ರೈತರ ಹೆಸರಲ್ಲಿ ಕೋಟಿ ಕೋಟಿ ಸಾಲದ ಗೋಲ್‌ಮಾಲ್; ಕಾಳಂಗಿ ಸಹಕಾರಿ ಬ್ಯಾಂಕ್‌ಗೆ ಷೇರುದಾರರ ಮುತ್ತಿಗೆ! – Kannada News | Sirsi Bank Fraud: Farmers Protest Against Kalangi Co operative Bank Over Crores of Loan Scam
ಕಾಳಂಗಿ ಸಹಕಾರಿ ಬ್ಯಾಂಕ್‌ಗೆ ಷೇರುದಾರರ ಮುತ್ತಿಗೆ! ಶಿರಸಿ, ಮೇ 16: ಗ್ರಾಮೀಣ ರೈತರ ಆರ್ಥಿಕ ಪ್ರಗತಿಗೆ ಬೆಂಬಲವಾಗಿ ನಿಲ್ಲಬೇಕಾದ ಸಹಕಾರಿ ಬ್ಯಾಂಕ್ ಒಂದರಲ್ಲಿ, ರೈತರ ಹೆಸರನ್ನೇ ಬಳಸಿಕೊಂಡು ಕೋಟ್ಯಂತರ ರೂಪಾಯಿ ಹಣ ದುರುಪಯೋಗಪಡಿಸಿಕೊಂಡಿರುವ ಆಘಾತಕಾರಿ ಹಗರಣ ಉತ್ತರ ಕನ್ನಡ (Uttara Kannada) ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪದಲ್ಲಿ ಬೆಳಕಿಗೆ ಬಂದಿದೆ. ದಾಸನಕೊಪ್ಪದ ಕಾಳಂಗಿ ಸಹಕಾರಿ ಬ್ಯಾಂಕ್‌ನಲ್ಲಿ ಈ ಬೃಹತ್ ಗೋಲ್‌ಮಾಲ್ ನಡೆದಿದ್ದು, ವಂಚನೆಗೆ ಒಳಗಾದ ರೈತರು ಮತ್ತು ಷೇರುದಾರರು ಬ್ಯಾಂಕ್‌ಗೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ….