Category Archives: Blog

Your blog category

ಇರಾನ್ ಜತೆ ವ್ಯಾಪಾರ ಮಾಡುವ ದೇಶಗಳಿಗೆ ಶೇ.25ರಷ್ಟು ಸುಂಕ ಘೋಷಿಸಿದ ಟ್ರಂಪ್, ಭಾರತದ ಮೇಲೂ ಪರಿಣಾಮ ಬೀರುತ್ತಾ? – Kannada News | US Iran Trade War: Trump’s 25 percent Tariff and India’s Geopolitical Challenge

ವಾಷಿಂಗ್ಟನ್, ಜನವರಿ 13: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಮಹತ್ವದ ವ್ಯಾಪಾರ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇರಾನ್​ನೊಂದಿಗೆ ವ್ಯಾಪಾರ ಮಾಡುವ ದೇಶಗಳ ಮೇಲೆ ಶೇ.25ರಷ್ಟು ಸುಂಕ ವಿಧಿಸಲು ನಿರ್ಧರಿಸಿದ್ದಾರೆ. ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರುತ್ ಸೋಶಿಯಲ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಆದೇಶವು ತಕ್ಷಣವೇ ಜಾರಿಗೆ ಬರಲಿದೆ ಮತ್ತು ತಿದ್ದುಪಡಿ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಟ್ರಂಪ್ ನಿರ್ಧಾರವು ಭಾರತ ಸೇರಿ ಹಲವು ದೇಶಗಳ ಮೇಲೆ ಪರಿಣಾಮ ಬೀರಬಹುದು. ಭಾರತ ಹಾಗೂ ಇರಾನ್ ದೀರ್ಘಕಾಲದ ವ್ಯಾಪಾರ ಸಂಬಂಧವನ್ನು ಹೊಂದಿವೆ. ಭಾರತವು ಇರಾನ್​ನಿಂದ ಡ್ರೈಫ್ರೂಟ್ಸ್​, ರಾಸಾಯನಿಕಗಳು ಮತ್ತು ಗಾಜಿನ ಸಾಮಾನಗಳನ್ನು ಆಮದು ಮಾಡಿಕೊಳ್ಳುತ್ತದೆ.

ಭಾರತವು ಅಕ್ಕಿ, ಚಹಾ, ಸಕ್ಕರೆ, ಔಷಧಗಳು, ಯಂತ್ರೋಪಕರಣಗಳು ಮತ್ತು ಇತರೆ ಅನೇಕ ವಸ್ತುಗಳನ್ನು ಇರಾನ್​ಗೆ ರಫ್ತು ಮಾಡುತ್ತದೆ. ವಿದೇಶಾಂಗ ಸಚಿವಾಲಯದ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಭಾರತವು ಇರಾನ್​ನ ಪ್ರಮುಖ ಪಾಲುದಾರರಲ್ಲಿ ಒಂದಾಗಿದೆ.

ಭಾರತವು ಈಗಾಗಲೇ ಅಮೆರಿಕದಿಂದ ಶೇ.50ರಷ್ಟು ಸುಂಕಗಳನ್ನು ಎದುರಿಸುತ್ತಿದೆ. ಈ ಸುಂಕದ ಶೇ.25ರಷ್ಟು ರಷ್ಯಾದಿಂದ ತೈಲ ಖರೀದಿಸುವುದರಿಂದ ಉಂಟಾಗುತ್ತದೆ. ರಷ್ಯಾದಿಂದ ತೈಲ ಖರೀದಿಸುವುದರಿಂದ ಉಕ್ರೇನ್ ಯುದ್ಧದಲ್ಲಿ ರಷ್ಯಾಗೆ ಸಹಾಯವಾಗುತ್ತದೆ ಎಂಬುದು ಅಮೆರಿಕದ ವಾದ.

ಟ್ರಂಪ್ ನಿರ್ಧಾರವನ್ನು ಕೆಲವು ಅಮೆರಿಕ ನಾಯಕರು ಶ್ಲಾಘಿಸಿದ್ದಾರೆ, ಇರಾನ್ ಸರ್ಕಾರವನ್ನು ಆರ್ಥಿಕವಾಗಿ ಪ್ರತ್ಯೇಕಿಸುವ ಈ ಕ್ರಮವು ಬಲವಾದ ನಾಯಕತ್ವವನ್ನು ತೋರಿಸುತ್ತದೆ ಎಂದು ರಿಪಬ್ಲಿಕನ್ ಸೆನೆಟರ್ ಲಿಂಡ್ಸೆ ಗ್ರಹಾಂ ಹೇಳಿದ್ದಾರೆ. ಅಲ್ಲಿನ ಪರಿಸ್ಥಿತಿ ಗಮನಾರ್ಹವಾಗಿ ಹದಗೆಟ್ಟಿದೆ. ಇತ್ತೀಚಿನ ದಿನಗಳಲ್ಲಿ ಹಣದುಬ್ಬರ, ಆರ್ಥಿಕ ಸಂಕಷ್ಟ ಮತ್ತು ಆಡಳಿತದ ಬಗ್ಗೆ ಅತೃಪ್ತಿಯಿಂದಾಗಿ ಇರಾನ್​ನ ಅನೇಕ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಮತ್ತಷ್ಟು ಓದಿ: ಬೇಕಿರುವುದು ತೈಲವಲ್ಲ ವೆನೆಜುವೆಲಾದ ಕೀಲಿಕೈ, ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್

ವರದಿಗಳ ಪ್ರಕಾರ ಇಲ್ಲಿಯವರೆಗೆ, 544 ಮಂದಿ ಸಾವನ್ನಪ್ಪಿದ್ದಾರೆ ಮತ್ತು 10 ಸಾವಿರಕ್ಕೂ ಅಧಿಕ ಜನರನ್ನು ಬಂಧಿಸಲಾಗಿದೆ. ಇರಾನ್ ಮಾತುಕತೆಗಾಗಿ ಅಮೆರಿಕವನ್ನು ಸಂಪರ್ಕಿಸಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಇರಾನ್ ನಾಯಕರು ಮಾತುಕತೆಗೆ ಸಿದ್ಧರಿದ್ದಾರೆ ಎಂದು ಅವರು ಹೇಳಿದರು. ಸಭೆಗೆ ಸಿದ್ಧತೆಗಳು ನಡೆಯುತ್ತಿವೆ. ಆದಾಗ್ಯೂ, ಇರಾನ್‌ನೊಳಗಿನ ಪರಿಸ್ಥಿತಿ ಹದಗೆಟ್ಟರೆ, ಮಾತುಕತೆಗಳು ಪ್ರಾರಂಭವಾಗುವ ಮೊದಲು ಅಮೆರಿಕ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಬಹುದು ಎಂದು ಟ್ರಂಪ್ ಎಚ್ಚರಿಸಿದ್ದರು.
ಇರಾನ್‌ನಲ್ಲಿ ಎರಡು ವಾರಗಳಿಗೂ ಹೆಚ್ಚು ಕಾಲ ಹಿಂಸಾತ್ಮಕ ಪ್ರತಿಭಟನೆಗಳು ನಡೆಯುತ್ತಿವೆ.

ರಾಜಧಾನಿ ಟೆಹ್ರಾನ್ ಸೇರಿದಂತೆ ದೇಶಾದ್ಯಂತ ಸರ್ಕಾರದ ವಿರುದ್ಧ ದೊಡ್ಡ ಪ್ರಮಾಣದ ಪ್ರದರ್ಶನಗಳು ನಡೆಯುತ್ತಿವೆ. ಪ್ರತಿಭಟನೆಗಳಲ್ಲಿ ಮಧ್ಯಪ್ರವೇಶಿಸುವುದಾಗಿ ಡೊನಾಲ್ಡ್ ಟ್ರಂಪ್ ಇರಾನ್ ಸರ್ಕಾರಕ್ಕೆ ಪದೇ ಪದೇ ಬೆದರಿಕೆ ಹಾಕಿದ್ದಾರೆ.

ಟ್ರಂಪ್ ಈ ಸುಂಕಗಳನ್ನು ವಿಧಿಸಿರುವುದು ಇರಾನ್ ಮೇಲೆ ಆರ್ಥಿಕ ಒತ್ತಡ ಹೇರಲು ಮಾತ್ರವಲ್ಲದೆ, ಇರಾನ್‌ನೊಂದಿಗೆ ಸಂಬಂಧವನ್ನು ಕಾಯ್ದುಕೊಳ್ಳುವ ದೇಶಗಳಿಗೆ ಎಚ್ಚರಿಕೆ ನೀಡಲು ಸಹ. ಇರಾನ್‌ನ ಪ್ರಮುಖ ವ್ಯಾಪಾರ ಪಾಲುದಾರರಲ್ಲಿ ಭಾರತ, ಚೀನಾ, ಟರ್ಕಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನಂತಹ ದೇಶಗಳು ಸೇರಿವೆ ಎಂದು ವರದಿಯಾಗಿದೆ.

ಡಿಸೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಪ್ರತಿಭಟನೆಗಳು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ಸವಾಲಾಗಿ ಪರಿಣಮಿಸಿವೆ. ಹೆಚ್ಚಿನ ಸಂಖ್ಯೆಯ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

Source link

ಅಮಿತಾಭ್ ಬಚ್ಚನ್ ಸಹೋದರ ಏನು ಮಾಡ್ತಿದ್ದಾರೆ ಗೊತ್ತಾ? – Kannada News | Amitabh Bachchan’s Brother Ajitabh: Family Rift and Untold Story Revealed

ಬಚ್ಚನ್ ಕುಟುಂಬ ತುಂಬಾನೇ ದೊಡ್ಡದು. ಮೆಗಾಸ್ಟಾರ್ ಅಮಿತಾಭ್ ಬಚ್ಚನ್, ಜಯಾ ಬಚ್ಚನ್, ಶ್ವೇತಾ ಬಚ್ಚನ್ ನಂದಾ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರ ಹೆಸರು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಅಭಿಮಾನಿಗಳಲ್ಲಿ ಯಾವಾಗಲೂ ಚರ್ಚೆಯಲ್ಲಿರುತ್ತದೆ. ಅಮಿತಾಭ್ ಬಚ್ಚನ್ ಅವರ ಪೋಷಕರ ಬಗ್ಗೆಯೂ ಹೆಚ್ಚಾಗಿ ಚರ್ಚಿಸಲಾಗುತ್ತದೆ. ಆದರೆ ಬಿಗ್ ಬಿ ಸಹೋದರನ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿಲ್ಲ. ಬಿಗ್ ಬಿ ಕೂಡ ತನ್ನ ಸಹೋದರನ ಹೆಸರನ್ನು ಎಂದಿಗೂ ಹೇಳೋದಿಲ್ಲ.

ಬಿಗ್ ಬಿ ಸಹೋದರನ ಹೆಸರು ಅಜಿತಾಬ್ ಬಚ್ಚನ್. ಅಮಿತಾಭ್ ಹೀಗೆ ಇರಲು ಅವರ ಸಹೋದರನ ದೊಡ್ಡ ಪಾತ್ರವಿದೆ. ಆದರೆ ಅವರ ತಂದೆಯ ಮರಣದ ನಂತರ, ಇಬ್ಬರು ಸಹೋದರರ ನಡುವಿನ ಅಂತರವು ಮತ್ತಷ್ಟು ಹೆಚ್ಚಾಯಿತು. ಜಯಾ ಬಚ್ಚನ್ ಅವರು ಅಜಿತಾಭ್ ಪತ್ನಿ ರಮೋಲಾ ಜೊತೆ ಜಗಳ ಆಡುತ್ತಿದ್ದರು.

ಅಜಿತಾಭ್ ಬಚ್ಚನ್ ಸಂದರ್ಶನವೊಂದರಲ್ಲಿ ಈ ಬಗ್ಗೆ ಮಾತನಾಡಿದ್ದರು. ಅವರ ತಂದೆ ಹರಿವಂಶ್ ರಾಯ್ ಬಚ್ಚನ್ ಅವರ ಮರಣದ ನಂತರ, ಇಬ್ಬರು ಸಹೋದರರ ನಡುವೆ ಬಿರುಕು ಉತ್ತುಂಗಕ್ಕೇರಿತು. ‘ನಾನು ಕಳೆದ ಹಲವು ವರ್ಷಗಳಿಂದ ವಿದೇಶದಲ್ಲಿ ವಾಸಿಸುತ್ತಿದ್ದೇನೆ. ಅಮಿತಾಭ್ ತನ್ನ ತಂದೆಯನ್ನು ನೋಯಿಸಲು ಬಯಸಲಿಲ್ಲ. ಆದ್ದರಿಂದ ಅವರು ತಮ್ಮ ತಂದೆಗಾಗಿ ಒಟ್ಟಿಗೆ ಇರಲು ಪ್ರಯತ್ನಿಸಿದರು ಮತ್ತು ಒಟ್ಟಿಗೆ ಸಾಕಷ್ಟು ಸಮಯ ಕಳೆದರು’ ಎಂದು ಅಜಿತಾಭ್ ಈ ಮೊದಲು ಹೇಳಿದ್ದರು.

‘ಅಮಿತಾಭ್ ಬಚ್ಚನ್ ರಾಜಕೀಯ ಪ್ರವೇಶಿಸಿದಾಗ ಅವರೊಂದಿಗಿನ ಅಂತರ ಹೆಚ್ಚಾಯಿತು. ರಾಜಕೀಯಕ್ಕೆ ಸಂಬಂಧಿಸಿದ ಸ್ನೇಹಿತರು ಅಮಿತಾಭ್ ಜೀವನದಲ್ಲಿ ಬಂದರು’ ಎಂದಿದ್ದರು ಅವರು. ಅಜಿತಾಭ್ ಕುಟುಂಬದ ಬಗ್ಗೆ ಹೇಳುವುದಾದರೆ, ಅವರಿಗೆ ನಾಲ್ಕು ಮಕ್ಕಳಿದ್ದಾರೆ. ಅವರ ಮಕ್ಕಳ ಹೆಸರುಗಳು ನಯನಾ ಬಚ್ಚನ್, ಭೀಮ್ ಬಚ್ಚನ್, ನಿಲಿಮಾ ಬಚ್ಚನ್ ಮತ್ತು ನಮ್ರತಾ ಬಚ್ಚನ್. ಅಜಿತಾಭ್ ಅವರ ಇಡೀ ಕುಟುಂಬ ವಿದೇಶದಲ್ಲಿ ವಾಸಿಸುತ್ತಿದೆ.

ಇದನ್ನೂ ಓದಿ: ಮಗು ಹುಟ್ಟಿದ ತಕ್ಷಣ ಅಮಿತಾಭ್ ಬಚ್ಚನ್ ಅವರ ಸಿನಿಮಾ ನೋಡುವ ಹಳ್ಳಿ ಇದು

ಅಮಿತಾಭ್  ಅವರ ವಯಸ್ಸು ಈಗ 83. ಅವರು ಈಗಲೂ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಸಿನಿಮಾಗಳನ್ನು ಒಪ್ಪಿಕೊಂಡು ಮಾಡುತ್ತಿದ್ದಾರೆ. ‘ಕೌನ್ ಬನೇಗಾ ಕರೋಡ್ಪತಿ’ ಕಾರ್ಯಕ್ರಮ ಹೋಸ್ಟ್ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ: ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ! – Kannada News | Techie Husband Arrested in Bengaluru for Cheating Wife, Caste Abuse and Illicit Relationship

ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ ಜೆಡ್ರೆಲಾ ಜಾಕೂಬ್

ಬೆಂಗಳೂರು, ಜನವರಿ 13: ಪತ್ನಿಗೆ ಮೋಸ ಮಾಡಿ ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಪತಿಯನ್ನು ಬೆಂಗಳೂರು (Bangalore) ಪೊಲೀಸರು ಬಂಧಿಸಿದ್ದಾರೆ. ಪತ್ನಿಗೆ ಜಾತಿ ನಿಂದನೆ, ಹಲ್ಲೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಆರೋಪಿ ಟೆಕ್ಕಿ ಜೆಡ್ರೆಲಾ ಜಾಕೂಬ್ ಆರೂಪ್​​ನನ್ನು ಬೆಂಗಳೂರು ಡಿಸಿಆರ್‌ಇ ಪಶ್ಚಿಮ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಎರಡು ವರ್ಷಗಳಿಂದ ಜಾಕೂಬ್ ತನ್ನ ಪತ್ನಿಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಪತ್ನಿ ಖಾಸಗಿ ಸಂಸ್ಥೆಯಲ್ಲಿ ಪ್ರತಿಷ್ಠಿತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಲಕ್ಷಾಂತರ ರೂಪಾಯಿ ಸಂಬಳ ಪಡೆಯುತ್ತಿದ್ದರು. ಆದರೆ, ಜಾಕೂಬ್‌ಗೆ ಉದ್ಯೋಗ ಇಲ್ಲದ ಹಿನ್ನೆಲೆಯಲ್ಲಿ ಪತ್ನಿ ತನ್ನ ಕೆಲಸವನ್ನೇ ಬಿಟ್ಟುಕೊಟ್ಟು, ಪತಿಗೆ ಉದ್ಯೋಗ ಸಿಗುವಂತೆ ಸಹಾಯ ಮಾಡಿದ್ದಳು ಎನ್ನಲಾಗಿದೆ.

ಮಗು ಜನಿಸಿದ ಬಳಿಕ ಪತ್ನಿಯ ಮೇಲೆ ಜಾಕೂಬ್ ಜಾತಿ ನಿಂದನೆ ನಡೆಸಿ, ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಗರ್ಭಪಾತವಾಗುವ ರೀತಿಯಲ್ಲಿ ಪತ್ನಿಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖವಾಗಿದೆ.

ಮಗುವಾದ ಮೇಲೆ ಪತ್ನಿ ಬಿಟ್ಟು ಮತ್ತೊಬ್ಬ ಯುವತಿ ಜತೆ ಚಕ್ಕಂದ

ಈ ನಡುವೆ ಪತ್ನಿಗೆ ತಿಳಿಯದೆ ಜಾಕೂಬ್ ಮತ್ತೊಬ್ಬ ಯುವತಿಯೊಂದಿಗೆ ಸಹವಾಸ ಬೆಳೆಸಿ, ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್‌ಗಳನ್ನು ಮಾಡುತ್ತಿದ್ದ. ಈ ವಿಚಾರ ತಿಳಿದ ಪತ್ನಿ, ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಬೆಂಗಳೂರಿನ ಡೆಂಟಲ್ ಕಾಲೇಜಿನ 6 ಉಪನ್ಯಾಸಕರು ಕೆಲಸದಿಂದ ವಜಾ

ಪಿಜಿಯಲ್ಲಿ ಯುವತಿ ಜತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸ್ ದಾಳಿ

ಪತ್ನಿ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಎಲೆಕ್ಟ್ರಾನಿಕ್ ಸಿಟಿಯ ಪಿಜಿಯೊಂದಕ್ಕೆ ದಾಳಿ ನಡೆಸಿದಾಗ, ಪ್ರೇಯಸಿಯೊಂದಿಗೆ ಪಲ್ಲಂಗದ ಮೇಲೆಯೇ ಇದ್ದ ಜಾಕೂಬ್ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಈ ಸಂಬಂಧ ಬೆಂಗಳೂರು ಡಿಸಿಆರ್‌ಇ ಪಶ್ಚಿಮ ವಿಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ನಾಯಕತ್ವ ಬದಲಾವಣೆ ಜಟಾಪಟಿ ಸಂಕ್ರಾಂತಿ ಬಳಿಕ ಮತ್ತಷ್ಟು ಚುರುಕು? ಸಿಕ್ತು ಮಹತ್ವದ ಸುಳಿವು – Kannada News | Leadership Change Buzz in Karnataka Congress to Intensify After Sankranti? Key Clues Emerge

ಕಲಬುರಗಿ ಜಿಲ್ಲೆ ಯಡ್ರಾಮಿಯಲ್ಲಿ ಸೋಮವಾರ ನಡೆದ ವಿವಿಧ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಹಾಗೂ ಇತರರು

ಬೆಂಗಳೂರು, ಜನವರಿ 13: ಸಂಕ್ರಾಂತಿ (Sankranti) ಸಮೀಪಿಸುತ್ತಿದ್ದಂತೆಯೇ ಕರ್ನಾಟಕ ಕಾಂಗ್ರೆಸ್​ನಲ್ಲಿ (Congress) ಸಣ್ಣ ತರಂಗ ಶುರುವಾದಂತೆ ಕಾಣಿಸುತ್ತಿದೆ. ಇದಕ್ಕೆ ಉದಾಹರಣೆ ಎಂದರೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇಬ್ಬರು ಕೂಡ ಆಡುತ್ತಿರುವ ವಿಶ್ವಾಸದ ಮಾತು. ಸದ್ಯ ರಾಜ್ಯದ ನಾಯಕತ್ವ ಬದಲಾವಣೆ ತೀರ್ಮಾನದ ಚೆಂಡು ದೆಹಲಿಗೆ ಅಂಗಳದಲ್ಲಿದೆ. ಆದರೆ ಈವರೆಗೆ ವರಿಷ್ಠರು ಗೊಂದಲಕ್ಕೆ ತೆರೆ ಎಳೆಯುವ ಕೆಲಸ ಮಾಡಿಲ್ಲ. ಬದಲಿಗೆ ನಮಗೆ ಬಿಡಿ ಎನ್ನುತ್ತಾ ಸಣ್ಣ ಗೆರೆಯನ್ನಷ್ಟೇ ಎಳೆದಿದ್ದಾರೆ. ಈ ಮಧ್ಯೆ ಚಟುವಟಿಕೆಗಳು ಗರಿಗೆದರುತ್ತಿವೆ.

ಹೈಕಮಾಂಡ್ ಮೇಲೆ ಡಿಕೆ ಶಿವಕುಮಾರ್ ಆತ್ಮವಿಶ್ವಾಸದ ಮಾತುಗಳನ್ನಾಡಿದ ಬೆನ್ನಲ್ಲೇ ಕಾಂಗ್ರೆಸ್ ಪಡಸಾಲೆಯಲ್ಲಿ ಚಟುವಟಿಕೆಗಳು ಗರಿಗೆದರಿವೆ. ಸೋಮವಾರ ಬೆಳಗ್ಗೆಯೇ ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಆಗಿ ಸರಿಸುಮಾರು 45 ನಿಮಿಷಗಳ ಕಾಲ ಚರ್ಚೆ ನಡೆಸಿದ್ದರು. ಇದು ಪವರ್ ಪಾಲಿಟಿಕ್ಸ್ ಎಂಬುದರಲ್ಲಿ ಎರಡು ಮಾತಿಲ್ಲ. ಮುಖ್ಯಮಂತ್ರಿ ಕುರ್ಚಿ ಬಗ್ಗೆ ಯಾವುದೇ ಚರ್ಚೆ ನಡೆಯದೇ ಇದ್ದರೂ ಕೂಡ ಈ ಬೆಳವಣಿಗೆ ನಡೆದಿರುವುದು ಸಹಜವಾಗಿ ಕುತೂಹಲ ಕೆರಳುವಂತೆ ಮಾಡಿದೆ.

ಇನ್ನು ರಾಜ್ಯಕ್ಕೆ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಭೇಟಿ ಕೊಡಲಿದ್ದಾರೆ ಎನ್ನಲಾಗಿದೆ. ಇಂತಹ ಹೊತ್ತಲ್ಲೇ ಡಿಕೆಶಿ, ಖರ್ಗೆಯನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ. ಮನೆಯೊಳಗಿನ ಚರ್ಚೆ ಅಷ್ಟೆ ಅಲ್ಲದೆ, ಉಭಯ ನಾಯಕರು ಒಂದೇ ಕಾರಿನಲ್ಲಿ ಹೆಚ್​ಎಎಲ್​ಗೆ ತೆರಳಿದ್ದಾರೆ. ಇನ್ನು ಖರ್ಗೆಯನ್ನು ಡಿಕೆಶಿ ಭೇಟಿ ಆಗುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಒಂದೂವರೆ ತಿಂಗಳ ಅಂತರದಲ್ಲಿ ಮೂರು ಬಾರಿಗೆ ಎಐಸಿಸಿ ಅಧ್ಯಕ್ಷರ ಜೊತೆಗೆ ಚರ್ಚಿಸಿದ್ದಾರೆ. ಅದರಲ್ಲೂ ಎರಡು ಬಾರಿ ಅಂತೂ ಇನ್ನೇನು ಖರ್ಗೆ ದೆಹಲಿಗೆ ಹೋಗ್ತಾರೆಂಬ ಹೊತ್ತಲ್ಲೇ ಮುಖತಃ ಭೇಟಿ ಆಗಿರುವುದು ಯಾವುದರ ಸಂಕೇತ ಎಂಬ ಚರ್ಚೆ ಕಾಂಗ್ರೆಸ್ ಮನೆಯಲ್ಲಿ ಶುರುವಾಗಿದೆ.

ಸಂಕ್ರಾಂತಿ ಬಳಿಕ ದೆಹಲಿಗೆ ಡಿಕೆ ಶಿವಕುಮಾರ್

ಸದ್ಯ ಡಿಕೆ ಶಿವಕುಮಾರ್​ರನ್ನು ಅಸ್ಸಾಂ ವಿಧಾನಸಭೆ ಚುನಾವಣೆ ವೀಕ್ಷಕರಾಗಿ ನೇಮಿಸಲಾಗಿದೆ. ಈ ಸಂಬಂಧ ಸಂಕ್ರಾಂತಿ ಬಳಿಕ, ಅಂದರೆ ಜನವರಿ 16 ರಂದು ಅವರು ದೆಹಲಿಗೆ ತೆರಳಲಿದ್ದಾರೆ. ಬೆಂಗಳೂರಿಗೆ ವಾಪಸ್ ಬಂದು 22 ರಂದು ಮತ್ತೆ ದೆಹಲಿಯ ವಿಮಾನ ಹತ್ತಲಿದ್ದಾರೆ. ಹೇಳಿಕೇಳಿ ಅಸ್ಸಾಂನ ಚುನಾವಣೆ ಉಸ್ತುವಾರಿ ವಹಿಸಿಕೊಂಡಿರುವುದು ಪ್ರಿಯಾಂಕಾ ಗಾಂಧಿ. ಹೀಗಾಗಿ ದೆಹಲಿ ಭೇಟಿ ವೇಳೆ ಅಥವಾ ಭೇಟಿ ನಂತರ ಡಿಕೆ ಶಿವಕುಮಾರ್ ರಾಜ್ಯ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಬಹುದು ಎಂದು ಹೇಳಲಾಗುತ್ತಿದೆ.

ಇದರ ಪೂರ್ವಭಾವಿಯಾಗಿ ಬೆಂಗಳೂರಿನಲ್ಲಿಯೇ ಖರ್ಗೆಯನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರನ್ನ ದೆಹಲಿಗೆ ಕರೆಯುವ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಅವಶ್ಯತೆ ಇದ್ದಾಗ ಕರೆಯುತ್ತೇವೆ ಎಂದಿದ್ದಾರೆ.

ಈ ಬೆಳವಣಿಗೆ ನಡುವೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಮೈಸೂರಿಗೆ ಆಗಮಿಸುತ್ತಿದ್ದಾರೆ. ಊಟಿಯಲ್ಲಿ ಖಾಸಗಿ ಕಾರ್ಯಕ್ರಮ ಇರುವ ಕಾರಣ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ರಾಹುಲ್ ಗಾಂಧಿಯನ್ನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಇಬ್ಬರೂ ಜತೆಯಾಗಿ ಬರಮಾಡಿಕೊಳ್ಳಲಿದ್ದಾರೆ.

ಸಂಕ್ರಾಂತಿ ಬಳಿಕ ಬಜೆಟ್ ಸಿದ್ಧತೆ ಆರಂಭಿಸಲು ಸಿಎಂ ಸಜ್ಜು!

ಇನ್ನು ತಾವೇ ಮುಂದುವರೆಯಬೇಕು ಎನ್ನುತ್ತಿರುವ ಸಿಎಂ ಸಿದ್ದರಾಮಯ್ಯ ಸಂಕ್ರಾಂತಿ ಬಳಿಕ ಬಜೆಟ್​ ಮೀಟಿಂಗ್​ ಆರಂಭಿಸಲಿದ್ದಾರೆ. ಸಂಪುಟ ಪುನಾರಚನೆ ಬಗ್ಗೆಯೂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ. ಈ ಎರಡು ದಾಳ ಮೂಲಕ ನಾಯಕತ್ವ ಬದಲಾವಣೆ ವಿಷಯ ಅಂತ್ಯವಾಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಆದರೆ ಡಿಕೆ ಟೀಮ್ ಮಾತ್ರ ಪೂರ್ವಭಾವಿ ಸಭೆಗೂ ಮುನ್ನವೇ ಗೊಂದಲ ಬಗೆಹರಿಸಲು ಪಟ್ಟು ಹಿಡಿದಿದೆ ಎನ್ನಲಾಗ್ತಿದೆ.

ಒಂದೆಡೆ, ನಾಯಕತ್ವದ ಬದಲಾವಣೆಯ ಕುಲುಮೆ ನಿಧಾನಕ್ಕೆ ಕಾವೇರ ತೊಡಗಿದೆ. ಇಂಥಾ ಹೊತ್ತಿನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಮತ್ತು ಡಿಸಿಎಂ ಬಗ್ಗೆ ಆಡಿರುವ ಮಾತು ಕುತೂಹಲವಾಗಿದೆ. ಕಲಬುರಗಿ ಜಿಲ್ಲೆ ಯಡ್ರಾಮಿಯಲ್ಲಿ ಸೋಮವಾರ ನಡೆದ ವಿವಿಧ ಕಾಮಗಾರಿ ಉದ್ಘಾಟನೆ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಸರ್ಕಾರಿ ಶಾಲೆಯಲ್ಲಿ ಓದಿ ಸಿದ್ದರಾಮಯ್ಯ 2 ಬಾರಿ ಸಿಎಂ ಆದರು. ಆದರೆ, ಡಿಕೆ ಶಿವಕುಮಾರ್​​​ಗೆ ಕಾನ್ವೆಂಟ್ ಲಿಂಕ್ ಇದೆ ಎಂದಿದ್ದಾರೆ.

ಅದೇ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ, ನಾನು ಈ ಭಾಗದಲ್ಲೇ ಹುಟ್ಟಬೇಕಿತ್ತು ಅನ್ನಿಸುತ್ತಿದೆ. ಚುನಾವಣೆ ವೇಳೆ ಮಾತು ಕೊಟ್ಟಂತೆ ಋಣ ತೀರಿಸಲು ಬಂದಿದ್ದೇವೆ ಎಂದಿದ್ದಾರೆ. ಡಿಕೆ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಈ ಭಾಗದಲ್ಲಿ ಹುಟ್ಟಬೇಕಿತ್ತು ಎಂದು ಡಿಸಿಎಂ ಹೇಳ್ತಾರೆ. ಆದರೆ ನೀವು ಇಲ್ಲಿ ಹುಟ್ಟೋದು ಬೇಡ, ನಾವು ಅಲ್ಲಿ ಹುಟ್ಟೋದು ಬೇಡ. ಮೈಸೂರು, ಬೆಂಗಳೂರಿನ ರೀತಿ ಅಭಿವೃದ್ಧಿ ಮಾಡಿ ಸಾಕು ಎಂದಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿ.ಕೆ. ಶಿವಕುಮಾರ್​​ ಬಣದ ನಡುವೆ ಹೊಸ ವಾರ್​​: ಗೆಲ್ಲೋದ್ಯಾರು?

ಹೀಗೆ ಮಲ್ಲಿಕಾರ್ಜುನ ಖರ್ಗೆ ಸ್ಥಳೀಯ ನಾಯಕರಾಗಿ ತಮ್ಮ ಕ್ಷೇತ್ರಗಳಿಗೆ ಅಭಿವೃದ್ಧಿ ಕೆಲಸ ಆಗಬೇಕು ಎಂದರೆ, ಎಐಸಿಸಿ ಅಧ್ಯಕ್ಷರಾಗಿ ಆಡಳಿತಕ್ಕೆ ಚುರುಕು ಮುಟ್ಟಿಸಿ ಎಂಬ ಸಂದೇಶವನ್ನೂ ರವಾನಿಸಿದ್ದಾರೆ. ಆದರೆ ಬದಲಾವಣೆ ಕ್ರಾಂತಿಯಲ್ಲೇ ನಾಯಕರು ಮುಳುಗಿರುವಾಗ, ಆಡಳಿತವನ್ನು ರಹದಾರಿಗೆ ತರಬೇಕಾದವರೇ ಗೊಂದಲದಲ್ಲಿರುವಾಗ, ಅದ್ಹೇಗೆ ತಾನೇ ಅಭಿವೃದ್ಧಿ ಸಾಧ್ಯ ಎಂಬ ಪ್ರಶ್ನೆಯೂ ಮೂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಕಡಿಮೆಯಾಯ್ತು ಚಳಿ, ಮೋಡಕವಿದ ವಾತಾವರಣ, 7 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ – Kannada News | Karnataka Weather: Cold Eases, Rain Forecast in 7 Districts and Bengaluru

ಬೆಂಗಳೂರು, ಜನವರಿ 13: ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ(Cyclone) ರೂಪುಗೊಳ್ಳುತ್ತಿದ್ದು ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ.

ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಬೀದರ್​ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 23.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 23.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 23.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕ ಹವಾಮಾನ ವರದಿ: ಶೀತದಲೆಯ ಪರಿಣಾಮ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​; ಬೆಂಗಳೂರು ಸೇರಿ ಹಲವೆಡೆ ಇಂದು ತುಂತುರು ಮಳೆ

ಬೆಳಗಾವಿ ಏರ್​ಪೋರ್ಟ್​ನಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಬೀದರ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಧ್ಯಪ್ರದೇಶ ಮತ್ತು ನಾಸಿಕ್ ವರೆಗೆ ಹಾಗೂ ರಾಯಗಢ, ರತ್ನಗಿರಿ, ಸಿಂಧುದುರ್ಗ, ಸತಾರಾ, ಸಾಂಗ್ಲಿ, ಕೊಲ್ಹಾಪುರ ಮತ್ತು ಸೋಲಾಪುರ ಸೇರಿದಂತೆ ಮುಂಬೈನ ದಕ್ಷಿಣ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಮರಾಠವಾಡ ಪ್ರದೇಶದ ಜಲ್ನಾ, ಹಿಂಗೋಲಿ ಮತ್ತು ಬೀಡ್‌ನಲ್ಲಿಯೂ ಮೋಡ ಕವಿದ ವಾತಾವರಣವಿದ್ದು, ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಹಾಗೂ ಕೇರಳ, ತಮಿಳುನಾಡು, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಒಣಹವೆ ಇರಲಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕಿಚ್ಚ ಸುದೀಪ್ ಮಾತಿಗೂ ಬೆಲೆ ಕೊಡದ ಗಿಲ್ಲಿ; ಅಸಮಾಧಾನ ಹೊರಹಾಕಿದ ಬಿಗ್ ಬಾಸ್ – Kannada News | Bigg Boss Kannada 12: Gilli Ignores Sudeep’s Hair Advice, Housemates Fume

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಗಿಲ್ಲಿ ನಟ ಅವರ ಆಟ ಬೇರೆಯದೇ ರೀತಿ ಇದೆ. ಅವರು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ಆದರೆ, ಕೆಲ ವಿಷಯಗಳನ್ನು ಅವರು ಗಂಭೀರವಾಗಿ ಸ್ವೀಕರಿಸುವುದಿಲ್ಲ ಎಂಬ ಆರೋಪ ಇದೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಕಿಚ್ಚ ಸುದೀಪ್ ಹೇಳಿದ ಮಾತನ್ನು ಅವರು ನಡೆಸಿಕೊಡಲಿಲ್ಲ. ಇದಕ್ಕೆ ಮನೆಯ ಇತರ ಸ್ಪರ್ಧಿಗಳು ಬೇಸರ ಹೊರಹಾಕಿದ್ದಾರೆ.

ಗಿಲ್ಲಿ ನಟ ಮೇಲೆ ಒಂದು ದೊಡ್ಡ ಕಂಪ್ಲೇಂಟ್ ಇದೆ. ಅವರು ಯಾವಾಗಲೂ ತಲೆ ಕೂದಲನ್ನು ಬಾಚಿಕೊಳ್ಳೋದಿಲ್ಲ. ಅವರ ಕೂದಲು ಸದಾ ಕೆದರಿಕೊಂಡೇ ಇರುತ್ತದೆ. ಈ ಬಗ್ಗೆ ಇತರರಿಗೆ ಅಸಮಾಧಾನ ಇದೆ. ಕೂದಲನ್ನು ಬಾಚಿಕೊಂಡರೆ ಅವರು ಉತ್ತಮವಾಗಿ ಕಾಣುತ್ತಾರೆ ಎಂಬುದು ಮನೆ ಮಂದಿಯ ಅಭಿಪ್ರಾಯ. ಆದರೆ, ಈ ಅಭಿಪ್ರಾಯಗಳಿಗೆಲ್ಲ ಗಿಲ್ಲಿ ಬೆಲೆ ಕೊಡುವವರಲ್ಲ.

ಕಳೆದ ವೀಕೆಂಡ್​​ನಲ್ಲಿ ಒಂದು ಪ್ರೀತಿಯ ವಸ್ತುವನ್ನು ಇತರ ಸ್ಪರ್ಧಿಗಳಿಗೆ ನೀಡಬೇಕಾದ ಚಟುವಟಿಕೆ ಬಂತು. ಈ ವೇಳೆ ಗಿಲ್ಲಿ ನಟ ಅವರಿಗೆ ಕಾವ್ಯಾ ತಮ್ಮಿಷ್ಟದ ಬಾಚಣಿಗೆ ನೀಡಿದರು. ಅವರು ಅದರಿಂದ ಕೂದಲು ಬಾಚಿಕೊಂಡರು. ಈ ವೇಳೆ ಸುದೀಪ್ ಅವರು ಒಂದು ನಿರ್ದೇಶನ ಕೊಟ್ಟರು. ‘ದಿನವೂ ಆ ಬಾಚಣಿಗೆಯಿಂದ ಕೂದಲು ಬಾಚಿಕೊಳ್ಳಬೇಕು’ ಎಂದು ಸುದೀಪ್ ಸೂಚನೆ ನೀಡಿದರು.

ಆದರೆ, ಈ ಸೂಚನೆಯನ್ನು ಗಿಲ್ಲಿ ಅಷ್ಟು ಗಂಭೀರವಾಗಿ ಸ್ವೀಕರಿಸಿರಲಿಲ್ಲ. ಸುದೀಪ್ ಬಂದು ಹೋದ ಮರುದಿನದ ಎಪಿಸೋಡ್​​ನಲ್ಲಿ ಅವರು ಎಂದಿನಂತೆ ಕೂದಲು ಬಾಚಿಕೊಳ್ಳದೆ ಕುಳಿತಿದ್ದರು. ಆಗ ಬಿಗ್ ಬಾಸ್ ಕಡೆಯಿಂದ ಆದೇಶ ಒಂದು ಬಂತು. ‘ಸುದೀಪ್ ಅವರು ಹೇಳಿದಂತೆ ಗಿಲ್ಲಿ ತಲೆಕೂದಲು ಬಾಚಿಕೊಳ್ಳಬೇಕು ಹಾಗೂ ಒಂದು ಹೊತ್ತು ಅಡುಗೆ ಮಾಡಬೇಕು’ ಎಂದು ಆದೇಶದಲ್ಲಿ ಇತ್ತು. ಬಿಗ್ ಬಾಸ್ ಕೂಡ ಗಿಲ್ಲಿ ಮೇಲೆ ಅಸಮಾಧಾನಗೊಂಡಂತೆ ಕಂಡಿತು.

ಇದನ್ನೂ ಓದಿ: ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ: ವಿಡಿಯೋ

ಆಗ ರಘು ಹಾಗೂ ಕಾವ್ಯಾ ಗಿಲ್ಲಿ ವಿರುದ್ಧ ನೇರ ಅಸಮಾಧಾನ ಹೊರಹಾಕಿದರು. ‘ಸುದೀಪ್ ಸರ್ ಮಾತಿಗೂ ಬೆಲೆ ಕೊಡ್ತಾ ಇಲ್ವಲ್ಲ ಗಿಲ್ಲಿ’ ಎಂದು ಹೇಳಿದರು. ಆಗ ಗಿಲ್ಲಿ ತಲೆಕೂದಲು ಬಾಚಿಕೊಂಡರು. ಇನ್ನು, ಅವರು ಮಾಡಿದ ಅಡುಗೆ ತಿನ್ನೋಕೆ ಯಾರ ಬಳಿಯೂ ಸಾಧ್ಯವಾಗಿಲ್ಲ. ಉಪ್ಪು ಹಾಗೂ ಖಾರ ಇಲ್ಲದ ಕಾರಣ ಅದನ್ನು ತಿನ್ನೋದು ಅವರಿಗೆ ಕಷ್ಟ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ ನೋಡಿ – Kannada News | Warning: Why You Should Never Face South While Offering Prayers, Spiritual Reason Explained

ದಕ್ಷಿಣ ದಿಕ್ಕಿಗೆ ಮುಖ ಮಾಡಿ ನಮಸ್ಕಾರ ಮಾಡುವುದರಿಂದ ಅಶುಭ ಫಲಗಳು ಎದುರಾಗಬಹುದು ಎಂದು ಧರ್ಮಗ್ರಂಥಗಳು ಸೂಚಿಸುತ್ತವೆ ಎಂಬುದಾಗಿ ಟಿವಿ9 ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿವರಣೆ ನೀಡಿದ್ದಾರೆ. ದಕ್ಷಿಣ ದಿಕ್ಕಿನ ಅಧಿಪತಿ ಯಮಧರ್ಮರಾಜ ಆಗಿದ್ದು, ಈ ದಿಕ್ಕಿಗೆ ಮಾಡುವ ನಮಸ್ಕಾರವು ಅವರಿಗೆ ಸೇರುತ್ತದೆ. ಸಾಮಾನ್ಯವಾಗಿ ಹಿರಿಯರು ಅಥವಾ ಗುರುಗಳಿಗೆ ನಮಸ್ಕರಿಸಿದಾಗ ಆಶೀರ್ವಾದಗಳು ದೊರೆಯುತ್ತವೆ. ಆದರೆ ಯಮಧರ್ಮರಾಜನು ನಮಸ್ಕರಿಸಿದವರಿಗೆ ಪಾಪಕರ್ಮಗಳನ್ನು ಅನಾರೋಗ್ಯದ ರೂಪದಲ್ಲಿ ಅನುಭವಿಸಲು ‘ಆಶೀರ್ವದಿಸುತ್ತಾನೆ’ ಎಂದು ಗರುಡಪುರಾಣ ಮತ್ತು ಇತರ ಧರ್ಮಗ್ರಂಥಗಳಲ್ಲಿ ಉಲ್ಲೇಖವಿದೆ. ಇದರರ್ಥ, ದಕ್ಷಿಣಕ್ಕೆ ನಮಸ್ಕರಿಸುವುದರಿಂದ ಪ್ರಾಣಕ್ಕೆ ಸಂಕಟ ಅಥವಾ ಅನಾರೋಗ್ಯಗಳು ಬರಬಹುದು ಎಂದು ಗುರೂಜಿ ವಿವರಿಸಿದ್ದಾರೆ.

ಆದರೆ, ಸಂಧ್ಯಾವಂದನೆಯಂತಹ ಸಂದರ್ಭಗಳಲ್ಲಿ ನಾಲ್ಕು ದಿಕ್ಕುಗಳಿಗೂ ನಮಸ್ಕರಿಸುವ ಪದ್ಧತಿಯು ಶುಭಕರವಾಗಿದೆ. ಅಪ್ಪಿತಪ್ಪಿಯೂ ದಕ್ಷಿಣ ದಿಕ್ಕಿಗೆ ನೇರವಾಗಿ ನಮಸ್ಕಾರ ಮಾಡಬಾರದು. ಹಿರಿಯರು ದಕ್ಷಿಣ ದಿಕ್ಕಿನಲ್ಲಿದ್ದರೆ ಅವರನ್ನು ಬೇರೆ ಕಡೆ ತಿರುಗಿ ನಿಲ್ಲಿಸಿ ನಮಸ್ಕರಿಸುವುದು ಶುಭ ಎಂದು ತಿಳಿಸಲಾಗಿದೆ.

Source link

ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ – Kannada News | Venus Transit into Capricorn: What Today’s Horoscope Holds for all zodiac sign

ಇಂದಿನ ದಿನ ವಿಶ್ವಾವಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸದ ಕೃಷ್ಣಪಕ್ಷದ ದಶಮಿ ತಿಥಿಯಾಗಿದೆ. ಚಂದ್ರನು ವಿಶಾಖ ನಕ್ಷತ್ರದ ತುಲಾ ರಾಶಿಯಲ್ಲಿ ಸಂಚರಿಸುತ್ತಾನೆ. ಇಂದು ಬೆಳಗಿನ ಜಾವ 4:02ಕ್ಕೆ ಶುಕ್ರ ಗ್ರಹವು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸಿರುವುದು ವಿಶೇಷವಾಗಿದೆ. ಸಂಕ್ರಾಂತಿಯ ಪೂರ್ವಭಾವಿಯಾಗಿರುವ ಈ ದಿನವು ಸೂರ್ಯ ಭಗವಾನರು ಉತ್ತರಾಯಣಕ್ಕೆ ಪ್ರವೇಶಿಸುವ ಶುಭ ಕಾಲವನ್ನು ಸೂಚಿಸುತ್ತದೆ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಂದಿನ ದಿನ ಭವಿಷ್ಯವನ್ನು ಇಲ್ಲಿ ವಿವರಿಸಿದ್ದಾರೆ.

ಇಂದು ರಾಹುಕಾಲವು ಮಧ್ಯಾಹ್ನ 3:19 ರಿಂದ 4:45 ರವರೆಗೆ ಇರುತ್ತದೆ. ಸರ್ವ ಸಿದ್ಧಿ ಕಾಲ, ಸಂಕಲ್ಪಕಾಲ ಮತ್ತು ಶುಭಕಾಲವು ಮಧ್ಯಾಹ್ನ 12:28 ರಿಂದ 1:54 ರವರೆಗೆ ಇರುತ್ತದೆ.

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 13ರ ದಿನಭವಿಷ್ಯ – Kannada News | Birth Number 7, 8, 9: Jan 13 Numerology Forecast and Horoscope

ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 13ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7)

ಸಂಶೋಧನೆ ಮತ್ತು ಆಳವಾದ ಚಿಂತನೆಗೆಸೂಕ್ತ ದಿನ. ನೀವು ಇತರರಿಗೆ ಈ ಹಿಂದೆ ಮಾಡಿದ ಸಹಾಯದಿಂದ ನಿಮಗೆ ಪ್ರತಿಫಲ ದೊರೆಯಲಿದೆ. ಸರ್ಕಾರಿ ಉದ್ಯೋಗದಲ್ಲಿ ಇರುವವರಿಗೆ ವರ್ಗಾವಣೆಯ ಅಥವಾ ಬಡ್ತಿಯ ಸೂಚನೆಗಳು ಸಿಗಬಹುದು. ಆಧ್ಯಾತ್ಮಿಕ ಕ್ಷೇತ್ರದಲ್ಲಿ ಇರುವವರಿಗೆ ದೂರ ಪ್ರಯಾಣದ ಯೋಗ ಇದೆ. ಧ್ಯಾನ ಮತ್ತು ಯೋಗಕ್ಕಾಗಿ ಸಮಯ ಮೀಸಲಿಡುವಿರಿ. ಸಾಲದ ಬಾಕಿ ವಸೂಲಿ ಮಾಡುವಲ್ಲಿ ಈ ದಿ ನೀವು ಯಶಸ್ವಿಯಾಗಲಿದ್ದೀರಿ. ನಿಮ್ಮ ಗುಪ್ತ ಪ್ರತಿಭೆಯು ಇಂದು ಹೊರಜಗತ್ತಿಗೆ ತಿಳಿಯುವ ಸಾಧ್ಯತೆ ಇದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8)

ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸುವ ಕಾಲವಿದು. ನ್ಯಾಯಾಲಯದ ವ್ಯವಹಾರಗಳಲ್ಲಿ ಜಯ ಸಿಗಲಿದೆ. ಕೃಷಿ ಅಥವಾ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಇರುವವರಿಗೆ ದೊಡ್ಡ ಒಪ್ಪಂದಗಳು ಕೈಗೂಡಲಿವೆ. ಮನೆಯಲ್ಲಿ ಶುಭ ಸಮಾರಂಭಗಳ ಬಗ್ಗೆ ಚರ್ಚೆ ನಡೆಯಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ, ವಿಶೇಷವಾಗಿ ಮೂಳೆ ಸಂಬಂಧಿತ ಸಮಸ್ಯೆಗಳಿರುವವರು ಎಚ್ಚರದಿಂದಿರಿ. ಶತ್ರುಗಳು ನಿಮ್ಮ ಕೆಲಸಕ್ಕೆ ಅಡ್ಡಿಪಡಿಸಲು ಪ್ರಯತ್ನಿಸಿದರೂ, ನಿಮ್ಮ ದೃಢ ನಿರ್ಧಾರಗಳು ಅವರನ್ನು ವಿಫಲಗೊಳಿಸಲಿವೆ.

ಇದನ್ನೂ ಓದಿ: ನವಪಂಚಮ ಯೋಗ: ಯಾರಿಗೆಲ್ಲಾ ಅದೃಷ್ಟ? ಇಲ್ಲಿದೆ ನೋಡಿ

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9)

ಬಾಕಿ ಉಳಿದಿದ್ದ ಆಡಳಿತಾತ್ಮಕ ಕೆಲಸಗಳು ಸುಗಮವಾಗಿ ಪೂರ್ಣಗೊಳ್ಳಲಿವೆ. ದಾನ-ಧರ್ಮದ ಕಡೆಗೆ ನಿಮ್ಮ ಗಮನ ಹರಿಯಲಿದ್ದು, ಇದರಿಂದ ಮನಸ್ಸಿಗೆ ಅಪಾರ ತೃಪ್ತಿ ಸಿಗಲಿದೆ. ಕ್ರೀಡಾಪಟುಗಳಿಗೆ ಮತ್ತು ಸಾಹಸ ಪ್ರವೃತ್ತಿಯ ಜನರಿಗೆ ಅತ್ಯುತ್ತಮ ದಿನವಾಗಿರುತ್ತದೆ. ಉದ್ಯೋಗದಲ್ಲಿ ನಿಮ್ಮ ಮೇಲಧಿಕಾರಿಗಳ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗುವಿರಿ. ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡುವ ಮುನ್ನ ಅನುಭವಿಗಳ ಸಲಹೆ ಪಡೆಯಿರಿ. ಹಳೆಯ ಕಹಿ ಘಟನೆಗಳನ್ನು ಮರೆತು ಹೊಸ ಜೀವನದತ್ತ ಹೆಜ್ಜೆ ಇಡಲು ಪೂರಕವಾದ ವಾತಾವರಣ ಇರಲಿದೆ.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 13ರ ದಿನಭವಿಷ್ಯ – Kannada News | Numerology Daily Horoscope: January 13, 2024 Predictions for 4, 5, 6

ಜನ್ಮಸಂಖ್ಯೆಗೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 13ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4)

ವಿದೇಶಕ್ಕೆ ಸಂಬಂಧಿಸಿ ವ್ಯವಹಾರಗಳಲ್ಲಿ ತೊಡಗಿರುವವರಿಗೆ ಈ ದಿನ ಶುಭ ಸುದ್ದಿ ಸಿಗಲಿದೆ. ಆಸ್ತಿ ವಿವಾದಗಳು ಸುದೀರ್ಘ ಕಾಲದಿಂದ ನಡೆಯುತ್ತಿದ್ದರೆ ಮಧ್ಯಸ್ಥಿಕೆಯ ಮೂಲಕ ಬಗೆಹರಿಸಿಕೊಳ್ಳಲು ಪ್ರಯತ್ನಿಸಿ. ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆ ಬಯಸುವವರಿಗೆ ಒಳ್ಳೆಯ ಅವಕಾಶಗಳು ಲಭ್ಯವಾಗಬಹುದು. ವಾಹನ ಚಾಲನೆ ಮಾಡುವಾಗ ಅತಿಯಾದ ವೇಗ ಬೇಡ, ಸಂಚಾರ ನಿಯಮಗಳನ್ನು ಪಾಲಿಸಿ. ಹಳೆಯ ಮಿತ್ರರ ಭೇಟಿಯಿಂದ ಬಾಕಿ ಉಳಿದಿದ್ದ ಕೆಲಸವೊಂದು ಪೂರ್ಣಗೊಳ್ಳಲು ದಾರಿ ಸುಗಮವಾಗಲಿದೆ.

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5)

ಇದನ್ನೂ ಓದಿ: ನವಪಂಚಮ ಯೋಗ: ಯಾರಿಗೆಲ್ಲಾ ಅದೃಷ್ಟ? ಇಲ್ಲಿದೆ ನೋಡಿ

ಸಂವಹನ ಮತ್ತು ತಾಂತ್ರಿಕ ವಲಯದಲ್ಲಿ ಇರುವವರಿಗೆ ಅತ್ಯಂತ ಯಶಸ್ವಿ ದಿನ ಇದಾಗಿರುತ್ತದೆ. ನೀವು ನೀಡುವ ಸಲಹೆಗಳು ಕಚೇರಿಯಲ್ಲಿ ಮೆಚ್ಚುಗೆಗೆ ಪಾತ್ರವಾಗಲಿವೆ. ಹಣಕಾಸಿನ ಹರಿವು ಉತ್ತಮವಾಗಿದ್ದರೂ ಅನವಶ್ಯಕ ಐಷಾರಾಮಿ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಸಂಜೆ ವೇಳೆ ಪ್ರೀತಿಪಾತ್ರರ ಜೊತೆ ಸುಂದರ ಸಮಯ ಕಳೆಯುವಿರಿ. ದೂರದ ಊರಿನಿಂದ ಬರಬೇಕಿದ್ದ ಶುಭ ವಾರ್ತೆಯು ನಿಮ್ಮನ್ನು ತಲುಪಲಿದೆ. ಹವಾಮಾನ ಬದಲಾವಣೆಯಿಂದಾಗಿ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಾಡಬಹುದು, ಎಚ್ಚರಿಕೆ ಇರಲಿ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6)

ಕಲಾತ್ಮಕ ಮತ್ತು ಸೃಜನಶೀಲ ಕೆಲಸಗಳಲ್ಲಿ ತೊಡಗಿರುವವರಿಗೆ ಈ ದಿನ ಪ್ರಶಸ್ತಿ ಅಥವಾ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಆಭರಣ ಮತ್ತು ಜವಳಿ ವ್ಯಾಪಾರಿಗಳಿಗೆ ನಿರೀಕ್ಷೆಗೂ ಮೀರಿ ಲಾಭವಾಗಲಿದೆ. ಕುಟುಂಬದ ಸದಸ್ಯರೊಂದಿಗೆ ಪ್ರವಾಸದ ಯೋಜನೆ ರೂಪಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಸಕಾರಾತ್ಮಕ ಸ್ಪಂದನೆ ದೊರೆಯಲಿದೆ. ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಸುಂದರವಾಗಿಟ್ಟುಕೊಳ್ಳುವ ಆಸೆ ಮೂಡಲಿದೆ. ಅಪರಿಚಿತ ವ್ಯಕ್ತಿಗಳೊಂದಿಗೆ ವ್ಯವಹಾರ ಮಾಡುವಾಗ ಅವರ ಹಿನ್ನೆಲೆಯನ್ನು ಒಮ್ಮೆ ಪರಿಶೀಲಿಸುವುದು ಉತ್ತಮ.

ಲೇಖನ- ಎನ್‌.ಕೆ.ಸ್ವಾತಿ

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link