ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬೆನ್ನಲ್ಲೇ ಸರ್ಕಾರದಿಂದ ಮಹತ್ವದ ಹೆಜ್ಜೆ: ಕುತೂಹಲ ಕೆರಳಿಸಿದ ನಡೆ – Kannada News | Gold Treasure Found In lakkundi: excavation begin In the Village from january 16th
ಗದಗ, (ಜನವರಿ 15): ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಜನವರಿ 10ರಂದು ನಿಧಿ (lakkundi Gold Treasure) ಪತ್ತೆಯಾದ ಬೆನ್ನಲ್ಲೇ ಇದೀಗ ಉತ್ಖನನ ನಡೆಸಲು ಪುರಾತತ್ವ ಇಲಾಖೆ ಮುಂದಾಗಿದೆ. ಹೌದು.. ನಾಳೆಯಿಂದ ಅಂದರೆ ಜನವರಿ 16ರಿಂದ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ಕಾರ್ಯ ಶುರುವಾಗಲಿದ್ದು, ಮೊದಲಿಗೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಪುರಾತತ್ವ ಇಲಾಖೆ ಹಾಗೂ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಒಟ್ಟು 48 ಸಿಬ್ಬಂದಿಯಿಂದ ಉತ್ಖನನ ನಡೆಯಲಿದೆ. ಹೀಗಾಗಿ ಇದಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಸಹ ಮಾಡಿಕೊಳ್ಳಲಾಗಿದೆ. ಇನ್ನು…