Category Archives: Blog

Your blog category

ಮಲ್ಲಿಕಾರ್ಜುನ ಖರ್ಗೆ, ರಾಹುಲ್​ ಗಾಂಧಿ ಭೇಟಿ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಣದಲ್ಲಿ ಹೆಚ್ಚಾಯ್ತು ಉತ್ಸಾಹ! – Kannada News | DK Shivakumar Camp Energised After Mallikarjun Kharge–Rahul Gandhi Meeting, Leadership Buzz Grows in Karnataka Congress

ನವದೆಹಲಿ, ಜನವರಿ 17: ಸಂಕ್ರಾಂತಿ ಮುಗಿಯುತ್ತಿದ್ದಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ಹಾರಿದ್ದಾರೆ. ಅಸ್ಸಾಂ ಚುನಾವಣಾ ವೀಕ್ಷಕರಾಗಿರುವ ಡಿಕೆಶಿ ಎಐಸಿಸಿ ಸಭೆಯಲ್ಲಿ ಭಾಗಿಯಾಗಿ ಚರ್ಚಿಸಿದ್ದಾರೆ. ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್ ಗಾಂಧಿಯವರನ್ನೂ ಭೇಟಿಯಾಗಿದ್ದಾರೆ. ಖರ್ಗೆ ಮತ್ತು ರಾಹುಲ್​ ಗಾಂಧಿ ಭೇಟಿ ಬಳಿಕ ಮಾತನಾಡಿದ ಡಿಸಿಎಂ, ಅಲ್ಲಿ ಚರ್ಚೆ ಆಗಿದ್ದನ್ನೆಲ್ಲ ಹೇಳಲಾಗದು. ಬೇರೆ ಏನೂ ಮಾತನಾಡಲು ನಾನು ತಯಾರಿಲ್ಲ ಎಂದಿದ್ದಾರೆ.

ಡಿಕೆಶಿ ಬಣದಲ್ಲಿ ಹೆಚ್ಚಾಯ್ತು ಉತ್ಸಾಹ

ಮೊನ್ನೆ ತಮಿಳುನಾಡಿಗೆ ಹೋಗುತ್ತಿದ್ದ ರಾಹುಲ್ ಗಾಂಧಿ ಮೈಸೂರು ವಿಮಾನ ನಿಲ್ದಾಣದಲ್ಲಿ, ‘ದೆಹಲಿಗೆ ಬನ್ನಿ’ ಎಂದು ಡಿಸಿಎಂಗೆ ಹೇಳಿದ್ದರು. ಇದರ ಬೆನ್ನಲ್ಲೇ ಡಿಕೆಶಿ ದೆಹಲಿಗೆ ತೆರಳಿದ್ದು, ಇವತ್ತೂ ದೆಹಲಿಯಲ್ಲೇ ಇರಲಿದ್ದಾರೆ. ನಮ್ಮ ಪಥ ದೆಹಲಿ ಕಡೆಗೆ ಬದಲಾಗಿದೆ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ. ಸಂಕ್ರಾಂತಿ ಮುಗಿಯಿತು. ಈ ನಡುವೆ ಇನ್ನೇನಿದ್ರೂ ಯುಗಾದಿಗೆ ನೋಡೋಣ ಎಂದು ಸಚಿವ ಜಮೀರ್ ಹೇಳಿದ್ದಾರೆ.

ಅತ್ತ ಡಿಕೆ ಶಿವಕುಮಾರ್ ದೆಹಲಿಯಲ್ಲಿದ್ದರೆ, ಇತ್ತ ಸಿಎಂ ಸಿದ್ದರಾಮಯ್ಯ ಮಾಜಿ ಸಚಿವ ರಾಜಣ್ಣ ನಿವಾಸದಲ್ಲಿ ನಾಟಿಕೋಳಿ ಸಾರು, ರಾಗಿ ಮುದ್ದೆ ಸವಿದಿದ್ದಾರೆ. ರಾಜಣ್ಣಗೆ ಮತ್ತೆ ಸಚಿವ ಸ್ಥಾನದ ನೀಡುವ ಬಗ್ಗೆ ಹೈಕಮಾಂಡ್ ಜೊತೆ ಮಾತಾಡ್ತೀನಿ ಎಂದಿದ್ದಾರೆ. ಆದರೆ ಡಿಕೆಶಿ ದೆಹಲಿಗೆ ತೆರಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ‘ಗೊತ್ತಿಲ್ಲಪ್ಪ’ ಎಂದರು.

ಇದನ್ನೂ ಓದಿ: 2 ದಿನಗಳ ಕಾಲ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿಯಾಗ್ತಾರಾ, ಸಿಗುತ್ತಾ ಕುರ್ಚಿ ಅಭಯ?

ಏತನ್ಮಧ್ಯೆ, ವಿಶೇಷ ಅಧಿವೇಶನ, ಸಂಸತ್ ಬಜೆಟ್ ಸೆಷನ್ ನಡುವೆ ಕಾಂಗ್ರೆಸ್ ಹೈಕಮಾಂಡ್​ಗೆ ಸಮಯ ಸಿಗುತ್ತಾ? ರಾಜ್ಯ ನಾಯಕತ್ವದ ಬಗ್ಗೆ ಚರ್ಚಿಸುತ್ತಾರಾ ಎಂಬುದೇ ಸದ್ಯದ ಪ್ರಶ್ನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಜಿಬಿಎ ಚುನಾವಣೆಗೆ ಬಿಜೆಪಿ-ಜೆಡಿಎಸ್ ತಂತ್ರಗಾರಿಕೆ ಏನು? ಹೆಚ್​ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ – Kannada News | BJP–JDS Strategy for JBA Elections: HD Kumaraswamy Signals Alliance After Supreme Court Order

ಬೆಂಗಳೂರು, ಜನವರಿ 17: ಸುಪ್ರೀಂ ಕೋರ್ಟ್ ಜೂನ್ 30ರೊಳಗಾಗಿ ಜಿಬಿಎ ಚುನಾವಣೆ ನಡೆಸುವಂತೆ ಆದೇಶಿಸಿದ ಬೆನ್ನಲ್ಲೇ, ಜೆಡಿಎಸ್ ಸಭೆ ನಡೆಸಿದ್ದು, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಇಂಗಿತ ವ್ಯಕ್ತಪಡಿಸಿದೆ. ಈ ಬೆಳವಣಿಗೆಯು ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೊಸ ಕಾವನ್ನು ನೀಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿಕೂಟ ಸ್ಥಳೀಯ ಚುನಾವಣೆಯಲ್ಲಿ ಜಯ ಸಾಧಿಸಿದ ನಂತರ, ಕರ್ನಾಟಕದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಈ ಹಿಂದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡಿದ್ದರಿಂದ ಸೃಷ್ಟಿಯಾಗಿದ್ದ ಗೊಂದಲವನ್ನು ಪರಿಹರಿಸಲು ಪಕ್ಷ ಮುಂದಾಗಿದೆ. ಇದೀಗ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮಹತ್ವದ ಘೋಷಣೆ ಮಾಡಿದ್ದು, ಜಿಬಿಎ ಚುನಾವಣೆಯನ್ನು ಮೈತ್ರಿಯಾಗಿ ಎದುರಿಸೋಣ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ ಅಂಕ ಪಟ್ಟಿ

Source link

ಕೇವಲ 3 ಪಂದ್ಯಗಳಿಗೆ ಶ್ರೇಯಸ್ ಅಯ್ಯರ್: ತಿಲಕ್ ವರ್ಮಾ ಮೇಲೆ ನಿಗಾ..!

Source link

ಲಕ್ಕುಂಡಿ ಉತ್ಖನನ ಪ್ರದೇಶಕ್ಕೆ ಲಾಕ್! ಚಿತ್ರೀಕರಣವನ್ನು ಸಂಪೂರ್ಣ ನಿರ್ಬಂಧಿಸಿ ಡಿಸಿ ಆದೇಶ – Kannada News | Lakkundi Excavation Site Declared Restricted Zone After Gold Find: Public Entry Banned

ಲಕ್ಕುಂಡಿ ಉತ್ಖನನ ಪ್ರದೇಶಕ್ಕೆ ಲಾಕ್! ಚಿತ್ರೀಕರಣವನ್ನು ಸಂಪೂರ್ಣ ನಿರ್ಬಂಧಿಸಿ ಡಿಸಿ ಆದೇಶ

ಗದಗ, ಜನವರಿ 17: ಲಕ್ಕುಂಡಿಯಲ್ಲಿ ಒಂದು ಕುಟುಂಬಕ್ಕೆ ಇತ್ತೀಚಿಗಷ್ಟೆ ಕೋಟ್ಯಂತರ ರೂ. ಬೆಲೆ ಬಾಳುವ ಚಿನ್ನ (Gold Tressure)  ಸಿಕ್ಕಿತ್ತು. ಈ ಹಿನ್ನೆಲೆ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿರುವ ಕೋಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಉತ್ಖನನ ಸ್ಥಳವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಈ ಸಂಬಂಧ ಗದಗ ಜಿಲ್ಲಾಧಿಕಾರಿ ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎನ್. ಶ್ರೀಧರ್ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಆರಂಭವಾಗಿರುವ ಉತ್ಖನನ

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ್ದ ಕುಟುಂಬ, ಮನಸ್ಸು ಬದಲಿಸಿ ಚಿನ್ನ ತಮಗೇ ಸೇರಬೇಕೆಂಬ ಬೇಡಿಕೆಯಿಟ್ಟಿತ್ತು. ಇದೀಗ ಸಿಕ್ಕ ನಿಧಿಯ 5ನೇ ಒಂದು ಭಾಗವನ್ನು ಕುಟುಂಬಕ್ಕೆ ನೀಡುವುದಾಗಿ ಸರ್ಕಾರ ಒಪ್ಪಿಕೊಂಡಿದೆ. ಅದಲ್ಲದೆ ನಿಧಿ ಸಿಕ್ಕ ಜಾಗದಲ್ಲಿ ಉತ್ಖನನ ಮಾಡಲು ಮುಂದಾಗಿದೆ. ಈ ಸಂಬಂಧ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಕಮಲಾಪುರ–ಹಂಪಿ ಹಾಗೂ ಉತ್ಖನನದ ಸಹ ನಿರ್ದೇಶಕರಾದ ಶೇಜೇಶ್ವರ, ನಿನ್ನೆ (ಜನವರಿ 16) ನೀಡಿದ ಪತ್ರದ ಹಿನ್ನಲೆಯಲ್ಲಿ ಈ ಆದೇಶ ಜಾರಿಗೊಳಿಸಲಾಗಿದೆ.

ಅಧಿಕೃತವಾಗಿ ನೇಮಿಸಲ್ಪಟ್ಟವರಿಗೆ ಮಾತ್ರ ಚಿತ್ರೀಕರಣಕ್ಕೆ ಅವಕಾಶ

ಲಕ್ಕುಂಡಿಯ ವೀರಭದ್ರೇಶ್ವರ ದೇವಸ್ಥಾನದ ಎದುರಿನ ಜಾಗದಲ್ಲಿ ಜನವರಿ 16ರಿಂದ ಉತ್ಖನನ ಕಾರ್ಯ ಆರಂಭವಾಗಿದ್ದು, ಈ ಪ್ರದೇಶವು ಅತಿ ಸೂಕ್ಷ್ಮವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಉತ್ಖನನ ಕಾರ್ಯ ಸಂಪೂರ್ಣವಾಗುವವರೆಗೆ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಅಧಿಕೃತವಾಗಿ ನೇಮಕಗೊಂಡವರನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕರು, ಪ್ರವಾಸಿಗರು ಅಥವಾ ಇತರ ವ್ಯಕ್ತಿಗಳು ಈ ಸ್ಥಳಕ್ಕೆ ಪ್ರವೇಶಿಸುವುದಕ್ಕೂ, ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ನಡೆಸುವುದಕ್ಕೂ ಸಂಪೂರ್ಣ ನಿಷೇಧ ವಿಧಿಸಲಾಗಿದೆ.

ಇದನ್ನೂ ಓದಿ ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಏನು ಸಿಕ್ತು? ಮುಂದೇನು? ಅಧಿಕಾರಿ ಹೇಳಿದ್ದಿಷ್ಟು

ಐತಿಹಾಸಿಕ ಮತ್ತು ಪಾರಂಪರಿಕ ಮಹತ್ವ ಹೊಂದಿರುವ ಲಕ್ಕುಂಡಿಯ ಉತ್ಖನನ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಆದೇಶ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಇವತ್ತು ಫಿನಾಲೆ ಅಲ್ಲ, ಪ್ರೀ ಫಿನಾಲೆ; ಮಾಹಿತಿ ಕೊಟ್ಟ ಕಲರ್ಸ್ ಕನ್ನಡ – Kannada News | Bigg Boss Kannada 12 Pre Finale Sudeep will be host or not

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಇಂದು (ಜನವರಿ 17) ಫಿನಾಲೆ ನಡೆಯಬೇಕಿತ್ತು. ಆದರೆ, ಸುದೀಪ್ ಅವರು ಗೈರಾಗಿದ್ದಾರೆ. ಸಿಸಿಎಲ್ ಕಾರಣದಿಂದ ಅವರು ಇಂದು ಆಗಮಿಸೋದು ಅನುಮಾನ ಎನ್ನಲಾಗುತ್ತಿದೆ. ಇಂದು ಪ್ರೀ-ಫಿನಾಲೆ ನಡೆಯಲಿದೆ. ಅದು ಯಾವ ರೀತಿ ಇರುತ್ತದೆ ಎಂಬ ಕುತೂಹಲ ಮೂಡಿದೆ. ಸುದೀಪ್ ಕೂಡ ಇದರ ಭಾಗ ಆಗುತ್ತಾರಾ ಅಥವಾ ಇಲ್ಲವಾ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ವಯಸ್ಸು ನಂಬರ್ ಮಾತ್ರ; ಸಿಸಿಎಲ್​​ನಲ್ಲಿ ಅದ್ಭುತ ಕ್ಯಾಚ್ ಹಿಡಿದ ಕಿಚ್ಚ ಸುದೀಪ್  – Kannada News | Kichcha Sudeep Superb Catch In CCL Punjab De Sher vs Karnataka Bulldozers Match

ಸಿಸಿಎಲ್ ಕ್ರಿಕೆಟ್ ಹಬ್ಬ ಮತ್ತೆ ಶುರುವಾಗಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಅನ್ನೋದು ಸಿಸಿಎಲ್​​ನ ವಿಸ್ತೃತ ರೂಪ. ಸಿಸಿಎಲ್​​ನಲ್ಲಿ ಕರ್ನಾಟಕ ಬುಲ್ಡೋಜರ್ಸ್ ಹಾಗೂ ಪಂಜಾಬ್ ದೆ ಶೇರ್ ಪಂದ್ಯ ಜನವರಿ 16ರಂದು ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ. ಮೊದಲ ಪಂದ್ಯವನ್ನು ಕರ್ನಾಟಕ ಬುಲ್ಡೋಜರ್ ಗೆದ್ದಿದೆ. ಪ್ರದೀಪ್ ಅವರ ಬೌಲಿಂಗ್ ವೇಳೆ ಬಬ್ಬಲ್ ಅವರು ಬ್ಯಾಟಿಂಗ್ ನಿಂತಿದ್ದರು. ಅವರು ಬೀಸಲು ಹೋಗಿ ಬಾಲ್ ಬ್ಯಾಟ್​​ಗೆ ಟಚ್ ಆಗಿ ಕೀಪರ್​​ನಿಂದ ಹೊರ ಹೋಗುತ್ತಿತ್ತು. ಈ ವೇಳೆ ಸುದೀಪ್ ಅದ್ಭುತ ಕ್ಯಾಚ್ ಹಿಡಿದಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ವಯಸ್ಸು ಕೇವಲ ಸಂಖ್ಯೆ ಎಂಬ ಮಾತು ಕೇಳಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Bengaluru Air Quality: ಕಳಪೆ ಏರ್ ಕ್ವಾಲಿಟಿಯಿಂದ ಬೆಂಗಳೂರಿನಲ್ಲಿ ಉಸಿರಾಡುವುದೂ ಅಪಾಯವೇ? – Kannada News | Bangalore Air Pollution Crisis: Bengaluru’s Air quality is getting poor again, Experts suggest public to take precaution

ಕಳಪೆ ಏರ್ ಕ್ವಾಲಿಟಿಯಿಂದ ಬೆಂಗಳೂರಿನಲ್ಲಿ ಉಸಿರಾಡುವುದೂ ಅಪಾಯವೇ?

ಬೆಂಗಳೂರು, ಜನವರಿ 17: ಇನ್ನೇನು ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಸುಧಾರಿಸಿತೆನ್ನುವಷ್ಟರಲ್ಲಿ ಮತ್ತೊಮ್ಮೆ ಕಳಪೆ ಮಟ್ಟಕ್ಕೆ ತಲುಪಿದೆ. ಕೆಲ ತಿಂಗಳ ಹಿಂದೆ 200ರ ಗಡಿ ದಾಟಿದ್ದ ಏರ್ ಕ್ವಾಲಿಟಿ, ಹಂತ ಹಂತವಾಗಿ 130ರ ಆಸು ಪಾಸು ಬಂದಿತ್ತು. ಆದರೆ ಇಂದಿನ AQI ನೋಡಿದರೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ವಾಯುಮಾಲಿನ್ಯಕ್ಕೆ ತುತ್ತಾಗಿರುವುದನ್ನು ಕಾಣಬಹುದು. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ.

ಬೆಂಗಳೂರಿನ ಗಾಳಿಯ ಗುಣಮಟ್ಟ 190 ಇದ್ದು, ನಗರವಾಸಿಗಳಲ್ಲಿ ಆತಂಕ ಮೂಡಿಸಿತ್ತು. ಸಿಲ್ಕ್ ಬೋರ್ಡ್​, ವೈಟ್​ಫೀಲ್ಡ್ ಸೇರಿದಂತೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿತ್ತು. ಇದೀಗ ವಾತಾವರಣ ಸಲ್ಪ ಸುಧಾರಣೆ ಕಂಡಿದ್ದರೂ, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ. ಇದು ಹೀಗೆ ಮುಂದುವರೆದರೆ ಬೆಂಗಳೂರಿನ ಪರಿಸ್ಥಿತಿ ದೆಹಲಿಯಂತಾಗಬಹುದೆಂದು ತಜ್ಞರು ಎಚ್ಚರಿಸಿದ್ದಾರೆ.

ಸೂಕ್ಷ್ಮ ಕಣಗಳಿಂದ ಬರುತ್ತೆ ಶ್ವಾಸ ಸಂಬಂಧಿ ಖಾಯಿಲೆ

ನಗರದಲ್ಲಿ PM2.5 ಮಟ್ಟ 111 ಹಾಗೂ PM10 ಮಟ್ಟ 141ಕ್ಕೆ ಏರಿಕೆಯಾಗಿದೆ. ಈ ಎರಡೂ ಪ್ರಮಾಣಗಳು ಸುರಕ್ಷಿತ ಮಿತಿಯನ್ನು ಮೀರಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮಟ್ಟದಲ್ಲಿವೆ. ವಿಶೇಷವಾಗಿ PM2.5 ಸೂಕ್ಷ್ಮ ಕಣಗಳು ಶ್ವಾಸಕೋಶದ ಆಳಕ್ಕೆ ಪ್ರವೇಶಿಸಿ ಉಸಿರಾಟದ ತೊಂದರೆ, ಆಸ್ತಮಾ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ. ವಾಹನಗಳ ಅತಿಯಾದ ಬಳಕೆ, ನಿರ್ಮಾಣ ಕಾರ್ಯಗಳಿಂದ ಉಂಟಾಗುವ ಧೂಳು, ಕೈಗಾರಿಕಾ ಉತ್ಸರ್ಜನೆ ಮತ್ತು ಹವಾಮಾನದಲ್ಲಿ ಗಾಳಿಯ ಚಲನೆಯ ಕೊರತೆ ಈ ಪರಿಸ್ಥಿತಿಗೆ ಪ್ರಮುಖ ಕಾರಣಗಳಾಗಿವೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಮಾಲಿನ್ಯ ಪ್ರಮಾಣ ಇನ್ನಷ್ಟು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ.

PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ ಕಣಗಳಾದರೆ, PM2.5 ಮಾನವನ ಕೂದಲಿನ ಶೇ. 3ರಷ್ಟು ಮಾತ್ರ ದಪ್ಪವಿರುವ ಅತಿ ಸೂಕ್ಷ್ಮ ಕಣಗಳು. ಈ ಕಣಗಳು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶದ ಒಳಗೆ ಹೋಗಿ ರಕ್ತವನ್ನು ಸೇರುತ್ತವೆ. ಇದರಿಂದ ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಅಪಾಯ ಹೆಚ್ಚಿದೆ. ಆರೋಗ್ಯ ತಜ್ಞರು ಮಕ್ಕಳು, ವೃದ್ಧರು ಹಾಗೂ ಶ್ವಾಸಕೋಶ ಸಮಸ್ಯೆ ಇರುವವರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಲು ಸಲಹೆ ನೀಡಿದ್ದಾರೆ. ಮಾಸ್ಕ್ ಬಳಕೆ, ವಾಹನ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಹಸಿರು ಪ್ರದೇಶಗಳನ್ನು ಹೆಚ್ಚಿಸುವುದು ಈಗ ನಗರಕ್ಕೆ ಅನಿವಾರ್ಯವಾಗಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –190
  • ಮಂಗಳೂರು-164
  • ಮೈಸೂರು – 96
  • ಬೆಳಗಾವಿ – 122
  • ಕಲಬುರ್ಗಿ- 79
  • ಶಿವಮೊಗ್ಗ – 176
  • ಬಳ್ಳಾರಿ – 196
  • ಹುಬ್ಬಳ್ಳಿ- 116
  • ಉಡುಪಿ –158
  • ವಿಜಯಪುರ –66

ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?

  • ಉತ್ತಮ- 0-50
  • ಮಧ್ಯಮ – 50-100
  • ಕಳಪೆ – 100-150
  • ಅನಾರೋಗ್ಯಕರ – 150-200
  • ಗಂಭೀರ – 200 – 300
  • ಅಪಾಯಕಾರಿ – 300 -500+

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಮೊದಲ ಓವರ್​ನಲ್ಲೇ ತೂಫಾನ್… ಹೊಸ ಇತಿಹಾಸ ನಿರ್ಮಾಣ – Kannada News | Most expensive 1st over of WPL season

ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೊದಲ ಓವರ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಅದು ಕೂಡ ಬರೋಬ್ಬರಿ 23 ರನ್​ಗಳಿಸುವ ಮೂಲಕ.

ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ತಂಡವು ಪ್ರಥಮ ಓವರ್​ನಲ್ಲಿ ಬರೋಬ್ಬರಿ 23 ರನ್​ ಕಲೆಹಾಕಿತು. ಹೀಗೆ 23 ರನ್​ ಬಿಟ್ಟು ಕೊಟ್ಟಿರುವುದು ಆರ್​ಸಿಬಿ ತಂಡದ ಮಾಜಿ ವೇಗಿ ರೇಣುಕಾ ಸಿಂಗ್ ಠಾಕೂರ್.

ಗುಜರಾಜ್ ಜೈಂಟ್ಸ್ ಪರ ಮೊದಲ ಓವರ್ ಎಸೆದ ರೇಣುಕಾ ಸಿಂಗ್ ಮೊದಲ ಎಸೆತದಲ್ಲೇ ವೈಡ್ ಎಸೆದರು. ಈ ಚೆಂಡು ವಿಕೆಟ್ ಕೀಪರ್​ನ ವಂಚಿಸಿ ಬೌಂಡರಿ ಲೈನ್ ದಾಟಿತು. ಇದಾದ ಬಳಿಕ ಆರ್​ಸಿಬಿ ಬ್ಯಾಟರ್ ಗ್ರೇಸ್ ಹ್ಯಾರಿಸ್ ಹ್ಯಾಟ್ರಿಕ್ ಫೋರ್ ಬಾರಿಸಿದರು. ಇದರ ಜೊತೆಗೆ ರೇಣುಕಾ ಮತ್ತೆರಡು ವೈಡ್​​ಗಳನ್ನು ಎಸೆದರು. ಇನ್ನು ಕೊನೆಯ ಎಸೆತದಲ್ಲಿ ಹ್ಯಾರಿಸ್ ಮತ್ತೊಂದು ಫೋರ್ ಬಾರಿಸಿದರು.

ಹೀಗೆ ಮೊದಲ ಓವರ್​ನಲ್ಲಿ ಬರೋಬ್ಬರಿ 23 ರನ್​ ನೀಡುವ ಮೂಲಕ ರೇಣುಕಾ ಸಿಂಗ್ ಠಾಕೂರ್ ವುಮೆನ್ಸ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ದುಬಾರಿ ಪ್ರಥಮ ಓವರ್ ಎಸೆದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಹೀನಾಯ ದಾಖಲೆ ತನುಜಾ ಕನ್ವರ್ ಹೆಸರಿನಲ್ಲಿತ್ತು.

2023 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ಪರ ಮೊದಲ ಓವರ್ ಎಸೆದ ತನುಜಾ ಕನ್ವರ್ 21 ರನ್ ನೀಡುವ ಮೂಲಕ ಅನಗತ್ಯ ದಾಖಲೆ ನಿರ್ಮಿಸಿದ್ದರು. ಇದೀಗ 23 ರನ್​ ಬಿಟ್ಟು ಕೊಟ್ಟು ರೇಣುಕಾ ಸಿಂಗ್ ಠಾಕೂರ್ ಹೀನಾಯ ದಾಖಲೆಗೆ ಕೊರೊಳೊಡ್ಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಗುಜರಾತ್ ಜೈಂಟ್ಸ್ 18.5 ಓವರ್​ಗಳಲ್ಲಿ 150 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಆರ್​ಸಿಬಿ 32 ರನ್​ಗಳ ಜಯ ಸಾಧಿಸಿದೆ.

Source link

ಒಂದೇ ದಿನ ರಚಿತಾ ರಾಮ್ ಎರಡು ಸಿನಿಮಾಗಳು ರಿಲೀಸ್; ಫ್ಯಾನ್ಸ್​​ಗೆ ಹಬ್ಬ – Kannada News | Rachita Ram’s Double Treat: ‘Cult’ and ‘Landlord’ Movies Release Jan 23

ಸಾಮಾನ್ಯವಾಗಿ ಹೀರೋ/ಹೀರೋಯಿನ್​​​ಗಳ ಎರಡೆರಡು ಸಿನಿಮಾಗಳು ಒಂದೇ ದಿನ ರಿಲೀಸ್ ಆಗೋದು ಕಡಿಮೆ. ಆದರೆ, ಕೆಲವೊಮ್ಮೆ ಆ ರೀತಿಯ ಘಟನೆಗಳು ಸಂಭವಿಸುತ್ತವೆ. ಈಗ ರಚಿತಾ ರಾಮ್ ನಟನೆಯ ಎರಡು ಸಿನಿಮಾಗಳು ಜನವರಿ 23ರಂದು ರಿಲೀಸ್ ಆಗುತ್ತಿವೆ. ಒಂದರಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡರೆ ಮತ್ತೊಂದರಲ್ಲಿ ಹಳ್ಳಿ ಹುಡುಗಿ ಪಾತ್ರ ಮಾಡಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಹೆಚ್ಚು ಖುಷಿ ಕೊಟ್ಟಿದೆ.

ಕಲ್ಟ್ ಸಿನಿಮಾ

ಝಯಿದ್ ಖಾನ್ ‘ಬನಾರಸ್’ ಸಿನಿಮಾ ಬಳಿಕ ‘ಕಲ್ಟ್’ ಸಿನಿಮಾ ಒಪ್ಪಿಕೊಂಡರು. ಈ ಚಿತ್ರಕ್ಕೆ ರಚಿತಾ ರಾಮ್ ಕೂಡ ನಾಯಕಿ. ಮಲೈಕಾ ವಾಸುಪಾಲ್ ಕೂಡ ಚಿತ್ರದಲ್ಲಿದ್ದಾರೆ. ಈ ಸಿನಿಮಾ ಜನವರಿ 23ರಂದು ರಿಲೀಸ್ ಆಗುತ್ತಿದೆ. ಜನವರಿ 16ರಂದು ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ.

ರಚಿತಾ ರಾಮ್ ಅವರು ಈ ಸಿನಿಮಾದಲ್ಲಿ ಎರಡು ಶೇಡ್​​ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್​​ನಲ್ಲಿ ಅವರ ಒಂದು ಶೇಡ್​​​ ಮಾತ್ರ ತೋರಿಸಲಾಗಿದೆ. ಮತ್ತೊಂದು ಶೇಡ್​​ನ ಸಿನಿಮಾದಲ್ಲಿ ಕಣ್ತುಂಬಿಕೊಳ್ಳಬೇಕು ಎಂಬುದು ರಚಿತಾ ರಾಮ್ ಮಾತು. ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಈ ಮೊದಲು ಅವರು ‘ಉಪಾಧ್ಯಕ್ಷ’ ಚಿತ್ರ ನಿರ್ದೇಶನ ಮಾಡಿದ್ದರು. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

ಇದನ್ನೂ ಓದಿ: ನಿಲ್ಲಲೇ ಇಲ್ಲ ‘ಬಾಸ್ ಬಾಸ್ ಡಿ ಬಾಸ್’ ಜೈಕಾರ: ಬೇಸರದಿಂದ ಮಾತು ನಿಲ್ಲಿಸಿದ ರಚಿತಾ ರಾಮ್

ಲ್ಯಾಂಡ್​ಲಾರ್ಡ್

ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ ಮೊದಲಾದವರು ನಟಿಸಿರೋ ‘ಲ್ಯಾಂಡ್​​ಲಾರ್ಡ್’ ಸಿನಿಮಾ ಜನವರಿ 23ರಂದೇ ರಿಲೀಸ್ ಆಗುತ್ತಿದೆ. ಇದು ಅಳಿದು ಉಳಿದವರ ಕಥೆ. ಜಡೇಶ್​ ಕುಮಾರ್ ಹಂಪಿ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಹೇಮಂತ್ ಗೌಡ ಕೆಎಸ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.
ಈಗಾಗಲೇ ರಿಲೀಸ್ ಆಗಿರೋ ಟೀಸರ್​​ಗಳು ಗಮನ ಸೆಳೆದಿವೆ. ಸತ್ಯ ಪ್ರಕಾಶ್ ಅವರು ಚಿತ್ರವನ್ನು ದೊಡ್ಡ ಮಟ್ಟದಲ್ಲಿ ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾ ಕೂಡ ನಿರೀಕ್ಷೆ ಹುಟ್ಟುಹಾಕಿದೆ. ಒಂದೇ ದಿನ ಅವರ ನಟನೆಯ ಎರಡು ಸಿನಿಮಾಗಳು ತೆರೆಗೆ ಬರುತ್ತಿವೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link