ಬಳ್ಳಾರಿ: ಪಾಲಿಕೆ ಸದಸ್ಯೆ ಪತಿಯಿಂದ ಬಡವರಿಗೆ ಮಹಾವಂಚನೆ!
ಬಳ್ಳಾರಿ, ಮೇ 23: ಜಿಲ್ಲೆಯ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯೆ ಉಮಾದೇವಿ ಅವರ ಪತಿ ಶಿವರಾಜ್ ವಿರುದ್ಧ ಬಡವರಿಗೆ ಭೂಮಿ ನೀಡುವ ನೆಪದಲ್ಲಿ ಮಹಾ ವಂಚನೆ ನಡೆಸಿದ ಆರೋಪ ಕೇಳಿಬಂದಿದೆ. ಬೂದಿಹಾಳ ಸರ್ವೇ ನಂಬರ್ 125ರಲ್ಲಿ ಸುಮಾರು 7.87 ಎಕರೆ ಸರ್ಕಾರಿ ಹಳ್ಳದ ಜಾಗವನ್ನು ಒತ್ತುವರಿ ಮಾಡಿ ಶಿವರಾಜ್ ಅವರು ಲೇಔಟ್ ನಿರ್ಮಿಸಿದ್ದರು. ಈ ಲೇಔಟ್‌ನಲ್ಲಿ ಬಡ ಕುಟುಂಬಗಳಿಗೆ ಒಂದೂವರೆಯಿಂದ ಎರಡು ಲಕ್ಷ ರೂಪಾಯಿಗಳಿಗೆ ಪ್ಲಾಟ್‌ಗಳನ್ನು ಮಾರಾಟ ಮಾಡಿದ್ದರು. ಜನರು ಸಾಲ ಮಾಡಿ ಮನೆಗಳನ್ನು ನಿರ್ಮಿಸಿಕೊಂಡ ನಂತರ, ಜಿಲ್ಲಾಡಳಿತವು…