Headlines

‘ನಾನು ಅಷ್ಟು ಚೀಪ್ ಅಲ್ಲ, ಸಿಎಂ ವಿಜಯ್ ಮೇಲೆ ಅಸೂಯೆ ಇಲ್ಲ’: ರಜನಿಕಾಂತ್ ಸ್ಪಷ್ಟನೆ – Kannada News | Rajinikanth clarifies rumors of jealousy after Vijay became Tamil Nadu CM

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ (Thalapathy Vijay) ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷ ಬಹುಮತ ಪಡೆದು ಸರ್ಕಾರ ರಚಿಸಿದ ಬೆನ್ನಲ್ಲೇ, ಸೂಪರ್‌ಸ್ಟಾರ್ ರಜನಿಕಾಂತ್ ಅವರ ನಡೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗಳು ನಡೆಯುತ್ತಿದ್ದವು. ಚುನಾವಣೆಯಲ್ಲಿ ಸೋಲುಂಡ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಅವರನ್ನು ರಜನಿಕಾಂತ್ ಭೇಟಿಯಾಗಿದ್ದನ್ನು ನೋಡಿ ಕೆಲವರು ಟೀಕೆ ಮಾಡಿದ್ದರು. ವಿಜಯ್ ಸಿಎಂ ಆಗಿರುವುದಕ್ಕೆ ರಜನಿ ಅವರಿಗೆ ಇಷ್ಟವಿಲ್ಲ ಎಂದು ಹಲವರು ಬಿಂಬಿಸಿದ್ದರು. ಸದ್ಯ ಈ ಎಲ್ಲಾ ವದಂತಿಗಳಿಗೆ ರಜನಿಕಾಂತ್…

Read More

Video: ಮನೆಯಲ್ಲಿ ಒಂಟಿಯಾಗಿದ್ದ ವೃದ್ಧೆಯ ಕೊಲೆ; ಸಂಬಂಧಿಕರೇ ಹಣ ದೋಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇಂಡೋನೇಷ್ಯಾದ ಪೆಕನ್‌ಬಾರು ನಗರದ ರುಂಬೈನಲ್ಲಿ ದುಮರಿಸ್ ಬೋರು ಸಿಟಿಯೊ (60) ಎಂಬ ವೃದ್ಧೆಯನ್ನು ಕೊಲೆ ಮಾಡಿ ದರೋಡೆ ಮಾಡಿರುವುದು ವರದಿಯಾಗಿದೆ. ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ ಪೊಲೀಸರು ಘಟನಾ ಸ್ಥಳದ ಮರು ಪರಿಶೀಲನೆ ನಡೆಸಿ ನಾಲ್ಕು ಮಂದಿ ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಮನೆಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ವ್ಯಕ್ತಿಯೊಬ್ಬ ಮರದ ದಿಂಬಿನಿಂದ ವೃದ್ಧೆಯ ಮೇಲೆ ಹಲ್ಲೆ ನಡೆಸಿರುವುದು ಮತ್ತು ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವುದು ಪತ್ತೆಯಾಗಿದೆ. ಸಿಸಿಟಿವಿ ಮತ್ತು ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಮೃತರ ಸಂಬಂಧಿಯೇ ಆದ ‘AF’ ಎಂಬ…

Read More

RCB ಪಂದ್ಯಕ್ಕೆ 80,000 ರೂ: ಐಪಿಎಲ್ ಟಿಕೆಟ್ ದಂಧೆ ಬಯಲು! – Kannada News | IPL 2026 Ticket Scam: rs 80,000 For RCB’s Match, DDCA Official Involved

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ 2026 ಪಂದ್ಯಗಳ ಉಚಿತ ಪಾಸ್‌ಗಳನ್ನು (Complimentary Passes) ಕಾನೂನುಬಾಹಿರವಾಗಿ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ಪಂದ್ಯ ವೀಕ್ಷಿಸಲು ಇರುವ ಭಾರಿ ಬೇಡಿಕೆಯನ್ನು ಬಳಸಿಕೊಂಡು, ಕೇವಲ ಒಂದು ಟಿಕೆಟ್ ಅನ್ನು ಬರೋಬ್ಬರಿ ₹80,000 ವರೆಗೆ ಕಾಳ ಸಂತೆಯಲ್ಲಿ ಮಾರಾಟ ಮಾಡಲಾಗಿದೆ. ಈ ದಂಧೆಯ ಹಿಂದೆ ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆಯ…

Read More

ರೈಲ್ವೇ ಪ್ರಯಾಣಿಕರಿಗೆ ಗುಡ್​​ನ್ಯೂಸ್​​: ಬೆಂಗಳೂರು, ಮುಂಬೈ ಎಕ್ಸ್​​ಪ್ರೆಸ್​​ ಟ್ರೈನ್​​ಗೆ ಹಸಿರು ನಿಶಾನೆ – Kannada News | New Bengaluru Mumbai Express: Two Day Weekly Service Starts for Travelers

ಬೆಂಗಳೂರು, ಮುಂಬೈ ಎಕ್ಸ್ಪ್ರೆಸ್ ಟ್ರೈನ್​​ಗೆ ಹಸಿರು ನಿಶಾನೆImage Credit source: Tv9 Kannada ಬೆಂಗಳೂರು, ಮೇ 17: ಬೆಂಗಳೂರು-ಮುಂಬೈ ನಡುವೆ ಸಂಚಾರ ಮಾಡಲಿರುವ ಹೊಸ ಎಕ್ಸ್​​ಪ್ರೆಸ್​​ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಎಸ್ಎಂವಿಟಿ ರೈಲ್ವೇ ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ವರ್ಚುವಲ್​​ ಮೂಲಕ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ, ಸಂಸದರಾದ ಪಿಸಿ ಮೋಹನ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಬೆಂಗಳೂರು ಟು ಮುಂಬೈಗೆ ಸಂಚರಿಸುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಪ್ರಯಾಣಿಕರ ಅನುಕೂಲದ…

Read More

ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ, ಇಂಧನ ಮಾರಾಟ ಶೇ.50ರಷ್ಟು ಕುಸಿತ – Kannada News | PM Modis Call for Economic Patriotism Sees Sharp Drop in Bengaluru Gold and Fuel Consumption

ಬೆಂಗಳೂರು, ಮೇ 17: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕ ಹಿತಾಸಕ್ತಿ ಕಾಪಾಡಲು ನೀಡಿರುವ ಕರೆಯ ಬೆನ್ನಲ್ಲೇ ಬೆಂಗಳೂರಿನಲ್ಲಿ ಚಿನ್ನ ಮತ್ತು ಇಂಧನ ಮಾರಾಟದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ನಗರದಲ್ಲಿ ಚಿನ್ನ ಹಾಗೂ ಬೆಳ್ಳಿ ಮಾರಾಟವು ಶೇಕಡ 50ರಷ್ಟು ಕಡಿಮೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟವು ಸಹ ಕೊಂಚ ಇಳಿಕೆಯನ್ನು ಕಂಡಿದೆ. ಬಂಕ್‌ಗಳಲ್ಲಿ ಪ್ರತಿದಿನ 150 ರಿಂದ 250 ಲೀಟರ್ ಇಂಧನ ಮಾರಾಟ ಕಡಿಮೆಯಾಗಿದ್ದು, ನಾಗರಿಕರು ತಮ್ಮ ಸ್ವಂತ ವಾಹನಗಳ ಬಳಕೆಯನ್ನು ಕಡಿಮೆ ಮಾಡಿ ಮೆಟ್ರೋ…

Read More

ಸುಧಾಕರ್ ನುಡಿ ನಮನ ಕಾರ್ಯಕ್ರಮದಲ್ಲಿ ಭಾವುಕರಾದ ಶಾಸಕ ರಘುಮೂರ್ತಿ!

ಚಿತ್ರದುರ್ಗ, ಮೇ 17: ಚಳ್ಳಕೆರೆಯಲ್ಲಿ ನಡೆದ ದಿವಂಗತ ಶಾಸಕ ಡಿ. ಸುಧಾಕರ್ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಹಾಲಿ ಶಾಸಕ ಟಿ. ರಘುಮೂರ್ತಿ ಭಾವುಕರಾಗಿ ಮಾತನಾಡಿದ್ದಾರೆ. ಡಿ. ಸುಧಾಕರ್ ಅವರೊಂದಿಗಿನ ತಮ್ಮ ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಅವರಿಬ್ಬರ ನಡುವೆ ಸಹೋದರ ಸಂಬಂಧವಿತ್ತು ಎಂದು ರಘುಮೂರ್ತಿ ಸ್ಮರಿಸಿಕೊಂಡರು. 2008ರಲ್ಲಿ ತಾವು ಶಾಸಕರಾಗಲು ಬಂದ ದಿನಗಳಿಂದ ಸುಧಾಕರ್ ಅವರೊಂದಿಗಿನ ಸಂಪರ್ಕವನ್ನು ನೆನಪಿಸಿಕೊಂಡರು.     Source link

Read More

ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ನಟಿ ರಚಿತಾ ರಾಮ್; ವಿಡಿಯೋ ನೋಡಿ – Kannada News | Actress Rachita Ram offers Koragajja Daiva Kola Seva at Bantwal

ನಟಿ ರಚಿತಾ ರಾಮ್ (Rachita Ram) ಅವರು ಚಿತ್ರರಂಗಕ್ಕೆ ಕಾಲಿಟ್ಟು 14 ವರ್ಷಗಳು ಕಳೆದಿವೆ. ಈಗಲೂ ಅವರಿಗೆ ಅಷ್ಟೇ ಬೇಡಿಕೆ ಇದೆ. ಕನ್ನಡ ಮಾತ್ರವಲ್ಲದೇ ಪರಭಾಷೆಯ ಚಿತ್ರರಂಗದಿಂದಲೂ ಅವರಿಗೆ ಅವಕಾಶಗಳು ಬರುತ್ತಿವೆ. ರಚಿತಾ ಅವರು ದೈವ ಭಕ್ತೆ ಕೂಡ ಹೌದು. ಈಗ ಅವರು ಕೊರಗಜ್ಜ ದೈವದ ಕೋಲ ಸೇವೆಯಲ್ಲಿ ಭಾಗಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೆಂಜನಪದವಿನ ಕೊರಗಜ್ಜ (Koragajja) ಸನ್ನಿಧಿಯಲ್ಲಿ ರಚಿತಾ ರಾಮ್ ಅವರು ಕೋಲ ಸೇವೆ ನೀಡಿದ್ದಾರೆ. ಕುಟುಂಬ ಸಮೇತರಾಗಿ ಆಗಮಿಸಿ ಕೋಲ…

Read More

ವಿರಾಟ್ ಕೊಹ್ಲಿ ಯಾರಿಗೆ ಏನು ಸಾಬೀತುಪಡಿಸಬೇಕು? ಅಶ್ವಿನ್ ನೇರ ಪ್ರಶ್ನೆ! – Kannada News | Nothing Left to Prove: Ashwin Backs Virat Kohli

ಭಾರತ ಟೆಸ್ಟ್ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಅವರ ದಿಢೀರ್ ನಿವೃತ್ತಿಯ ಹಿಂದಿನ ಅಸಲಿ ಕಾರಣ ಈಗ ಬಯಲಾಗಿದ್ದು, ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರತಿ ಪಂದ್ಯದ ಬಳಿಕವೂ ಸಾಮರ್ಥ್ಯ ಸಾಬೀತುಪಡಿಸಬೇಕಾದ ‘ವಿಷಕಾರಿ ವಾತಾವರಣ’ದಿಂದ ಬೇಸತ್ತು ತಾವು ರೆಡ್-ಬಾಲ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾಗಿ ಕೊಹ್ಲಿ ನೀಡಿದ್ದ ಸ್ಪೋಟಕ ಹೇಳಿಕೆಯನ್ನು ಸ್ಟಾರ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸಂಪೂರ್ಣವಾಗಿ ಸಮರ್ಥಿಸಿಕೊಂಡಿದ್ದಾರೆ. ಭಾರತಕ್ಕೆ ಅಸಂಖ್ಯಾತ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿರುವ ಕೊಹ್ಲಿ, ಇನ್ನು ಯಾರಿಗಾಗಿ ತನ್ನ ಯೋಗ್ಯತೆ…

Read More

ನೂತನ ರೈಲಿಗೆ ಚಾಲನೆ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯ: ಸಚಿವ ವಿ. ಸೋಮಣ್ಣ ಹೇಳಿದ್ದೇನು? – Kannada News | Kannada Language Ignored at Bengaluru Mumbai Train Inauguration

ನೂತನ ರೈಲಿಗೆ ಚಾಲನೆ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯImage Credit source: Tv9 Kannada ಬೆಂಗಳೂರು, ಮೇ 17: ಬೆಂಗಳೂರು-ಮುಂಬೈ ನಡುವೆ ಸಂಚಾರ ಮಾಡಲಿರುವ ಹೊಸ ಎಕ್ಸ್ಪ್ರೆಸ್ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಎಸ್ಎಂವಿಟಿ ರೈಲ್ವೇ ನಿಲ್ದಾಣದಲ್ಲಿ ಇಂದು (ಮೇ 17) ಚಾಲನೆ ನೀಡಲಾಗಿದೆ. ದುರ್ದೈವ ಅಂದ್ರೆ ರೈಲ್ವೇ ಇಲಾಖೆಯ ಈ ಕಾರ್ಯಕ್ರಮದಲ್ಲಿ ಕನ್ನಡ ಮಂಗಮಾಯವಾಗಿತ್ತು. ಮುಖ್ಯ ವೇದಿಕೆಯಲ್ಲಿ ಹಾಕಿರುವ ಫ್ಲೆಕ್ಸ್​​ನಲ್ಲಿಇಂಗ್ಲಿಷ್​​ನಲ್ಲಿ ಮಾತ್ರ ನಾಮ ಫಲಕ ಹಾಕಲಾಗಿದ್ದು, ಕರ್ನಾಟಕದ ಸಂಸದ ವಿ.ಸೋಮಣ್ಣ ಅವರೇ ರೈಲ್ವೇ ಇಲಾಖೆಯ ರಾಜ್ಯ ಖಾತೆ ಸಚಿವರಾಗಿದ್ದರೂ…

Read More

Gold Rate: ಚಿನ್ನ, ಬೆಳ್ಳಿ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 17th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 17: ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ವಾರಾಂತ್ಯದಲ್ಲಿ 290 ರೂಗಳಷ್ಟು ಬೆಲೆ ತಗ್ಗಿದೆ. ಈ ವಾರ ಬಂಗಾರದ ದರ (Gold Rate) ಗ್ರಾಮ್​ಗೆ ಹೆಚ್ಚೂಕಡಿಮೆ ಒಂದು ಸಾವಿರ ರೂಗಳಷ್ಟು ಇಳಿದಿರುವುದು ಗಮನಾರ್ಹ. ವಿದೇಶಗಳಲ್ಲೂ ಇದರ ಬೆಲೆಯಲ್ಲಿ ಸತತ ಇಳಿಕೆ ಆಗುತ್ತಿದೆ. ಚಿನ್ನದಂತೆ ಬೆಳ್ಳಿ ಬೆಲೆಯೂ ಭರ್ಜರಿ ಇಳಿಕೆಯಾಗಿದೆ. ಈ ವಾರ ಬಹುತೇಕ 30 ರೂಗಳಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,850 ರುಪಾಯಿ ಇದೆ. 24…

Read More