ಕೇವಲ 3 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್: ತಿಲಕ್ ವರ್ಮಾ ಮೇಲೆ ನಿಗಾ..!
ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ಟಿ20 ಸಿರೀಸ್ ಶುರುವಾಗಲಿದೆ. ಜನವರಿ 21 ರಿಂದ ಆರಂಭವಾಗಲಿರುವ ಈ ಸರಣಿಯಿಂದ ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಹೊರಗುಳಿದಿದ್ದಾರೆ. ಅವರ ಬದಲಿಗೆ ಇದೀಗ ಶ್ರೇಯಸ್ ಅಯ್ಯರ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿಜಯ ಹಝಾರೆ ಟೂರ್ನಿಯ ವೇಳೆ ತೊಡೆಸಂಧು ಸಮಸ್ಯೆಗೆ ಒಳಗಾಗಿದ್ದ ತಿಲಕ್ ವರ್ಮಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿಯೇ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದಾರೆ. ಇದಾಗ್ಯೂ ಅವರು ಟಿ20 ವಿಶ್ವಕಪ್ ತಂಡದಿಂದ ಹೊರಬಿದ್ದಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ….