Karnataka Weather Forecast: ಬೆಂಗಳೂರಿ ಸೇರಿ ಹಲವೆಡೆ ನಾಳೆಯೂ ಮಳೆ, ಕೆಲ ಜಿಲ್ಲೆಗಳಲ್ಲಿ ವಿಪರೀತ ತಾಪಮಾನದ ಎಚ್ಚರಿಕೆ – Kannada News | Karnataka Weather Forecast: Rain Expected in Bengaluru and Most Districts, Heat Alert for North
ಬೀದರ್ನಲ್ಲಿ ಸುರಿದ ಮಳೆImage Credit source: Tv9 Kannada ಬೆಂಗಳೂರು, ಮೇ 19: ರಾಜ್ಯದಲ್ಲಿ ಇನ್ನೂ ಕೆಲವು ದಿನಗಳಕಾಲ ಮಳೆಯಾಗಲಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಮುಕ್ಕಾಲು ಕರ್ನಾಟಕದಲ್ಲಿ ನಾಳೆ ವರುಣನ (Rain) ಆಗಮನದ ನಿರೀಕ್ಷೆ ಇದ್ದು, ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯ ಸಾಧ್ಯತೆ ಇದೆ. ಅದಾಗಿಯೂ ಕೆಲ ಜಿಲ್ಲೆಗಳಲ್ಲಿ ವಿಪರೀತ ತಾಪಮಾನ ಕಂಡುಬರಲಿದ್ದು, ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್ ವರೆಗೂ ಕಂಡುಬರಲಿದೆ. ಇದೇ ರೀತಿಯ ವಾತಾವರಣ ಮುಂದಿನ ಮೂರು ದಿನಗಳ ಕಾಲ ಮುಂದುವರಿಯಲಿದೆ…