ಜೂ ಎನ್ಟಿಆರ್ಗೆ ಏನಾಗಿದೆ? ಕಾಡುತ್ತಿದ್ದೆಯೇ ಅನಾರೋಗ್ಯ?
ಇಂದು (ಮೇ 20) ತೆಲುಗು ಚಿತ್ರರಂಗದ ಸ್ಟಾರ್ ನಟ ಜೂ ಎನ್ಟಿಆರ್ (Jr NTR) ಹುಟ್ಟುಹಬ್ಬ. ತಮ್ಮ 43ನೇ ವರ್ಷದ ಹುಟ್ಟುಹಬ್ಬವನ್ನು ಜೂ ಎನ್ಟಿಆರ್ ಆಚರಿಸಿಕೊಳ್ಳುತ್ತಿದ್ದಾರೆ. ಭಾರಿ ಸಂಖ್ಯೆಯ ಅಭಿಮಾನಿಗಳು ನಟನ ಮನೆ ಬಳಿ ತೆರಳಿ ನೆಚ್ಚಿನ ನಟನಿಗೆ ಶುಭಾಶಯಗಳನ್ನು ತಿಳಿಸಿದರು. ಜೂ ಎನ್ಟಿಆರ್ ಸಹ ಮಧ್ಯರಾತ್ರಿ ಎದ್ದು ಬಂದು ಅಭಿಮಾನಿಗಳತ್ತ ಕೈಬೀಸಿ ಧನ್ಯವಾದ ಹೇಳಿದರು. ಜೂ ಎನ್ಟಿಆರ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸುವ ಜೊತೆಗೆ ಅವರ ಬಗ್ಗೆ ಅವರ ಆರೋಗ್ಯದ ಬಗ್ಗೆ ಕೆಲವರು ಕಾಳಜಿಯನ್ನು ವ್ಯಕ್ತಪಡಿಸುತ್ತಿದ್ದಾರೆ….