 2 ಬಾರಿ ವಿಚಾರಣೆ ನಡೆಸಲು ಸ್ಥಳೀಯ ಕೋರ್ಟ್ ಮುಂದಾಗಿದೆ. ದರ್ಶನ್ ಅವರು ಜೈಲು ಸೇರಿ ಹಲವು ತಿಂಗಳು ಕಳೆದಿದೆ. ಇನ್ನೊಂದು ವರ್ಷ ಜಾಮೀನು (Bail) ಸಿಗಲ್ಲ ಎಂಬ ವಿಚಾರದಿಂದ ಅವರಿಗೆ ಚಿಂತೆ ಶುರುವಾಗಿದೆ. ಸುಪ್ರೀಂ ಕೋರ್ಟ್​​ನಲ್ಲಿ ಜಾಮೀನು ಅರ್ಜಿ…

Read More

ಪಾಕಿಸ್ತಾನದ ಸೈನಿಕರನ್ನು ಕರೆದೊಯ್ಯುತ್ತಿದ್ದ ರೈಲಿನ ಮೇಲೆ ಆತ್ಮಾಹುತಿ ಬಾಂಬ್ ದಾಳಿ; 24 ಜನ ಸಾವು, 70 ಮಂದಿಗೆ ಗಾಯ – Kannada News | 24 killed 70 injured as car with explosives rams train carrying pakistan soldiers in quetta

ಇಸ್ಲಮಾಬಾದ್, ಮೇ 24: ಪಾಕಿಸ್ತಾನದ (Pakistan) ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿಯಾದ ಕ್ವೆಟ್ಟಾ ನಗರದ ರೈಲ್ವೆ ಹಳಿ ಬಳಿ ಇಂದು ಭೀಕರ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದೆ. ಈ ಭೀಕರ ದುರಂತದಲ್ಲಿ 24 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮತ್ತು ರಕ್ಷಣಾ ಪಡೆಗಳ ಮೂಲಗಳು ಖಚಿತಪಡಿಸಿವೆ. ಕ್ವೆಟ್ಟಾದ ಚಮನ್ ಫಾಟಕ್ (Chaman Phatak) ರೈಲ್ವೆ ನಿಲ್ದಾಣದ ಬಳಿ ಈ ಸ್ಫೋಟ ಸಂಭವಿಸಿದೆ. ಭದ್ರತಾ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು…

Read More

ನಮ್ಮ ನಿಮ್ಮ ಎಸ್​ಐಪಿಗಳು ವಿದೇಶೀ ಹೂಡಿಕೆದಾರರಿಗೆ ಆಹಾರವಾಗುತ್ತಿವೆಯಾ? ಜೆಫರೀಸ್ ಏಜೆನ್ಸಿ ಬಿಚ್ಚಿಟ್ಟಿದೆ ಘೋರ ಸತ್ಯ – Kannada News | Indians SIPs main reason behind falling rupee and exiting of FPIs, says Jefferies

ನವದೆಹಲಿ, ಮೇ 24: ಜಾಗತಿಕ ಬ್ರೋಕರೇಜ್ ಸಂಸ್ಥೆಯಾದ ಜೆಫರೀಸ್ (Jefferies), ಭಾರತೀಯ ಆರ್ಥಿಕತೆ ಮತ್ತು ಷೇರು ಮಾರುಕಟ್ಟೆಯಲ್ಲಿ ಸದ್ಯ ನಡೆಯುತ್ತಿರುವ ಮೂರು ಪ್ರಮುಖ ವಿದ್ಯಮಾನಗಳ ನಡುವಿನ ಆಸಕ್ತಿದಾಯಕ ನಂಟನ್ನು ಬಿಚ್ಚಿಟ್ಟಿದೆ. ಭಾರತೀಯರಲ್ಲಿ ಹೆಚ್ಚುತ್ತಿರುವ ಮ್ಯೂಚುಯಲ್ ಫಂಡ್ ಎಸ್‌ಐಪಿ (SIP) ಹೂಡಿಕೆ, ವಿದೇಶಿ ಪೋರ್ಟ್‌ಫೋಲಿಯೋ ಹೂಡಿಕೆದಾರರ (FPI) ಭಾರಿ ಪ್ರಮಾಣದ ಹಣದ ಹಿಂತೆಗೆತ (FPI outflows), ಮತ್ತು ಯುಎಸ್ ಡಾಲರ್ ಎದುರು ಭಾರತೀಯ ರೂಪಾಯಿಯ ಮೌಲ್ಯ ಕುಸಿತ, ಈ ಮೂರು ಬೆಳವಣಿಗೆಗಳ ಮಧ್ಯೆ ಒಂದಕ್ಕೊಂಡು ನಂಟು ಬೆಸೆದುಕೊಂಡಿರುವುದನ್ನು ಜೆಫರೀಸ್…

Read More

ಮಿಂಚಿನ ವೇಗ… ಹೊಸ ಇತಿಹಾಸ ಬರೆದ ಗುರಿಂದರ್ವೀರ್ ಸಿಂಗ್ – Kannada News | Gurindervir singh smashes 100m national record with historic 10 09s

ರಾಂಚಿಯ ಬಿರ್ಸಾ ಮುಂಡಾ ಕ್ರೀಡಾಂಗಣದಲ್ಲಿ ನಡೆದ 2026ರ ನ್ಯಾಷನಲ್ ಸೀನಿಯರ್ ಫೆಡರೇಶನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಪಂಜಾಬ್‌ನ 25 ವರ್ಷದ ಓಟಗಾರ ಗುರಿಂದರ್ವೀರ್ ಸಿಂಗ್ ಕೇವಲ 10.09 ಸೆಕೆಂಡುಗಳಲ್ಲಿ ಗುರಿ ತಲುಪಿ, ಪುರುಷರ 100 ಮೀಟರ್ ಓಟದಲ್ಲಿ ಹೊಸ ರಾಷ್ಟ್ರೀಯ ದಾಖಲೆ ಬರೆದಿದ್ದಾರೆ. ಈ ಮೂಲಕ ಭಾರತದ ಇತಿಹಾಸದಲ್ಲೇ 10.10 ಸೆಕೆಂಡ್‌ಗಿಂತ ಕಡಿಮೆ ಅವಧಿಯಲ್ಲಿ ಓಡಿದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭರ್ಜರಿ ಪೈಪೋಟಿ: ನ್ಯಾಷನಲ್ ಸೀನಿಯರ್ ಫೆಡರೇಶನ್ ಕಪ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ ಪುರುಷರ 100…

Read More

ಎಷ್ಟು ಕಾದ್ರೂ ಡಾಕ್ಟ್ರೇ ಬರ್ತಿಲ್ಲ! ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ – Kannada News | Patients Face Severe Neglect and Delays at Bagalakotes Bilagi Taluk Hospital

ಬಾಗಲಕೋಟೆ, ಮೇ 24: ಜಿಲ್ಲೆಯ ಬೀಳಗಿ ತಾಲ್ಲೂಕಾಸ್ಪತ್ರೆಯಲ್ಲಿ ರೋಗಿಗಳು ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿದ್ದು, ರೋಗಿಗಳು ಗಂಟೆಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೀಳಗಿಯಿಂದ ಬಂದ ರೋಗಿಗಳು, ಬೆಳಗ್ಗೆ ಆರು ಗಂಟೆಯಿಂದ ಎಂಟು ಗಂಟೆಯವರೆಗಿನ ಡೋಸ್ ನೀಡಬೇಕಾಗಿತ್ತು, ಆದರೆ ಎಂಟೂವರೆ ಆದರೂ ಯಾರೂ ಬಂದು ನೋಡಿಕೊಳ್ಳಲಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಕೇಳಿದಾಗ, ಸಿಬ್ಬಂದಿಯೊಬ್ಬರು ಡೋಸ್‌ಗಳು ಖಾಲಿಯಾಗಿವೆ ಎಂದು ಹೇಳಿದ್ದಾರೆ. ಆಸ್ಪತ್ರೆಯ ಯಾವುದೇ ಭಾಗದಲ್ಲಿ ನರ್ಸ್‌ಗಳು…

Read More

ಶಿವಾನಂದ ನೀಲಣ್ಣವರ್ ದರೋಡೆ ಮಾಡಿಲ್ಲ! ಹೂಡಿಕೆದಾರರ ವೀಡಿಯೋ ವೈರಲ್ – Kannada News | Belagavi Ponzi Scam: Investors Rally to Defend Shivanand Neelannavar

ಬೆಳಗಾವಿ, ಮೇ 24: ಜಿಲ್ಲೆಯಲ್ಲಿ 4,500 ಕೋಟಿ ರೂಪಾಯಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ಶಿವಾನಂದ ನೀಲಣ್ಣವರ್ ಬಂಧನಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಶಿವಾನಂದ ಅವರು ಯಾರಿಗೂ ದ್ರೋಹ ಮಾಡಿಲ್ಲ, ಯಾರ ಜೇಬಿಗೂ ಕತ್ತರಿ ಹಾಕಿಲ್ಲ ಎಂದು ಹಲವು ಹೂಡಿಕೆದಾರರು ಕಣ್ಣೀರು ಹಾಕಿ ಬೆಂಬಲ ವ್ಯಕ್ತಪಡಿಸಿದ್ದಾರೆ. ನೀಲಣ್ಣವರ್ ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಎರಡು ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದ್ದು, ನಿವೃತ್ತ ಸೈನಿಕರು ಮತ್ತು ವಯೋವೃದ್ಧ ಮಹಿಳೆಯರು ನೀಲಣ್ಣವರ್‌ರನ್ನು ನೆನಪಿಸಿಕೊಂಡು ಭಾವುಕರಾಗಿ ಮಾತನಾಡಿದ್ದಾರೆ. ತಾವು ಲಾಭ ಪಡೆದಿರುವುದಾಗಿ ಹೂಡಿಕೆದಾರರು ಹೇಳುತ್ತಿದ್ದು, ಅವರ…

Read More

Guru Sanchara 2026: ಗುರು ಸಂಚಾರ ಕನ್ಯಾ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ? – Kannada News | Virgo Horoscope 2026: Jupiter Transits Impact and Benefits

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ಕನ್ಯಾ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಕನ್ಯಾ ರಾಶಿಯವರಿಗೆ 2026ರ ಗುರು ಸಂಚಾರವು ಮಹತ್ವದ ಬದಲಾವಣೆಗಳನ್ನು ತರಲಿದೆ. ಜೂನ್ 2 ರಿಂದ ಪ್ರಾರಂಭವಾಗುವ ಈ ಗುರು ಸಂಚಾರದಲ್ಲಿ, ಗುರುವು ಕನ್ಯಾ ರಾಶಿಯವರಿಗೆ 11ನೇ ಮನೆಗೆ ಪ್ರವೇಶಿಸುತ್ತಾನೆ. ಇದನ್ನು ಲಾಭಸ್ಥಾನ ಎಂದು ಪರಿಗಣಿಸಲಾಗುತ್ತದೆ, ಇದು ಗುರು ಬಲವನ್ನು ಹೆಚ್ಚಿಸುತ್ತದೆ. ಉತ್ತರಾ, ಹಸ್ತ, ಮತ್ತು ಚಿತ್ತ…

Read More

ಗಾಳಿಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ: ಬಾಣಂತಿ, ಮಗು ಅದೃಷ್ಟವಶಾತ್ ಪಾರು – Kannada News | Yadgiri: Mother and Child Miraculously Escape as Storm Blows Off House Roof

ಯಾದಗಿರಿ, ಮೇ 24: ಜಿಲ್ಲೆಯಲ್ಲಿ ಸುರಿದ ಭಾರಿ ಗಾಳಿ ಸಹಿತ ಮಳೆಯು ಅಪಾರ ಅವಾಂತರ ಸೃಷ್ಟಿಸಿದೆ. ಸುರಪುರ ತಾಲೂಕಿನ ಚಿಗರಿಹಾಳ ಗ್ರಾಮದಲ್ಲಿ ಭಾರಿ ಮಳೆಯೊಂದಿಗೆ ಬೀಸಿದ ಬಿರುಗಾಳಿಗೆ ಮನೆಯೊಂದರ ಶೀಟ್‌ಗಳು ಹಾರಿಹೋಗಿ ಅಪಾರ ನಷ್ಟ ಸಂಭವಿಸಿದೆ. ಮನೆಯ ಮೇಲ್ಛಾವಣಿಯ ಟಿನ್ ಶೀಟ್‌ಗಳು ಕಿತ್ತುಬಂದಿದ್ದು, ಕಲ್ಲುಗಳು ಬಿದ್ದಿವೆ. ಘಟನೆ ವೇಳೆ ಮನೆಯಲ್ಲಿ ಮಗುವನ್ನು ಮಡಿಲಲ್ಲಿ ಇಟ್ಟುಕೊಂಡು ಮಲಗಿದ್ದ ಬಾಣಂತಿ ಮತ್ತು ಮಗು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಂತರ, ತಾಯಿ ಮತ್ತು ಮಗುವನ್ನು ತಕ್ಷಣವೇ ಹತ್ತಿರದ ದೇವಸ್ಥಾನಕ್ಕೆ ಕರೆದೊಯ್ದು…

Read More