ಶರವೇಗದ ಶತಕದೊಂದಿಗೆ ಭರ್ಜರಿ ದಾಖಲೆ ಬರೆದ ಸ್ಟೀವ್ ಸ್ಮಿತ್ – Kannada News | Steve Smith Creates New Record in Big Bash League
ಬಿಗ್ ಬ್ಯಾಷ್ ಲೀಗ್‌ನಲ್ಲಿ ಸ್ಟೀವ್ ಸ್ಮಿತ್ (Steve Smith) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಭರ್ಜರಿ ಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಬಿಬಿಎಲ್ ನ 37ನೇ ಪಂದ್ಯದಲ್ಲಿ ಸಿಡ್ನಿ ಥಂಡರ್ ಹಾಗೂ ಸಿಡ್ನಿ ಸಿಕ್ಸರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಸಿಡ್ನಿಯ ಎಸ್ ಸಿ ಜಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ 65 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 11 ಫೋರ್…