Category Archives: Blog

Your blog category

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ – Kannada News | Bengaluru temperature: Bengaluru Chill Intensifies, City Shivers

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ

ಬೆಂಗಳೂರು, ಜನವರಿ 12: ಬೆಂಗಳೂರು ಕಳೆದ ಮೂರು–ನಾಲ್ಕು ದಿನಗಳಿಂದ ಮೈಕೊರೆಯುವ ಚಳಿಯಿಂದ (Weather Forecast) ಕಂಪಿಸುತ್ತಿದೆ. ಇಂದು ಕೂಡಾ ಇಡೀ ದಿನ ಮೋಡಮುಸುಕಿದ ವಾತಾವರಣದ ಜೊತೆಗೆ ತೀವ್ರ ಚಳಿ ಕಂಡುಬಂದಿದ್ದು, ಸಿಟಿ ಜನರು ಮನೆಯಿಂದ ಹೊರಬರಲು ಹಿಂಜರಿಯುವಂತಾಗಿದೆ. ಅದರೊಂದಿಗೆ ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣವಿದ್ದು, ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶೀತಗಾಳಿ ಹೆಚ್ಚಾಗಿ ತೀವ್ರ ಚಳಿ

ಉದ್ಯಾನನಗರಿ ಬೆಂಗಳೂರಿನಲ್ಲಿ ಬೆಳಗ್ಗೆ, ಮಧ್ಯಾಹ್ನ, ಸಂಜೆ ಹಾಗೂ ರಾತ್ರಿ ಎಲ್ಲ ಸಮಯದಲ್ಲೂ ಚಳಿಯ ಪ್ರಭಾವ ಇದ್ದು, ಬೆಚ್ಚನೆಯ ಉಡುಪು, ಸ್ವೆಟರ್, ಜಾಕೆಟ್, ಕ್ಯಾಪ್ ಧರಿಸಿ ಜನರು ಪಾರ್ಕ್‌ಗಳಲ್ಲಿ ವಾಕಿಂಗ್ ಮಾಡುತ್ತಿರುವ ದೃಶ್ಯಗಳು ಕಂಡುಬಂದವು. ಲಾಲ್‌ಬಾಗ್ ಸೇರಿದಂತೆ ವಿವಿಧ ಉದ್ಯಾನಗಳಲ್ಲಿ ಯುವಕರು, ಗೃಹಿಣಿಯರು ಹಾಗೂ ವಯೋವೃದ್ಧರು ಚಳಿಯ ನಡುವೆಯೂ ವಾಕ್ ಮಾಡಿ ಎಂಜಾಯ್ ಮಾಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ನಿನ್ನೆ 14 ಡಿಗ್ರಿಗೆ ಇಳಿಕೆಯಾಗಿತ್ತು. ಹವಾಮಾನ ಇಲಾಖೆ ಪ್ರಕಾರ ಮುಂದಿನ ನಾಲ್ಕು ದಿನಗಳ ಕಾಲ ಕನಿಷ್ಠ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಿಪ್ರೆಶನ್‌ನಿಂದ ಶೀತಗಾಳಿ ಹೆಚ್ಚಾಗಿ ಚಳಿ ತೀವ್ರವಾಗಿದೆ. ತುಂತುರು ಮಳೆಯೂ ಕೆಲವೆಡೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು ಹಾಗೂ ವಯೋವೃದ್ಧರು ಆರೋಗ್ಯದ ಬಗ್ಗೆ ಎಚ್ಚರ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಎಲ್ಲೆಲ್ಲಿ ಒಣಹವೆ?

ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ: ಔಷಧೀಯ ಗುಣ, ಪೌಷ್ಟಿಕಾಂಶಗಳ ಕಣಜವೇ ಇದರಲ್ಲಿದೆಯಂತೆ! – Kannada News | Endangered Native Rice Varieties Mugada Siri and Mugada Sugandha Face Extinction in Karnataka

ಅಳಿವಿನಂಚಿನಲ್ಲಿ ದೇಶಿ ಅಕ್ಕಿ ತಳಿ ಮುಗದ ಸಿರಿ, ಸುಗಂಧ

ಧಾರವಾಡ, ಜನವರಿ 12: ಇಡೀ ಕಿತ್ತೂರು ಸೀಮೆಯನ್ನೇ ಘಮದಲ್ಲಿ ಮುಳುಗಿಸುತ್ತಿದ್ದ ಧಾರವಾಡ (Dharawad) ಸಮೀಪದ ಮುಗದ ಗ್ರಾಮದ ಮುಗದ ಸಿರಿ ಮತ್ತು ಮುಗದ ಸುಗಂಧ ಎಂಬ ಎರಡು ದೇಶಿ ಭತ್ತದ ತಳಿಗಳು ಇದೀಗ ಕಾಲನ ಗರ್ಭ ಸೇರುತ್ತಿವೆ. ಈ ತಳಿಗಳೀಗ ಕೇವಲ ಕೃಷಿ ಸಂಶೋಧನಾ ಕೇಂದ್ರದ ಪ್ಯಾಕೇಟಿನಲ್ಲಿ ನೋಡಲು ಉಳಿದಿವೆ. ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಗೋವಾ ಸೇರಿದಂತೆ ಕೊಂಕಣ ಭಾಗದ ಜನರ ಪ್ರಧಾನ ಆಹಾರವೇ ಆಗಿದ್ದ ದೇಶಿ ಭತ್ತದ ತಳಿಗಳ ಪೈಕಿ ಇವು ಮುಂಚೂಣಿಯಲ್ಲಿದ್ದವು. ಮುಗದ ಸಿರಿ ಮತ್ತು ಸುಗಂಧ ಭತ್ತ ಕಳೆದ ಹತ್ತು ವರ್ಷದಲ್ಲಿ ಶೇ 70 ಬಿತ್ತನೆ ಪ್ರದೇಶವನ್ನೇ ಕಳೆದುಕೊಂಡಾಗಿದೆ. ಉಚಿತ ಅಕ್ಕಿ ಹಂಚಿಕೆಯ ಪ್ರಭಾವದಿಂದಾಗಿ ದೇಶಿ ಅಕ್ಕಿಯ ಬೆಲೆಯೇ ಪ್ರಪಾತಕ್ಕೆ ಹೋಗಿದೆ. ಅದರಲ್ಲೂ, ಈ ಭಾಗದ ವಿಶೇಷ ತಳಿಯಾಗಿದ್ದ ಮುಗದ ಸಿರಿ ಮತ್ತು ಮುಗದ ಸುಗಂಧ ಅನ್ನೋ ತಳಿಗಳು ಇದೀಗ ತಮ್ಮ ಅಸ್ತಿತ್ವವನ್ನೇ ಕಳೆದುಕೊಂಡಿವೆ. ಮುಂದಿನ ದಿನಗಳಲ್ಲಿ ಈ ತಳಿಗಳು ಸಂಪೂರ್ಣವಾಗಿ ನಶಿಸಿ ಹೋಗೋ ಸ್ಥಿತಿಗೆ ಬಂದಿವೆ.

ಪೌಷ್ಟಿಕಾಂಶಗಳ ಕಣಜವೇ ಆಗಿದ್ದ ಮುಗದ ಸಿರಿ, ಸುಗಂಧ

ಪೌಷ್ಟಿಕಾಂಶಗಳ ಕಣಜವೇ ಆಗಿರುವ ಮುಗದ ಸಿರಿ, ಸುಗಂಧ ಭತ್ತದ ಅಕ್ಕಿ ಉಣ್ಣುವ ಮನುಷ್ಯರಷ್ಟೇ ಅಲ್ಲ, ಜಾನುವಾರುಗಳು, ಪಶುಪಕ್ಷಿಗಳು ಕೂಡ ಸದೃಢವಾಗಿ ಬಿಡುತ್ತಿದ್ದವು. ಅಷ್ಟೊಂದು ಫೈಬರ್ ‌ಸೇರಿ ಇತರ ಖನಿಜಾಂಶಗಳಿರುವ ಈ ಅಕ್ಕಿ ಒಂದು ಕಾಲದಲ್ಲಿ ಬಿರಿಯಾನಿಗೆ ಬಳಕೆಯಾಗುತ್ತಿತ್ತು. ಎಷ್ಟೋ ಸಲ ಮುಂಬೈ, ಗೋವಾ ಮತ್ತು ಹೈದರಾಬಾದ್​ನಿಂದ ಬರುವ ವ್ಯಾಪಾರಿಗಳು ಈ ಭತ್ತ ಖರೀದಿಸುತ್ತಿದ್ದರು. ಆದರೆ ಇದೀಗ ರೈತರು ಬೇರೆ ಬೇರೆ ಬೆಳೆಗಳ ಬೆನ್ನು ಹತ್ತಿ ಈ ತಳಿಗಳನ್ನು ನಿರ್ಲಕ್ಷಿಸಿದ್ದಾರೆ.

ಭತ್ತದ ತಳಿ ನಶಿಸಲು ಸಕ್ಕರೆ ಕಾರ್ಖಾನೆಗಳೇ ಕಾರಣ!

ಈ ಪ್ರದೇಶದಲ್ಲಿ ತಲೆ ಎತ್ತಿರುವ ಸಕ್ಕರೆ ಕಾರ್ಖಾನೆಗಳೇ ಈ ತಳಿ ನಶಿಸಿ ಹೋಗಲು ಕಾರಣವಾಗಿವೆ. ದೇಶಿ ಭತ್ತದ ತಳಿಗಳನ್ನು ಬೆಳೆಯುತ್ತಿದ್ದ ಭೂಮಿಯಲ್ಲಿ ಇದೀಗ ಕಬ್ಬಿನ ಬೆಳೆ ಹೆಚ್ಚಾಗಿದೆ. ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಮತ್ತು ಕಳೆನಾಶಕಗಳ ಬಳಕೆ ಹೆಚ್ಚುತ್ತಿದ್ದು ಪರಿಸರ ಸ್ನೇಹಿ ಭತ್ತದ ನಾಡೆಲ್ಲವೂ ವಿಪರೀತ ಭೂ ಮತ್ತು ಜಲಮಾಲಿನ್ಯದ ಬೀಡಾಗುತ್ತಿದೆ. ಒಂದು ದಶಕದಲ್ಲಿ 50 ಸಾವಿರ ಹೆಕ್ಟೇ‌ರ್​ನಷ್ಟು ಪ್ರದೇಶದಲ್ಲಿ ಭತ್ತದ ಬದಲು ಕಬ್ಬು ಬೆಳೆ ಆವರಿಸಿಕೊಂಡಿದೆ.

ಭತ್ತದ ತಳಿ ನಾಶಕ್ಕೆ ಕಾರಣವೇನು?

ದೇಶಿ ಭತ್ತಕ್ಕೆ ಮಾರುಕಟ್ಟೆ ಕುಸಿತ, ಉಚಿತವಾಗಿ ಅಕ್ಕಿ ವಿತರಣೆ ಪರಿಣಾಮ, ಕಬ್ಬಿಗೆ ಮಾರು ಹೋದ ರೈತರು, ಕೂಲಿಯಾಳುಗಳ ಕೊರತೆ, ಆಧುನಿಕ ಜೀವನ ಶೈಲಿಯ ಫಾಸ್ಟ್ ಫುಡ್ ಸಂಸ್ಕೃತಿಗೆ ಮಾರುಹೋದ ಪರಿಣಾಮವೇ ಈ ತಳಿಗಳು ನಶಿಸಿ ಹೋಗಲು ಕಾರಣವಾಗಿದೆ ಎಂದು ಅಭುಪ್ರಾಯಪಟ್ಟಿದ್ದಾರೆ ಕೃಷಿ ತಜ್ಞ ಡಾ. ಪ್ರಕಾಶ ಭಟ್.

ಇದನ್ನೂ ಓದಿ: ಬೀದರ್​​ ರೈತನ ಕೈಹಿಡಿದ ಹಳದಿ ಸುಂದರಿ: ವರ್ಷಕ್ಕೆ ಲಕ್ಷಾಂತರ ರೂ ಆದಾಯ, ಆಧುನಿಕ ಯುಗದಲ್ಲಿ ಕೃಷಿ ಕ್ರಾಂತಿ

ಈ ತಳಿಗಳೊಂದಿಗೆ ಕಿತ್ತೂರು ಸೀಮೆಯಲ್ಲಿ 200ಕ್ಕೂ ಅಧಿಕ ತಳಿಯ ದೇಶಿ ಭತ್ತಗಳನ್ನು ಜನ ಸಾಂಪ್ರದಾಯಿಕ ಕೃಷಿ ವಿಧಾನದ ಮೂಲಕ ಬೆಳೆಯುತ್ತಿದ್ದರು. ಈ ಎಲ್ಲ ತಳಿಗಳು ಮಳೆಯಾಶ್ರಿತ ಮತ್ತು ಬಿತ್ತನೆ ಪದ್ಧತಿಯಲ್ಲಿ ಬೆಳೆಯುವಂತಹದ್ದಾಗಿವೆ. ಕಾಗಸಾಳಿ, ಅಂತರಸಾಳಿ, ಕುಂಕುಮಸಾಳಿ, ಕೊಂಕಣಸಾಳಿ, ದೊಡಗ್ಯಾ, ಬಂಗಾರಕಡ್ಡಿ, ಗಂಧಸಾಳಿ, ಮುಗದಸಿರಿ, ಮನಸೂರ ಸಾಳಿ ಹೀಗೆ ದೇಶಿ ತಳಿಯ ಮೂಲ ಭತ್ತದ ತಳಿಗಳೇ ಇದೀಗ ಕಣ್ಮರೆಯಾಗುತ್ತಿವೆ. ಒಟ್ಟಿನಲ್ಲಿ ಅದ್ಭುತವಾಗಿರುವ ತಳಿಗಳು ಆಧುಕಿನ ಕೃಷಿ ಪದ್ಧತಿಯ ಹೊಡೆತಕ್ಕೆ ನಲುಗಿ, ಇದೀಗ ತಮ್ಮ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿರುವುದು ವಿಪರ್ಯಾಸವೇ ಸರಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬಿಗ್ ಬಾಸ್ ಸೂರಜ್​​ಗೆ ಸೀರಿಯಲ್ ಆಫರ್; ‘ಪವಿತ್ರ ಬಂಧನ’ದ ಕಥೆ ಏನು? – Kannada News | Bigg Boss Suraj Lands Lead Role in ‘Pavitra Bandhana’ Serial

ಬಿಗ್ ಬಾಸ್​ ಅಲ್ಲಿ ಚಾಕೋಲೇಟ್ ಹೀರೋ ಆಗಿ ಮಿಂಚಿದವರು ಸೂರಜ್. ಅವರು ವೃತ್ತಿಯಲ್ಲಿ ಈ ಮೊದಲು ಬಾಣಸಿಗ ಆಗಿದ್ದರು. ಆ ಬಳಿಕ ಅವರು ಮಾಡೆಲಿಂಗ್ ಆರಂಭಿಸಿದರು. ನಂತರ ಬಿಗ್ ಬಾಸ್ ಆಫರ್ ಕೂಡ ಪಡೆದರು. ಇಷ್ಟೆಲ್ಲ ಸಾಧನೆ ಮಾಡಿದ ಸೂರಜ್ ಅವರಿಗೆ ಈಗ ಸೀರಿಯಲ್ ಆಫರ್ ಬಂದಿದೆ. ‘ಪವಿತ್ರ ಬಂಧನ’ ಅನ್ನೋದು ಧಾರಾವಾಹಿಯ ಹೆಸರು. ಶೀಘ್ರವೇ ಧಾರಾವಾಹಿ ಪ್ರಸಾರ ಕಾಣಲಿದೆ.

ಸೂರಜ್ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ಹೈಲೈಟ್ ಆದರು. ಅವರು ಹೀರೋ ಎಂದೇ ಕೆಲವರು ಭಾವಿಸಿದ್ದು ಇದೆ. ಆದರೆ, ಅವರ ಕ್ಷೇತ್ರವೇ ಬೇರೆ. ಬಿಗ್ ಬಾಸ್​ಗೆ ಸೇರುವಾಗ ಅವರ ಹಿಂಬಾಲಕರ ಸಂಖ್ಯೆ ಕೇವಲ 18 ಸಾವಿರ ಇತ್ತು. ಈಗ ಮೂರುವರೆ ಲಕ್ಷಕ್ಕೆ ಏರಿಕೆ ಆಗಿದೆ. ಈ ಜನಪ್ರಿಯತೆಯಿಂದಲೇ ಅವರಿಗೆ ಸೀರಿಯಲ್ ಆಫರ್ ಸಿಕ್ಕಿದೆ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್ ಸಿಂಗ್

‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ಸೂರಜ್ ಅವರು ದೇವದತ್ ದೇಶ್​ಮುಖ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ತಿಲಕ್ ಗೌಡ ಪಾತ್ರದಲ್ಲಿ ಯಶಸ್ ಗೌಡ ಕಾಣಿಸಿಕೊಂಡಿದ್ದಾರೆ. ಅಮೂಲ್ಯ ಕಥೆಯ ನಾಯಕಿ. ದೇವದತ್ ಹಾಗೂ ತಿಲಕ್ ಅಣ್ಣ-ತಮ್ಮ. ಇಬ್ಬರೂ ತುಂಬಾನೇ ಕ್ಲೋಸ್. ತಿಲಕ್ ಹಾಗೂ ಕಥಾ ನಾಯಕಿ ಪವಿತ್ರಾ ಪ್ರೀತಿಸುತ್ತಿರುತ್ತಾರೆ. ಆದರೆ, ಆಕೆ ದೇವದತ್​​ನ ಮದುವೆ ಆಗೋ ಪರಿಸ್ಥಿತಿ ಬರುತ್ತದೆ. ಇಬ್ಬರಿಗೂ ಒಬ್ಬರನ್ನೊಬ್ಬರನ್ನು ಕಂಡರೇ ಆಗೋದಿಲ್ಲ. ಆದಾರೂ ಮದುವೆ ಆಗುತ್ತಾರೆ. ಇದು ಧಾರಾವಾಹಿಯ ಕಥೆ.

ಸೂರಜ್ ಅವರಿಗೆ ಧಾರಾವಾಹಿ ಆಫರ್ ಸಿಕ್ಕಿರೋದಕ್ಕೆ ಅವರು ಖುಷಿಪಟ್ಟಿದ್ದಾರೆ. ಬಿಗ್ ಬಾಸ್ ಬಳಿಕ ಇಷ್ಟು ದೊಡ್ಡ ಆಫರ್ ಕೈ ಸೇರಿದೆ. ಧಾರಾವಾಹಿಯಲ್ಲಿ ಅವರು ಯಾವ ರೀತಿಯಲ್ಲಿ ನಟಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಬಿಗ್ ಬಾಸ್ ಅನೇಕರ ಬದುಕನ್ನು ಬದಲಾಯಿಸುತ್ತದೆ. ಸೂರಜ್ ಬದುಕನ್ನು ಕೂಡ ಈ ರಿಯಾಲಿಟಿ ಶೋ ಬದಲಿಸಿದೆ. ವೈಲ್ಡ್ ಕಾರ್ಡ್ ಮೂಲಕ ಅವರು ಎಂಟ್ರಿ ಕೊಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:35 am, Mon, 12 January 26

Source link

Video: ಜಮ್ಮು-ಕಾಶ್ಮೀರದ ಗಡಿಯಲ್ಲಿ ಐದು ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​

ಶ್ರೀನಗರ, ಜನವರಿ 12: ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಹಾಗೂ ನಿಯಂತ್ರಣ ರೇಖೆಯ ಬಳಿ ಡ್ರೋನ್ ಚಟುವಟಿಕೆ ಹೆಚ್ಚುತ್ತಿದೆ. ಗಣರಾಜ್ಯೋತ್ಸವಕ್ಕೂ ಮುನ್ನ ಪಾಕಿಸ್ತಾನ ಭಾರತದ ಗಡಿಗಳ ಬಳಿ ಡ್ರೋನ್ ಚಟುವಟಿಕೆಯನ್ನು ಹೆಚ್ಚಿಸಿದ್ದು, ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರವಹಿಸಿವೆ. ಭದ್ರತಾ ಸಂಸ್ಥೆಗಳ ಪ್ರಕಾರ, ಅಂತಾರಾಷ್ಟ್ರೀಯ ಗಡಿ ಮತ್ತು ಎಲ್‌ಒಸಿಯ ವಿವಿಧ ಪ್ರದೇಶಗಳಲ್ಲಿ ಒಟ್ಟು ಐದು ಡ್ರೋನ್‌ಗಳು ಪತ್ತೆಯಾಗಿವೆ. ಪೂಂಚ್, ನೌಶೇರಾ, ಧರ್ಮಶಾಲಾ, ರಾಮಗಢ ಮತ್ತು ಪರಾಖ್ ಪ್ರದೇಶಗಳಲ್ಲಿ ಡ್ರೋನ್ ಕಾಣಿಸಿಕೊಂಡ ವರದಿಯಾಗಿದೆ.

ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನಿ ಡ್ರೋನ್ ಪತ್ತೆಯಾಗಿದೆ. ಭಾರತೀಯ ಸೇನೆಯು ತಕ್ಷಣ ಪ್ರತಿಕ್ರಿಯಿಸಿ ಅದರ ಮೇಲೆ ಗುಂಡು ಹಾರಿಸಿತು. ಎಲ್ಲಾ ಡ್ರೋನ್‌ಗಳು ಪಾಕಿಸ್ತಾನದಿಂದ ಬಂದು ಕೆಲವು ನಿಮಿಷಗಳ ಕಾಲ ಭಾರತದ ಭೂಪ್ರದೇಶದ ಮೇಲೆ ಸುಳಿದಾಡಿದ ನಂತರ ಹಿಂತಿರುಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ, ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯ ಬಳಿಯ ಘಗ್ವಾಲ್‌ನ ಪಲೋರಾ ಗ್ರಾಮದಲ್ಲಿ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬೀಳಿಸಲಾದ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Daily Devotional: ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?

ಬೆಂಗಳೂರು, ಜನವರಿ 12: ಪ್ರತಿದಿನವೂ ತನ್ನದೇ ಆದ ವಿಶೇಷತೆಯನ್ನು ಹೊಂದಿರುತ್ತದೆ. ಶುಕ್ರವಾರವನ್ನು ವಿಶೇಷವಾಗಿ ಮಹಾಲಕ್ಷ್ಮಿಗೆ ಮೀಸಲಾದ ದಿನವೆಂದು ಪರಿಗಣಿಸಲಾಗುತ್ತದೆ. ಈ ದಿನ ಮಹಾಲಕ್ಷ್ಮಿಯ ಅನುಗ್ರಹ ಪಡೆಯಲು ಹಲವು ಧಾರ್ಮಿಕ ಆಚರಣೆಗಳನ್ನು ಪಾಲಿಸಲಾಗುತ್ತದೆ. ಶುಕ್ರವಾರದಂದು ಹುಳಿ ಪದಾರ್ಥಗಳನ್ನು ಸೇವಿಸುವುದರಿಂದ ದೂರವಿರುವುದು ಹಿಂದೂ ಸಂಪ್ರದಾಯದಲ್ಲಿ ಮಹತ್ವ ಪಡೆದಿದೆ.

ಮಹಾಲಕ್ಷ್ಮಿ ಸಂಪತ್ತು ಮತ್ತು ಸಮೃದ್ಧಿಯ ಅಧಿದೇವತೆ. ಶುಕ್ರವಾರದಂದು ಈ ದೇವಿಗೆ ಸಿಹಿ ಪದಾರ್ಥಗಳನ್ನು ನೈವೇದ್ಯವಾಗಿ ಅರ್ಪಿಸುವುದು ಅತ್ಯಂತ ಶುಭಕರ. ಹುಣಸೆಹಣ್ಣು, ನಿಂಬೆಹಣ್ಣು, ಉಪ್ಪಿನಕಾಯಿ, ವಿನೆಗರ್, ಕಿತ್ತಳೆ ಹಣ್ಣಿನಂತಹ ಹುಳಿ ಪದಾರ್ಥಗಳನ್ನು ಸೇವಿಸದೆ ಪೂಜೆ ಮಾಡಿದಾಗ ಮಹಾಲಕ್ಷ್ಮಿ ಶೀಘ್ರವಾಗಿ ಒಲಿಯುತ್ತಾಳೆ ಎಂದು ನಂಬಲಾಗಿದೆ. ಇದು ಧನಾತ್ಮಕ ಶಕ್ತಿಗಳನ್ನು ಆಕರ್ಷಿಸಲು ಮತ್ತು ದೈವಿಕ ಕೃಪೆಗೆ ಪಾತ್ರರಾಗಲು ಸಹಕಾರಿ. ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಹುಳಿ ಪದಾರ್ಥಗಳಿಂದ ದೂರವಿರುವುದು ಉತ್ತಮ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 

Source link

Video: ಪತಿಯ ಅಂತ್ಯಕ್ರಿಯೆಗೆ ಇನ್ನೂ ಕಣ್ಣು ಬಿಡದ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ – Kannada News | Life and Loss in One Day: wife Attends Soldier’s Funeral on a Stretcher in Satara

ಸತಾರ, ಜನವರಿ 12: ಇಂಥಾ ಸ್ಥಿತಿ ಯಾರಿಗೂ ಬೇಡ, ಇಬ್ಬರೂ ತಮ್ಮ ಮುದ್ದು ಮಗುವಿನ ಬರುವಿಕೆಗಾಗಿ ಕಾತುರದಿಂದ ಕಾದಿದ್ದರು. ಇನ್ನೇನು ಹೆರಿಗೆ ದಿನವೂ ಬಂದೇ ಬಟ್ಟಿತ್ತು, ಅಲ್ಲಿ ಪತ್ನಿ ಹೆರಿಗೆ ನೋವಿನಿಂದ ಬಳಲುತ್ತಿದ್ದರೆ ಇತ್ತ ಪತಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅದಾದ ಬಳಿಕ ಸುಸೂತ್ರವಾಗಿ ಹೆರಿಗೆ ಏನೋ ಆಯಿತು ಆದರೆ ಮಗುವನ್ನು ನೋಡಲು ತಂದೆಯೇ ಇರಲಿಲ್ಲ. ಇದು ಸೈನಿಕನ ಕುಟುಂಬದ ಮನಕಲಕುವ ಕತೆ.

ಪಿತೃತ್ವ ರಜೆ ಪಡೆದು ಊರಿಗೆ ಬಂದಿದ್ದ ಸೈನಿಕ ಪ್ರಮೋದ್ ಪರಶುರಾಮ್, ಬೈಕಿನಲ್ಲಿ ತೆರಳುತ್ತಿರುವಾಗ ಪಿಕಪ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸತಾರದಲ್ಲಿ ನಡೆದಿದೆ. ಜಾಧವ್ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅವರ ಮರಣದ ಕೆಲವು ಗಂಟೆಗಳ ನಂತರ, ಅವರ ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಭಾನುವಾರ ಯೋಧನ ಮೃತದೇಹವನ್ನು ಮನೆಗೆ ತರಲಾಗುತ್ತಿದ್ದಂತೆ, ಅವರ ಪತ್ನಿಯನ್ನು ಆಸ್ಪತ್ರೆಯಿಂದ ಸ್ಟ್ರೆಚರ್‌ನಲ್ಲಿ ಪತಿಯ ಅಂತ್ಯಕ್ರಿಯೆಗಾಗಿ ಕರೆತರಲಾಯಿತು.

ಹೆರಿಗೆ ನೋವೇ ಇನ್ನೂ ಕಡಿಮೆಯಾಗದಿರುವಾಗ ಪತಿಯ ಅಗಲುವಿಕೆಯು ಮತ್ತಷ್ಟು ನೋವುಂಟು ಮಾಡಿತ್ತು. ಪತ್ನಿ ತನ್ನ ಪತಿಯ ಮೃತದೇಹದ ಪಕ್ಕದಲ್ಲಿ ಅಳುತ್ತಿರುವು ಎಲ್ಲರ ಕಣ್ಣಲ್ಲಿ ಕಣ್ಣೀರು ಜಿನುಗುವಂತೆ ಮಾಡಿತ್ತು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಕಲೆಕ್ಷನ್ ವಿಷಯದಲ್ಲಿ ಎಡವಿದ ‘ರಾಜಾಸಾಬ್’; ಪ್ರಭಾಸ್ ಫ್ಯಾನ್ಸ್​ಗೆ ಶಾಕ್ – Kannada News | The Raja Saab Box Office Collection: Prabhas Film Collection Drops Sharply After Strong Opening

ಭಾನುವಾರದ ಕಲೆಕ್ಷನ್ ವಿಷಯದಲ್ಲಿ ‘ರಾಜಾಸಾಬ್’ ಸಿನಿಮಾ (Raja Saab) ಎಡವಿದೆ. ಮೊದಲ ದಿನ ಅದ್ದೂರಿ ಕಲೆಕ್ಷನ್ ಮಾಡಿದ್ದ ಈ ಚಿತ್ರ ನಂತರದ ದಿನಗಳಲ್ಲಿ ಕುಸಿತದ ಹಾಡಿ ಹಿಡಿಯಿತು. ಮೊದಲ ದಿನದ ದುಬಾರಿ ಟಿಕೆಟ್ ದರ ಚಿತ್ರಕ್ಕೆ ಸಹಕಾರಿ ಆಗಿದೆ. ಆದರೆ, ಸಿನಿಮಾ ನೋಡಿದ ಪ್ರೇಕ್ಷಕ ಖುಷಿಯಾಗಿಲ್ಲ. ಈ ಕಾರಣದಿಂದಲೇ ಸಿನಿಮಾದ ಗಳಿಕೆ ಕುಸಿತದ ಹಾದಿ ಹಿಡಿದಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟು ಎಂಬ ಬಗ್ಗೆ ಇಲ್ಲಿದೆ ವಿವರ.

‘ರಾಜಾಸಾಬ್’ ಸಿನಿಮಾ ಜನವರಿ 9ರಂದು ರಿಲೀಸ್ ಆಯಿತು. ಈ ಸಿನಿಮಾ ಹಾರರ್ ಕಾಮಿಡಿ ಶೈಲಿಯಲ್ಲಿ ಮೂಡಿ ಬಂದಿತ್ತು. ಇದೇ ಮೊದಲ ಬಾರಿಗೆ ಅವರು ಈ ಶೈಲಿಯನ್ನು ಪ್ರಯತ್ನಿಸಿದ್ದರು. ಈ ಸಿನಿಮಾ ಜನರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಈಗ ಸಿನಿಮಾ ಭಾನುವಾರ ಕೇವಲ 20 ಕೋಟಿ ರೂಪಾಯಿ ಗಳಿಕೆ ಮಾಡಿದೆ.

‘ರಾಜಾಸಾಬ್’ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು 53 ಕೋಟಿ ರೂಪಾಯಿ. ಇದಕ್ಕೆ ಕಾರಣ ದುಬಾರಿ ಟಿಕೆಟ್ ದರ. ತೆಲುಗಿನಿಂದ 47 ಕೋಟಿ ರೂಪಾಯಿ ಆದರೆ, ಹಿಂದಿಯಿಂದ 6 ಕೋಟಿ ರೂಪಾಯಿ ಹರಿದು ಬಂದಿತ್ತು. ಇದಕ್ಕೆ ಕಾರಣವೂ ಇದೆ. ಹಿಂದಿಯಲ್ಲಿ ಪ್ರಭಾಸ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಸಿನಿಮಾನ ನೋಡಿದ್ದಾರೆ.

ಭಾನುವಾರ ಮಾತ್ರ ಥಿಯೇಟರ್​​ಗೆ ಹೋಗುವ ಪ್ರೇಕ್ಷಕರ ಸಂಖ್ಯೆ ಕಡಿಮೆ ಆಗಿದೆ. ಮೊದಲ ದಿನದ ಸಿನಿಮಾ ಟಿಕೆಟ್ ದರಕ್ಕೆ ಹೋಲಿಕೆ ಮಾಡಿದರೆ ಟಿಕೆಟ್ ದರ ಕೂಡ ಕಡಿಮೆ ಆಗಿದೆ.ಹೀಗಾಗಿ ಗಳಿಕೆಯಲ್ಲಿ ಇಳಿಕೆ ಕಂಡಿದೆ. ಭಾನುವಾರದ ಚಿತ್ರದ ಕಲೆಕ್ಷನ್ ಕೇವಲ 20 ಕೋಟಿ ರೂಪಾಯಿ ಮಾತ್ರ. ಚಿತ್ರದ ಒಟ್ಟಾರೆ ಗಳಿಕೆ 108 ಕೋಟಿ ರೂಪಾಯಿ ಆಗಿದೆ.

ಇದನ್ನೂ ಓದಿ: ಪ್ರಭಾಸ್ ನಟನೆಯ ‘ರಾಜಾಸಾಬ್’ ಚಿತ್ರದ ನಾಲ್ಕು ದಿನದ ಶೂಟ್​ಗೆ ಖರ್ಚಾಯ್ತು ನಾಲ್ಕು ಕೋಟಿ ರೂಪಾಯಿ

‘ಕಲ್ಕಿ 2898 ಎಡಿ’ ಸೂಪರ್ ಹಿಟ್ ಆದ ಬಳಿಕ ಪ್ರಭಾಸ್ ಒಪ್ಪಿಕೊಂಡ ಸಿನಿಮಾ ‘ರಾಜಾಸಾಬ್. ಈ ಚಿತ್ರವನ್ನು ಮಾರುತಿ ನಿರ್ದೇಶನ ಮಾಡಿದ್ದಾರೆ. ಸಿನಿಮಾ ರಿಲೀಸ್​​ಗೂ ಮೊದಲು ಅವರು ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸಿನಿಮಾ ಅಂದುಕೊಂಡ ಮಟ್ಟಿಗೆ ಯಶಸ್ಸು ಕಾಣಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On – 7:05 am, Mon, 12 January 26

Source link

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ – Kannada News | Karnataka News: Bangladeshi Illegal Immigrants Busted in Bengaluru

ಬೆಂಗಳೂರು, ಜನವರಿ 12: ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು ಇಬ್ಬರು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಿದ್ದಾರೆ. 35 ವರ್ಷದ ಜಹಿದುಲ್ ಇಸ್ಲಾಂ ಮತ್ತು 32 ವರ್ಷದ ಫಿರ್ದೋಸ್ ಬಂಧಿತರು. ಈ ಇಬ್ಬರು ಸುಮಾರು ಎರಡು ವರ್ಷಗಳ ಹಿಂದೆ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದರು ಎಂದು ತಿಳಿದುಬಂದಿದೆ. ಹುಲಿಮಂಗಲದ ಪೋಡು ಬಳಿಯ ಗುಜರಿ ಶೆಡ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರನ್ನು ಪ್ರಶ್ನಿಸಿದಾಗ, ತಾವು ಪಶ್ಚಿಮ ಬಂಗಾಳದ ಕೋಲ್ಕತ್ತಾದಿಂದ ಬಂದವರು ಎಂದು ಸುಳ್ಳು ಹೇಳಿದ್ದರು. ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ ಹೆಬ್ಬಗೋಡಿ ಪೊಲೀಸರು, ಇವರ ಬಳಿಯಿದ್ದ ನಕಲಿ ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಸೇರಿದಂತೆ ಹಲವು ನಕಲಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯ ಹೆಣ್ಣಿಗೆ ಇಂದು ತವರಿನಿಂದ ಅನಿರೀಕ್ಷಿತವಾಗಿ ಕರೆ ಬರಲಿದೆ – Kannada News | January 12 Numerology: Daily Horoscope for Birth Numbers 4, 5, 6

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4):

ನೀವು ಅಂದುಕೊಂಡ ಕೆಲವು ಪ್ರವಾಸದ ವೇಳಾಪಟ್ಟಿಗಳು ಕೊನೆಯ ಕ್ಷಣದಲ್ಲಿ ಬದಲಾಗಲಿದೆ. ಫ್ರೀಲ್ಯಾನ್ಸರ್ ಆಗಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಕಡಿಮೆ ಆಗಲಿದೆ. ಸ್ವಂತ ವ್ಯವಹಾರದಲ್ಲಿ ದೊಡ್ಡ ಬದಲಾವಣೆ ಮಾಡಿಕೊಳ್ಳುವಿರಿ. ವಸ್ತು ಪೂರೈಕೆ ವಿಚಾರಕ್ಕೆ ಆತುರದ ನಿರ್ಧಾರಗಳಿಂದ ಯಾರಿಗೂ ಮಾತಿನ ಭರವಸೆ ನೀಡಬೇಡಿ. ಸಾಮಾಜಿಕ ಜಾಲತಾಣಗಳಲ್ಲಿ ಸಮಜಾಯಿಷಿ ನೀಡುತ್ತಾ ನಿಮ್ಮ ಕೆಲಸದ ವೇಗ ಕುಂಠಿತವಾಗಲಿದೆ. ವಾಹನ ಅಥವಾ ಮನೆ ರಿಪೇರಿಯಂತಹ ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು. ಶತ್ರುಗಳ ಬಗ್ಗೆ ಜಾಗರೂಕರಾಗಿರಿ

ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ 5, 14, 23ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 5):

ಕುಟುಂಬದಲ್ಲಿ ಸಣ್ಣಪುಟ್ಟ ಗೊಂದಲಗಳು ಉಂಟಾಗಬಹುದು, ವಿಶೇಷವಾಗಿ ಒಡಹುಟ್ಟಿದವರ ಜೊತೆ ಆಸ್ತಿ ಅಥವಾ ಹಣದ ವಿಚಾರಕ್ಕೆ ಮನಸ್ತಾಪವಾಗದಂತೆ ಎಚ್ಚರವಹಿಸಿ. ಹೆಣ್ಣುಮಕ್ಕಳಿಗೆ ಈ ದಿನ ತವರಿನಿಂದ ಅನಿರೀಕ್ಷಿತವಾಗಿ ಕರೆ ಬರಲಿದೆ. ಅದೇ ವೇಳೆ ದೂರದ ಊರಿನಿಂದ ಆಮಂತ್ರಣ ಅಥವಾ ಶುಭ ವಾರ್ತೆ ಬರಲಿದೆ. ಪ್ರೀತಿಪಾತ್ರರ ಜೊತೆಗಿನ ಸಂಬಂಧದಲ್ಲಿ ಇಂದು ‘ಪಾರದರ್ಶಕತೆ’ ಬಹಳ ಮುಖ್ಯ. ಯಾವುದನ್ನೂ ಮುಚ್ಚಿಡಬೇಡಿ, ಸತ್ಯವು ಎಷ್ಟೇ ಕಹಿಯಾಗಿದ್ದರೂ ಅದು ನಿಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುತ್ತದೆ.

ಜನ್ಮಸಂಖ್ಯೆ 6 (ಯಾವುದೇ ತಿಂಗಳಿನ 6, 15, 24ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 6):

ಸೌಂದರ್ಯವರ್ಧಕ ಮಾರಾಟಗಾರರು ಅಥವಾ ಫ್ಯಾಷನ್ ರಂಗದಲ್ಲಿರುವವರಿಗೆ ದೊಡ್ಡ ಮಟ್ಟದ ವ್ಯವಹಾರ ನಡೆಯಲಿದೆ. ಆರ್ಥಿಕವಾಗಿ ಸ್ಥಿತಿ ಗಟ್ಟಿಯಾಗಿದ್ದರೂ, ಅತಿಯಾದ ಐಷಾರಾಮಿ ಖರ್ಚುಗಳ ಮೇಲೆ ನಿಯಂತ್ರಣವಿರಲಿ. ಮನೆಯ ಹಿರಿಯ ಮಹಿಳೆಯರ ಸಲಹೆಯು ನಿಮಗೆ ಆಪತ್ಕಾಲದಲ್ಲಿ ನೆರವಾಗಲಿದೆ. ನೀವು ಇತರರ ಸೌಂದರ್ಯಕ್ಕಿಂತ ಗುಣಕ್ಕೆ ಆದ್ಯತೆ ನೀಡಿ ವ್ಯವಹರಿಸುವುದು ಒಳಿತು. ಚರ್ಮದ ಅಲರ್ಜಿ ಅಥವಾ ಕಣ್ಣಿನ ಉರಿ ಕಾಣಿಸಿಕೊಳ್ಳಬಹುದು. ವಿವಾಹ ಆಕಾಂಕ್ಷಿಗಳಿಗೆ ಇಂದು ಮನಸ್ಸಿಗೆ ಒಪ್ಪುವಂತಹ ಸಂಬಂಧಗಳು ಬರುವ ಸಾಧ್ಯತೆ ಇದೆ.

ಲೇಖನ- ಎನ್‌.ಕೆ.ಸ್ವಾತಿ

Source link

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಹಳೆಯ ಹಣವು ಅನಿರೀಕ್ಷಿತವಾಗಿ ಕೈಸೇರಲಿದೆ – Kannada News | January 12 Numerology: Birth Numbers 7, 8, 9 Daily Prediction and Forecast

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ನೀವು ಹೊಸಬರ ಜೊತೆ ಒಪ್ಪಂದ ಮಾಡಿಕೊಳ್ಳುವಾಗ ಅವರ ಆರ್ಥಿಕ ಹಿನ್ನೆಲೆಗಿಂತ ಅವರ ವಿಶ್ವಾಸಾರ್ಹತೆಗೆ ಹೆಚ್ಚು ಒತ್ತು ನೀಡಿ. ಮಾರ್ಕೆಟಿಂಗ್ ಮತ್ತು ದಲ್ಲಾಳಿ ವೃತ್ತಿಯಲ್ಲಿ ಇರುವವರಿಗೆ ನಿರೀಕ್ಷೆಗೂ ಮೀರಿದ ಲಾಭದ ಜೊತೆಗೆ ಹೊಸ ಜವಾಬ್ದಾರಿಯೊಂದು ಹೆಗಲೇರಲಿದೆ. ನೀವು ಹೂಡಿಕೆ ಮಾಡಿರುವ ಷೇರುಗಳು ಅಥವಾ ಮ್ಯೂಚುವಲ್ ಫಂಡ್‌ಗಳ ಮೌಲ್ಯ ಏರಿಕೆಯಾಗುವ ಲಕ್ಷಣಗಳಿವೆ, ಆದರೆ ತಕ್ಷಣದ ಲಾಭಕ್ಕಾಗಿ ಅವಸರದ ನಿರ್ಧಾರ ತೆಗೆದುಕೊಳ್ಳಬೇಡಿ. ನಿಮ್ಮ ಕಂಫರ್ಟ್ ಝೋನ್ ನಿಂದ ಆಚೆ ಬರಬೇಕಾದ ದಿನ ಇದಾಗಿರುತ್ತದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಮನೆಯಲ್ಲಿ ಹಿರಿಯರ ಆರೋಗ್ಯದ ಬಗ್ಗೆ ವಿಶೇಷ ನಿಗಾ ಇರಲಿ. ಆಸ್ತಿ ವಿವಾದಗಳು ಸುದೀರ್ಘ ಕಾಲದಿಂದ ನಡೆಯುತ್ತಿದ್ದರೆ, ಸಂಧಾನ ಅಥವಾ ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಿದೆ. ಹಳೆಯ ಸಾಲದ ಹೊರೆ ನಿಮ್ಮನ್ನು ಮಾನಸಿಕವಾಗಿ ಸ್ವಲ್ಪ ಕಾಡಬಹುದು, ಆದರೆ ಅದನ್ನು ತೀರಿಸುವ ಹೊಸ ಮಾರ್ಗವೊಂದು ಗೋಚರಿಸಲಿದೆ. ಸಂಗಾತಿಯ ಜೊತೆಗೆ ಮಾತುಕತೆ ಆಡುವಾಗ ಗಾಂಭೀರ್ಯವಿರಲಿ; ಸಣ್ಣ ಪುಟ್ಟ ತಪ್ಪುಗಳನ್ನು ದೊಡ್ಡದು ಮಾಡಬೇಡಿ.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಕಚೇರಿಯಲ್ಲಿ ಅಥವಾ ನಿಮ್ಮ ಕೆಲಸದ ಕ್ಷೇತ್ರದಲ್ಲಿ ವಿನಾಕಾರಣ ನಿಮ್ಮ ಮೇಲೆ ಆರೋಪಗಳು ಬರಬಹುದು ಅಥವಾ ನಿಮ್ಮ ಶ್ರಮಕ್ಕೆ ಸಲ್ಲಬೇಕಾದ ಗೌರವ ಬೇರೆಯವರ ಪಾಲಾಗಬಹುದು. ಇಂತಹ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಮೌನವಾಗಿರುವುದೇ ಶ್ರೇಯಸ್ಕರ. ದೊಡ್ಡ ಮಟ್ಟದ ವ್ಯವಹಾರ ಕುದುರಲಿದೆ. ಹಳೆಯ ಬಾಕಿ ಉಳಿದಿದ್ದ ಹಣವು ಅನಿರೀಕ್ಷಿತವಾಗಿ ಕೈಸೇರಬಹುದು. ಆದರೆ ಹೊಸ ಪಾಲುದಾರಿಕೆ ಒಪ್ಪಂದಗಳಿಗೆ ಸಹಿ ಹಾಕುವ ಮುನ್ನ ಕಾನೂನು ತಜ್ಞರ ಸಲಹೆ ಪಡೆಯುವುದು ಒಳ್ಳೆಯದು.

ಲೇಖನ- ಎನ್‌.ಕೆ.ಸ್ವಾತಿ

Source link