‘ಕೆಲಸ ಮುಗಿಸಿ ರಾತ್ರಿ 11 ಗಂಟೆಗೆ ಮನೆಗೆ ಹೋದ್ರೆ ಅದು ಜೀವನವೇ ಅಲ್ಲ’: ಸೈಫ್ ಅಲಿ ಖಾನ್ – Kannada News | Saif Ali Khan shares thoughts on work life balance and his new movie Kartavya
ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರು ತಮ್ಮ ಹೊಸ ಸಿನಿಮಾ ‘ಕರ್ತವ್ಯ’ (Kartavya) ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ಶಾರುಖ್ ಖಾನ್ ಮತ್ತು ಗೌರಿ ಖಾನ್ ಅವರು ‘ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್’ ಸಂಸ್ಥೆಯ ಮೂಲಕ ನಿರ್ಮಿಸಿದ್ದಾರೆ. 2022ರಿಂದ ವರ್ಷಕ್ಕೆ ಒಂದೇ ಸಿನಿಮಾವನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ಸೈಫ್, ಇತ್ತೀಚಿನ ಸಂದರ್ಶನವೊಂದರಲ್ಲಿ ಕೆಲಸ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಮಕ್ಕಳಾದ ತೈಮೂರ್ ಅಲಿ ಖಾನ್ ಮತ್ತು ಜಹಾಂಗೀರ್ ಅಲಿ ಖಾನ್…