Category Archives: Blog

Your blog category

ಪ್ರತಿದಿನ 15 ನಿಮಿಷ ಬಿಡುವು ಮಾಡಿಕೊಂಡು ಸ್ಕಿಪ್ಪಿಂಗ್ ಮಾಡಿ, ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ನೋಡಿ! – Kannada News | Amazing Health Benefits of Skipping Rope

ಇಂದಿನ ಕಾರ್ಯನಿರತ ಜೀವನಶೈಲಿಯಲ್ಲಿ, ನಮ್ಮ ಆರೋಗ್ಯದ ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಊಟ ಬಿಡುವುದು, ಸರಿಯಾಗಿ ನಿದ್ರೆ ಮಾಡದಿರುವುದು ಮತ್ತು ವ್ಯಾಯಾಮದ ಕೊರತೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಬರಮಾಡಿಕೊಳ್ಳುವಂತೆ ಮಾಡಿದೆ. ಅಷ್ಟೇಅಲ್ಲ, ಈ ಎಲ್ಲಾ ಅಂಶಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ಆರೋಗ್ಯವಾಗಿರಲು ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಬಹಳ ಮುಖ್ಯ. ಆದರೆ ಅದಕ್ಕೂ ಸಮಯ ಇಲ್ಲ ಎನ್ನುವವರು ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪ್ರತಿದಿನ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್ (Skipping) ಅಥವಾ ಹಗ್ಗದ ಸಹಾಯದಿಂದ ಜಿಗಿಯುವ ವ್ಯಾಯಾಮವನ್ನು ಮಾಡಬಹುದು. ಈ ಒಂದು ಅಭ್ಯಾಸದಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಪ್ರತಿದಿನ 15 ನಿಮಿಷ ಸ್ಕಿಪ್ಪಿಂಗ್ ಮಾಡುವುದರಿಂದಾಗುವ ಪ್ರಯೋಜನಗಳೇನು?

ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ

ಸ್ಕಿಪ್ಪಿಂಗ್ ಹೃದಯವನ್ನು ಬಲಪಡಿಸುವ ಮತ್ತು ರಕ್ತ ಪರಿಚಲನೆ ಸುಧಾರಿಸುವ ಉತ್ತಮ ಕಾರ್ಡಿಯೋ ವ್ಯಾಯಾಮವಾಗಿದೆ. ಅಷ್ಟೇಅಲ್ಲ, ಹೃದಯಾಘಾತ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ

ವೇಗವಾಗಿ ತೂಕ ಕಡಿಮೆ ಮಾಡಿಕೊಳ್ಳಲು ಹಂಬಲಿಸುತ್ತಿರುವವರು ಪ್ರತಿದಿನ 15 ನಿಮಿಷ ಸ್ಕಿಪ್ಪಿಂಗ್ ಮಾಡಿ. ಇದು ಕ್ಯಾಲೊರಿಗಳನ್ನು ತ್ವರಿತವಾಗಿ ಕಡಿಮೆ ಮಾಡುತ್ತದೆ. ಜೊತೆಗೆ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ಹಾಗಾಗಿ ವೇಗವಾಗಿ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.

ಮೂಳೆಗಳನ್ನು ಬಲಪಡಿಸುತ್ತೆ

ಪ್ರತಿದಿನ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್ ಮಾಡುವುದರಿಂದ ಕಾಲು, ತೊಡೆ, ತೋಳು ಮತ್ತು ಭುಜಗಳಲ್ಲಿನ ಸ್ನಾಯುಗಳು ಉತ್ತೇಜನಗೊಳ್ಳುತ್ತವೆ. ಇದು ಆಸ್ಟಿಯೊಪೊರೋಸಿಸ್ ಮತ್ತು ಮೂಳೆ ಮುರಿತದ ಅಪಾಯವನ್ನು ಕಡಿಮೆ ಮಾಡುತ್ತದೆ. ದುರ್ಬಲ ಸ್ನಾಯುಗಳನ್ನು ಹೊಂದಿರುವವರಿಗೆ ಸ್ಕಿಪ್ಪಿಂಗ್ ಪ್ರಯೋಜನಕಾರಿಯಾಗಿದೆ.

ಇದನ್ನೂ ಓದಿ: ಪ್ರತಿದಿನ ವಾಕಿಂಗ್, ಜಾಗಿಂಗ್ ಬದಲು ಕೇವಲ 15 ನಿಮಿಷ ಸ್ಕಿಪ್ಪಿಂಗ್ ಮಾಡಿ ಆರೋಗ್ಯ ಕಾಪಾಡಿಕೊಳ್ಳಿ

ಮಧುಮೇಹ ನಿಯಂತ್ರಣ

ಸ್ಕಿಪ್ಪಿಂಗ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ಮಾತ್ರವಲ್ಲ, ನಿದ್ರಾಹೀನತೆಯಿಂದ ಬಳಲುತ್ತಿರುವವರು ಪ್ರತಿದಿನ 15 ನಿಮಿಷಗಳ ಕಾಲ ಸ್ಕಿಪ್ ಮಾಡಬೇಕು. ಇದು ದೇಹವನ್ನು ದಣಿಸಿ ನಿದ್ರೆ ಚೆನ್ನಾಗಿ ಬರಲು ಸಹಾಯ ಮಾಡುತ್ತದೆ.

ಒತ್ತಡ, ಆತಂಕವನ್ನು ನಿವಾರಿಸುತ್ತದೆ

ನೀವು ಕೂಡ ಸಣ್ಣ ಸಣ್ಣ ವಿಷಯಗಳಿಗೆ ಒತ್ತಡಕ್ಕೊಳಗಾಗುತ್ತಿದ್ದರೆ, ಪ್ರತಿದಿನ 15 ನಿಮಿಷ ಸ್ಕಿಪ್ಪಿಂಗ್ ಮಾಡಲು ಪ್ರಯತ್ನಿಸಿ. ಈ ವ್ಯಾಯಾಮವು ಎಂಡಾರ್ಫಿನ್‌ಗಳನ್ನು ಬಿಡುಗಡೆ ಮಾಡುತ್ತದೆ. ಅಷ್ಟೇ ಅಲ್ಲ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಮನಸ್ಸನ್ನು ಶಾಂತಗೊಳಿಸಿ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ಹೆಚ್ಚುವರಿಯಾಗಿ, ಈ ವ್ಯಾಯಾಮವು ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ದಿನವಿಡೀ ಶಕ್ತಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಆಯಾಸವನ್ನು ಕಡಿಮೆ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು – Kannada News | Actress Dhanya talks about senior actor Saikumar’s discipline

ಪೃಥ್ವಿ ಅಂಬರ್, ಧನ್ಯಾ ರಾಮ್​​ಕುಮಾರ್, ಸಾಯಿ ಕುಮಾರ್ ಇನ್ನೂ ಕೆಲವು ಹಿರಿಯ ನಟರು ನಟಿಸಿರುವ ‘ಚೌಕಿಧಾರ್’ ಸಿನಿಮಾದ ಟ್ರೈಲರ್ ಲಾಂಚ್ ಇತ್ತೀಚೆಗಷ್ಟೆ ನಡೆಯಿತು. ಟ್ರೈಲರ್ ಲಾಂಚ್​​ನಲ್ಲಿ ಸಿನಿಮಾದ ಪ್ರಮುಖ ನಟ-ನಟಿಯರು ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಧನ್ಯಾ, ಸಾಯಿ ಕುಮಾರ್ ಅವರನ್ನು ತಾವು ಪರದೆಯ ಮೇಲೆ ಹೇಗೆ ನೋಡಿದ್ದೆ, ಆದರೆ ಅವರು ಸೆಟ್​​ನಲ್ಲಿ ಎಷ್ಟು ತಮಾಷೆಯಾಗಿ, ಶಾಂತವಾಗಿ ಇರುತ್ತಾರೆ ಎಂದು ಹೇಳಿದರು. ಧನ್ಯಾ ಹೇಳಿದ್ದೇನು ಇಲ್ಲಿದೆ ನೋಡಿ ವಿಡಿಯೋ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಳ್ಳಿ ಬೆಲೆ ಕುಸಿತ ಕಾಣಲಿದೆ: ರಾಬರ್ಟ್ ಕಿಯೋಸಾಕಿ ಎಚ್ಚರಿಕೆ – Kannada News | Silver price may crash, warns Robert Kiyosaki

ವಾಷಿಂಗ್ಟನ್, ಜನವರಿ 15: ಸಿಕ್ಕಾಪಟ್ಟೆ ಏರುತ್ತಿರುವ ಬೆಳ್ಳಿ ಬೆಲೆ ಮತ್ತೆ ಇಳಿಕೆ ಆಗುತ್ತಾ? ಬೆಳ್ಳಿಯ ಪ್ರೈಸ್ ಕರೆಕ್ಷನ್ ಆಗುತ್ತಾ ಎನ್ನುವ ಪ್ರಶ್ನೆ ಮತ್ತು ಆತಂಕ ಹಲವು ಭಾರತೀಯರಿಗೆ ಇದೆ. ‘ರಿಚ್ ಡ್ಯಾಡ್ ಪೂರ್ ಡ್ಯಾಡ್’ ಸರಣಿಯ ಪುಸ್ತಕಗಳ ಕರ್ತೃ ರಾಬರ್ಟ್ ಕಿಯೋಸಾಕಿ ಅವರ ಪ್ರಕಾರ ಬೆಳ್ಳಿ ಬೆಲೆ ಸದ್ಯದ ಮಟ್ಟಿಗೆ ಗರಿಷ್ಠ ಮಟ್ಟ ಮುಟ್ಟಿದ್ದು, ಯಾವಾಗ ಬೇಕಾದರೂ ಕುಸಿತ ಕಾಣಬಹುದು. ಬೆಲೆ ಕುಸಿತ ಕಂಡ ಬಳಿಕ ಬೆಳ್ಳಿಗೆ ಮತ್ತೆ ಬೇಡಿಕೆ ಶುರುವಾಗುತ್ತದೆ ಎಂದೂ ಕಿಯೋಸಾಕಿ ಭವಿಷ್ಯ ನುಡಿದಿದ್ದಾರೆ.

ಲಾಭಕ್ಕೆ ಬೆಳ್ಳಿ ಮಾರಾಟವಾಗುತ್ತಿರುವ ಪರಿಣಾಮ…

ಬೆಳ್ಳಿ ಬೆಲೆ ಸಿಕ್ಕಾಪಟ್ಟೆ ಏರಿರುವುದರಿಂದ ಲಾಭಕ್ಕೆ ಮಾರುವವರ ಸಂಖ್ಯೆ ಹೆಚ್ಚಬಹುದು. ಇದರಿಂದ ಬೆಳ್ಳಿ ಬೆಲೆ ಕುಸಿತ ಕಾಣಬಹುದು ಎಂದು ಹೇಳುವ ರಾಬರ್ಟ್ ಕಿಯೋಸಾಕಿ, ಬೆಲೆ ಕುಸಿತ ಕಂಡ ಬಳಿಕ ಬೆಳ್ಳಿ ಬೆಲೆ ಮತ್ತೆ ಏರಲು ತೊಡಗುತ್ತದೆ ಎನ್ನುತ್ತಾರೆ.

ಇದನ್ನೂ ಓದಿ: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಹೊಸ ದಾಖಲೆ

ರಾಬರ್ಟ್ ಕಿಯೋಸಾಕಿ ಏನು ಮಾಡುತ್ತಾರೆ?

ರಿಚ್ ಡ್ಯಾಡ್ ಪೂರ್ ಡ್ಯಾಡ್ ಪುಸ್ತಕದ ಬರಹಗಾರರಾದ ಕಿಯೋಸಾಕಿ ಅವರು ಬೆಳ್ಳಿ ಬೆಲೆ ಔನ್ಸ್​ಗೆ 100 ಡಾಲರ್ ಆಗುವವರೆಗೂ ಆ ಲೋಹದ ಖರೀದಿ ಮಾಡುತ್ತಾರಂತೆ. ಆ ಬಳಿಕ ಸೂಕ್ತ ಸಮಯಕ್ಕೆ ಕಾಯುತ್ತಾರಂತೆ.

ಸದ್ಯ ಬೆಳ್ಳಿ ಬೆಲೆ ಒಂದು ಔನ್ಸ್​ಗೆ ಸುಮಾರು 89-90 ಡಾಲರ್ ಇದೆ. ಕಿಯೋಸಾಕಿ ಪ್ರಕಾರ ಬೆಳ್ಳಿ ಇನ್ನೂ ಶೇ. 10ರಷ್ಟು ಬೆಳೆದ ಬಳಿಕ ಕುಸಿಯುವ ಸಾಧ್ಯತೆ ಇದೆ. ಬೆಳ್ಳಿಯನ್ನು ಮಾರಿ ಡಾಲರ್ ಪಡೆಯುವುದು ಮೂರ್ಖತನ ಎನ್ನುವ ಅವರು, ಬೆಳ್ಳಿ ಮಾರಿದರೆ ಅದನ್ನು ಚಿನ್ನದ ಮೇಲೆ ಹೂಡಿಕೆ ಮಾಡುವುದಾಗಿ ಹೇಳುತ್ತಾರೆ.

ಬೆಳ್ಳಿ ಬೆಲೆ ಕುಸಿತ ಮುಗಿದು ಮತ್ತೆ ಏರಿಕೆಯ ಹಾದಿಗೆ ಬಂದಾಗ ರಾಬರ್ಟ್ ಕಿಯೋಸಾಕಿ ಮತ್ತೆ ಬೆಳ್ಳಿಗೆ ಹೂಡಿಕೆ ಮಾಡುವುದಾಗಿ ಸುಳಿವು ಕೊಟ್ಟಿದ್ದಾರೆ. ರಾಬರ್ಟ್ ಕಿಯೋಸಾಕಿ ಅವರ ಈ ಸೋಷಿಯಲ್ ಮೀಡಿಯಾ ಪೋಸ್ಟ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಿಯೋಸಾಕಿ ಅವರು ಮಾರುಕಟ್ಟೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳುತ್ತಿಲ್ಲ. ಅಥವಾ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಹಲವು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ, ಬಾಂಗ್ಲಾ ಸೇರಿ 75 ದೇಶಗಳ ಜನರಿಗೆ ಇಲ್ಲ ಅಮೆರಿಕದ ವಲಸೆ ವೀಸಾ; ಇಲ್ಲಿದೆ ಪಟ್ಟಿ

ರಾಬರ್ಟ್ ಕಿಯೋಸಾಕಿ ಅವರು ಬಹಳ ವರ್ಷಗಳಿಂದಲೂ ಷೇರು ಮಾರುಕಟ್ಟೆ ಮತ್ತು ಕರೆನ್ಸಿ ಹಣದ ವಿರುದ್ಧ ಜನರನ್ನು ಎಚ್ಚರಿಸುತ್ತಲೇ ಇದ್ದಾರೆ. ಸದ್ಯ ಷೇರು ಮಾರುಕಟ್ಟೆ ಅತ್ಯಂತ ಉಬ್ಬರದ ಸ್ಥಿತಿಯಲ್ಲಿದ್ದು, ಇದು ಬಲೂನಿನಂತೆ ಠುಸ್ ಎನ್ನಲಿದೆ ಎಂದು ಕಳೆದ ಒಂದೆರಡು ವರ್ಷದಿಂದಲೂ ವಾದಿಸುತ್ತಲೇ ಇದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಹಬ್ಬದಂದೇ ಕೋಲಾರದಲ್ಲಿ ಭೀಕರ ಕೊಲೆ: ಪ್ರಿಯತಮೆಯನ್ನು ಕೊಂದ ಪ್ರಿಯಕರ – Kannada News | Kolar Lover Brutal Murder: girl Stabbed by lover on Bangarapet Road

ಕೊಲೆಯಾದ ಸುಜಾತಾ, ಆರೋಪಿ ಚಿರಂಜೀವಿ

ಕೋಲಾರ, ಜನವರಿ 15: ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ (murder) ನಡೆದಿರುವಂತಹ ಘಟನೆ ಕೋಲಾರ (Kolar) ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಸುಜಾತಾ(27)ರನ್ನು ಚಿರಂಜೀವಿ ಕೊಲೆಗೈದಿದ್ದಾನೆ. ಕಳೆದ ಕೆಲವು ದಿನಗಳಿಂದ ಇಬ್ಬರ ಪ್ರೀತಿಯಲ್ಲಿ ವಿರಸ ಉಂಟಾಗಿದ್ದು, ಅದುವೇ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಸದ್ಯ ಸ್ಥಳೀಯರು‌ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು? 

ಕೊಲೆಯಾದ ಸುಜಾತಾ ಬಂಗಾರಪೇಟೆಯ ಮಾರುತಿ ನಗರದ ನಿವಾಸಿ. ಕಳೆದ ಮೂರು ತಿಂಗಳಿಂನಿಂದ ಬೆಲ್ರೈಸ್ ಕಂಪನಿಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿ ಚಿರಂಜೀವಿ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಸ್ತ್ರೀ ಸಂಘಗಳ ಮುಖಾಂತರ ಸಾಲ ನೀಡಿ ಹಣ ವಸೂಲಿ ಮಾಡುತ್ತಿದ್ದ, ಈ ವೇಳೆ ಪರಿಚಯವಾಗಿತ್ತು.

ಅಳಲು ತೊಡಿಕೊಂಡ ತಂದೆ

ಈ ಬಗ್ಗೆ ಸುಜಾತಾ ತಂದೆ ಕೃಷ್ಣಮೂರ್ತಿ ಪ್ರತಿಕ್ರಿಯಿಸಿದ್ದು, ಈ ಹಿಂದೆಯೂ ಹಣಕಾಸು ವಿಚಾರಕ್ಕೆ ಸುಜಾತಾ ಮೇಲೆ ಚಿರಂಜೀವಿ ಹಲ್ಲೆ ಮಾಡಿದ್ದ. ಈ ಕುರಿತು ಬಂಗಾರಪೇಟೆ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕ್ರಮಕೈಗೊಳ್ಳದೇ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ಈಗ ನನ್ನ ಮಗಳ ಕೊಲೆ ಮಾಡಿಬಿಟ್ಟ. ಆಗಲೇ ಸರಿಯಾದ ಕ್ರಮಕೈಗೊಂಡಿದ್ದರೆ ಇಂದು ನನ್ನ ಮಗಳು ಬದುಕಿರುತ್ತಿದ್ದಳು ಎಂದು ಕೃಷ್ಣಮೂರ್ತಿ ಅಳಲು ತೊಡಿಕೊಂಡಿದ್ದಾರೆ.

ಇದನ್ನೂ ಓದಿ: ರಾಮನಗರ: ಪ್ರೀತಿ ಹೆಸರಲ್ಲಿ ದೈಹಿಕ ಸಂಪರ್ಕ ಸಾಧಿಸಿ ವಂಚನೆ, ಪೊಲೀಸ್ ಠಾಣೆ ಬಳಿಯೇ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಇನ್ನು ಸ್ಥಳಕ್ಕೆ ಕೋಲಾರ ಎಸ್​​ಪಿ ಕನ್ನಿಕಾ ಸುಕ್ರಿವಾಲ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸೋಕೋ ತಂಡ ಶವವನ್ನು ಕೋಲಾರ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಆರೋಪಿಗೆ ಸ್ಥಳೀಯರು ಥಳಿತ ಹಿನ್ನೆಲೆ ಆತನಿಗೂ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕನ ಕೊಲೆ

ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕನ ಕೊಲೆ ಮಾಡಿರುವಂತಹ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ ಸಂಜೆ ನಡೆದಿದೆ. ಮೂವರು ಅಪ್ರಾಪ್ತರಿಂದ ನಿಂಗರಾಜ್ ಅವಾರಿ(16) ಕೊಲೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತರಕಾರಿ ಮಾರಿ ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಅಣ್ಣನ ಮಕ್ಕಳಿಂದಲೇ ಬರ್ಬರ ಹತ್ಯೆ

ನಿಂಗರಾಜ್ ಅನುದಾನಿತ ಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಓದುತ್ತಿದ್ದ. ಕ್ಷುಲ್ಲಕ ವಿಚಾರಕ್ಕೆ ಜಗಳ ಮಾಡಿಕೊಂಡು ಅಪ್ರಾಪ್ತ ಬಾಲಕನ ಕೊಲೆ ಮಾಡಲಾಗಿದೆ. ಕೃತ್ಯವೆಸಗಿದ ಮೂವರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Source link

ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ: ಸಚಿವ ಕೆ.ಎಚ್. ಮುನಿಯಪ್ಪ – Kannada News | Minister K.H. Muniyappa Discusses Dalit CM Representation and Official Safety in Karnataka.

ಬೆಂಗಳೂರು,ಜ.15: ದಲಿತ ಸಮುದಾಯದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆ ಮತ್ತು ಹೈಕಮಾಂಡ್‌ನ ಪಾತ್ರ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದಲಿತ ಮುಖ್ಯಮಂತ್ರಿ ವಿಚಾರವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ಮಲ್ಲಿಕಾರ್ಜುನ ಖರ್ಗೆ ಅವರ ಕಾಲದಿಂದಲೂ ಇದ್ದ ಆಸೆ, ಹೊಸದೇನಲ್ಲ ಎಂದರು. ಹೈಕಮಾಂಡ್ ಎಲ್ಲವನ್ನೂ ಅರ್ಥ ಮಾಡಿಕೊಂಡಿದೆ ಮತ್ತು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಮುನಿಯಪ್ಪ ತಿಳಿಸಿದರು. ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾಗಲೂ 80 ಸೀಟುಗಳನ್ನು ಪಡೆದರೂ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ ಎಂಬ ನೋವನ್ನು ವ್ಯಕ್ತಪಡಿಸಿದರು. ಶೇ.25ರಷ್ಟು ಸಮುದಾಯಗಳು ಶೇ.75ರಷ್ಟು ಮತಗಳನ್ನು ಕಾಂಗ್ರೆಸ್‌ಗೆ ನೀಡಿದರೂ ಅವರಿಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ ಎಂಬುದನ್ನು ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದರು. ಪಕ್ಷದ ಶಿಸ್ತಿನ ಸಿಪಾಯಿಗಳಾಗಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿದರು. 2028ಕ್ಕೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲು ಗ್ಯಾರಂಟಿ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

ಟಿ20 ವಿಶ್ವಕಪ್​ಗೆ ಭಾರತ ತಂಡದ ಇಬ್ಬರು ಡೌಟ್ – Kannada News | Tilak Varma and Washington Sundar Doubtful for T20 World Cup 2026

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. ತಿಲಕ್ ವರ್ಮಾ, ವಾಷಿಂಗ್ಟನ್ ಸುಂದರ್.

Source link

Video: ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿಯನ್ನು ಮೊಟಕುಗೊಳಿಸಿದ ಮಾಯಾವತಿ – Kannada News | Smoke Disrupts Mayawati’s Press Meet in Lucknow

ಲಕ್ನೋ, ಜನವರಿ 15: ಲೈಟ್​ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅರ್ಧಕ್ಕೆ ಪತ್ರಿಕಾಗೋಷ್ಠಿ ಮೊಟಕುಗೊಳಿಸಿ ತೆರಳಿರುವ ಘಟನೆ ಲಕ್ನೋದಲ್ಲಿ ನಡೆದಿದೆ. ಅವರು ಪಕ್ಷ ಮತ್ತು ಮೈತ್ರಿಕೂಟದ ಸಾಧನೆಗಳ ಬಗ್ಗೆ ಮಾತನಾಡುತ್ತಿದ್ದರು. ದೇಶದಲ್ಲಿ ಬಿಎಸ್ಪಿ ಚಳವಳಿಯನ್ನು ತಡೆಯಲು ಕಾಂಗ್ರೆಸ್ ಮತ್ತು ಬಿಜೆಪಿ ವಿವಿಧ ತಂತ್ರಗಳನ್ನು ಬಳಸುತ್ತಿವೆ ಎಂದು ಮಾಯಾವತಿ ಹೇಳಿದರು. ನಮ್ಮ ಪಕ್ಷವು ಯಾವಾಗಲೂ ಬ್ರಾಹ್ಮಣರಿಗೆ ಸರಿಯಾದ ಗೌರವವನ್ನು ನೀಡಿದೆ. ಬ್ರಾಹ್ಮಣರಿಗೆ ಯಾರ ದಾನವೂ ಅಗತ್ಯವಿಲ್ಲ.

ಅವರನ್ನು ಬಿಜೆಪಿ, ಎಸ್‌ಪಿ ಅಥವಾ ಕಾಂಗ್ರೆಸ್ ದಾರಿ ತಪ್ಪಿಸಬಾರದು. ಬಿಎಸ್‌ಪಿ ಸರ್ಕಾರ ರಚನೆಯಾದಾಗ, ಬ್ರಾಹ್ಮಣರಿಗೆ ಸಂಪೂರ್ಣ ಗೌರವ ಸಿಗುತ್ತದೆ, ಕ್ಷತ್ರಿಯ ಸಮುದಾಯವನ್ನು ಸಹ ನೋಡಿಕೊಳ್ಳಲಾಗುತ್ತದೆ ಮತ್ತು ಜಾಟ್ ಸಮುದಾಯವನ್ನು ಸಹ ನೋಡಿಕೊಳ್ಳಲಾಗುತ್ತದೆ. ದಲಿತರು ಮತ್ತು ಅಲ್ಪಸಂಖ್ಯಾತರನ್ನು ಕೂಡ ಸಮಾನವಾಗಿ ನೋಡಲಾಗುತ್ತದೆ ಎಂದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಬೆಂಗಳೂರು: ಅರ್ಧಕ್ಕೆ ಕಾಲೇಜು ಬಿಟ್ಟು ತಾಯಿ ಜತೆ ಆನ್‌ಲೈನ್ ವಂಚನೆಗಿಳಿದ ಮೊಹಮ್ಮದ್ ಉಜೈಫ್ – Kannada News | Bengaluru Online Fraud: How Youth Managed 4200 Bank Accounts in 24 Crore Scam

ಮೊಹಮ್ಮದ್ ಉಜೈಫ್ ಮತ್ತು ತಾಯಿ ಸಬಾನಾ ಅಬ್ದುಲ್

ಬೆಂಗಳೂರು, ಜ.15: ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದೆ. ಜನರನ್ನು ತಮ್ಮ ಮೋಸದ ಬಲೆಗೆ ಬೀಳಿಸಿಕೊಂಡು ಕೋಟಿ ಕೋಟಿ ಹಣವನ್ನು ದೋಚುತ್ತಿದ್ದಾರೆ. ಇದೀಗ ಒಂದು ವರದಿ ಪ್ರಕಾರ, ಇಂತಹ ಕೃತ್ಯದಲ್ಲಿ ಯುವಕರೇ ಹೆಚ್ಚು ಭಾಗಿಯಾಗುತ್ತಿದ್ದಾರೆ. ಅದರಲ್ಲೂ ಕಾಲೇಜು ಅರ್ಧದಲ್ಲಿ ಬಿಟ್ಟು, ಇಂತಹ ಕೃತ್ಯದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಇದೀಗ ವೇಗವಾಗಿ ಹಣ ಸಂಪಾದಿಸುವ ಭರದಲ್ಲಿ 22 ವರ್ಷದ ಯುವಕ ಪೊಲೀಸರ ( Uzaif cyber scam) ಅತಿಥಿಯಾಗಿದ್ದಾನೆ. ಪೊಲೀಸರು ನಡೆಸಿದ ಬೃಹತ್ ಸೈಬರ್ ಅಪರಾಧ ಕಾರ್ಯಾಚರಣೆ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಆನ್‌ಲೈನ್ ವಂಚನೆಗಳ ಮೂಲಕ ಕದ್ದ ಹಣವನ್ನು ಸ್ಥಳಾಂತರಿಸಲು ಬಳಸುತ್ತಿದ್ದ ಸಾವಿರಾರು ಬ್ಯಾಂಕ್ ಖಾತೆಗಳನ್ನು ನಿರ್ವಹಿಸುತ್ತಿದ್ದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಮೊಹಮ್ಮದ್ ಉಜೈಫ್ ಮತ್ತು ಅವರ ತಾಯಿ ಸಬಾನಾ ಅಬ್ದುಲ್ ಬಾರಿಯನ್ನು ಬಂಧಿಸಿದ್ದಾರೆ.

ತನಿಖಾಧಿಕಾರಿಗಳ ಪ್ರಕಾರ, ಬಿಕಾಂ ಕೋರ್ಸ್‌ ಅರ್ಧಕ್ಕೆ ಬಿಟ್ಟ ಉಜೈಫ್, ಹಣ ಸಾಗಿಸುವ ದಲ್ಲಾಳಿಯಾಗಿ ಈ ವಂಚನೆ ಜಾಲದಲ್ಲಿ ಸೇರಿಕೊಳ್ಳುತ್ತಾನೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ತನ್ನ ತಾಯಿಯ ಸಹಾಯದಿಂದ, ಅವನು ಸುಮಾರು 4,200 ಬ್ಯಾಂಕ್ ಖಾತೆಗಳನ್ನು ನಿರ್ವಹಿಸುತ್ತಿದ್ದ ಎಂದು ಹೇಳಲಾಗಿದೆ. ಇನ್ನು ಇವನ ಜತೆಗಿದ್ದ ಗುಂಪುಗಳು 9,000 ಅಂತಹದೇ ಖಾತೆಗಳನ್ನು ನಿರ್ವಹಿಸುತ್ತಿತ್ತು. ಈ ಖಾತೆಗಳ ಮೂಲಕ ಸುಮಾರು 24 ಕೋಟಿ ರೂ. ನಿರ್ವಾಹಣೆ ಮಾಡಲಾಗುತ್ತಿತ್ತು. ಉಜೈಫ್ ಒಬ್ಬನೇ ಪ್ರತಿ ವರ್ಷ 25 ಲಕ್ಷಕ್ಕೂ ಹೆಚ್ಚು ಸಂಪಾದಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ದುಬೈ ಮೂಲದ ಭಾರತೀಯ ವ್ಯಕ್ತಿ ಪ್ರೇಮ್ ತನೇಜಾ ಜತೆಗೆ ಈ ಹಣ ಸಾಗಣೆಯನ್ನು ವಹಿವಾಟುಗಳನ್ನು ಹೊಂದಿದ್ದ ಎಂದು ವರದಿ ಹೇಳಿದೆ. ಪ್ರೇಮ್ ತನೇಜಾ ಅನ್ನು ಈ ಹಿಂದೆ 2013 ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಈ ವ್ಯವಹಾರವನ್ನು ಮಾಡಲು ಪ್ರೇಮ್ ತನೇಜಾ, ಉಜೈಫ್​​ನ ತಾಯಿ ಜತೆಗೆ ಪ್ರಯಾಣ ಬೆಳೆಸಿದ್ದ ಎಂದು ಅಧಿಕಾರಿಗಳು ಹೇಳುತ್ತಾರೆ. ಇವರು ಈ ಜಾಲದ ಮುಂದುವರಿದ ಭಾಗವಾಗಿ ಇಬ್ಬರೂ, ಸರ್ಕಾರಿ ಆಸ್ಪತ್ರೆಗಳು ಮತ್ತು ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಜನರನ್ನು ಹಾಗೂ ವಿದ್ಯಾರ್ಥಿಗಳನ್ನು 2 ಸಾವಿರ ರೂ. ಹಾಗೂ 5 ಸಾವಿರ ರೂ.ಗಳ ಖಾತೆಯನ್ನು ತೆರೆಯುವಂತೆ ಅವರನ್ನು ಒತ್ತಾಯಿಸುತ್ತಿದ್ದರು. ಕೆಲವೊಂದು ವಿದ್ಯಾರ್ಥಿಗಳು ಹಾಗೂ ಜನರು ಇವರ ಮೋಸದ ಜಾಲಕ್ಕೆ ಬಿದ್ದು, ತಮ್ಮ ಆಧಾರ್​ ಕಾರ್ಡ್​​, ಪಾನ್​​ ಕಾರ್ಡ್​​​, ಇತರ ದಾಖಲೆಯನ್ನು ಈ ಮೋಸಗಾರರಿಗೆ ನೀಡಿದ್ದಾರೆ.

ಇದನ್ನೂ ಓದಿ: ಮೈಸೂರು: ಮಹಾಬಲೇಶ್ವರ ದೇವಸ್ಥಾನದ ಹುಂಡಿ ಹಣ, ಬೆಳ್ಳಿ ವಿಗ್ರಹಗಳು, ಕಂಚಿನ ಆಭರಣ ದೋಚಿದ ಕಳ್ಳರು

ನಂತರ ಈ ದಾಖಲೆಗಳನ್ನು ದೆಹಲಿಯಲ್ಲಿರುವ ಸಹವರ್ತಿಗಳಿಗೆ ಕಳುಹಿಸುತ್ತಿದ್ದರು. ನಂತರ ಅಲ್ಲಿಂದ ಬ್ಯಾಂಕ್​​ ಖಾತೆಗಳನ್ನು ಹ್ಯಾಕ್​ ಮಾಡಿ ಹಣವನ್ನು ಕಬಳಿಸುತ್ತಿದ್ದರು. ಈ ಕೆಲಸ ಮಾಡಿದಕ್ಕೆ ಉಜೈಫ್​​ನ ಮತ್ತು ಆತನ ತಾಯಿಗೆ ಹಣವನ್ನು ಸಂಬಳದ ರೂಪದಲ್ಲಿ ನೀಡುತ್ತಿದ್ದರು. ಈ ಇಬ್ಬರಿಗೆ ಸಹಾಯ ಮಾಡಿದ್ದಕ್ಕಾಗಿ ದೆಹಲಿಯ ಒಂಬತ್ತು ಯುವಕರನ್ನು ಪೊಲೀಸರು ಇಲ್ಲಿಯವರೆಗೆ ಬಂಧಿಸಿದ್ದಾರೆ. ದೇಶಾದ್ಯಂತ 864 ಸೈಬರ್ ಅಪರಾಧ ಪ್ರಕರಣಗಳಲ್ಲಿ ಈ ಗ್ಯಾಂಗ್ ಭಾಗಿಯಾಗಿದೆ ಎಂದು ಹೇಳಲಾಗಿದೆ. ದಾಳಿಯ ಸಮಯದಲ್ಲಿ ಪೊಲೀಸರಿಗೆ ನೂರಾರು ಡೆಬಿಟ್ ಕಾರ್ಡ್‌ಗಳು, ಡಜನ್‌ಗಟ್ಟಲೆ ಮೊಬೈಲ್ ಫೋನ್‌ಗಳು, ಚಿನ್ನಾಭರಣಗಳು, ನಗದು, ಐಷಾರಾಮಿ ಕೈಗಡಿಯಾರಗಳು ಮತ್ತು ಡಿಜಿಟಲ್ ಪಾವತಿ ಮತ್ತು ಕ್ರಿಪ್ಟೋಕರೆನ್ಸಿಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ತನಿಖಾಧಿಕಾರಿಗಳು ಹೇಳುವಂತೆ ಉಜೈಫ್ ಐಷಾರಾಮಿ ಜೀವನಶೈಲಿಗಾಗಿ ಬಹಳಷ್ಟು ಖರ್ಚು ಮಾಡುತ್ತಿದ್ದರು, ದುಬಾರಿ ಶೂಗಳು ಮತ್ತು ಐಷಾರಾಮಿ ಕೈಗಡಿಯಾರಗಳನ್ನು ಖರೀದಿಸುತ್ತಿದ್ದರು ಮತ್ತು ಜೆಪಿ ನಗರದಲ್ಲಿ ಹೆಚ್ಚಿನ ಬಾಡಿಗೆಯ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ ಎಂದು ಹೇಳಲಾಗಿದೆ.

ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ತರಕಾರಿ ಮಾರಿ ಪ್ರಭುಲಿಂಗ ದೇವರಿಗೆ 16 ಲಕ್ಷ ರೂ. ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಅಣ್ಣನ ಮಕ್ಕಳಿಂದಲೇ ಬರ್ಬರ ಹತ್ಯೆ – Kannada News | Philanthropist Who Donated Rs 16 Lakh Silver Door to Prabhulinga Temple Brutally Murdered by Relatives in Bagalkot

ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ

ಬಾಗಲಕೋಟೆ, ಜನವರಿ 15: ಬಾಗಲಕೋಟೆ (Bagalkot) ಜಿಲ್ಲೆಯ ಜಗದಾಳ ಗ್ರಾಮದಲ್ಲಿ 80 ವರ್ಷದ ವೃದ್ಧೆ ದಾನಜ್ಜಿ ಅಲಿಯಾಸ್ ಚಂದ್ರವ್ವ ನೀಲಗಿ ಅವರನ್ನು ಅಣ್ಣನ ಮಕ್ಕಳೇ ಆಸ್ತಿಗಾಗಿ ಹತ್ಯೆ ಮಾಡಿದ್ದಾರೆ. 11 ಎಕರೆ ಆಸ್ತಿಗಾಗಿ ಈ ಅಮಾನವೀಯ ಕೃತ್ಯ ಎಸಗಲಾಗಿದೆ ಎಂಬುದು ತಿಳಿದುಬಂದಿದೆ. ಬಾಗಲಕೋಟೆ ಜಿಲ್ಲೆ ತೇರದಾಳ ಮತ್ತು ರಬಕವಿಬನಹಟ್ಟಿ ಭಾಗದಲ್ಲಿ ದಾನಜ್ಜಿ ಎಂದೇ ಹೆಸರಾಗಿದ್ದ ಚಂದ್ರವ್ವ ನೀಲಗಿ ಅವರ ಕೊಲೆ ಸ್ಥಳೀರನ್ನು ಆಘಾತಕ್ಕೀಡು ಮಾಡಿದೆ.

ತರಕಾರಿ ಮಾರಟ ಮಾಡಿ ಜೀವನ, ದಾನದಿಂದಲೇ ಪ್ರಸಿದ್ಧಿ

ದಾನಜ್ಜಿ ಅವರು ಜೀವನದುದ್ದಕ್ಕೂ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ 60 ವರ್ಷಗಳಿಂದ ತೇರದಾಳದ ಪ್ರಭುಲಿಂಗೇಶ್ವರ ದೇವಸ್ಥಾನದ ಬಳಿ ತರಕಾರಿ ವ್ಯಾಪಾರ ಮಾಡುತ್ತಿದ್ದ ಅವರು, ಕೂಡಿಟ್ಟ ಹಣದಿಂದ ಅನೇಕ ದಾನ ಕಾರ್ಯಗಳನ್ನು ಮಾಡಿದ್ದರು. ವಿಶೇಷವಾಗಿ, 2022ರಲ್ಲಿ ಪ್ರಭುಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಗೆ 20 ಕೆಜಿ ತೂಕದ, 16 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಬಾಗಿಲನ್ನು ದಾನ ಮಾಡಿದ್ದರು. ಇದಲ್ಲದೆ, ದೇವಸ್ಥಾನದಲ್ಲಿ 3 ಲಕ್ಷ ರೂಪಾಯಿ ವೆಚ್ಚದಲ್ಲಿ ಕೊಠಡಿಯೊಂದನ್ನೂ ನಿರ್ಮಿಸಿಕೊಟ್ಟಿದ್ದರು. ಅವರ ಈ ದಾನ-ಧರ್ಮಗಳ ಗುಣದಿಂದಾಗಿಯೇ ಅವರಿಗೆ ದಾನಜ್ಜಿ ಎಂಬ ಅನ್ವರ್ಥನಾಮ ಬಂದಿತ್ತು.

ಆಸ್ತಿಗಾಗಿ ನೀಚತನ ಪ್ರದರ್ಶಿಸಿದ ದಾನಜ್ಜಿಯ ಅಣ್ಣನ ಮಕ್ಕಳು

ಇಂತಹ ದಾನಕ್ಕೆ ಹೆಸರಾಗಿದ್ದ ವೃದ್ಧೆಯ ಕೊಲೆಗೆ ಆಸ್ತಿ ವಿವಾದವೇ ಕಾರಣವಾಗಿದೆ. ದಾನಜ್ಜಿ ಮತ್ತು ಅವರ ಅಣ್ಣನ ಮಕ್ಕಳ ನಡುವೆ 11 ಎಕರೆ ಆಸ್ತಿಯ ವಿಚಾರವಾಗಿ ಭಿನ್ನಾಭಿಪ್ರಾಯಗಳಿದ್ದವು. ಜನವರಿ 13ರಂದು, ಸರ್ವೆ ಅಧಿಕಾರಿಗಳು ದಾನಜ್ಜಿ ಅವರ ಹೊಲದ ಭೂಮಿಯ ಸರ್ವೆಗಾಗಿ ಬಂದಿದ್ದ ಸಂದರ್ಭದಲ್ಲಿ, ಅಜ್ಜಿ ಘಟಪ್ರಭಾ ಕಾಲುವೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅವರನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಲು ಪ್ರಯತ್ನಿಸಲಾಗಿತ್ತು. ನಂತರ, ಆಕೆಯನ್ನು ಉಳಿಸುವ ರೀತಿಯಲ್ಲಿ ನಾಟಕವನ್ನೂ ಮಾಡಲಾಗಿತ್ತು. ಆಕೆಯನ್ನು ಆಸ್ಪತ್ರೆಗೆ ಸಾಗಿಸಲು ಹೈಡ್ರಾಮಾ ನಡೆಸಲಾಗಿತ್ತು. ಬಳಿಕ ಆರೋಪಿಗಳು ವೃದ್ಧೆಯನ್ನು ಕಾಡಯ್ಯ ಬನಹಟ್ಟಿ ಆಸ್ಪತ್ರೆಗೆ ಕರೆ ತಂದಿದ್ದರು. ಅಲ್ಲಿಂದ ತಾವೇ ಗೋಕಾಕ ಆಸ್ಪತ್ರೆಗೆ ಕಡೆಗೆ ಕರೆಕೊಂಡು ಹೋಗುತ್ತೇವೆಂದು ಕರೆದೊಯ್ದಿದ್ದ ಆರೋಪಿಗಳು ಕೊಲೆ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೊಲೆ ಮಾಡಿ ತರಾತುರಿಯಲ್ಲಿ ಅಂತ್ಯಸಂಸ್ಕಾರಕ್ಕೆ ಯತ್ನ

ಕೊಲೆ ಮಾಡಿದ ನಂತರ ದಾನಜ್ಜಿ ಅಣ್ಣನ ಮಕ್ಕಳು ಶವವನ್ನು ಆತುರವಾಗಿ ಅಂತ್ಯಸಂಸ್ಕಾರ ಮಾಡಲು ಪ್ರಯತ್ನ ನಡೆಸಿದ್ದರು. ಗೋಡೆಗೆ ಒರಗಿಸಿ ಶೃಂಗಾರ ಮಾಡಿ, ಶೀಘ್ರವಾಗಿ ಶವವನ್ನು ಸಾಗಿಸಲು ಮುಂದಾಗಿದ್ದರು. ಆದರೆ, ಸ್ಥಳೀಯರಲ್ಲಿ ಅನುಮಾನಗಳು ಹುಟ್ಟಿಕೊಂಡವು. ಗಡಿಬಿಡಿಯ ಈ ವರ್ತನೆಯಿಂದ ಅನುಮಾನಗೊಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಈ ಭೀಕರ ಕೃತ್ಯ ಬಯಲಿಗೆ ಬಂದಿದೆ.

ಇದನ್ನೂ ಓದಿ: ಹುಡುಗಾಟವಲ್ಲ! ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ರಬಕವಿಬನಹಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸದ್ಯ ಐದು ಮಂದಿ ಆರೋಪಿಗನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಬಾಗಲಕೋಟೆ ಎಸ್​​ಪಿ ಸಿದ್ಧಾರ್ಥ ಗೋಯಲ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು: ಪ್ರಯಾಣಿಕರು ಫುಲ್​​ ಖುಷ್​​ – Kannada News | Bengaluru Metro Yellow Line Boosts Connectivity with 7th Train, Frequency Now 10 Minutes

ಬೆಂಗಳೂರು, ಜನವರಿ 15: ನಮ್ಮ ಮೆಟ್ರೋದ ಯೆಲ್ಲೋ ಲೈನ್‌ನಲ್ಲಿ 7ನೇ ರೈಲು ಸಂಚಾರ ಇಂದಿನಿಂದ ಆರಂಭಗೊಂಡಿದೆ. ಆ ಮೂಲಕ ಆರ್‌ವಿ ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ ಇದುವರೆಗೆ 13-15 ನಿಮಿಷಗಳ ಅಂತರದಲ್ಲಿ ಸಂಚರಿಸುತ್ತಿದ್ದ ರೈಲುಗಳ ಸಮಯ  ಈಗ 10 ನಿಮಿಷಕ್ಕೆ ಇಳಿದಿದ್ದು, ದೈನಂದಿನ ಪ್ರಯಾಣಿಕರಿಗೆ ಖುಷಿ ತಂದಿದೆ. ಈ ಮಾರ್ಗದಲ್ಲಿ ಇದುವರೆಗೆ ಆರು ಮೆಟ್ರೋ ರೈಲುಗಳು ಮಾತ್ರ ಸಂಚಾರ ನಡೆಸುತ್ತಿದ್ದವು. 7ನೇ ರೈಲಿನ ಸೇರ್ಪಡೆಯಿಂದಾಗಿ, ರೈಲಿಗೆ ಪ್ರಯಾಣಿಕರು ಕಾಯಬೇಕಾದ ಸಮಯ ಇಳಿಕೆಯಾಗಿದೆ. ನಮ್ಮ ಮೆಟ್ರೋ ಒಟ್ಟು 16 ರೈಲುಗಳಿಗೆ ಆರ್ಡರ್ ನೀಡಿದ್ದು, ಈಗಾಗಲೇ ಎಂಟು ರೈಲುಗಳು ಬಿಎಂಆರ್‌ಸಿಎಲ್‌ ತಲುಪಿವೆ. ಎಂಟನೇ ರೈಲಿನ ಪರೀಕ್ಷೆ ನಡೆಯುತ್ತಿದ್ದು, ಶೀಘ್ರದಲ್ಲೇ ಅದು ಕೂಡ ಸೇವೆಗೆ ಲಭ್ಯವಾಗುವ ನಿರೀಕ್ಷೆಯಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link