ರಾಜೀನಾಮೆ ಬಳಿಕ ಮೊದಲ ಬಾರಿಗೆ ಲೋಕಸಭೆಗೆ ಬಂದ ಧರ್ಮೇಂದ್ರ ಪ್ರಧಾನ್, ಜಿಂದಾಬಾದ್ ಜಯಘೋಷದೊಂದಿಗೆ ಎನ್‌ಡಿಎ ಸಂಸದರ ಸ್ವಾಗತ – Kannada News | Dharmendra Pradhan Receives Warm Welcome From NDA MPs on Return to Lok Sabha
ನವದೆಹಲಿ, ಜುಲೈ 27: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಒಡಿಶಾದ ಸಂಸದ ಧರ್ಮೇಂದ್ರ ಪ್ರಧಾನ್ ಸೋಮವಾರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪಾಲ್ಗೊಳ್ಳಲು ಮೊದಲ ಬಾರಿಗೆ ಲೋಕಸಭೆಗೆ ಆಗಮಿಸಿದ್ದರು. ಅವರು ಸದನದೊಳಗೆ ಪ್ರವೇಶಿಸುತ್ತಿದ್ದಂತೆ ಲೋಕಸಭೆಯಲ್ಲಿ ಕುತೂಹಲಕಾರಿ ವಾತಾವರಣ ನಿರ್ಮಾಣವಾಯಿತು. ಧರ್ಮೇಂದ್ರ ಪ್ರಧಾನ್ ಅವರನ್ನು ಕಂಡ ತಕ್ಷಣವೇ ಬಿಜೆಪಿ ಹಾಗೂ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಸಂಸದರು ಧರ್ಮೇಂದ್ರ ಪ್ರಧಾನ್ ಜಿಂದಾಬಾದ್ ಎಂದು ಜೈಕಾರ ಕೂಗುವ ಮೂಲಕ ಅವರನ್ನು ಬರಮಾಡಿಕೊಂಡರು. ಸಚಿವ ಸ್ಥಾನ…