Kalaburgi Accident: ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಮೃತನ ತಂದೆ ಗೋಳು! – Kannada News | Kalaburagi Road Accident: 5 of a Family Killed in Cruiser Truck Collision at Chittapur
ಕಲಬುರಗಿ, ಮೇ 23: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಮಧ್ಯರಾತ್ರಿ ಸಂಭವಿಸಿದ ಈ ದುರ್ಘಟನೆಯಲ್ಲಿ ಕ್ರೂಸರ್ ವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಕ್ರೂಸರ್‌ನಲ್ಲಿದ್ದ ಹುಸೇನ್, ಮಹಬೂಬ್, ತೋಲುಸಾಬ್, ರಸೂಲ್ ಬೀ, ಫಾತೀಮಾ ಅಲಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರೆಲ್ಲರೂ ಚಿತ್ತಾಪುರದ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದಾರೆ. ಮೃತರಲ್ಲೊಬ್ಬರ ತಂದೆಯು ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ತಮ್ಮ ಪುತ್ರ…