Headlines

ಪ್ರಶ್ನೆಪತ್ರಿಕೆ ಲೀಕ್ ತಡೆಗೆ ಕಠಿಣ ಕ್ರಮ: ಆರೋಪಿಗಳಷ್ಟೇ ಅಲ್ಲ ಕಾಲೇಜುಗಳೂ ಬ್ಲಾಕ್ ಲಿಸ್ಟ್​ಗೆ, ಮಾನ್ಯತೆ, ಅನುದಾನಕ್ಕೂ ಕತ್ತರಿ – Kannada News | Strict Action to Curb Question Paper Leak: Karnataka Board to Blacklist Colleges, Cut Recognition and Grants

ಪ್ರಶ್ನೆಪತ್ರಿಕೆ ಲೀಕ್ ತಡೆಗೆ ಕಠಿಣ ಕ್ರಮ (ಸಾಂದರ್ಭಿಕ ಚಿತ್ರ) ಬೆಂಗಳೂರು, ಜನವರಿ 17: ಪಿಯುಸಿ ಪರೀಕ್ಷೆ (PUC Exam) ಸಮೀಪಿಸುತ್ತಿರುವ ಸಂದರ್ಭದಲ್ಲಿ ಕಿಡಗೇಡಿಗಳು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿದ್ದಾರೆ. ರಾಜ್ಯ ಮಟ್ಟದಲ್ಲಿ ನಡೆಯುತ್ತಿರುವ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ (Question Paper Leak) ಮಾಡಿ ಮಕ್ಕಳಲ್ಲಿ ಪೋಷಕರಲ್ಲಿ ಆತಂಕ ತಂದಿದ್ದಾರೆ. ಕಳೆದ ವಾರ ನಡೆದ ರಾಜ್ಯಮಟ್ಟದ ಪೂರ್ವಭಾವಿ ಪರೀಕ್ಷೆಯಲ್ಲಿ ಜನವರಿ 6ರಂದು ನಡೆದ ಗಣಿತ ಪರೀಕ್ಷೆ ಪ್ರಶ್ನೆಪತ್ರಿಕೆ ಲೀಕ್ ಮಾಡಲಾಗಿತ್ತು. ಶಿವಮೊಗ್ಗ ಹಾಗೂ ಕಲಬುರಗಿಯಲ್ಲಿ ಪ್ರಶ್ನೆಪತ್ರಿಕೆ ವೈರಲ್…

Read More

ಕೋವಿಡ್ ಗಿಂತ ಅಪಾಯಕಾರಿಯೇ ಈ ಗುಯಿಲಿನ್‌ ಬಾರ್‌ ಸಿಂಡ್ರೋಮ್‌? ಲಕ್ಷಣಗಳು ಹೇಗಿರುತ್ತೆ, ತಡೆಗಟ್ಟುವುದು ಹೇಗೆ? – Kannada News | GBS Symptoms: What You Need to Know

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದೇ ಒಂದು ಸವಾಲಾಗಿ ಪರಿಣಮಿಸಿದ್ದು ಕೊರೊನಾದ ನಂತರ ಈಗ ಜಿಬಿಎಸ್‌ (GBS) ಅಥವಾ ಗುಯಿಲಿನ್‌ ಬಾರ್‌ ಸಿಂಡ್ರೋಮ್‌ ಎಂಬ ರೋಗ ಭಾರಿ ಸುದ್ದಿಯಲ್ಲಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ದೇಶಾದ್ಯಂತ ಈ ಬಗ್ಗೆ ಕಳವಳ ಹೆಚ್ಚಾಗಿದ್ದು, ಸರಿಯಾದ ಮಾಹಿತಿ ಇಲ್ಲದೆಯೇ ಭಯ ಪಡುವಂತಾಗಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರ ಕೂಡ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಹೊರೆ ಕಡಿಮೆ ಮಾಡುವ ನಿಟ್ಟಿನಲ್ಲಿ ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ವ್ಯಾಪ್ತಿಗೆ ತರಲಾಗಿದ್ದು,…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ, ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: Misty weather in Bengaluru, Dry weather elsewhere

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ, ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು, ಜನವರಿ 17: ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ(Weather Forecast) . ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ…

Read More

ಗಿಲ್ಲಿಗೆ ಒಳ್ಳೆಯದಾಗಲಿ, ಅವನ ಹೆಸರಲ್ಲಿ ನಡೆಯುತ್ತಿರುವ ದೊಂಬರಾಟಕ್ಕಲ್ಲ; ಸುದೀಪ್ ಆಪ್ತ ಚಕ್ರವರ್ತಿ ಚಂದ್ರಚೂಡ್ – Kannada News | Gilli’s Popularity Exploited? Chandrachud Condemns “Drama” in His Name

ಯಾರಾದರೂ ಒಬ್ಬರು ಹೆಸರು ಮಾಡುತ್ತಿದ್ದಾರೆ ಎಂದರೆ ಅದರ ಲಾಭ ಪಡೆಯಲು ಕೆಲವರು ಮುಂದಾಗುತ್ತಾರೆ. ಅವರ ಜನಪ್ರಿಯತೆಯಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ನಡೆಯುತ್ತದೆ. ಗಿಲ್ಲಿ ವಿಷಯದಲ್ಲಿ ಹೀಗೆಯೇ ಆಗುತ್ತಿದೆ ಎಂದು ಸುದೀಪ್ (Sudeep) ಆಪ್ತ, ಬಿಗ್ ಬಾಸ್ ಮಾಜಿ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ಹೇಳಿದ್ದಾರೆ.ಗಿಲ್ಲಿಗೆ ಒಳ್ಳೆಯದಾಗಲಿ ಎಂದು ಹಾರೈಸಿರೋ ಅವರು, ಗಿಲ್ಲಿ ಹೆಸರಲ್ಲಿ ನಡೆಯುತ್ತಿರುವ ದೊಂಬರಾಟವನ್ನು ಖಂಡಿಸಿದ್ದಾರೆ. ಇದೇ ಮೊದಲ ಬಾರಿಗೆ ತಮ್ಮದೇ ಯೂಟ್ಯೂಬ್ ಚಾನೆಲ್ ಪಾಡ್​​ಕಾಸ್ಟ್​​ನಲ್ಲಿ ಚಕ್ರವರ್ತಿ ಮಾತನಾಡಿದ್ದಾರೆ. ‘ಕಾಲಾಪತ್ಥರ್ ಸಿನಿಮಾದಲ್ಲಿ ಗಿಲ್ಲಿ ನನ್ನ ಜೊತೆ…

Read More

ಮಲ್ಲಿಕಾರ್ಜುನ ಖರ್ಗೆ, ರಾಹುಲ್​ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣದಲ್ಲಿ ಹೆಚ್ಚಾಯ್ತು ಉತ್ಸಾಹ! – Kannada News | DK Shivakumar Camp Energised After Mallikarjun Kharge–Rahul Gandhi Meeting, Leadership Buzz Grows in Karnataka Congress

ನವದೆಹಲಿ, ಜನವರಿ 17: ಸಂಕ್ರಾಂತಿ ಮುಗಿಯುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ಹಾರಿದ್ದಾರೆ. ಅಸ್ಸಾಂ ಚುನಾವಣಾ ವೀಕ್ಷಕರಾಗಿರುವ ಡಿಕೆಶಿ ಎಐಸಿಸಿ ಸಭೆಯಲ್ಲಿ ಭಾಗಿಯಾಗಿ ಚರ್ಚಿಸಿದ್ದಾರೆ. ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿಯವರನ್ನೂ ಭೇಟಿಯಾಗಿದ್ದಾರೆ. ಖರ್ಗೆ ಮತ್ತು ರಾಹುಲ್​ ಗಾಂಧಿ ಭೇಟಿ ಬಳಿಕ ಮಾತನಾಡಿದ ಡಿಸಿಎಂ, ಅಲ್ಲಿ ಚರ್ಚೆ ಆಗಿದ್ದನ್ನೆಲ್ಲ ಹೇಳಲಾಗದು. ಬೇರೆ ಏನೂ ಮಾತನಾಡಲು ನಾನು ತಯಾರಿಲ್ಲ ಎಂದಿದ್ದಾರೆ. ಡಿಕೆಶಿ ಬಣದಲ್ಲಿ ಹೆಚ್ಚಾಯ್ತು…

Read More

ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ತಂತ್ರಗಾರಿಕೆ ಏನು? ಹೆಚ್​ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ – Kannada News | BJP–JDS Strategy for JBA Elections: HD Kumaraswamy Signals Alliance After Supreme Court Order

ಬೆಂಗಳೂರು, ಜನವರಿ 17: ಸುಪ್ರೀಂ ಕೋರ್ಟ್ ಜೂನ್ 30ರೊಳಗಾಗಿ ಜಿಬಿಎ ಚುನಾವಣೆ ನಡೆಸುವಂತೆ ಆದೇಶಿಸಿದ ಬೆನ್ನಲ್ಲೇ, ಜೆಡಿಎಸ್ ಸಭೆ ನಡೆಸಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಇಂಗಿತ ವ್ಯಕ್ತಪಡಿಸಿದೆ. ಈ ಬೆಳವಣಿಗೆಯು ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೊಸ ಕಾವನ್ನು ನೀಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಸ್ಥಳೀಯ ಚುನಾವಣೆಯಲ್ಲಿ ಜಯ ಸಾಧಿಸಿದ ನಂತರ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ…

Read More

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ ಅಂಕ ಪಟ್ಟಿ

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಈಗಾಗಲೇ 9 ಪಂದ್ಯಗಳು ಮುಗಿದಿವೆ. ಎಲ್ಲಾ ತಂಡಗಳು ಕನಿಷ್ಠ 3 ಪಂದ್ಯಗಳನ್ನಾಡಿದೆ. ಈ ಪಂದ್ಯಗಳ ಮೂಲಕ ಐದು ತಂಡಗಳು ಕೂಡ ಗೆಲುವಿನ ಖಾತೆ ತೆರೆದಿದೆ. ಈ ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡುವುದಾದರೆ…. 1- ರಾಯಲ್ ಚಾಲೆಂಜರ್ಸ್ ಬೆಂಗಳೂರು: ಆರ್​ಸಿಬಿ ತಂಡವು ಈವರೆಗೆ 3 ಪಂದ್ಯಗಳನ್ನಾಡಿದೆ. ಈ ಮೂರು ಮ್ಯಾಚ್​ಗಳಲ್ಲೂ ಭರ್ಜರಿ ಜಯ ಸಾಧಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕ ಪಟ್ಟಿಯಲ್ಲಿ ಮೊದಲ…

Read More

ಕೇವಲ 3 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್: ತಿಲಕ್ ವರ್ಮಾ ಮೇಲೆ ನಿಗಾ..!

ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಟಿ20 ಸಿರೀಸ್ ಶುರುವಾಗಲಿದೆ. ಜನವರಿ 21 ರಿಂದ ಆರಂಭವಾಗಲಿರುವ ಈ ಸರಣಿಯಿಂದ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಶ್ರೇಯಸ್ ಅಯ್ಯರ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ಸಮಸ್ಯೆಗೆ ಒಳಗಾಗಿದ್ದ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿಯೇ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ….

Read More

ಲಕ್ಕುಂಡಿ ಉತ್ಖನನ ಪ್ರದೇಶಕ್ಕೆ ಲಾಕ್! ಚಿತ್ರೀಕರಣವನ್ನು ಸಂಪೂರ್ಣ ನಿರ್ಬಂಧಿಸಿ ಡಿಸಿ ಆದೇಶ – Kannada News | Lakkundi Excavation Site Declared Restricted Zone After Gold Find: Public Entry Banned

ಲಕ್ಕುಂಡಿ ಉತ್ಖನನ ಪ್ರದೇಶಕ್ಕೆ ಲಾಕ್! ಚಿತ್ರೀಕರಣವನ್ನು ಸಂಪೂರ್ಣ ನಿರ್ಬಂಧಿಸಿ ಡಿಸಿ ಆದೇಶ ಗದಗ, ಜನವರಿ 17: ಲಕ್ಕುಂಡಿಯಲ್ಲಿ ಒಂದು ಕುಟುಂಬಕ್ಕೆ ಇತ್ತೀಚಿಗಷ್ಟೆ ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನ (Gold Tressure)  ಸಿಕ್ಕಿತ್ತು. ಈ ಹಿನ್ನೆಲೆ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿರುವ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಉತ್ಖನನ ಸ್ಥಳವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಸಂಬಂಧ ಗದಗ ಜಿಲ್ಲಾಧಿಕಾರಿ ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎನ್. ಶ್ರೀಧರ್ ಆದೇಶ ಹೊರಡಿಸಿದ್ದಾರೆ….

Read More

ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ – Kannada News | Bigg Boss Kannada 12 Pre Finale Sudeep will be host or not

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಇಂದು (ಜನವರಿ 17) ಫಿನಾಲೆ ನಡೆಯಬೇಕಿತ್ತು. ಆದರೆ, ಸುದೀಪ್ ಅವರು ಗೈರಾಗಿದ್ದಾರೆ. ಸಿಸಿಎಲ್ ಕಾರಣದಿಂದ ಅವರು ಇಂದು ಆಗಮಿಸೋದು ಅನುಮಾನ ಎನ್ನಲಾಗುತ್ತಿದೆ. ಇಂದು ಪ್ರೀ-ಫಿನಾಲೆ ನಡೆಯಲಿದೆ. ಅದು ಯಾವ ರೀತಿ ಇರುತ್ತದೆ ಎಂಬ ಕುತೂಹಲ ಮೂಡಿದೆ. ಸುದೀಪ್ ಕೂಡ ಇದರ ಭಾಗ ಆಗುತ್ತಾರಾ ಅಥವಾ ಇಲ್ಲವಾ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More