ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದು ಈಗ ರಾಷ್ಟ್ರೀಯ ದಾಖಲೆಯ ಹೊಸ್ತಿಲಲ್ಲಿ ಸಿದ್ದರಾಮಯ್ಯ – Kannada News | One And Only Siddaramaiah completed 8 Years as CM in history of Karnataka, here is His record details
ಬೆಂಗಳೂರು, (ಮೇ 18): ನಾಯಕತ್ವ ಗೊಂದಲಗಳ ನಡುವೆ ಸಿಎಂ ಸಿದ್ದರಾಮಯ್ಯ (Siddaramaiah) ಕರ್ನಾಟಕದ (Karnataka) ಮುಖ್ಯಮಂತ್ರಿಯಾಗಿ 8 ವರ್ಷ ಪೂರ್ಣಗೊಳಿಸಿದ ಏಕೈಕ ವ್ಯಕ್ತಿ ಎನ್ನುವ ದಾಖಲೆ ಬರೆದಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೇ 20ಕ್ಕೆ 3 ವರ್ಷ ಪೂರ್ಣಗೊಳ್ಳಲಿದೆ. ಅದಕ್ಕೂ ಮೊದಲೇ ಸಿಎಂ ಸಿದ್ದರಾಮಯ್ಯ ತಮ್ಮ ಹಲವು ದಾಖಲೆಗಳ ಸಾಲಿನಲ್ಲಿ ಮತ್ತೊಂದು ಸಾಧನೆ ಬರೆದಿದ್ದು ಕರ್ನಾಟಕದ ಮುಖ್ಯಮಂತ್ರಿಯಾಗಿ 8 ವರ್ಷ ಪೂರ್ಣಗೊಳಿಸಿದ ಏಕೈಕ ವ್ಯಕ್ತಿ ಎಂಬುದು ಅವರ ಮತ್ತೊಂದು ಗರಿಮೆ. ಇದರ ಜೊತೆಗೆ ಅತಿ ಹೆಚ್ಚು…