ಕರ್ನಾಟಕ ಹವಾಮಾನ ವರದಿ: ಇಂದು ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ; 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಬೆಂಗಳೂರು, ಏಪ್ರಿಲ್ 03: ಹಲವು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾರ್ಭಟ (Weather Forecast) ಕಾಣಸಿಗುತ್ತಿದೆ. ಅಂತೆಯೇ ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಯಾವೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್? ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ,…