ಅತ್ಯಂತ ಮೌಲ್ಯಯುತ ಭಾರತೀಯ ಕಂಪನಿಗಳು; ರಿಲಾಯನ್ಸ್ ನಂತರ ಏರ್ಟೆಲ್; ಎಚ್ಡಿಎಫ್ಸಿಯನ್ನು ಹಿಂದಿಕ್ಕಿದ ಭಾರತೀಯ ಟೆಲಿಕಾಂ ಕಂಪನಿ – Kannada News | Bharti Airtel briefly edges HDFC Bank to Become India’s 2nd Most Valued Company
ನವದೆಹಲಿ, ಮೇ 18: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಟೆಲಿಕಾಂ ದೈತ್ಯ ಭಾರ್ತಿ ಏರ್‌ಟೆಲ್ (Bharti Airtel) ಐತಿಹಾಸಿಕ ಸಾಧನೆ ಮಾಡಿದೆ. ದೇಶದ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕ್ ಆದ ಎಚ್‌ಡಿಎಫ್‌ಸಿ (HDFC Bank) ಅನ್ನು ಹಿಂದಿಕ್ಕುವ ಮೂಲಕ ಭಾರ್ತಿ ಏರ್‌ಟೆಲ್ ಮಾರುಕಟ್ಟೆ ಬಂಡವಾಳೀಕರಣದಲ್ಲಿ (Market Capitalisation) ಭಾರತದ ಎರಡನೇ ಅತ್ಯಂತ ಮೌಲ್ಯಯುತ ಕಂಪನಿಯಾಗಿ ಹೊರಹೊಮ್ಮಿದೆ. ಕಳೆದ ಕೆಲವು ದಿನಗಳಿಂದ ಏರ್‌ಟೆಲ್ ಷೇರುಗಳು ಸತತವಾಗಿ ಏರಿಕೆ ಕಾಣುತ್ತಿರುವುದು ಈ ಸಾಧನೆಗೆ ಕಾರಣವಾಗಿದೆ. ಮುಕೇಶ್ ಅಂಬಾನಿ ಅವರ ರಿಲಾಯನ್ಸ್ ಇಂಡಸ್ಟ್ರೀಸ್…