ಜೂನ್ನಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ – Kannada News | Karnataka to Recruit 51,000 Guest Teachers in June: Madhu Bangarappa
ಬೆಂಗಳೂರು, ಮೇ 23: 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲೇ ರಾಜ್ಯ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ಬಿಗ್ ಗಿಫ್ಟ್ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜೂನ್ ತಿಂಗಳಿನಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು (Guest Teachers) ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಶಾಲೆಗಳಲ್ಲಿನ ಬೋಧಕರ ಕೊರತೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ, ಬರೋಬ್ಬರಿ 51 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಆಡಳಿತಾತ್ಮಕ ಅನುಮೋದನೆ…