ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ – Kannada News | Makar Sankranti 2026: Sun Rays Touching On Gavi Gangadhareshwara Temple in, here Is Live Video of sun light on shivalinga
ಬೆಂಗಳೂರು, (ಜನವರಿ 15): ಮಕರ ಸಂಕ್ರಾಂತಿ ದಿನವಾದ ಇಂದು(ಜನವರಿ 15) ಸಂಜೆ ನಗರ ಗವಿಗಂಗಾಧರೇಶ್ವರ ದೇಗುಲ ಗರ್ಭಗುಡಿಯನ್ನು ಸೂರ್ಯರಶ್ಮಿ ಪ್ರವೇಶಿಸಲಿದೆ. ಸೂರ್ಯರಶ್ಮಿಯ ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5:02 ರಿಂದ 5:05 ಮಧ್ಯದಲ್ಲಿ 2 ನಿಮಿಷ ಹಾದು ಹೋಗಲಿದೆ. ಇದರಂತೆ ದೇಗುಲದಲ್ಲಿ ಈಗಾಗಲೇ ವಿಶೇಷ ಪೂಜೆಗಳು ಆರಂಭವಾಗಿದ್ದು, ಶಿವನ ಲಿಂಗಕ್ಕೆ ಹಾಲು, ಎಳನೀರಿನ ಅಭಿಷೇಕಗಳನ್ನು ನಡೆಸಲಾಗುತ್ತದೆ. ಈ ವಿಶೇಷ ಕೌತುಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೂರ್ಯ ದಕ್ಷಿಣಪಥದಿಂದ ಉತ್ತರಕ್ಕೆ ಪಥ ಸಂಚಲನ…