3 ದಿನಗಳಿಂದ ವಿದ್ಯುತ್ ಕಡಿತ: ಹೆಸ್ಕಾಂ ವಿರುದ್ಧ ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಪ್ರತಿಭಟನೆ – Kannada News | Hubli Residents Protest Against HESCOM Over Three Day Power Outage
ಹುಬ್ಬಳ್ಳಿ, ಮೇ 21: ಗಾಂಧಿನಗರ ಬಡಾವಣೆಯಲ್ಲಿ ಕಳೆದ ಮೂರು ದಿನಗಳಿಂದ ವಿದ್ಯುತ್ ಕಡಿತಗೊಂಡಿದ್ದು, ಹೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಗೋಕುಲ ರಸ್ತೆಯಲ್ಲಿ ರಸ್ತೆ ತಡೆ ನಡೆಸಿ, ಹೆಸ್ಕಾಂ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಗಾಳಿ-ಮಳೆಗೆ ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರೂ, ಮೂರು ದಿನಗಳಿಂದ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಜನರು ದೂರಿದ್ದಾರೆ. ಅಧಿಕಾರಿಗಳು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸದೆ, ಫೋನ್ ಬಿಸಿ ಇಡುವುದು ಅಥವಾ ಆಫ್ ಮಾಡುವುದು ಮುಂತಾದ ನಡೆಗಳಿಂದ…