ಈ ವರ್ಷವೇ ಅನಿರುದ್ಧ್ ರವಿಚಂದರ್, ಕಾವ್ಯಾ ಮಾರನ್ ಮದುವೆ? ಜೋರಾಗಿದೆ ಗಾಸಿಪ್ – Kannada News | Anirudh Ravichander Kavya Maran reportedly tying the knot later this year
ಸಿನಿಮಾ ಸಂಗೀತ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿರುವ ಅನಿರುದ್ಧ್ ರವಿಚಂದರ್ (Anirudh Ravichander) ಮತ್ತು ಐಪಿಎಲ್ ಫ್ರಾಂಚೈಸ್ ಸನ್‌ರೈಸರ್ಸ್ ಹೈದರಾಬಾದ್ ಸಿಇಒ ಕಾವ್ಯಾ ಮಾರನ್ (Kavya Maran) ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಟಾಲಿವುಡ್, ಕಾಲಿವುಡ್ ಹಾಗೂ ಕ್ರಿಕೆಟ್ ವಲಯಗಳಲ್ಲಿ ವೈರಲ್ ಆಗಿದೆ. ಕಳೆದ ಕೆಲವು ದಿನಗಳಿಂದ ಅವರ ಸಂಬಂಧ ಮತ್ತು ವಿವಾಹದ ಬಗ್ಗೆ ಅನೇಕ ಅಂತೆ-ಕಂತೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಈಗ ಮತ್ತೆ ಗಾಸಿಪ್ ಜೋರಾಗಿದೆ. ಕಾಲಿವುಡ್ ಮಾಧ್ಯಮದ ಇತ್ತೀಚಿನ ವರದಿಗಳ…