ನೀಟ್ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ! – Kannada News | NEET Scam: Education Minister’s Emergency Meet, Arrests, and Future of Exam Security
ದೆಹಲಿ, ಮೇ.15: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ತಡರಾತ್ರಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಸಿಬಿಐ (CBI) ತನಿಖೆಯು ಚುರುಕುಗೊಂಡಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಒಳಗಿನವರ ಕೈವಾಡದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇನ್ನು ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿಗೆ ಹೊಸ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗಿದೆ. ಪರೀಕ್ಷೆಯು ಈಗ ಜೂನ್ 21 ರಂದು ನಡೆಯಲಿದೆ. ಮೇ…