Category Archives: Blog

Your blog category

Kalaburagi Accident: ಕಲಬುರಗಿಯ ಚಿತ್ತಾಪುರದಲ್ಲಿ ಭೀಕರ ರಸ್ತೆ ಅಪಘಾತ, ಒಂದೇ ಕುಟುಂಬದ ಐವರ ದುರ್ಮರಣ – Kannada News | Kalaburagi Fatal Accident: 5 Family Members Dead in Chittapur Car Lorry Collision

ಕಲಬುರಗಿ, ಮೇ 23: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ಅಪಘಾತ(Accident)ದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದಾರೆ. ಕುಟುಂಬದ ಸದಸ್ಯರೆಲ್ಲರೂ ವೈಯಕ್ತಿಕ ಕೆಲಸದ ನಿಮಿತ್ತ ಯಾದಗಿರಿಗೆ ತೆರಳಿದ್ದರು. ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಕ್ರೂಸರ್ ವಾಹನದಲ್ಲಿ ತಮ್ಮ ಊರಾದ ಇಂಗಳಗಿಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಹಾಗೂ ಇವರ ಕ್ರೂಸರ್ ವಾಹನದ ನಡುವೆ ಮುಖಾಮುಖಿ ಭೀಕರ ಡಿಕ್ಕಿಯಾಗಿದೆ.

ಸ್ಥಳದಲ್ಲೇ ಐವರ ಸಾವು, ನುಜ್ಜುಗುಜ್ಜಾದ ವಾಹನ
ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕ್ರೂಸರ್ ವಾಹನವು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ವಾಹನದಲ್ಲಿದ್ದ ಇಂಗಳಗಿ ಗ್ರಾಮದ ನಿವಾಸಿಗಳಾದ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಮತ್ತು ಫಾತೀಮಾ ಅಲಿ (38) ಅವರು ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮತ್ತಷ್ಟು ಓದಿ: ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ

ಪೊಲೀಸ್ ಅಧಿಕಾರಿಗಳ ಭೇಟಿ
ಮಧ್ಯರಾತ್ರಿ ಹೆದ್ದಾರಿಯಲ್ಲಿ ನಡೆದ ಈ ಭೀಕರ ದುರಂತದ ಮಾಹಿತಿ ಸಿಗುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತ ನಡೆದ ಜಾಗವನ್ನು ಪರಿಶೀಲನೆ ನಡೆಸಲಾಗಿದ್ದು, ನುಜ್ಜುಗುಜ್ಜಾದ ವಾಹನದಿಂದ ಮೃತದೇಹಗಳನ್ನು ಹೊರತೆಗೆದು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದೆ. ಒಂದೇ ಕುಟುಂಬದ ಐವರು ಜತೆಯಾಗಿಯೇ ಪ್ರಾಣ ಕಳೆದುಕೊಂಡಿರುವುದರಿಂದ ಇಂಗಳಗಿ ಗ್ರಾಮದಲ್ಲಿ ಸದ್ಯ ಸೂತಕದ ಛಾಯೆ ಆವರಿಸಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಗೋಲ್ಡನ್ ಅವರ್ ಕಳೆದುಕೊಳ್ತಿದೆ ‘ಜನ ನಾಯಗನ್’ ಟೀಂ; ನಡೆಯಿತು ಮತ್ತೊಂದು ದೊಡ್ಡ ತಪ್ಪು – Kannada News | Jana Nayagan Release Nightmare: Vijay’s Last Film Faces Censorship, Piracy and Delay

ಕಾಲಿವುಡ್ ನಟ ದಳಪತಿ ವಿಜಯ್ ಅವರು (Thalapathy Vijay)  ತಮಿಳುನಾಡು ಸಿಎಂ ಆದ ಬೆನ್ನಲ್ಲೇ, ಅವರ ಕೊನೆಯ ಸಿನಿಮಾ ಎನ್ನಲಾದ ‘ಜನ ನಾಯಗನ್’ ಸಾಕಷ್ಟು ಕುತೂಹಲ ಮೂಡಿಸಿತ್ತು. ‘ಎರಡೇ ವಾರದಲ್ಲಿ ಸಿನಿಮಾ ಬರಲಿದೆ’ ಎಂದು ವಿಜಯ್ ಸಿಎಂ ಆದಾಗ ನಿರ್ಮಾಪಕ ಕೆ ವೆಂಕಟ್ ನಾರಾಯಣ್ ಘೋಷಣೆ ಮಾಡಿದ್ದರು. ಸಾಲು ಸಾಲು ವಿವಾದಗಳು ಮತ್ತು ಕಾನೂನು ಹೋರಾಟಗಳ ನಡುವೆಯೂ ಸಿನಿಮಾ ರಿಲೀಸ್ ದಿನಾಂಕ ಸ್ಪಷ್ಟವಾಗಿಲ್ಲ. ತಂಡ ಗೋಲ್ಡನ್ ಅವರ್​​ನ ಕಳೆದುಕೊಳ್ಳುತ್ತಿರುವುದು ಸ್ಪಷ್ಟವಾಗಿದೆ. ಒಂದು ಕಾಲದಲ್ಲಿ ಬಾಕ್ಸ್ ಆಫೀಸ್ ಇತಿಹಾಸ ಬರೆಯಲಿದೆ ಎನ್ನಲಾಗುತ್ತಿದ್ದ ಈ ಚಿತ್ರದ ಹೈಪ್ ಈಗ ಕಮರುತ್ತಿದೆಯೇ ಎನ್ನುವ ಆತಂಕ ಅಭಿಮಾನಿಗಳಲ್ಲಿ ಶುರುವಾಗಿದೆ.

‘ಜನ ನಾಯಗನ್’ ಸಿನಿಮಾ ವಿವಾದಗಳನ್ನು ಎದುರಿಸಿದೆ. ಚಿತ್ರವನ್ನು ಸಂಕ್ರಾಂತಿ ಹಬ್ಬದ (ಜನವರಿ) ಸಮಯದಲ್ಲೇ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿತ್ತು. ಆದರೆ, ಸೆನ್ಸಾರ್ ಮಂಡಳಿ ಚಿತ್ರಕ್ಕೆ ಸರ್ಟಿಫಿಕೇಟ್ ನೀಡಲು ನಿರಾಕರಿಸಿ, ರಿವೈಸಿಂಗ್ ಕಮಿಟಿಗೆ ಕಳುಹಿಸಿದಾಗ ದೊಡ್ಡ ಕಾನೂನು ಹೋರಾಟವೇ ಶುರುವಾಯಿತು. ಮದ್ರಾಸ್ ಹೈಕೋರ್ಟ್‌ನಿಂದ ಹಿಡಿದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರೂ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿಲ್ಲ.

ಇಷ್ಟರಲ್ಲೇ ಚಿತ್ರತಂಡಕ್ಕೆ ಮತ್ತೊಂದು ಆಘಾತ ಎದುರಾಯಿತು. ಸಿನಿಮಾ ಇನ್ನೂ ಥಿಯೇಟರ್‌ಗೆ ಬರುವ ಮುನ್ನವೇ ಸಿನಿಮಾದ ಎಚ್​ಡಿ ಪ್ರಿಂಟ್ ಆನ್‌ಲೈನ್ ಪೈರಸಿ ಸೈಟ್‌ಗಳಲ್ಲಿ ಲೀಕ್ ಆಯಿತು. ಎಡಿಟಿಂಗ್ ಸ್ಟುಡಿಯೋದಿಂದಲೇ ಡೇಟಾ ಕದ್ದು ಇಡೀ ಸಿನಿಮಾವನ್ನು ಲೀಕ್ ಮಾಡಿದ ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದು, ಇತ್ತೀಚೆಗಷ್ಟೇ ಮದ್ರಾಸ್ ಹೈಕೋರ್ಟ್ ಈ ಪ್ರಕರಣದ ಆರೋಪಿಗಳಿಗೆ ಬೇಲ್ ನೀಡಲು ಕೂಡ ನಿರಾಕರಿಸಿದೆ.

ಒಂದು ಹಂತದಲ್ಲಿ ಸಿನಿಮಾದ ಮೈಲೇಜ್ ಡ್ರಾಪ್ ಆಗಿತ್ತು. ಆದರೆ, ವಿಜಯ್ ಸಿಎಂ ಆದ ಬಳಿಕ ಸಿನಿಮಾ ಮತ್ತೆ ಹೈಪ್ ಪಡೆದುಕೊಂಡಿತ್ತು. ಆದರೆ, ಅದು ಕೂಡ ಈಗ ಹಂತಹಂತವಾಗಿ ತಣ್ಣಗಾಗುತ್ತಿದೆ. ತಮಿಳುನಾಡಿನ ರಾಜಕೀಯ ವಾತಾವರಣದ ಬಿಸಿ ಸ್ವಲ್ಪ ತಿಳಿಯಾಗುತ್ತಿದ್ದಂತೆ, ಸಿನಿಮಾದ ಮೇಲಿದ್ದ ಒಟ್ಟಾರೆ ಹೈಪ್ ಮತ್ತು ಬಝ್ ಕೂಡ ಸ್ಲೋ ಆಗುತ್ತಿದೆ. ಅಲ್ಲದೆ, ಬಿಡುಗಡೆಯ ದಿನಾಂಕದ ಬಗ್ಗೆ ನಿರ್ಮಾಪಕ ಕಡೆಯಿಂದ ಯಾವುದೇ ಅಧಿಕೃತ ಪ್ರಕಟಣೆ ಇಲ್ಲದಿರುವುದು ಅಭಿಮಾನಿಗಳಲ್ಲಿ ಗೊಂದಲ ಮೂಡಿಸಿದೆ.

ಇದನ್ನೂ ಓದಿ: ‘ಜನ ನಾಯಗನ್’ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ದಳಪತಿ ವಿಜಯ್

ಹೊಸ ವರದಿ ಪ್ರಕಾರ, ಚಿತ್ರತಂಡ ಈಗ ಜೂನ್ ಮೂರನೇ ವಾರದಲ್ಲಿ, ಅಂದರೆ ವಿಜಯ್ ಅವರ ಹುಟ್ಟುಹಬ್ಬದ ಸಂಭ್ರಮದ ವೇಳೆ ಚಿತ್ರವನ್ನು ರಿಲೀಸ್ ಮಾಡಲು ಟಾರ್ಗೆಟ್ ಮಾಡಿಕೊಂಡಿದೆ. ಹುಟ್ಟುಹಬ್ಬದ ದಿನಾಂಕ ಅಭಿಮಾನಿಗಳಿಗೆ ಎಮೋಷನಲ್ ಆಗಿ ಕನೆಕ್ಟ್ ಆದರೂ, ವಿವಾದಗಳಿಂದ ಈಗಾಗಲೇ ಹೈರಾಣಾಗಿರುವ ಈ ಚಿತ್ರ ಜೂನ್​ವರೆಗೂ ತನ್ನ ಹೈಪ್ ಉಳಿಸಿಕೊಂಡು ಅಂದುಕೊಂಡ ಮಟ್ಟದ ಯಶಸ್ಸು ಸಾಧಿಸುತ್ತಾ ಎಂಬುದು ಸದ್ಯದ ಪ್ರಶ್ನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಹೀನಾಯ ಅತ್ಯಂತ ಹೀನಾಯ ದಾಖಲೆ ಬರೆದ RCB

Source link

Bengaluru Air Quality: ಮಾಲಿನ್ಯ ಮುಕ್ತವಾಯ್ತು ಕರ್ನಾಟಕ! ಬೆಂಗಳೂರು, ಮೈಸೂರು, ಮಂಗಳೂರಿನ ಇಂದಿನ AQI ಎಷ್ಟು ಗೊತ್ತಾ? – Kannada News | Bengaluru AQI Today: Air Quality Levels in Karnataka Cities on May 23

ಬೆಂಗಳೂರು, ಮೇ 23: ಇಂದು ಕರ್ನಾಟಕದ ಪ್ರಮುಖ ನಗರಗಳು ಮತ್ತು ರಾಜಧಾನಿ ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ(AQI) ಒಟ್ಟಾರೆಯಾಗಿ ತೃಪ್ತಿಕರ ಮತ್ತು ಉತ್ತಮ ಮಟ್ಟದಲ್ಲಿದೆ. ಇತ್ತೀಚಿನ ಮಳೆ ಮತ್ತು ಹವಾಮಾನ ಬದಲಾವಣೆಗಳಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ ತೃಪ್ತಿಕರ ಮಟ್ಟದಲ್ಲಿ ದಾಖಲಾಗಿದೆ.
  • ಮಳೆಯ ಕಾರಣದಿಂದಾಗಿ ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಮಾಲಿನ್ಯ ನಿಯಂತ್ರಣದಲ್ಲಿದೆ.
  • ಮೈಸೂರು ಮತ್ತು ಮಂಗಳೂರು ನಗರಗಳಲ್ಲಿ ಅತ್ಯುತ್ತಮ ಶುದ್ಧ ಗಾಳಿ ವಾತಾವರಣವಿದೆ.

ಬೆಂಗಳೂರಿನ ಇಂದಿನ ವಾಯು ಗುಣಮಟ್ಟ

ರಾಜಧಾನಿ ಬೆಂಗಳೂರಿನಲ್ಲಿ ಇಂದು ಸರಾಸರಿ AQI ಮಟ್ಟ 40 ರಿಂದ 65 ರ ಆಸುಪಾಸಿನಲ್ಲಿದೆ. ಇದನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಮಾನದಂಡಗಳ ಪ್ರಕಾರ ತೃಪ್ತಿಕರ ಅಥವಾ ಉತ್ತಮ ಎಂದು ವರ್ಗೀಕರಿಸಲಾಗಿದೆ. ಸಿಲ್ಕ್ ಬೋರ್ಡ್ ಮತ್ತು ಬಿಟಿಎಂ ಲೇಔಟ್​ನಲ್ಲಿ ವಾಹನ ದಟ್ಟಣೆ ಹೆಚ್ಚಿರುವುದರಿಂದ AQI ಸ್ವಲ್ಪ ಮಟ್ಟಿಗೆ ಹೆಚ್ಚಿದ್ದು, 64 ರಿಂದ 75 ರಷ್ಟಿದೆ (ತೃಪ್ತಿಕರ). ಜಯನಗರ ಮತ್ತು ಸಿಟಿ ರೈಲ್ವೆ ಸ್ಟೇಷನ್​ಗಳಲ್ಲಿ ಗಾಳಿಯ ಗುಣಮಟ್ಟ ಸಾಧಾರಣವಾಗಿದ್ದು, 60 ರಿಂದ 72ರಷ್ಟಿದೆ. ಹೆಬ್ಬಾಳ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶ ಮತ್ತು ಹೆದ್ದಾರಿ ಬಳಿಯಿದ್ದರೂ ಇಂದಿನ ವಾಯು ಸೂಚ್ಯಂಕ 42 ರಿಂದ 57 ರಷ್ಟಿದ್ದು, ಉಸಿರಾಟಕ್ಕೆ ಯೋಗ್ಯವಾಗಿದೆ.

ನಗರದಲ್ಲಿ ಇಂದಿನ ಪ್ರಮುಖ ಮಾಲಿನ್ಯಕಾರಕ ಘಟಕಗಳೆಂದರೆ PM10 ಮತ್ತು PM2.5 ಸೂಕ್ಷ್ಮ ಕಣಗಳಾಗಿವೆ. ಆದಾಗ್ಯೂ, ಇವುಗಳು ಅಪಾಯಕಾರಿ ಮಟ್ಟವನ್ನು ಮೀರಿಲ್ಲದ ಕಾರಣ ಸಾರ್ವಜನಿಕರು ಮುಕ್ತವಾಗಿ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬಹುದು.

ಕರ್ನಾಟಕದ ಇತರೆ ಪ್ರಮುಖ ನಗರಗಳ AQI ವಿವರ

ಕರ್ನಾಟಕದ ಇತರೆ ಪ್ರಮುಖ ನಗರಗಳ ಇಂದಿನ ವಾಯು ಗುಣಮಟ್ಟವು (AQI) ಅತ್ಯಂತ ಉತ್ತಮವಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಶುದ್ಧತೆ ಆರೋಗ್ಯಕರ ಮಟ್ಟದಲ್ಲಿದೆ. ಪ್ರವಾಸಿ ನಗರಿ ಮೈಸೂರು ಮತ್ತು ಕರಾವಳಿಯ ಮಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕವು ಅತ್ಯಂತ ಕನಿಷ್ಠ ಮಟ್ಟದಲ್ಲಿದ್ದು (AQI 28 ರಿಂದ 35), ಹಸಿರು ವಲಯದಲ್ಲಿದೆ (ಅತ್ಯುತ್ತಮ ಗಾಳಿ). ಇನ್ನು ಉತ್ತರ ಕರ್ನಾಟಕದ ಪ್ರಮುಖ ನಗರಗಳಾದ ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಯಲ್ಲಿ AQI ಮಟ್ಟವು 32 ರಿಂದ 45 ರಷ್ಟಿದ್ದು, ಉತ್ತಮ ವಾತಾವರಣವಿದೆ. ಗಣಿ ನಾಡು ಬಳ್ಳಾರಿಯಲ್ಲಿ ಇಂದಿನ ವಾಯು ಸೂಚ್ಯಂಕ 48 ರಷ್ಟಿದ್ದರೆ, ಕಲಬುರಗಿಯಲ್ಲಿ ಸ್ವಲ್ಪ ಮಟ್ಟಿಗೆ ಹೆಚ್ಚಾಗಿ ಅಂದರೆ 56 ರಷ್ಟ ದಾಖಲಾಗುವ ಮೂಲಕ ‘ತೃಪ್ತಿಕರ’ ವಲಯದಲ್ಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Petrol Diesel Price Hike: ಹತ್ತು ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ, ಬೆಂಗಳೂರಲ್ಲಿಎಷ್ಟಿದೆ? – Kannada News | Petrol Diesel Price Hike: India Sees Third Increase in 10 Days, Bengaluru Rates Soar

ನವದೆಹಲಿ, ಮೇ 23: ದೇಶದಲ್ಲಿ ದೀರ್ಘಕಾಲದವರೆಗೆ ಸ್ಥಿರವಾಗಿದ್ದ ಇಂಧನ ದರಗಳಿಗೆ ಈಗ ಜಾಗತಿಕ ಮಾರುಕಟ್ಟೆಯ ಬಿಸಿ ತಟ್ಟಿದೆ. ಶನಿವಾರದ ತೈಲ ಕಂಪನಿಗಳ ನಿರ್ಧಾರದಂತೆ ಪೆಟ್ರೋಲ್ ಬೆಲೆ ಲೀಟರ್‌ಗೆ 87 ಪೈಸೆ ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 91 ಪೈಸೆ ಏರಿಕೆಯಾಗಿದೆ.

ಇದೇ ತಿಂಗಳು ಮೂರನೇ ಬಾರಿ ಏರಿಕೆ:
ಇತ್ತೀಚಿನ ದಿನಗಳಲ್ಲಿ ತೈಲ ಕಂಪನಿಗಳು ಗ್ರಾಹಕರ ಮೇಲೆ ಸತತವಾಗಿ ಇಂಧನ ಹೊರೆಯನ್ನು ಹಾಕುತ್ತಿವೆ. ಈ ವಾರದ ಆರಂಭದಲ್ಲಷ್ಟೇ ಲೀಟರ್ ಇಂಧನಕ್ಕೆ 90 ಪೈಸೆ ಹೆಚ್ಚಿಸಲಾಗಿತ್ತು. ಅದಕ್ಕೂ ಮೊದಲು ತೈಲ ಮಾರುಕಟ್ಟೆ ಕಂಪನಿಗಳು (OMCs) ಪ್ರತಿ ಲೀಟರ್‌ಗೆ ಒಮ್ಮೆಗೆ ಸುಮಾರು 3 ರೂ.ಗಳಷ್ಟು ದರಗಳನ್ನು ಹೆಚ್ಚಿಸುವ ಮೂಲಕ ದೀರ್ಘಾವಧಿಯ ಬೆಲೆ ಸ್ಥಿರತೆಗೆ ಬ್ರೇಕ್ ಹಾಕಿದ್ದವು. ಇತ್ತೀಚಿನ ಈ ಪರಿಷ್ಕರಣೆಯಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 97.77 ರೂ.ಗಳಿಂದ 98.64 ರೂ.ಗಳಿಗೆ ತಲುಪಿದೆ.

ದರ ಏರಿಕೆಗೆ ಅಸಲಿ ಕಾರಣವೇನು?
ಮಧ್ಯಪ್ರಾಚ್ಯದಲ್ಲಿ ತಲೆದೂರಿರುವ ಯುದ್ಧದ ವಾತಾವರಣ ಮತ್ತು ಯುಎಸ್-ಇರಾನ್ ನಡುವಿನ ಶಾಂತಿ ಮಾತುಕತೆಗಳ ಸುತ್ತಲಿನ ಅನಿಶ್ಚಿತತೆಯೇ ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಇದರಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ತೀವ್ರ ಏರಿಳಿತ ಕಾಣುತ್ತಿವೆ. ಶುಕ್ರವಾರ ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 104 ಡಾಲರ್‌ಗಿಂತ (USD) ಹೆಚ್ಚಾಗಿದ್ದರೆ, ಯುಎಸ್ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ ಕಚ್ಚಾ ತೈಲವು ಬ್ಯಾರೆಲ್‌ಗೆ 97 ಡಾಲರ್ ಆಸುಪಾಸಿನಲ್ಲಿ ವಹಿವಾಟು ನಡೆಸಿದೆ. ಜಾಗತಿಕ ಪೂರೈಕೆಯ ಕಳವಳಗಳ ಮಧ್ಯೆ ಒಂದು ಹಂತದಲ್ಲಿ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ ಬರೋಬ್ಬರಿ 111 ಡಾಲರ್‌ಗೆ ತಲುಪಿತ್ತು.

ತೈಲ ಕಂಪನಿಗಳಿಗೆ ಆಗ್ತಿದ್ದ ಭಾರಿ ನಷ್ಟ
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಸತತವಾಗಿ ಏರುತ್ತಿದ್ದರೂ, ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ತಿಂಗಳುಗಳಿಂದ ದೇಶೀಯ ಇಂಧನ ಬೆಲೆಗಳನ್ನು ಬದಲಾಯಿಸದೆ ಗ್ರಾಹಕರಿಗೆ ನೆರವಾಗಿದ್ದವು. ಆದರೆ, ಈ ಅವಧಿಯಲ್ಲಿ ಸಾರ್ವಜನಿಕ ವಲಯದ ತೈಲ ಕಂಪನಿಗಳು ಪ್ರತಿ ತಿಂಗಳು ಸುಮಾರು 1,000 ಕೋಟಿ ರೂ.ಗಳಷ್ಟು ಭಾರಿ ನಷ್ಟವನ್ನು ಅನುಭವಿಸುತ್ತಿದ್ದವು. ಹೀಗಾಗಿ ನಷ್ಟದ ಹೊರೆಯನ್ನು ತಗ್ಗಿಸಲು ಈಗ ಬೆಲೆ ಪರಿಷ್ಕರಣೆಯ ಮೂಲಕ ಆ ಹೊರೆಯ ಒಂದು ಭಾಗವನ್ನು ಗ್ರಾಹಕರ ಮೇಲೆ ವರ್ಗಾಯಿಸಲು ಕಂಪನಿಗಳು ಆರಂಭಿಸಿವೆ.

ಇಂಧನ ಆಘಾತ ಎದುರಿಸಲು ಭಾರತ ಸಜ್ಜು: ಹರ್ದೀಪ್ ಸಿಂಗ್ ಪುರಿ
ಇತ್ತೀಚೆಗೆ ನಡೆದ ‘ಸಿಐಐ ವಾರ್ಷಿಕ ವ್ಯವಹಾರ ಶೃಂಗಸಭೆ 2026’ ರಲ್ಲಿ ಮಾತನಾಡಿದ್ದ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, ಜಾಗತಿಕ ಅಡೆತಡೆಗಳು ಮತ್ತು ಏರುತ್ತಿರುವ ಕಚ್ಚಾ ತೈಲ ಬೆಲೆಗಳ ಹೊರತಾಗಿಯೂ ಬಲವಾದ ನೀತಿ ಸಮನ್ವಯದ ಮೂಲಕ ಭಾರತವು ಸ್ಥಿರ ಇಂಧನ ಪೂರೈಕೆಯನ್ನು ಖಚಿತಪಡಿಸಿದೆ ಎಂದು ಹೇಳಿದ್ದರು. ಯಾವುದೇ ಕೊರತೆಯಾಗದಂತೆ ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಮತ್ತು ಎಲ್‌ಪಿಜಿಯ ತಡೆರಹಿತ ಲಭ್ಯತೆಯನ್ನು ಖಚಿತಪಡಿಸಲಾಗಿದ್ದು, ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ದೇಶೀಯ ಎಲ್‌ಪಿಜಿ ಉತ್ಪಾದನೆಯನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದೆ ಎಂದು ಅವರು ತಿಳಿಸಿದ್ದರು. ಆದಾಗ್ಯೂ, ಪ್ರಸ್ತುತ ಜಾಗತಿಕ ಒತ್ತಡ ಹೆಚ್ಚಾಗಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲಿ ಸಣ್ಣ ಪ್ರಮಾಣದ ಬೆಲೆ ಏರಿಕೆ ಅನಿವಾರ್ಯವಾಗಿದೆ.

Source link

‘ದೃಶ್ಯಂ 3’ ದಾಖಲೆಯ ಕಲೆಕ್ಷನ್; 100 ಕೋಟಿ ಸನಿಹದಲ್ಲಿ ಮೋಹನ್​​ಲಾಲ್ ಚಿತ್ರ – Kannada News | Drishyam 3 Box Office: Mohanlal’s Thriller Hits 76 Cr in 2 Days, Nears 100 Cr Mark

ಮಲಯಾಳಂ ಚಿತ್ರರಂಗದ ಇತಿಹಾಸದ ಅತ್ಯಂತ ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಫ್ರಾಂಚೈಸಿ ಎಂದರೆ ಅದು ‘ದೃಶ್ಯಂ’. ಈಗ ಈ ಸರಣಿಯಲ್ಲಿ ಮೂರನೇ ಭಾಗ ರಿಲೀಸ್ ಆಗಿ,ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದೆ. ಮಲಯಾಳಂ ಸ್ಟಾರ್ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಅವರ ಮ್ಯಾಜಿಕಲ್ ಕಾಂಬಿನೇಷನ್ ಮತ್ತೊಮ್ಮೆ ಕಮಾಲ್ ಮಾಡಿದೆ. ‘ದೃಶ್ಯಂ 3’ ಸಿನಿಮಾ (Drishaym 3 Movie) ಕೇವಲ ಎರಡೇ ದಿನಗಳಲ್ಲಿ ವಿಶ್ವಾದ್ಯಂತ ಬ್ಲಾಕ್‌ಬಸ್ಟರ್ ಕಲೆಕ್ಷನ್ ಮಾಡಿದೆ.

ಭಾರತದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ ಈ ಚಿತ್ರ, ಕೇವಲ ಎರಡನೇ ದಿನದಲ್ಲೇ ಗಲ್ಲಾಪೆಟ್ಟಿಗೆಯನ್ನು ಕೊಳ್ಳೆಹೊಡೆದಿದೆ. ಭಾರತದಲ್ಲಿ ಈ ಸಿನಿಮಾ ಎರಡನೇ ದಿನ 11.05 ಕೋಟಿ ನೆಟ್ ಕಲೆಕ್ಷನ್ ಮಾಡಿದೆ. ಈ ಮೂಲಕ ಭಾರತದ ಗ್ರಾಸ್ ಕಲೆಕ್ಷನ್ 31.18 ಕೋಟಿ ರೂಪಾಯಿ ಆಗಿದೆ.

ವಿಶೇಷ ಎಂದರೆ ವಿದೇಶದಲ್ಲಿ ಈ ಸಿನಿಮಾ ಎರಡನೇ ದಿನ 20 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಎರಡೇ ದಿನಕ್ಕೆ ‘ದೃಶ್ಯಂ 3’ ವಿಶ್ವಾದ್ಯಂತ ಬರೋಬ್ಬರಿ 76.18 ಕೋಟಿ ಗ್ರೋಸ್ ಕಲೆಕ್ಷನ್ ಮಾಡುವ ಮೂಲಕ 100 ಕೋಟಿ ಕ್ಲಬ್‌ನತ್ತ ಮುನ್ನುಗ್ಗುತ್ತಿದೆ.

‘ದೃಶ್ಯಂ’ ಸರಣಿಯ ಯಶಸ್ಸಿಗೆ ಮುಖ್ಯ ಕಾರಣ ಚಿತ್ರಕಥೆಯ ಬಲ. ನಿರ್ದೇಶಕ ಜೀತು ಜೋಸೆಫ್ ಅವರ ಡೈರೆಕ್ಷನ್ ಬ್ರಿಲಿಯನ್ಸ್ ಈ ಬಾರಿಯೂ ಎದ್ದು ಕಾಣುತ್ತಿದೆ. ಪ್ರೇಕ್ಷಕರು ಊಹಿಸದಂತಹ ಟ್ವಿಸ್ಟ್ ಹಾಗೂ ಟರ್ನ್‌ಗಳನ್ನು ನೀಡುತ್ತಾ, ಚಿತ್ರದ ಕೊನೆಯವರೆಗೂ ಸೀಟಿನ ತುದಿಗೆ ತಂದು ನಿಲ್ಲಿಸುವಲ್ಲಿ ಜೀತು ಮತ್ತೊಮ್ಮೆ ಗೆದ್ದಿದ್ದಾರೆ.

ಇನ್ನು ಜಾರ್ಜ್‌ಕುಟ್ಟಿ ಪಾತ್ರಕ್ಕೆ ಜೀವ ತುಂಬಿರುವ ಮೋಹನ್‌ಲಾಲ್, ತಮ್ಮ ಅದ್ಭುತ ನಟನೆಯಿಂದ ಪ್ರೇಕ್ಷಕರನ್ನು ಮಂತ್ರಮುಗ್ಧರನ್ನಾಗಿಸಿದ್ದಾರೆ. ಅವರ ಕಣ್ಣಿನಲ್ಲೇ ಕಥೆ ಹೇಳುವ ತಂತ್ರ, ಮುಖದ ಹಾವಭಾವ ಹಾಗೂ ಮೌನದಲ್ಲೇ ಗಂಭೀರತೆ ಮೂಡಿಸುವ ನಟನೆ ಚಿತ್ರದ ತೂಕವನ್ನು ಹೆಚ್ಚಿಸಿದೆ.

ಇದನ್ನೂ ಓದಿ: ‘ದೃಶ್ಯಂ 3’ ಚಿತ್ರಕ್ಕೆ ಸಿಕ್ಕ ರೆಸ್ಪಾನ್ಸ್ ನೋಡಿ ಕಣ್ಣೀರು ಹಾಕಿದ ನಟ ಮೋಹನ್‌ಲಾಲ್

ಮೊದಲ ಭಾಗದಿಂದಲೇ ಭಾರತೀಯ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ದ ‘ದೃಶ್ಯಂ’ ಸರಣಿ, ಈಗ ಮೂರನೇ ಭಾಗದಲ್ಲೂ ಅದೇ ಯಶಸ್ಸನ್ನು ಮುಂದುವರಿಸಿದೆ. ಪ್ರಾದೇಶಿಕ ಭಾಷೆಯ ಗಡಿ ದಾಟಿ ಜಾಗತಿಕ ಮಟ್ಟದಲ್ಲಿ ಸೌಂಡ್ ಮಾಡುತ್ತಿರುವ ಈ ಚಿತ್ರ, ಮಲಯಾಳಂ ಚಿತ್ರರಂಗದ ಹೆಮ್ಮೆಯ ಫ್ರಾಂಚೈಸಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವೀಕೆಂಡ್‌ನಲ್ಲಿ ಕಲೆಕ್ಷನ್ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಸಿನಿಮಾ ಹಲವು ದಾಖಲೆಗಳನ್ನು ಮುರಿಯುವುದು ಖಚಿತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Tulsi Gabbard Resigns: ಟ್ರಂಪ್ ಸರ್ಕಾರದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ ರಾಜೀನಾಮೆ – Kannada News | Tulsi Gabbard Resigns from Trump Admin: Husband’s Cancer and Iran Policy Differences

ವಾಷಿಂಗ್ಟನ್, ಮೇ 23: ಅಮೆರಿಕದ ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿಯಾಗಿದ್ದ 45 ವರ್ಷದ ತುಳಸಿ ಗಬ್ಬಾರ್ಡ್(Tulsi Gabbard) ಅವರು ಶುಕ್ರವಾರ ಟ್ರಂಪ್ ಆಡಳಿತವನ್ನು ತೊರೆದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ‘X’ (ಟ್ವಿಟರ್) ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ತುಳಸಿ ಗಬ್ಬಾರ್ಡ್ ಅವರ ಈ ನಿರ್ಧಾರದ ಹಿಂದೆ ಅವರ ಕುಟುಂಬಕ್ಕೆ ಎದುರಾಗಿರುವ ದೊಡ್ಡ ಸವಾಲಿದೆ. ಅವರ ಪತಿ ಅಬ್ರಹಾಂ ಅವರಿಗೆ ಅತ್ಯಂತ ಅಪರೂಪದ ಮೂಳೆ ಕ್ಯಾನ್ಸರ್ (Bone Cancer) ಇರುವುದು ಇತ್ತೀಚೆಗಷ್ಟೇ ಪತ್ತೆಯಾಗಿದೆ. ತಮ್ಮ 11 ವರ್ಷಗಳ ದಾಂಪತ್ಯ ಜೀವನದಲ್ಲಿ ಪ್ರತಿ ಕಷ್ಟದಲ್ಲೂ ತಮಗೆ ಬೆಂಬಲವಾಗಿ ನಿಂತ ಪತಿಯನ್ನು ಈ ಕಠಿಣ ಪರಿಸ್ಥಿತಿಯಲ್ಲಿ ಏಕಾಂಗಿಯಾಗಿ ಬಿಡಲು ಸಾಧ್ಯವಿಲ್ಲ ಎಂದು ಗಬ್ಬಾರ್ಡ್ ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ ಪತಿಯ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಜೊತೆಯಾಗಿರಲು ಅವರು ಸಾರ್ವಜನಿಕ ಸೇವೆಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದಾರೆ. ಜೂನ್ 30 ರಂದು ಅವರು ಅಧಿಕೃತವಾಗಿ ಆಡಳಿತದಿಂದ ಹೊರನಡೆಯಲಿದ್ದಾರೆ.

ತಮ್ಮ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ತುಳಸಿ ಅವರು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಅರ್ಪಿಸಿದ್ದು, ಸುಗಮ ಅಧಿಕಾರ ಹಸ್ತಾಂತರಕ್ಕೆ ಬದ್ಧವಾಗಿರುವುದಾಗಿ ಹೇಳಿದ್ದಾರೆ. ಟ್ರಂಪ್ ಕೂಡ ಗಬ್ಬಾರ್ಡ್ ಅವರ ರಾಜೀನಾಮೆಯನ್ನು ದುರದೃಷ್ಟಕರ ಎಂದು ಕರೆದಿದ್ದಾರೆ ಹಾಗೂ ಅವರು ತಮ್ಮ ಅವಧಿಯಲ್ಲಿ ಅತ್ಯುತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಮತ್ತಷ್ಟು ಓದಿ: ತುಳಸಿ ಗಬ್ಬಾರ್ಡ್ ಭೇಟಿ ವೇಳೆ ಅಮೆರಿಕದಲ್ಲಿ ಖಲಿಸ್ತಾನಿ ಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜನಾಥ್ ಸಿಂಗ್

ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಗಬ್ಬಾರ್ಡ್ ಪತಿಯ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದು, ಸದ್ಯ ರಾಷ್ಟ್ರೀಯ ಗುಪ್ತಚರ ಪ್ರಧಾನ ಉಪ ನಿರ್ದೇಶಕರಾಗಿರುವ ಆರನ್ ಲುಕಾಸ್ ಅವರು ಹಂಗಾಮಿ ನಿರ್ದೇಶಕರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಪ್ರಕಟಿಸಿದ್ದಾರೆ. ಹವಾಯಿಯ ಮಾಜಿ ಡೆಮಾಕ್ರಟಿಕ್ ಕಾಂಗ್ರೆಸ್ ಮಹಿಳೆಯಾಗಿದ್ದ ಗಬ್ಬಾರ್ಡ್ ಅವರನ್ನು ಕಳೆದ ವರ್ಷ ಟ್ರಂಪ್ ಅವರು ಗುಪ್ತಚರ ಮುಖ್ಯಸ್ಥರನ್ನಾಗಿ ನೇಮಿಸಿದ್ದರು.

ರಾಜೀನಾಮೆ ಪತ್ರ

ರಾಜೀನಾಮೆಯ ಹಿಂದೆ ರಾಜಕೀಯ ಭಿನ್ನಾಭಿಪ್ರಾಯಗಳಿದ್ದವೇ?
ಮೇಲ್ನೋಟಕ್ಕೆ ಪತಿಯ ಅನಾರೋಗ್ಯದ ಕಾರಣ ನೀಡಲಾಗಿದ್ದರೂ, ಇರಾನ್ ಮೇಲಿನ ದಾಳಿಯ ವಿಷಯದಲ್ಲಿ ಟ್ರಂಪ್ ಮತ್ತು ಗಬ್ಬಾರ್ಡ್ ನಡುವೆ ಭಿನ್ನಾಭಿಪ್ರಾಯಗಳು ತಲೆದೂರಿದ್ದವು ಎನ್ನಲಾಗಿದೆ. ಇರಾನ್ ಪರಮಾಣು ಶಸ್ತ್ರಾಸ್ತ್ರಗಳನ್ನು ತಯಾರಿಸುತ್ತಿದೆ ಎಂದು ಟ್ರಂಪ್ ಪದೇ ಪದೇ ಹೇಳುತ್ತಿದ್ದರೆ, ಗಬ್ಬಾರ್ಡ್ ಮಾತ್ರ ಇರಾನ್ ತನ್ನ ಪರಮಾಣು ಸಾಮರ್ಥ್ಯವನ್ನು ಪುನರ್ನಿರ್ಮಿಸಲು ಯಾವುದೇ ಹೊಸ ಪ್ರಯತ್ನ ಮಾಡಿಲ್ಲ ಎಂದು ಸೆನೆಟ್ ಸಮಿತಿಗೆ ಲಿಖಿತವಾಗಿ ತಿಳಿಸಿದ್ದರು.

ಇತ್ತೀಚೆಗಷ್ಟೇ ವಲಸೆ ಮತ್ತು ವಿಪತ್ತು ನಿರ್ವಹಣೆ ಟೀಕೆಗಳ ಹಿನ್ನೆಲೆಯಲ್ಲಿ ಟ್ರಂಪ್ ಅವರು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಹಾಗೂ ಅಟಾರ್ನಿ ಜನರಲ್ ಪ್ಯಾಮ್ ಬೋಂಡಿ ಅವರನ್ನು ವಜಾಗೊಳಿಸಿದ್ದರು. ಇದರ ಬೆನ್ನಲ್ಲೇ ಈಗ ತುಳಸಿ ಗಬ್ಬಾರ್ಡ್ ಅವರ ರಾಜೀನಾಮೆ ಬಂದಿರುವುದು ಟ್ರಂಪ್ ಸರ್ಕಾರದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

Horoscope Today: ಇಂದು ಈ ರಾಶಿಯವರಿಗೆ ಜವಾಬ್ದಾರಿ ಹೆಚ್ಚಾಗಲಿದೆ!

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 23, ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ಸಪ್ತಮಿ ಮತ್ತು ಅಷ್ಟಮಿ ತಿಥಿಗಳನ್ನು ಒಳಗೊಂಡಿದೆ. ಆಶ್ಲೇಷ ನಕ್ಷತ್ರ ಮತ್ತು ಧ್ರುವ ಯೋಗದೊಂದಿಗೆ, ರಾಹುಕಾಲವು ಬೆಳಗ್ಗೆ 9:04 ರಿಂದ 10:40 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲವು ಮಧ್ಯಾಹ್ನ 1:52 ರಿಂದ 3:28 ರವರೆಗೆ ಇರುವುದು.

ಡಾ. ಬಸವರಾಜ ಗುರೂಜಿ ಅವರು 12 ರಾಶಿಗಳಾದ ಮೇಷ, ವೃಷಭ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನುಸ್ಸು, ಮಕರ, ಕುಂಭ ಮತ್ತು ಮೀನ ರಾಶಿಗಳ ಗ್ರಹಗತಿಗಳ ಆಧಾರದ ಮೇಲೆ ವೈಯಕ್ತಿಕ ಭವಿಷ್ಯವನ್ನು ವಿವರಿಸಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಆರೋಗ್ಯ, ಉದ್ಯೋಗ, ಹಣಕಾಸು, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ಮಾಹಿತಿ ನೀಡಲಾಗಿದೆ.

 

 

 

Source link

Daily Devotional: ಶನಿವಾರದಂದು ಕಪ್ಪು ಬಣ್ಣದ ಬಟ್ಟೆ ಧರಿಸಿದರೆ ಏನಾಗುತ್ತೆ ಗೊತ್ತಾ? – Kannada News | Which Color Clothes to Wear on Which Day? Best Clothing Colors for Each Day of the Week

ಯಾವ ದಿನ ಯಾವ ಬಣ್ಣದ ಬಟ್ಟೆಯನ್ನ ಧರಿಸಬೇಕು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಬಣ್ಣಗಳು ಮನುಷ್ಯನ ಬದುಕಿನಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ತರುವ ಶಕ್ತಿಯನ್ನು ಹೊಂದಿವೆ. ಪ್ರತಿಯೊಂದು ಬಣ್ಣವೂ ಬದುಕಿನ ಮೇಲೆ ತನ್ನದೇ ಆದ ಪ್ರಭಾವವನ್ನು ಬೀರುತ್ತದೆ. ಬಟ್ಟೆಗಳ ಬಣ್ಣ, ಹೂವುಗಳ ಬಣ್ಣ, ಮನೆಯ ಬಣ್ಣ ಹೀಗೆ ನಾವು ನೋಡುವ ಪ್ರತಿಯೊಂದು ಬಣ್ಣವೂ ನಮ್ಮ ಮನಸ್ಥಿತಿ ಮತ್ತು ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆ ಎಂಬುದು ಪ್ರಾಚೀನ ನಂಬಿಕೆ.

ವಾರದ ಏಳು ದಿನಗಳಿಗೆ ನಿರ್ದಿಷ್ಟ ಬಣ್ಣದ ಬಟ್ಟೆಗಳನ್ನು ಧರಿಸುವುದು ಉತ್ತಮ ಅದೃಷ್ಟ ಮತ್ತು ಗ್ರಹಗಳ ಅನುಗ್ರಹವನ್ನು ತರುತ್ತದೆ ಎಂದು ಹೇಳಲಾಗುತ್ತದೆ. ಇದನ್ನು ಕಲರ್ ಥೆರಪಿ ಅಥವಾ ಬಣ್ಣ ಚಿಕಿತ್ಸೆ ಎಂದೂ ಕರೆಯುತ್ತಾರೆ. ಉದಾಹರಣೆಗೆ, ಸೋಮವಾರದಂದು ಚಂದ್ರನ ಪ್ರಭಾವವನ್ನು ಹೆಚ್ಚಿಸಲು ಬಿಳಿ ಬಟ್ಟೆಗಳನ್ನು ಧರಿಸುವುದು ಶುಭವೆಂದು ಪರಿಗಣಿಸಲಾಗುತ್ತದೆ. ಇದು ಮನಸ್ಸಿಗೆ ಶಾಂತಿ ಮತ್ತು ಅದೃಷ್ಟವನ್ನು ತರುತ್ತದೆ ಎಂದು ಹೇಳಲಾಗುತ್ತದೆ ಎಂದು ಗುರೂಜಿ ವಿವರಿಸಿದ್ದಾರೆ

 

 

 

Source link

Karnataka Weather Forecast: ಉತ್ತರ ಕರ್ನಾಟಕಕ್ಕೆ ಆರೆಂಜ್ ಅಲರ್ಟ್​, ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ – Kannada News | Heavy Rain Alert Karnataka: Bengaluru and 14 Districts on Yellow, North Receives Orange for Monsoon 2026

ಬೆಂಗಳೂರು, ಮೇ 23: ಕರ್ನಾಟಕದ ಅಲ್ಲಲ್ಲಿ ಈಗಾಗಲೇ ಮಳೆ(Rain) ಶುರುವಾಗಿದೆ. ಬೆಂಗಳೂರಿನಲ್ಲಿ ಮಳೆ ಇಲ್ಲದಿದ್ದರೂ ಮೋಡಕವಿದ ವಾತಾವರಣವಿದೆ. ಮುಂದಿನ ಎರಡು ದಿನ ಬೆಂಗಳೂರು ಸೇರಿ ಕರ್ನಾಟಕ 14ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು ಉತ್ತರ ಕರ್ನಾಟಕ ಭಾಗಗಳಲ್ಲಿ ಕೂಡ ಮಳೆ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ, ಇನ್ನೂ ಎಷ್ಟು ಕಡೆ ಮಳೆಯಾಗಲಿದೆ ಎನ್ನುವ ಮಾಹಿತಿ ಇಲ್ಲಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಹಾಸನ, ಕೋಲಾರ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ವಿಜಯನಗರ, ಶಿವಮೊಗ್ಗ, ರಾಮನಗರ, ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಚಾಮರಾಜನಗರ, ಯಾದಗಿರಿ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಕೂಡ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ತುಮಕೂರಿನ ವೈಎನ್ ಹೊಸಕೋಟೆಯಲ್ಲಿ ಭಾರಿ ಮಳೆಯಾಗಿದೆ, ದಾವಣಗೆರೆ, ಜಗಳೂರು, ಚಾಮರಾಜನಗರ, ನಾಯಕನಹಟ್ಟಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮದ್ದೂರು, ಸಿಂದಗಿ, ಮನಿರಾಬಾದ್, ಚಿತ್ರದುರ್ಗ, ಎಂಎಂ ಹಿಲ್ಸ್​, ಭರಮಸಾಗರ, ಶಕ್ತಿನಗರ, ಶಿರಾ, ಕುರ್ಡಿ, ಕಂಪ್ಲಿ, ಮಧುಗಿರಿ, ಪರಶುರಾಂಪುರ, ಹಿರಿಯೂರು, ಮುದ್ದೇಬಿಹಾಳ, ಗಂಗಾವತಿ, ಹೊಸಕೋಟೆ, ವಿಜಯಪುರ, ಮಂಗಳೂರು ಹಾಗೂ ಕೋಟದಲ್ಲಿ ಮಳೆಯಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ, ಎಲ್ಲೆಲ್ಲಿ?

ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 32.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 42.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿತ್ರದುರ್ಗದಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿಂತಾಮಣಿಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link