‘ವಿಸಿಲ್ ಹೊಡೆದು ಮನೆಗೆ ಹೋಗಿ’; ವೈಲ್ಡ್ ಸೆಲೆಬ್ರೇಷನ್ ಮಾಡಿದ ಇಶಾನ್ ಕಿಶನ್ – Kannada News | Ishan Kishan Mocks CSK After Win; SRH Qualifies for IPL Playoffs
ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಸೋಮವಾರ (ಮೇ 18) ನಡೆದ ಪ್ರಮುಖ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಹಾದಿ ಬಹುತೇಕ ಮುಚ್ಚಲ್ಪಟ್ಟಿದ್ದು, ಟೂರ್ನಿಯಿಂದ ಹೊರಬೀಳುವುದು ಖಚಿತವಾಗಿದೆ. ಮತ್ತೊಂದೆಡೆ ಎಸ್‌ಆರ್‌ಎಚ್ ತಂಡವು ಅಧಿಕೃತವಾಗಿ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ. ಚೆಪಾಕ್‌ನ ನಿಧಾನಗತಿಯ ಪಿಚ್‌ನಲ್ಲಿ ಸಿಎಸ್‌ಕೆ ನೀಡಿದ್ದ 181 ರನ್‌ಗಳ ಸವಾಲನ್ನು ಬೆನ್ನಟ್ಟಿದ ಹೈದರಾಬಾದ್ ತಂಡಕ್ಕೆ ಇಶಾನ್…