ಜಿಟಿ ದೇವೇಗೌಡಗೆ ಬಿಗ್ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು ಜೆಡಿಎಸ್ ಸಮಾವೇಶ – Kannada News | Mysuru: Big Shock for GT Deve Gowda: JDS Convention keeps away MLAs from own party
ಮೈಸೂರು, ಮೇ 17: ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡರ ತವರು ಅಂಗಳದಲ್ಲೇ ಇದೀಗ ದಳಪತಿಗಳು ಜನತಾದಳ ಸಮಾವೇಶ ಆಯೋಜಿಸಿದ್ದಾರೆ. ವಿಶೇಷವೆಂದರೆ, ಸಮಾವೇಶದಲ್ಲಿ ಶಾಸಕ ಜಿ.ಟಿ. ದೇವೇಗೌಡ ದೂರು ಉಳಿದಿದ್ದರೆ ಅವರ ಪುತ್ರ ಜಿ.ಟಿ. ಹರೀಶ್ ಗೌಡ ಮುಂದಾಳತ್ವದಲ್ಲಿ ಕಾರ್ಯಕ್ರಮ ನಡೆದಿದೆ. ಇನ್ನು ಸಮಾವೇಶದ ಬ್ಯಾನರ್ಗಳು ಮತ್ತು ಕಟೌಟ್ಗಳಲ್ಲಿ ಜಿ.ಟಿ. ದೇವೇಗೌಡ ಫೋಟೋಗೆ ಕೊಕ್ ನೀಡಲಾಗಿದೆ. ಪಕ್ಷದಿಂದ ದೂರವಿದ್ದರೂ ಇತ್ತೀಚೆಗಷ್ಟೇ ಜಿ.ಟಿ.ದೇವೇಗೌಡ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ್ದರು. ಆದರೆ,…