ಶಿಡ್ಲಘಟ್ಟ ಪೌರಾಯುಕ್ತೆಯನ್ನು ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು – Kannada News | Priyank Kharge Slams Congress Leader for Abuse of Sidlaghatta Municipal Woman Commissioner
ಬೆಂಗಳೂರು, ಜನವರಿ 15: ಶಿಡ್ಲಘಟ್ಟ ಪೌರಾಯುಕ್ತೆಯನ್ನು ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನ್ನು ಸಚಿವ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜೀವ್ ಗೌಡ ಅಥವಾ ಬೇರೆ ಯಾರೇ ಆಗಿರಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಬೇರೆಯವರನ್ನು ನಿಂದಿಸಲು ಅಥವಾ ಅವಾಚ್ಯ ಶಬ್ದಗಳನ್ನು ಬಳಸಲು ಯಾರಿಗೂ ಹಕ್ಕಿಲ್ಲ ಎಂದರು. ಅಲ್ಲದೆ, ಪಕ್ಷದ ಅಧ್ಯಕ್ಷರು ಅವರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದರು. ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ ಎಂಬ ಬಿಜೆಪಿ ಟ್ವೀಟ್‌ಗೆ…